ಕನ್ನಡ ಸುದ್ದಿ  /  ಕರ್ನಾಟಕ  /  Karnataka Cm Oathtaking: ಸಿದ್ದರಾಮಯ್ಯ ಪ್ರಮಾಣವಚನ ಕಾರ್ಯಕ್ರಮಕ್ಕೆ ಬರಲ್ಲ ಅಖಿಲೇಶ್‌ ಯಾದವ್‌, ಮಮತಾ ಬ್ಯಾನರ್ಜಿ

Karnataka CM oathtaking: ಸಿದ್ದರಾಮಯ್ಯ ಪ್ರಮಾಣವಚನ ಕಾರ್ಯಕ್ರಮಕ್ಕೆ ಬರಲ್ಲ ಅಖಿಲೇಶ್‌ ಯಾದವ್‌, ಮಮತಾ ಬ್ಯಾನರ್ಜಿ

HT Kannada Desk HT Kannada

May 20, 2023 11:56 AM IST

ಸಿದ್ದರಾಮಯ್ಯ (ಕಡತ ಚಿತ್ರ)

  • Siddaramaiah swearing-in ceremony today: ಸಿದ್ದರಾಮಯ್ಯ ಅವರ ಪ್ರಮಾಣವಚನ ಕಾರ್ಯಕ್ರಮ ಇನ್ನೇನು ಕೆಲವೇ ನಿಮಿಷಗಳಲ್ಲಿ ನಡೆಯಲಿದೆ. ಈ ಕಾರ್ಯಕ್ರಮ ವಿಪಕ್ಷ ಮೈತ್ರಿಗೆ ವೇದಿಕೆಯಾಗುವ ಲಕ್ಷಣಗಳಿವೆ. ಆದರೆ ಮಮತಾ ಬ್ಯಾನರ್ಜಿ, ಅಖಿಲೇಶ್‌ ಯಾದವ್‌ ಗೈರು ಈಗಾಗಲೇ ಘೋಷಣೆ ಆಗಿದೆ.

ಸಿದ್ದರಾಮಯ್ಯ (ಕಡತ ಚಿತ್ರ)
ಸಿದ್ದರಾಮಯ್ಯ (ಕಡತ ಚಿತ್ರ) (PTI)

ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಅಖಿಲೇಶ್ ಯಾದವ್ ಅವರು ಕರ್ನಾಟಕದ ಚುನಾಯಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಮಾಣ ವಚನ ಸಮಾರಂಭಕ್ಕೆ ಹಾಜರಾಗುವುದಿಲ್ಲ ಎಂದು ಆ ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್ ಬಂದಿಲ್ಲ; ಲೋಕಸಭಾ ಚುನಾವಣೆ ಫಲಿತಾಂಶ ತನಕ ಬರುವ ನಿರೀಕ್ಷೆಯೂ ಇಲ್ಲ, ಎಸ್‌ಐಟಿ ಮೂಲ ಹೇಳಿಕೆ

ವಿಜಯಪುರದಿಂದ ಅಯೋಧ್ಯೆಗೆ ಬೈಕ್ ಸವಾರಿ; ಪ್ರಯಾಣಕ್ಕೆಷ್ಟು ದಿನ, ರೂಟ್ ಯಾವುದು ಶಿವಾನಂದ ಪರೀಟ ಅನುಭವ ಕಥನ

ಬಿಬಿಎಂಪಿಗೆ 10 ವರ್ಷದ ಹಿಂದೆ ಸೇರ್ಪಡೆಯಾದ 110 ಗ್ರಾಮಗಳಿಗೆ ಕಾವೇರಿ 5 ನೇ ಹಂತದಲ್ಲಿ ನೀರಿನ ಸಂಪರ್ಕ, ಅಧಿಕಾರಿಗಳಿಗೆ ಜಲಮಂಡಳಿ ಸೂಚನೆ

Anjali Murder Case; ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ನೆನಪು ಮಾಸುವ ಮೊದಲೇ 20 ವರ್ಷದ ಅಂಜಲಿಯ ಭೀಕರ ಹತ್ಯೆ, 10 ಅಂಶಗಳ ವಿವರ ವರದಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾರ್ಯಕ್ರಮಕ್ಕೆ ಗೈರುಹಾಜರಾಗುವುದಾಗಿ ತಿಳಿಸಿದ ಬೆನ್ನಲ್ಲೇ ಅಖಿಲೇಶ್‌ ಯಾದವ್‌ ಅವರ ಈ ನಿರ್ಧಾರ ಪ್ರಕಟವಾಗಿದೆ.

ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 224 ಸ್ಥಾನಗಳಲ್ಲಿ 135 ಸ್ಥಾನಗಳನ್ನು ಗಳಿಸುವ ಮೂಲಕ ಕಾಂಗ್ರೆಸ್ ಪಕ್ಷವು ನಿರ್ಣಾಯಕ ಗೆಲುವಿನ ನಂತರ ಅಧಿಕೃತವಾಗಿ ಸರ್ಕಾರ ರಚನೆ ಕೆಲವೇ ನಿಮಿಷಗಳಲ್ಲಿ ಆಗಲಿದೆ.

ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಮತ್ತು ಶಿವಸೇನಾ ನಾಯಕ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಸೇರಿದಂತೆ ಹಲವಾರು ಕಾಂಗ್ರೆಸ್ ಮಿತ್ರಪಕ್ಷಗಳು ಭಾಗವಹಿಸುವ ನಿರೀಕ್ಷೆಯಿದ್ದರೂ, ಅಖಿಲೇಶ್ ಯಾದವ್ ಭಾಗವಹಿಸುವುದಿಲ್ಲ ಎಂಬುದು ಖಚಿತವಾಗಿದೆ.

ಎಸ್‌ಪಿಯ ಮುಖ್ಯ ವಕ್ತಾರ ರಾಜೇಂದ್ರ ಚೌಧರಿ ಅವರು "ಗೋರಖ್‌ಪುರ ಮತ್ತು ಬಲ್ಲಿಯಾದಲ್ಲಿ ಸಾಲು ಕಾರ್ಯಕ್ರಮಗಳು ಆಯೋಜನೆ ಆಗಿರುವ ಕಾರಣ" ಅಖಿಲೇಶ್ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ಖಚಿತಪಡಿಸಿದ್ದಾರೆ.

"ಅಖಿಲೇಶ್ ಅವರು ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಏಕೆಂದರೆ ಈಗಾಗಲೇ ಸಾಲು ಕಾರ್ಯಕ್ರಮಗಳು ಆಯೋಜನೆ ಆಗಿವೆ. ಅವರು ಇಂದು (ಶನಿವಾರ) ಗೋರಖ್‌ಪುರದಲ್ಲಿ ಇರುತ್ತಾರೆ” ಎಂದು ಅವರು ಕಾಂಗ್ರೆಸ್‌ಗೆ ಆಹ್ವಾನಕ್ಕಾಗಿ ಧನ್ಯವಾದ ಪತ್ರವನ್ನು ಕಳುಹಿಸಲು ಪಕ್ಷವು ಉದ್ದೇಶಿಸಿದೆ ಎಂದು ಅವರು ಹೇಳಿದರು.

ಸಮಾರಂಭಕ್ಕೆ ಬಾರದೇ ಇರುವ ಯಾದವ್ ಅವರ ನಿರ್ಧಾರದ ವಿಚಾರ ಹಲವು ಊಹಾಪೋಹಗಳು ಕೇಳಿವೆ. ವಿಶೇಷವಾಗಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಗಳೆಂದು ಪರಿಗಣಿಸಲ್ಪಟ್ಟಿರುವ ಅಮೇಥಿ ಮತ್ತು ರಾಯ್ಬರೇಲಿಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಆಲೋಚನೆ ನಡೆಸಿದೆ. ಹೀಗಾಗಿ ಮೈತ್ರಿ ವಿಚಾರದಲ್ಲಿ ಒಲವು ತೋರಿಸುತ್ತಿಲ್ಲ ಎಂಬ ವದಂತಿ ಹರಡಿದೆ. ಈ ವದಂತಿಯನ್ನು ನಿರಾಕರಿಸುವ ದೃಷ್ಟಿಯಿಂದ ಸಮಾಜವಾದಿ ಪಕ್ಷದ ವಕ್ತಾರರು ಈ ಹೇಳಿಕೆ ನೀಡಿದ್ದಾರೆ.

ಸಮಾಜವಾದಿ ಪಕ್ಷದ ಅಧಿಕೃತ ವೇಳಾಪಟ್ಟಿಯ ಪ್ರಕಾರವೂ, ಅಖಿಲೇಶ್ ಯಾದವ್ ಶನಿವಾರ ಗೋರಖ್‌ಪುರದ ತಾಂಡಾ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ, ಅಲ್ಲಿ ಅವರು ಉತ್ತರ ಪ್ರದೇಶದ ಪ್ರಮುಖ ಬ್ರಾಹ್ಮಣ ನಾಯಕ ಮತ್ತು ಮಾಜಿ ಸಚಿವ ದಿವಂಗತ ಹರಿಶಂಕರ್ ತಿವಾರಿಗೆ ಗೌರವ ಸಲ್ಲಿಸಲು ಯೋಜಿಸಿದ್ದಾರೆ. ಮಂಗಳವಾರ ನಿಧನರಾದ ತಿವಾರಿ ಅವರು ಗಮನಾರ್ಹ ರಾಜಕೀಯ ವೃತ್ತಿಜೀವನವನ್ನು ಹೊಂದಿದ್ದರು ಮತ್ತು 1985 ರಲ್ಲಿ ಜೈಲಿನಿಂದಲೇ ಚುನಾವಣೆಯಲ್ಲಿ ಗೆದ್ದ ಕಾರಣ ಜನಪ್ರಿಯರಾಗಿದ್ದರು.

ಮಮತಾ ಬ್ಯಾನರ್ಜಿ ಗೈರಿನ ವಿಚಾರ ಘೋಷಿಸಿದ ಬೆನ್ನಲ್ಲೇ ಯಾದವ್‌ ಅವರ ನಿರ್ಧಾರ ಪ್ರಕಟವಾಗಿದೆ. ಇದು ಇನ್ನಷ್ಟು ರಾಜಕೀಯ ವದಂತಿಗೆ ಕಾರಣವಾಗಿದೆ. ಆದರೆ, ಇಲ್ಲಿ ಗಮನಿಸಬೇಕಾದ ವಿಚಾರ ಒಂದಿದೆ. ಮಮತಾ ಬ್ಯಾನರ್ಜಿ ಅವರ ಪ್ರತಿನಧಿಯಾಗಿ ಸಂಸದ ಕಾಕೋಲಿ ಘೋಷ್‌ ದಸ್ತಿದಾರ್‌ ಸಿದ್ದರಾಮಯ್ಯ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ