logo
ಕನ್ನಡ ಸುದ್ದಿ  /  ಕರ್ನಾಟಕ  /  Ut Khader: ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಯುಟಿ ಖಾದರ್ ವಿಧಾನಸಭೆ ಸ್ಪೀಕರ್‌ ಚುನಾವಣೆಗೆ ನಾಮಪತ್ರ ಸಲ್ಲಿಕೆ

UT Khader: ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಯುಟಿ ಖಾದರ್ ವಿಧಾನಸಭೆ ಸ್ಪೀಕರ್‌ ಚುನಾವಣೆಗೆ ನಾಮಪತ್ರ ಸಲ್ಲಿಕೆ

HT Kannada Desk HT Kannada

May 23, 2023 02:45 PM IST

ಸ್ಪೀಕರ್ ಸ್ಥಾನ ಚುನಾವಣೆಗೆ ಯುಟಿ ಖಾದರ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು.

  • ವಿಧಾನಸಭೆ ಸ್ಪೀಕರ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯ ಶಾಸಕ ಯುಟಿ ಖಾದರ್ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಇದ್ದರು.

ಸ್ಪೀಕರ್ ಸ್ಥಾನ ಚುನಾವಣೆಗೆ ಯುಟಿ ಖಾದರ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು.
ಸ್ಪೀಕರ್ ಸ್ಥಾನ ಚುನಾವಣೆಗೆ ಯುಟಿ ಖಾದರ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು.

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾದ ಯು ಟಿ ಖಾದರ್ (UT Khader) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸಮ್ಮುಖದಲ್ಲಿ ವಿಧಾನಸಭೆ ಸ್ಪೀಕರ್‌ ಚುನಾವಣೆಗೆ (Assembly Speaker Election) ಇಂದು (ಮೇ 23, ಮಂಗಳವಾರ) ನಾಮಪತ್ರ ಸಲ್ಲಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Hassan Sex Scandal; ಹಾಸನ ಲೈಂಗಿಕ ಹಗರಣ ಕೇಸ್, ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಬಂಧನದ ಸುತ್ತಮುತ್ತ,10 ಮುಖ್ಯ ಅಂಶಗಳು

Hassan Sex Scandal; ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್‌ ಲೈಂಗಿಕ ದೌರ್ಜನ್ಯ ಕೇಸ್‌ ಏನಾಯಿತು, ಇದುವರೆಗಿನ 10 ಪ್ರಮುಖ ಅಂಶಗಳು

ಕರ್ನಾಟಕ ಹವಾಮಾನ ಮೇ 6; ಚಾಮರಾಜನಗರ, ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆ, ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಶಾಖದ ಅಲೆ ಎಚ್ಚರಿಕೆ

ನೂರಾರು ವಿದ್ಯಾರ್ಥಿಗಳ ನೆನಪಿನಂಗಳದಲ್ಲಿ ಉಳಿದಿರುವ ಗುರುಮಾತೆ; ದಿವಂಗತ ವಿದ್ಯಾ ಸರಸ್ವತಿ ಚೂಂತಾರು - ವ್ಯಕ್ತಿ ವ್ಯಕ್ತಿತ್ವ ಅಂಕಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅನುಮೋದಿಸಿದ ನಾಮಪತ್ರವನ್ನು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಜಮೀರ್ ಅಹಮದ್, ಅಜಯ್ ಸಿಂಗ್ ಮುಂತಾದವರು ಉಪಸ್ಥಿತರಿದ್ದರು.

ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಸತತ ಐದು ಬಾರಿ ಗೆಲುವು ಸಾಧಿಸಿರುವ ಉಳ್ಳಾಲು ಟಿ ಖಾದರ್ ಎರಡು ಬಾರಿ ಸಚಿವರಾಗಿ, ಕಳೆದ ಬಾರಿ ವಿರೋಧ ಪಕ್ಷದ ಉಪನಾಯಕರಾಗಿ ಸಿದ್ದರಾಮಯ್ಯ ಅವರ ಜೊತೆ ಕಾರ್ಯನಿರ್ವಹಿಸಿದ್ದರು.

ಖಾದರ್ ಅವರ ಅನುಭವ, ಹಿರಿತನ ಹಾಗೂ ಸ್ವಚ್ಛ ರಾಜಕಾರಣಕ್ಕೆ ಇದು ಮನ್ನಣೆ ನೀಡಿದಂತಾಗಿದೆ ಎಂದು ಅವರ ಅಭಿಮಾನಿಗಳು ಹೇಳಿಕೊಂಡಿದ್ದು, ಮೊದಲ ಎರಡು ವರ್ಷಗಳಿಗೆ ಸ್ಪೀಕರ್ ಹುದ್ದೆಯನ್ನು ಅಲಂಕರಿಸುವಂತೆ ಕೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಪಕ್ಷದ ನಾಯಕರ ಮನವಿಗೆ ಖಾದರ್ ಒಪ್ಪಿಗೆ ಸೂಚಿಸಿದ ಬಳಿ ಇವತ್ತು ನಾಮಪತ್ರ ಸಲ್ಲಿಸಿದ್ದಾರೆ. ಯುಟಿ ಖಾದರ್ ಅವರು ಇಂದೇ ಸ್ಪೀಕರ್ ಹುದ್ದೆಯನ್ನು ಅಲಂಕರಿಸಲಿದ್ದಾರೆ.

ಉಳ್ಳಾಲ ಟಿ ಖಾದರ್ ಅವರ ಪೂರ್ಣ ಹೆಸರು ಯು ಟಿ ಅಬ್ದುಲ್ ಖಾದರ್ ಫರೀದ್. 1969ರ ಅಕ್ಟೋರ್ 12 ರಂದು ಯುಟಿ ಖಾದರ್ ಜನಿಸಿದ್ದು, ಇವರ ತಂದೆ ಯು ಟಿ ಫರೀದ್ ಕೂಡ ರಾಜಕಾರಣಿಯಾಗಿದ್ದು, 1972,1978,1999,2004 ನಾಲ್ಕು ಬಾರಿ ಶಾಸಕರಾಗಿದ್ದಾರೆ. ಇವರ ತಾಯಿಯ ಯು ಟಿ ನಸೀಮಾ ಫರೀದ್.

ಖಾದರ್ ರವರು ತನ್ನ ಎಲ್‌ಕೆಜಿ ಶಿಕ್ಷಣವನ್ನು ರೋಶನಿ ನಿಲಯದಲ್ಲಿ, ಒಂದರಿಂದ ನಾಲ್ಕನೇ ತರಗತಿ ವರೆಗೆ ಸೈನ್ಟ್ ಜೆರೋಝ, ನಾಲ್ಕನೇ ತರಗತಿಯಿಂದ ಪ್ರೌಢ ಶಿಕ್ಷಣದ ವರೆಗೆ ಸೈನ್ಟ್ ಅಲೋಶಿಯಸ್ ನಲ್ಲಿ, ಪದವಿ ಪೂರ್ವ ಶಿಕ್ಷಣವನ್ನು ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಪಡೆದಿದ್ದು, ಆ ನಂತರ ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ BA,LLB ಪದವಿ ಶಿಕ್ಷಣ ಮುಗಿಸಿದ್ದಾರೆ.

ಬೈಕ್ ಹಾಗೂ ಕಾರ್ ರೇಸ್‌ನಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಮೋಟೋ ರೇಸ್ ಚಾಂಪಿಯನ್ಶಿಪ್‌ನಲ್ಲಿ ಭಾಗವಹಿಸಿದ್ದಾರೆ. ಕ್ರೀಡೆಯಲ್ಲಿ ಕೂಡ ಆಸಕ್ತಿ ಹೊಂದಿದ್ದು ಕ್ರಿಕೆಟ್, ಫೂಟ್ಬಾಲ್, ವಾಲಿಬಾಲ್, ಹಾಕಿ, ಟೆನ್ನಿಸ್ ಹಾಗೂ ಇತರ ಕ್ರೀಡೆಗಳನ್ನು ಆಡುತ್ತಿದ್ದರು.

    ಹಂಚಿಕೊಳ್ಳಲು ಲೇಖನಗಳು