logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Budget 2023: ಸಿದ್ದರಾಮಯ್ಯ ಬಜೆಟ್‌ನಲ್ಲಿ ನಿಮ್ಮೂರಿಗೆ ಏನೇನು ಸಿಕ್ಕಿದೆ; ಇಲ್ಲಿದೆ ವಿವರ

Karnataka Budget 2023: ಸಿದ್ದರಾಮಯ್ಯ ಬಜೆಟ್‌ನಲ್ಲಿ ನಿಮ್ಮೂರಿಗೆ ಏನೇನು ಸಿಕ್ಕಿದೆ; ಇಲ್ಲಿದೆ ವಿವರ

HT Kannada Desk HT Kannada

Jul 07, 2023 04:47 PM IST

google News

ಕರ್ನಾಟಕ ಬಜೆಟ್‌ನಲ್ಲಿ ಪ್ರಮುಖ ನಗರ, ಜಿಲ್ಲೆ, ತಾಲ್ಲೂಕು ಕೇಂದ್ರಗಳಿಗೂ ಹಲವು ಯೋಜನೆ ಘೋಷಿಸಲಾಗಿದೆ.

    • ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ಕರ್ನಾಟಕದ ಬಹಳಷ್ಟು ಊರುಗಳಿಗೆ ಒಂದಿಲ್ಲೊಂದು ಯೋಜನೆ ಘೋಷಿಸಿದ್ದಾರೆ. ಶಿಕ್ಷಣ, ವೈದ್ಯಕೀಯ, ಪ್ರವಾಸೋದ್ಯಮ, ಕೈಗಾರಿಕೆ, ಸಂಸ್ಕೃತಿ ಇಲಾಖೆಗಳಡಿ ಕಾರ್ಯಕ್ರಮ ಪ್ರಕಟಿಸಲಾಗಿದೆ. ನಿಮ್ಮ ಊರಿಗೆ ಏನೇನು ಸಿಕ್ಕಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕ ಬಜೆಟ್‌ನಲ್ಲಿ ಪ್ರಮುಖ ನಗರ, ಜಿಲ್ಲೆ, ತಾಲ್ಲೂಕು ಕೇಂದ್ರಗಳಿಗೂ ಹಲವು ಯೋಜನೆ ಘೋಷಿಸಲಾಗಿದೆ.
ಕರ್ನಾಟಕ ಬಜೆಟ್‌ನಲ್ಲಿ ಪ್ರಮುಖ ನಗರ, ಜಿಲ್ಲೆ, ತಾಲ್ಲೂಕು ಕೇಂದ್ರಗಳಿಗೂ ಹಲವು ಯೋಜನೆ ಘೋಷಿಸಲಾಗಿದೆ.

ಮೈಸೂರಿಗೆ ಬಂಪರ್‌

  • ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದ ಬಳಿ ಕರ್ನಾಟಕದ ಶ್ರೀಮಂತ ಕಲೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲು Augmented Reality (AR) ಮತ್ತು Virtual Reality (VR) ತಂತ್ರಜ್ಞಾನದೊಂದಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ʻಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾಗ್ಯಾಲರಿʼ ನಿರ್ಮಾಣ.
  • ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣ ದೆಹಲಿಯ ಪ್ರಗತಿ ಮೈದಾನದ ಮಾದರಿಯಲ್ಲಿ ಮೇಲ್ದರ್ಜೆಗೆ.
  • ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ನಿರ್ಮಾಣ.
  • ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ

3D ಬೆಳಕಲ್ಲಿ ನೋಡಿ ಬೀದರ್‌, ವಿಜಯಪುರ, ಬಾದಾಮಿ

  • ಕಲಬುರಗಿ, ಗದಗ ಮತ್ತು ಬೆಂಗಳೂರಿನ ಸರ್ಕಾರಿ ವಸ್ತುಸಂಗ್ರಹಾಲಯಗಳ ಅಭಿವೃದ್ಧಿ ಮತ್ತು ವಿಜಯಪುರ ಆನಂದಮಹಲ್ ಕಟ್ಟಡ ವಸ್ತುಸಂಗ್ರಹಾಲಯವಾಗಿ ಪರಿವರ್ತನೆ
  • ಹಂಪಿಯ ವಿಜಯವಿಠಲ ದೇವಸ್ಥಾನ, ಬೀದರ್ ಕೋಟೆ, ನಂದಿಬೆಟ್ಟದ ಶ್ರೀ ಭೋಗನಂದೀಶ್ವರ ದೇವಸ್ಥಾನ, ವಿಜಯಪುರದ ಗೋಲಗುಂಬಜ್, ಕಿತ್ತೂರು ಕೋಟೆ ಮತ್ತು ಬಾದಾಮಿ ಗುಹೆಗಳ ಬಳಿ 3D ಪ್ರೊಜೆಕ್ಷನ್, ಮಲ್ಟಿಮೀಡಿಯಾ, ಸೌಂಡ್ ಮತ್ತು ಲೈಟ್ ಷೋ ಯೋಜನೆ.
  • ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ ಮತ್ತು ಮಳಖೇಡ, ಬೀದರ್‌, ರಾಯಚೂರು ಹಾಗೂ ಕಲಬುರಗಿ ಕೋಟೆಗಳ ಸಮಗ್ರ ಅಭಿವೃದ್ಧಿಗಾಗಿ 75 ಕೋಟಿ ರೂ. ಗಳ ಮೀಸಲು

ಬೆಂಗಳೂರಲ್ಲಿ ಕ್ರೀಡಾ ಸಂಗ್ರಹಾಲಯ

  • ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲು ಐದು ಕೋಟಿ ರೂ. ಅನುದಾನ
  • ಬೆಂಗಳೂರಿನಲ್ಲಿ ಬಾಸ್ಕೆಟ್‌ಬಾಲ್‌ ಪ್ರಾದೇಶಿಕ ತರಬೇತಿ ಕೇಂದ್ರ ಮತ್ತು ಮೈಸೂರಿನಲ್ಲಿ ಸೈಕ್ಲಿಂಗ್‌ ವೇಲೋಡ್ರೋಮ್‌ ಅನ್ನು ತಲಾ 10 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ
  • ಬೆಂಗಳೂರಿನಲ್ಲಿರುವ ಡಾ. ರಾಜ್‌ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯ.
  • ಬೆಂಗಳೂರಿನ ಕಾಡುಗೋಡಿಯಲ್ಲಿ 100 ಎಕರೆ ಪ್ರದೇಶದಲ್ಲಿ ಟೆಕ್ನಾಲಜಿ ಇನ್ನೋವೇಷನ್‌ ಪಾರ್ಕ್‌ ಅಭಿವೃದ್ಧಿ.
  • ಬೆಂಗಳೂರಿನ ದೇವನಹಳ್ಳಿ ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ಪಾರ್ಕ್‌ನಲ್ಲಿ ಅತ್ಯಾಧುನಿಕ ಕರ್ನಾಟಕ ಏರೋಸ್ಪೇಸ್‌ ತಂತ್ರಜ್ಞಾನ ಕೇಂದ್ರ ಸ್ಥಾಪನೆ
  • ಬೆಂಗಳೂರಿನಲ್ಲಿ ಪ್ರವಾಹ ನಿಯಂತ್ರಣ ಹಾಗೂ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಹಾಸನದಲ್ಲಿ ಭೂಕುಸಿತದ ಅಪಾಯ ತಗ್ಗಿಸುವಿಕೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಬಲವರ್ಧನೆ ಮುಂತಾದ ವಿಪತ್ತು ಪರಿಹಾರ ಕಾರ್ಯಕ್ರಮಕ್ಕೆ 721 ಕೋಟಿ ರೂ.ಗಳ ವೆಚ್ಚ.

ಕೊಪ್ಪಳದಲ್ಲಿ ಜಾನಪದ ಲೋಕ

  • ರಾಮನಗರದ ಮಾದರಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಜಾನಪದ ಲೋಕ ಸ್ಥಾಪನೆ
  • ಸಸಿಹಿತ್ಲು ಕಡಲ ತೀರವನ್ನು ಅಂತಾರಾಷ್ಟ್ರೀಯ ಸರ್ಫಿಂಗ್‌ ತಾಣವಾಗಿ ಅಭಿವೃದ್ಧಿಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ.
  • ಕಂದಾಯ ಇಲಾಖೆಯಲ್ಲಿ ತ್ವರಿತ ಸೇವೆಗೆ ಇ-ಆಡಳಿತ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಗಳಾದ FRUITS, Kutumba, GIS ಗಳನ್ನು ಬಳಸಿಕೊಂಡು ಪ್ರಾಯೋಗಿಕವಾಗಿ ಒಂಭತ್ತು ಕೋಟಿ ರೂ.ಗಳ ವೆಚ್ಚದಲ್ಲಿ ಜಾರಿಗೆ ತರಲು ಚಿಕ್ಕಬಳ್ಳಾಪುರ, ಕೊರಟಗೆರೆ, ಚಾಮರಾಜನಗರ, ರಾಯಚೂರು, ಧಾರವಾಡ ಮತ್ತು ಬಂಟ್ವಾಳ ತಾಲ್ಲೂಕುಗಳ ಆಯ್ಕೆ

ಶಿವಮೊಗ್ಗ, ಬೆಳಗಾವಿಯಲ್ಲಿ ವನ್ಯಜೀವಿ ಕೇಂದ್ರ

  • ರಾಮನಗರ ಮತ್ತು ಬನ್ನೇರುಘಟ್ಟದಲ್ಲಿ ಎರಡು ಹೊಸ ಆನೆ ಕಾರ್ಯಪಡೆಗಳನ್ನು ರಚನೆ,
  • ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ವನ್ಯಜೀವಿ ಪುನರ್ವಸತಿ ಕೇಂದ್ರಗಳ ನಿರ್ಮಾಣ
  • ಬೀದರ್‌ ಜಿಲ್ಲೆಯಲ್ಲಿ ಕೃಷ್ಣಮೃಗ ಸಂರಕ್ಷಣಾ ಮೀಸಲು ಪ್ರದೇಶವನ್ನು ಘೋಷಣೆ, ಎರಡು ಕೋಟಿ ರೂ. ಮೀಸಲು
  • ಸವದತ್ತಿ ಯಲ್ಲಮ್ಮನ ಗುಡ್ಡ, ದೇವರಗುಡ್ಡ, ಕಪ್ಪತ್ತಗುಡ್ಡ, ಬಾದಾಮಿ ಬನಶಂಕರಿ, ಲಕ್ಕುಂಡಿ ಪ್ರವಾಸಿ ತಾಣಗಳನ್ನು ಮತ್ತು ಗದಗ ಜಿಲ್ಲೆಯ ಮಾಗಡಿ ಪಕ್ಷಿಧಾಮ ಸಮಗ್ರ ಅಭಿವೃದ್ಧಿ.

ಧರ್ಮಸ್ಥಳಕ್ಕೂ ವಿಮಾನದಲ್ಲಿ ಹೋಗಿ

  • ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿಗೆ ಏರ್‌ಸ್ಟ್ರಿಪ್‌ ಸ್ಥಾಪನೆ
  • ವಿಜಯಪುರ ನಿಲ್ದಾಣ ಈ ವರ್ಷವೇ ಪೂರ್ಣ, ಕಾರ್ಯಾರಂಭ
  • ವಿಜಯಪುರ ಜಿಲ್ಲೆಯಲ್ಲಿ ಉತ್ಪಾದನಾ ಕ್ಲಸ್ಟರ್‌ ಮತ್ತು ದಕ್ಷಿಣ ಕನ್ನಡದಲ್ಲಿ ರಫ್ತು ಆಧಾರಿತ ಕೈಗಾರಿಕೆಗಳ ಕ್ಲಸ್ಟರ್‌ಗಳ ಅಭಿವೃದ್ದಿ
  • ಹುಬ್ಬಳ್ಳಿ, ಕಲಬುರಗಿಯ ಚಿತ್ತಾಪುರ, ಉತ್ತರ ಕನ್ನಡದ ಕೋಡ್ಕಣಿ, ಬೆಳಗಾವಿಯ ಕಣಗಲಾ, ಚಾಮರಾಜನಗರದ ಬದನಗುಪ್ಪೆ, ವಿಜಯಪುರದ ಇಂಡಿ ಮತ್ತು ಯಾದಗಿರಿಯ ಶಹಪೂರ ಹೀಗೆ ಏಳು ಸ್ಥಳಗಳಲ್ಲಿ ಹೊಸದಾಗಿ ಕೈಗಾರಿಕಾ ವಸಾಹತುಗಳನ್ನು ಹಂತ ಹಂತವಾಗಿ ಸ್ಥಾಪನೆ.
  • ಮಂಡ್ಯದ ಮೈಸೂರು ಷುಗರ್‌ ಕಂಪನಿ ಲಿ. ಕಾರ್ಖಾನೆಯ ಸುಸ್ಥಿರತೆ ಮತ್ತು ಉನ್ನತೀಕರಣಕ್ಕೆ ಅಗತ್ಯ ಕ್ರಮ.
  • ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ಬಹುಪಯೋಗಿ ಬಂದರಿನ ಅಭಿವೃದ್ಧಿಗೆ ಕಾರ್ಯಸಾಧ್ಯತಾ ವರದಿ.
  • ಮಲ್ಪೆ, ಹೊನ್ನಾವರ, ಭಟ್ಕಳ, ಕುಂದಾಪುರ ಮತ್ತು ಬೇಲೆಕೇರಿ ಬಂದರುಗಳಲ್ಲಿ ಹೂಳೆತ್ತುವ ಕಾರ್ಯಕ್ರಮ.

ಕಲಬುರಗಿಗೆ ಮಲ್ಟಿ ಸ್ಪೆಷಲ್‌ ಆಸ್ಪತ್ರೆ

  • ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ 450 ಬೆಡ್‌ ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು ಕ್ರಮ.
  • ಕನಕಪುರ ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ.
  • ಮೈಸೂರು, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಕಾರ್ಯಾರಂಭ ಮತ್ತು ಸುಟ್ಟ ಗಾಯಗಳ ಘಟಕ ಸ್ಥಾಪನೆಗೆ 155 ಕೋಟಿ ರೂ. ಮೀಸಲು
  • ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (GIMS) 200 ಹಾಸಿಗೆಯ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು 70 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಾಣ.

ದಕ್ಷಿಣ ಕನ್ನಡದಲ್ಲಿ ಅತ್ಯಾಧುನಿಕ ಪ್ರಯೋಗಾಲಯ

  • ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರ ಮತ್ತು ಒಳಾಂಗಣ ಕ್ರೀಡಾ ಸೌಲಭ್ಯಗಳನ್ನು ಹಾಗೂ ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಲೈಡ್ ಹೆಲ್ತ್ ಸೈನ್ಸಸ್ (Allied Health Sciences) ಕಾಲೇಜುಗಳ ಸ್ಥಾಪನೆ.
  • ಮೈಸೂರು ಮತ್ತು ಕಲಬುರಗಿಯಲ್ಲಿ ಟ್ರಾಮಾ ಕೇರ್ ಸೆಂಟರ್‌ಗಳ (Trauma Care Center) ಕಾರ್ಯಾಚರಣೆಗೆ 30 ಕೋಟಿ ರೂ.ಗಳ ಮೀಸಲು
  • ಕಲಬುರಗಿ ಮತ್ತು ಮೈಸೂರಿನಲ್ಲಿರುವ ಕಿದ್ವಾಯಿ ಪ್ರಾದೇಶಿಕ ಘಟಕಗಳಲ್ಲಿ ಸೌಲಭ್ಯಗಳ ಸುಧಾರಣೆಗೆ 20 ಕೋಟಿ ರೂ.

ಚಿತ್ರದುರ್ಗದಲ್ಲಿ ವೈದ್ಯಕೀಯ ಕಾಲೇಜು

  • ಚಿತ್ರದುರ್ಗದ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ಆರಂಭಕ್ಕೆ ಕ್ರಮ
  • ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ಕಣ್ಣಿನ ಶಿಬಿರಗಳು, ಕನ್ನಡಕ ವಿತರಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಳ ಚಟುವಟಿಕೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ