logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Budget 2023: ಮತ್ತೆ ಚಿತ್ರ ನಗರಿ ಪ್ರಸ್ತಾಪ;ಮೈಸೂರಿನಲ್ಲಿ ಫಿಲ್ಮ್‌ ಸಿಟಿ ನಿರ್ಮಿಸುವುದಾಗಿ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka Budget 2023: ಮತ್ತೆ ಚಿತ್ರ ನಗರಿ ಪ್ರಸ್ತಾಪ;ಮೈಸೂರಿನಲ್ಲಿ ಫಿಲ್ಮ್‌ ಸಿಟಿ ನಿರ್ಮಿಸುವುದಾಗಿ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

HT Kannada Desk HT Kannada

Jul 07, 2023 02:17 PM IST

google News

ಮೈಸೂರಿನಲ್ಲಿ ಫಿಲ್ಮ್‌ ಸಿಟಿ ನಿರ್ಮಾಣಕ್ಕೆ ಸಿದ್ದರಾಮಯ್ಯ ಬಜೆಟ್‌ ಘೋಷಣೆ

  • ಮೈಸೂರು ಜಿಲ್ಲೆ ನಂಜನಗೂಡಿನ ಹಿಮ್ಮಾವು ಎಂಬ ಪ್ರದೇಶದಲ್ಲಿ ಸುಮಾರು 80 ಎಕರೆ ಜಾಗದಲ್ಲಿ ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ಫಿಲ್ಮ್‌ ಸಿಟಿ ನಿರ್ಮಾಣ ಮಾಡಲಾಗುವುದು ಎಂದು ಮೊದಲೇ ತಿಳಿಸಲಾಗಿತ್ತು. ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ಮೈಸೂರಿನಲ್ಲಿ ಫಿಲ್ಮ್‌ ನಿರ್ಮಾಣ ಮಾಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.

ಮೈಸೂರಿನಲ್ಲಿ ಫಿಲ್ಮ್‌ ಸಿಟಿ ನಿರ್ಮಾಣಕ್ಕೆ ಸಿದ್ದರಾಮಯ್ಯ ಬಜೆಟ್‌ ಘೋಷಣೆ
ಮೈಸೂರಿನಲ್ಲಿ ಫಿಲ್ಮ್‌ ಸಿಟಿ ನಿರ್ಮಾಣಕ್ಕೆ ಸಿದ್ದರಾಮಯ್ಯ ಬಜೆಟ್‌ ಘೋಷಣೆ

ಪ್ರತಿ ಬಾರಿ ಬಜೆಟ್‌ ಘೋಷಣೆ ಆದಾಗ ಆಯಾ ಕ್ಷೇತ್ರಕ್ಕೆ ಯಾವ ಕೊಡುಗೆ ನೀಡಬಹುದು ಎಂಬ ಕುತೂಹಲ ಇರುತ್ತದೆ. ಅದೇ ರೀತಿ ಈ ಬಾರಿ ಸಿನಿಮಾ ಕ್ಷೇತ್ರಕ್ಕೆ ಏನು ದೊರೆಯಬಹುದು ಎಂದು ನಿರೀಕ್ಷೆ ಇತ್ತು. ಈ ಬಾರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಫಿಲ್ಮ್‌ ಸಿಟಿ ನಿರ್ಮಾಣಕ್ಕೆ ಬಜೆಟ್‌ ನೀಡಿದ್ದಾರೆ.

ನಂಜನಗೂಡಿನ ಹಿಮ್ಮಾವು ಬಳಿ ಫಿಲ್ಮ್‌ ನಗರಿ

ಇದಕ್ಕೂ ಮುನ್ನ ಬೆಂಗಳೂರಿನ ಹೆಸರುಘಟ್ಟದ ಸಮೀಪ 150 ಎಕರೆ ಪ್ರದೇಶದಲ್ಲಿ ಫಿಲ್ಮ್‌ ಸಿಟಿ ನಿರ್ಮಿಸಲು ಪ್ಲ್ಯಾನ್‌ ಮಾಡಲಾಗಿತ್ತು. ಅದರೆ ಆ ಸ್ಥಳದಲ್ಲಿ ಫಿಲ್ಮ್‌ ಸಿಟಿ ನಿರ್ಮಾಣಕ್ಕೆ ಪರಿಸರ ಪ್ರೇಮಿಗಳು ವಿರೋಧ ಒಡ್ಡಿದ ಹಿನ್ನೆಲೆ ಮೈಸೂರಿನಲ್ಲಿ ಫಿಲ್ಮ್‌ ಸಿಟಿ ನಿರ್ಮಾಣಕ್ಕೆ ನಿರ್ಧರಿಸಲಾಯ್ತು. ಮೈಸೂರು ಜಿಲ್ಲೆ ನಂಜನಗೂಡಿನ ಹಿಮ್ಮಾವು ಎಂಬ ಪ್ರದೇಶದಲ್ಲಿ ಸುಮಾರು 80 ಎಕರೆ ಜಾಗದಲ್ಲಿ ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ಫಿಲ್ಮ್‌ ಸಿಟಿ ನಿರ್ಮಾಣ ಮಾಡಲಾಗುವುದು ಎಂದು ಮೊದಲೇ ತಿಳಿಸಲಾಗಿತ್ತು. ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ಮೈಸೂರಿನಲ್ಲಿ ಫಿಲ್ಮ್‌ ನಿರ್ಮಾಣ ಮಾಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.

ಸಾಂಸ್ಕತಿಕ ನಗರಿ ಮೈಸೂರು ಸುತ್ತಮುತ್ತ ಅನೇಕ ಪ್ರೇಕ್ಷಣೀಯ ಸ್ಥಳಗಳಿದೆ. ಇಂತಹ ಭವ್ಯ ಪರಂಪರೆಯುಳ್ಳ ನಗರದಲ್ಲಿ ಫಿಲ್ಮ್‌ ಸಿಟಿ ಸ್ಥಾಪಿಸಬೇಕೆಂಬುದು ಕನ್ನಡ ಸಿನಿ ಗಣ್ಯರ ಬೇಡಿಕೆ ಆಗಿದೆ. ಈ ವರ್ಷದ ಆರಂಭದಲ್ಲಿ ಹಿರಿಯ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ರಾಜೇಂದ್ರಸಿಂಗ್ ಬಾಬು, ನಾಗತಿಹಳ್ಳಿ ಚಂದ್ರಶೇಖರ್, ಪಿ. ಶೇಷಾದ್ರಿ ಹಾಗೂ ಇನ್ನಿತರರನ್ನು ಒಳಗೊಂಡ ಸಮಿತಿಯ ಸದಸ್ಯರು, ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚಿತ್ರ ನಗರಿ ವಿಚಾರವನ್ನು ಚರ್ಚಿಸಿದ್ದರು.

ಮಾಜಿ ಸಿಎಂ ಬೊಮ್ಮಾಯಿಗೆ ಮನವಿ ಸಲ್ಲಿಸಿದ್ದ ಸಿನಿಮಾ ಗಣ್ಯರು

ಮೈಸೂರಿನಲ್ಲಿ ಫಿಲ್ಮ್‌ ಸಿಟಿ ನಿರ್ಮಿಸುವುದು ಡಾ ರಾಜ್‌ ಕುಮಾರ್, ಡಾ ವಿಷ್ಣುವರ್ಧನ್, ರೆಬೆಲ್‌ ಸ್ಟಾರ್‌ ಅಂಬರೀಶ್ ಸೇರಿದಂತೆ ಎಲ್ಲರ ಕನಸ್ಸಾಗಿತ್ತು. ತೆಲುಗು, ತಮಿಳು, ಹಿಂದಿ ಸಿನಿಮಾ ತಂತ್ರಜ್ಞರಿಗೂ ಮೈಸೂರು ಬಹಳ ಇಷ್ಟದ ಸ್ಥಳ. ಬೊಮ್ಮಾಯಿ ಅವರಿಗೆ ಸಲ್ಲಿಸಿರುವ ಮನವಿ ಪತ್ರಕ್ಕೆ ಶಿವರಾಜ್‌ಕುಮಾರ್, ರಾಕ್ ಲೈನ್ ವೆಂಕಟೇಶ್, ನಾಗತಿಹಳ್ಳಿ ಚಂದ್ರಶೇಖರ್, ಪಿ. ಶೇಷಾದ್ರಿ ಸೇರಿದಂತೆ 20 ಅಧಿಕ ಗಣ್ಯರು ಸಹಿ ಮಾಡಿದ್ದಾರೆ ಎಂದು ನಿರ್ದೇಶಕ ರಾಜೇಂದ್ರ ಸಿಂಗ್‌ ಬಾಬು ತಿಳಿಸಿದ್ದರು.

ಮಾಜಿ ಸಿಎಂ ಬೊಮ್ಮಾಯಿ ಮಂಡಿಸಿದ್ದ ಬಜೆಟ್‌ನಲ್ಲಿ ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ, ಧಾರವಾಡ, ರಾಯಚೂರು ಸೇರಿದಂತೆ ಇತರ ಟೈರ್‌ 2 ನಗರಗಳಲ್ಲಿ 100 ರಿಂದ 200 ಆಸನಗಳ ಸಾಮರ್ಥ್ಯ ಇರುವ ಮಿನಿ ಥಿಯೇಟರ್‌ಗಳ ಸ್ಥಾಪನೆಗೆ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದರು. ಇದರ ಜೊತೆಗೆ ಈ ವರ್ಷ ಸುಮಾರು 200 ಸಿನಿಮಾಗಳಿಗೆ ಸಬ್ಸಿಡಿ ನೀಡುವುದು ಸೇರಿದಂತೆ ರಾಜ್ಯದ ನಗರ ಹಾಗೂ ಪಟ್ಟಣಗಳಲ್ಲಿ ಖಾಲಿ ಜಾಗಗಳನ್ನು ಗುರುತಿಸಿ ನಟ ಶಂಕರ್‌ನಾಗ್‌ ಅವರ ಹೆಸರಿನಲ್ಲಿ ಟ್ಯಾಕ್ಸಿ ಹಾಗೂ ಆಟೋ ನಿಲ್ದಾಣಗಳನ್ನು ನಿರ್ಮಿಸುವುದಾಗಿ ಘೋಷಿಸಿದ್ದರು. ಆದರೆ ಮೈಸೂರಿನಲ್ಲಿ ಫಿಲ್ಮ್‌ ಸಿಟಿ ನಿರ್ಮಾಣ ಹಾಗೂ ಇನ್ನಿತರ ಪ್ರಮುಖ ಬೇಡಿಕೆಗಳ ಬಗ್ಗೆ ಗಮನ ಹರಿಸಿರಲಿಲ್ಲ. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಫಿಲ್ಮ್‌ ಸಿಟಿಗೆ ಬಜೆಟ್‌ ನೀಡಿದ್ದು ಮತ್ತೆ ಚಿತ್ರ ನಗರಿಯ ಕನಸು ಚಿಗುರಿದೆ.

ಬಜೆಟ್‌ ಕುರಿತಾದ ಇನ್ನಷ್ಟು ಸುದ್ದಿಗಳಿಗೆ ಈ ಲಿಂಕ್‌ ಒತ್ತಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ