logo
ಕನ್ನಡ ಸುದ್ದಿ  /  Karnataka  /  Karnataka Bjp Executive Meeting Tomorrow 7th October

Karnataka bjp executive meeting: ನಾಳೆ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ; ಅಮಿತ್ ಶಾ ಭಾಗಿ ಸಾಧ್ಯತೆ

HT Kannada Desk HT Kannada

Oct 06, 2022 10:10 AM IST

ಈ ಹಿಂದಿನ ಬಿಜೆಪಿ ಸಭೆಯಲ್ಲಿ ಭಾಗವಹಿಸಿದ್ದ ನಾಯಕರು

  • ನಾಳೆ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದ್ದು, ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ ಈ ಸಭೆ ಬಿಜೆಪಿ ಹೈಕಮಾಂಡ್ ಅಮಿತ್ ಶಾ ಭಾಗವಹಿಸುವ ಸಾಧ್ಯತೆ ಇದೆ.

ಈ ಹಿಂದಿನ ಬಿಜೆಪಿ ಸಭೆಯಲ್ಲಿ ಭಾಗವಹಿಸಿದ್ದ ನಾಯಕರು
ಈ ಹಿಂದಿನ ಬಿಜೆಪಿ ಸಭೆಯಲ್ಲಿ ಭಾಗವಹಿಸಿದ್ದ ನಾಯಕರು

ಬೆಂಗಳೂರು: ನಾಳೆ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದ್ದು, ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ ಈ ಸಭೆ ಬಿಜೆಪಿ ಹೈಕಮಾಂಡ್ ಅಮಿತ್ ಶಾ ಭಾಗವಹಿಸುವ ಸಾಧ್ಯತೆ ಇದೆ.

ಟ್ರೆಂಡಿಂಗ್​ ಸುದ್ದಿ

Bangalore News: ಶೂನ್ಯ ಮಳೆಯೊಂದಿಗೆ ಏಪ್ರಿಲ್ ತಿಂಗಳು ಮುಗಿಸಿದ ಬೆಂಗಳೂರು; 1983ರ ಬಳಿಕ ಇದೇ ಮೊದಲು; ವರದಿ

Tumkur News: ತುಮಕೂರಲ್ಲಿ ಕಾಡು ಪ್ರಾಣಿಗಳಿಗೆ ನೀರು ಹಂಚುವ ಜಲದಾನಿಗಳು, ಅರಣ್ಯ ಇಲಾಖೆ ಸಾಥ್

ಕರ್ನಾಟಕ ಹವಾಮಾನ ಮೇ 2: ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೂ 3 ದಿನ ರಣ ಬಿಸಿಲು; ಇಂದು 25 ಜಿಲ್ಲೆಗಳಿಗೆ ಶಾಖದ ಅಲೆಯ ಎಚ್ಚರಿಕೆ

Kalburgi News: ಬಿಜೆಪಿ ಮೀಸಲಾತಿ ವಿರೋಧಿ, ಸುಳ್ಳು ಹೇಳುವ ನರೇಂದ್ರ ಮೋದಿಯವರ ನಿಜಬಣ್ಣ ಬಯಲು: ಸಿಎಂ ಸಿದ್ದರಾಮಯ್ಯ ಕಟುಟೀಕೆ

ಹಲವು ಕಾರಣಗಳಿಂದ ಮೂರ್ನಾಲ್ಕು ಬಾರಿ ಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಮುಂದೂಡಲಾಗಿತ್ತು. ಅಕ್ಟೋಬರ್ 7ರಂದು ನಗರದ ಅರಮನೆ ಮೈದಾನದಲ್ಲಿ ಕಾರ್ಯಕಾರಿಣಿ ಸಭೆ ಆಯೋಜನೆ ಮಾಡಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆಹ್ವಾನ ನೀಡಲಾಗಿದೆ ಎನ್ನಲಾಗುತ್ತಿದೆ.

ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೇರಿದಂತೆ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರು ಭಾಗಿಯಾಗಲಿದ್ದಾರೆ.

ಸಭೆಯ ಉದ್ಘಾಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಆಹ್ವಾನ ನೀಡಲಾಗಿದೆ. ಆದರೆ, ಅಮಿತ್ ಶಾ ಆಗಮಿಸುವ ಬಗ್ಗೆ ಇನ್ನೂ ರಾಜ್ಯ ನಾಯಕರಿಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕೆ.ಎಸ್.ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಅವರು ಸಚಿವ ಸ್ಥಾನ ನೀಡದಿದ್ದಕ್ಕಾಗಿ ಮುನಿಸಿಕೊಂಡಿದ್ದು, ಪಕ್ಷದ ಕಾರ್ಯಕ್ರಮಗಳಲ್ಲಿ ಅಷ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ. ಇತ್ತೀಚೆಗೆ ಮುಕ್ತಾಯವಾದ ವಿಧಾನಮಂಡಲ ಅಧಿವೇಶನದ ಆರಂಭದಲ್ಲೂ ಈ ನಾಯಕರು ಭಾಗವಹಿಸಿರಲಿಲ್ಲ.

ಹೀಗಾಗಿ ಪಕ್ಷದಲ್ಲಿನ ಬೆಳವಣಿಗೆಗಳು, ಪಕ್ಷ ಸಂಘಟನೆ, ಮುಂದಿನ ವಿಧಾನಸಭೆ ಚುನಾವಣೆ ತಯಾರಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚಿನ ಸುದ್ದಿಗಳಿಗೆ ನಮ್ಮನ್ನು ಫೇಸ್‌ಬುಕ್‌ ಮತ್ತು ಟ್ವಿಟರ್‌ ನಲ್ಲಿ ಫಾಲೋಮಾಡಿ.

    ಹಂಚಿಕೊಳ್ಳಲು ಲೇಖನಗಳು