logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Budget 2023: ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆ, ಸ್ಟಾರ್ಟ್‌ಅಪ್‌ಗಳಿಗೆ ಅನುದಾನ

Karnataka Budget 2023: ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆ, ಸ್ಟಾರ್ಟ್‌ಅಪ್‌ಗಳಿಗೆ ಅನುದಾನ

HT Kannada Desk HT Kannada

Jul 08, 2023 04:31 PM IST

google News

ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆ, ಸ್ಟಾರ್ಟ್‌ಅಪ್‌ಗಳಿಗೆ ಅನುದಾನ (ಚಿತ್ರ: HT photo)

    • Karnataka Budget Analysis: ಸ್ಟಾರ್ಟಪ್‌ ನೀತಿಯಡಿಯಲ್ಲಿ ಅನುದಾನ ನೀಡಿರುವ ಸ್ಟಾರ್ಟ್‌ಅಪ್‌ಗಳ ಪರಿಹಾರಗಳ ಅಳವಡಿಕೆಯನ್ನು ವೇಗಗೊಳಿಸಲು ʻPropelʼ ಎಂಬ ಯೋಜನೆಯನ್ನು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಆಯೋಜಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಂದು ಕೋಟಿ ರೂ. ಅನುದಾನವನ್ನು ನಿಗದಿಪಡಿಸಲಾಗಿದೆ.
ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆ, ಸ್ಟಾರ್ಟ್‌ಅಪ್‌ಗಳಿಗೆ ಅನುದಾನ (ಚಿತ್ರ: HT photo)
ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆ, ಸ್ಟಾರ್ಟ್‌ಅಪ್‌ಗಳಿಗೆ ಅನುದಾನ (ಚಿತ್ರ: HT photo)

ಬೆಂಗಳೂರು: ನವೋದ್ಯಮಿಗಳಿಗೆ ಅತ್ಯಾಧುನಿಕ ಸೌಲಭ್ಯವುಳ್ಳ ವಿಶ್ವದರ್ಜೆಯ ಪರಿಪೋಷಣ ಕೇಂದ್ರ ʻINNOVERSEʼ ಅನ್ನು 50 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

ಸ್ಟಾರ್ಟಪ್‌ ನೀತಿಯಡಿಯಲ್ಲಿ ಅನುದಾನ ನೀಡಿರುವ ಸ್ಟಾರ್ಟ್‌ಅಪ್‌ಗಳ ಪರಿಹಾರಗಳ ಅಳವಡಿಕೆಯನ್ನು ವೇಗಗೊಳಿಸಲು ʻPropelʼ ಎಂಬ ಯೋಜನೆಯನ್ನು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಆಯೋಜಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಂದು ಕೋಟಿ ರೂ. ಅನುದಾನವನ್ನು ನಿಗದಿಪಡಿಸಲಾಗಿದೆ.

ಸ್ಟಾರ್ಟ್ಅಪ್‍ಗಳಿಗೆ Global Innovation Alliance- Market Access Programme (GIA-MAP) ಕಾರ್ಯಕ್ರಮವನ್ನು ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ಆಯೋಜಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಂದು ಕೋಟಿ ರೂ. ಅನುದಾನವನ್ನು ನಿಗದಿಪಡಿಸಲಾಗಿದೆ.

New Age Incubation Network (NAIN) ಕೇಂದ್ರಗಳನ್ನು ಬೆಂಬಲಿಸಲು ತಂತ್ರಜ್ಞಾನ ವರ್ಗಾವಣೆ ಸಂಸ್ಥೆಯನ್ನು (Technology Transfer Organisation) ನಾಲ್ಕು ಕೋಟಿ ರೂ. ಗಳ ಯೋಜನಾ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಎರಡು ಕೋಟಿ ರೂ. ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

ಹೆಲ್ತ್‌-ಟೆಕ್‌ ಮತ್ತು ಮೆಡ್-ಟೆಕ್‌ನಲ್ಲಿ ಸೆಂಟರ್‌ ಆಫ್‌ ಎಕ್ಸಲೆನ್ಸ್‌ (Centre of Excellence in Health Tech & Med Tech) ಕೇಂದ್ರವನ್ನು 50 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

ಜೈವಿಕ-ಬ್ಯಾಂಕ್ (Bio Bank) ಅನ್ನು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಎರಡು ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ʻCentre of Excellence in Wireless & Wired Technologies in Karnataka (COEWWT)ʼ ಅನ್ನು 25 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಐದು ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಇನ್‌ ಡಿಸೈನ್ (Centre of Excellence in Design) ಕೇಂದ್ರವನ್ನು 20 ಕೋಟಿ ರೂ.ಗಳ ಯೋಜನಾ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಎಂಟು ಕೋಟಿ ರೂ. ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

ಕರ್ನಾಟಕ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ ನೀತಿಯ ಅನುಷ್ಠಾನಕ್ಕೆ ದೃಢವಾದ ಮತ್ತು ಪಾರದರ್ಶಕ ಆಡಳಿತದ ಚೌಕಟ್ಟನ್ನು ರಚಿಸುವುದು ಹಾಗೂ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡುವುದು ಅಗತ್ಯವಾಗಿದೆ. ಈ ಉದ್ದೇಶಕ್ಕಾಗಿ ಕರ್ನಾಟಕ ರಾಜ್ಯ ಸಂಶೋಧನಾ ಪ್ರತಿಷ್ಠಾನವನ್ನು (ಕೆಎಸ್‌ಆರ್‌ಎಫ್) ರಚಿಸಲಾಗುವುದು.

ಸಂಶೋಧನೆ ಮತ್ತು ನಾವೀನ್ಯತೆ ವ್ಯವಸ್ಥೆಯು ಉದ್ಯಮಗಳು, ವಿಶ್ವವಿದ್ಯಾನಿಲಯಗಳು, ಸಂಶೋಧನಾ ಸಂಸ್ಥೆಗಳು ಮತ್ತು ಸರ್ಕಾರಗಳು ಸೇರಿದಂತೆ ಇವರ ನಡುವಿನ ಸಂಬಂಧಗಳ ಸಂಕೀರ್ಣ ವ್ಯವಸ್ಥೆಯಾಗಿದೆ. ಈ ಎಲ್ಲಾ ಭಾಗೀದಾರರನ್ನು ಒಟ್ಟುಗೂಡಿಸಲು ಮತ್ತು ಅವರ ನಡುವೆ ಸಮನ್ವಯತೆಯನ್ನು ಸಾಧಿಸಲು ಇ-ಪ್ಲಾಟ್‌ಫಾರ್ಮ್‌ e-KRDIP ಅನ್ನು ರಚಿಸಲಾಗುವುದು.

ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ರೈತರು, ಕುಶಲಕರ್ಮಿಗಳು, ಕಾರ್ಮಿಕರು, ಯಂತ್ರಕಾರರು ಮತ್ತು ಸಾಮಾನ್ಯ ಜನರು ರಚಿಸಿದ ತಳಹಂತದ ನಾವೀನ್ಯತೆಗಳನ್ನು ಗುರುತಿಸಿ, ವ್ಯಾಖ್ಯಾನಿಸಲು ಮತ್ತು ಅವುಗಳಿಗೆ ಮೌಲ್ಯವನ್ನು ದೊರಕಿಸುವ ಮೂಲಕ ವಾಣಿಜ್ಯೀಕರಣಕ್ಕೆ ಬೆಂಬಲವನ್ನು ನೀಡುವ ಯೋಜನೆಗೆ ಐದು ಕೋಟಿ ರೂ. ಒದಗಿಸಲಾಗುವುದು.

(ವರದಿ: ಅಕ್ಷರ)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ