logo
ಕನ್ನಡ ಸುದ್ದಿ  /  ಕರ್ನಾಟಕ  /  Randeep Surjewala: ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ, ಅತಿ ಶೀಘ್ರದಲ್ಲೇ ಮುಂದಿನ ಮುಖ್ಯಮಂತ್ರಿ ಹೆಸರು ಘೋಷಣೆ ಮಾಡ್ತೀವಿ; ಸುರ್ಜೇವಾಲ

Randeep Surjewala: ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ, ಅತಿ ಶೀಘ್ರದಲ್ಲೇ ಮುಂದಿನ ಮುಖ್ಯಮಂತ್ರಿ ಹೆಸರು ಘೋಷಣೆ ಮಾಡ್ತೀವಿ; ಸುರ್ಜೇವಾಲ

Raghavendra M Y HT Kannada

May 15, 2023 06:25 AM IST

google News

ಸಿಎಲ್‌ಪಿ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ

  • ಶಾಸಕಾಂಗ ಪಕ್ಷದ ಪ್ರಕ್ರಿಯೆಗಳು ಮುಗಿದಿದ್ದು, ದೆಹಲಿಯಿಂದ ಬಂದಿದ್ದ ವೀಕ್ಷಕರ ತಂಡ ಎಲ್ಲಾ ಶಾಸಕರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ್ದು, ಅವರ ಅಭಿಪ್ರಾಯವನ್ನು ಸಂಗ್ರಹಿಸಿದೆ. ಈ ವರದಿಯನ್ನು ಅವರು ಹೈಕಮಾಂಡ್ ಬಳಿ ಇಡಲಿದ್ದಾರೆ ಎಂದು ರಾಜ್ಯ ಉಸ್ತುವಾರಿ ರಂದೀಪ್ ಸಿಂಗ್  ಸುರ್ಜೇವಾಲ ಹೇಳಿದ್ದಾರೆ.

ಸಿಎಲ್‌ಪಿ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ
ಸಿಎಲ್‌ಪಿ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ (AICC Chief Mallikarjun Kharge) ಅವರು ಹೆಚ್ಚು ಸಮಯವನ್ನು ತೆಗೆದುಕೊಳ್ಳದೆ ಅತಿ ಶೀಘ್ರದಲ್ಲಿ ಮುಂದಿನ ಮುಖ್ಯಮಂತ್ರಿ ಹೆಸರನ್ನು ಪ್ರಕಟಿಸಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಲ (Randeep Singh Surjewala) ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ (Congress Legislature Party) ಬಳಿಕ ತಡರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ನಿರ್ಧಾರವನ್ನು ಪಕ್ಷದ ನಾಯಕರು ಕೈಗೊಳ್ಳುತ್ತಾರೆ. ಮಲ್ಲಿಕಾರ್ಜುನ ಖರ್ಗೆ ಅವರ ತೀರ್ಪನ್ನು ನನ್ನ ತೀರ್ಪು ಆಗಿ ಮಾಡಲು ಸಾಧ್ಯವಿಲ್ಲ. ಅವರು ನಮ್ಮ ಹಿರಿಯ ನಾಯಕರಿದ್ದಾರೆ. ಇವರು ಈ ಮಣ್ಣಿನ ಮಗ. ನಾನು ಭರವಸೆ ಕೊಡುತ್ತಿದ್ದಾನೆ. ಈ ವಿಚಾರದಲ್ಲಿ ಅವರು ಹೆಚ್ಚಿನ ಸಮಯ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ.

ಕರ್ನಾಟಕ ನೂತನ ಮುಖ್ಯಮಂತ್ರಿ ಆಯ್ಕೆ, ಪ್ರಮಾಣ ವಚನ ಸ್ವೀಕಾರ ಸಮಾರಂಭದ ಯೋಜನೆಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಸುರ್ಜೇವಾಲ ಅವರು, ನಾವು ಮೊದಲ ಸಚಿವ ಸಂಪುಟ ಸಭೆಯಲ್ಲೇ ನಮ್ಮ ಐದು ಗ್ಯಾರೆಂಟಿಗಳನ್ನು ಜಾರಿ ಮಾಡಲಿದ್ದೇವೆ.

ಕರ್ನಾಟಕದ ನೂತನ ಸಿಎಂ ಆಯ್ಕೆಯ ನಂತರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಯೋಜನೆಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ನಾವು ನಮ್ಮ ಮೊದಲ ಐದು ಭರವಸೆಗಳನ್ನು ಜಾರಿಗೊಳಿಸಿದಾಗ ಗೆಲ್ಲುವ ಪಕ್ಷವು ಮೊದಲ ಕ್ಯಾಬಿನೆಟ್‌ನಲ್ಲಿರುತ್ತದೆ" ಎಂದು ಅವರು ಹೇಳಿದರು.

ಕರ್ನಾಟಕ ಮುಖ್ಯಮಂತ್ರಿ ಹೆಸರನ್ನು ಆಯ್ಕೆ ಮಾಡಲು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡುವ ನಿರ್ಣಯವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷ ಸರ್ವಾನುಮತದಿಂದ ನಿರ್ಣಯ ಕೈಗೊಂಡು ಅಂಗೀಕರಿಸಿದೆ. ಸಿಎಲ್‌ಪಿ ಹೊಸ ನಾಯಕನನ್ನು ನೇಮಿಸಲು ಎಐಸಿಸಿ ಅಧ್ಯಕ್ಷರಿಗೆ ಅಧಿಕಾರವಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ವಸಂತನಗರದಲ್ಲಿ ಇರುವ ಶಾಂಗ್ರಿಲಾ ಹೋಟೆಲ್‌ನಲ್ಲಿ ಭಾನುವಾರ ತಡರಾತ್ರಿ ಆರಂಭವಾದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ರಾತ್ರಿ 1.30ರವರೆಗೆ ನಡೆಯಿತು. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೊಸದಾಗಿ ಆಯ್ಕೆಯಾಗಿದ್ದ ಕಾಂಗ್ರೆಸ್‌ನ 135 ಶಾಕರು ಭಾಗವಹಿಸಿದ್ದರು.

ಸಭೆಯಲ್ಲಿ ವೀಕ್ಷಕರಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ, ಪಕ್ಷದ ನಾಯಕ ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ಭಾಗವಹಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಸಿ ವೇಣುಗೋಪಾಲ್, ಜೈರಾಮ್ ರಮೇಶ್ ಹಾಗೂ ಇತರೆ ನಾಯಕರು ಉಪಸ್ಥಿತರಿದ್ದರು.

ಸಿಎಲ್‌ಪಿ ಸಭೆಗೂ ಮುನ್ನ ಮಾತನಾಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಇಂದು ರಾತ್ರಿಯೇ ಶಾಸಕರ ಅಭಿಪ್ರಾಯ ಸಂಗ್ರಹಿಸುವ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಎಐಸಿಸಿ ಅಧ್ಯಕ್ಷರಿಗೆ ಅಭಿಪ್ರಾಯ ತಿಳಿಸಲು ವೀಕ್ಷಕರು ದೆಹಲಿಗೆ ತೆರಳಿದ್ದಾರೆ ಎಂದು ವಿವರಿಸಿದ್ದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಡಿಕೆ ಶಿವಕುಮಾರ್ ಅವರ ನಿವಾಸದ ಬಳಿಗೆ ಬಂದಿದ್ದ ಅಪಾರ ಸಂಖ್ಯೆಯ ಅಭಿಮಾನಿಗಳು ನಮಗೆ ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬ ಘೋಷಣೆಗಳನ್ನು ಕೂಗಿದರು. ಮತ್ತೊಂದೆಡೆ ಸಿದ್ದರಾಮಯ್ಯ ಅವರನ್ನ ಮುಖ್ಯಮಂತ್ರಿ ಮಾಡಬೇಕೆಂದು ಅವರ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷದ ಮುಂದೆ ಇದೀಗ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಲ್ಲಿ ಯಾರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂಬ ದೊಡ್ಡ ಸಾವಲು ಎದುರಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ