logo
ಕನ್ನಡ ಸುದ್ದಿ  /  ಕರ್ನಾಟಕ  /   Karnataka Bandh: ಮಾರ್ಚ್‌ 9ರಂದು ಕರ್ನಾಟಕ ಬಂದ್‌, ಕರೆ ನೀಡಿದ್ದು ಯಾರು? ಎಷ್ಟು ಸಮಯ ಬಂದ್‌? ಏಕೆ? ಇಲ್ಲಿದೆ ವಿವರ

Karnataka Bandh: ಮಾರ್ಚ್‌ 9ರಂದು ಕರ್ನಾಟಕ ಬಂದ್‌, ಕರೆ ನೀಡಿದ್ದು ಯಾರು? ಎಷ್ಟು ಸಮಯ ಬಂದ್‌? ಏಕೆ? ಇಲ್ಲಿದೆ ವಿವರ

HT Kannada Desk HT Kannada

Mar 05, 2023 07:12 PM IST

google News

Karnataka Bandh: ಮಾರ್ಚ್‌ 9ರಂದು ಕರ್ನಾಟಕ ಬಂದ್‌, ಕರೆ ನೀಡಿದ್ದು ಯಾರು? ಎಷ್ಟು ಸಮಯ ಬಂದ್‌? ಏಕೆ? ಇಲ್ಲಿದೆ ವಿವರ

    • "ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಪಕ್ಷ ಮಾರ್ಚ್ 9 ರಂದು ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದೆ" ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಹೇಳಿದ್ದಾರೆ.
Karnataka Bandh: ಮಾರ್ಚ್‌ 9ರಂದು ಕರ್ನಾಟಕ ಬಂದ್‌, ಕರೆ ನೀಡಿದ್ದು ಯಾರು? ಎಷ್ಟು ಸಮಯ ಬಂದ್‌? ಏಕೆ?  ಇಲ್ಲಿದೆ ವಿವರ
Karnataka Bandh: ಮಾರ್ಚ್‌ 9ರಂದು ಕರ್ನಾಟಕ ಬಂದ್‌, ಕರೆ ನೀಡಿದ್ದು ಯಾರು? ಎಷ್ಟು ಸಮಯ ಬಂದ್‌? ಏಕೆ? ಇಲ್ಲಿದೆ ವಿವರ

ಬೆಂಗಳೂರು: ಇದೇ ಮಾರ್ಚ್‌ 9ರಂದು ಕರ್ನಾಟಕ ಬಂದ್‌ ನಡೆಯುವ ಸೂಚನೆಯಿದೆ. ಅಂದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳು ಬಂದ್‌ ಇರಲಿದೆ. ಅಂದಹಾಗೆ, ಅಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಯಾರು, ಏಕೆ ಎಂಬ ಮಾಹಿತಿ ತಿಳಿಯೋಣ.

"ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಪಕ್ಷ ಮಾರ್ಚ್ 9 ರಂದು ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದೆ" ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

"ರಾಜ್ಯದಲ್ಲಿ ಬಿಜೆಪಿಯ ಭ್ರಷ್ಟಾಚಾರದ ದುರ್ವಾಸನೆ ವಾಕರಿಕೆ ತರಿಸಿದೆ. 40 % ಸರ್ಕಾರ ಎಲ್ಲ ವರ್ಗದ ಜನರ ಬದುಕು ನಾಶ ಮಾಡಿದೆ. ಭ್ರಷ್ಟಾಸುರ ಬೊಮ್ಮಾಯಿ ಸರ್ಕಾರವು ಭ್ರಷ್ಟಾಚಾರದಿಂದ, ಭ್ರಷ್ಟಾಚಾರಕ್ಕಾಗಿ, ಭ್ರಷ್ಟಾಚಾರಕ್ಕೋಸ್ಕರದ ಸರ್ಕಾರವಾಗಿದೆ" ಎಂದು ಅವರು ಹೇಳಿದರು.

"ಬಿಜೆಪಿ ಸರ್ಕಾರದ ಸಾಧನೆಗಳೆಂದರೆ; ಪ್ರತಿಯೊಂದು ಗುತ್ತಿಗೆಯಲ್ಲೂ 40% ಕಮಿಷನ್, ಶಾಲಾ ಅನುದಾನದಲ್ಲಿ 40% ಕಮಿಷನ್, ಧಾರ್ಮಿಕ ಮಠಗಳ ಅನುದಾನದಲ್ಲಿ 30% ಕಮಿಷನ್, ಮೈಸೂರು ಸ್ಯಾಂಡಲ್ ಸೋಪ್ ಅಕ್ರಮದಲ್ಲಿ ಲಂಚ, ವರ್ಗಾವಣೆ ಮತ್ತು ಪೋಸ್ಟಿಂಗ್ ಗೆ ಲಂಚವಾಗಿದೆ" ಎಂದು ಅವರು ಹೇಳಿದ್ದಾರೆ.

"ಪಿಎಸ್ಐ, ಸಹಾಯಕ ಪ್ರಾಧ್ಯಾಪಕ, ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್, ಜಿಲ್ಲಾ ಸಹಕಾರಿ ಬ್ಯಾಂಕ್, ಪೌರಕಾರ್ಮಿಕ ಕೆಲಸ, ಕೆಎಂಎಫ್ ಹುದ್ದೆ, ಸಹಾಯಕ ರಿಜಿಸ್ಟ್ರಾರ್ ಹುದ್ದೆ ನೇಮಕಾತಿ ಅಕ್ರಮಗಳು ಬಿಜೆಪಿ ಸರಕಾರದ ಸಾಧನೆಗಳಾಗಿವೆ" ಎಂದು ಅವರು ಹೇಳಿದ್ದಾರೆ. ಬಿಜೆಪಿ ಹಾಗೂ ಬೊಮ್ಮಾಯಿ ಅವರ ಭ್ರಷ್ಟಾಚಾರಕ್ಕೆ ಇತ್ತೀಚಿನ ಕೆಎಸ್ಡಿ ಎಲ್ ಅಕ್ರಮ ಸಾಕ್ಷಿಯಾಗಿದೆ ಎಂದರು.

ಬೆಳಗ್ಗೆ 11 ಗಂಟೆವರೆಗೆ ಸಾಂಕೇತಿಕ ಬಂದ್‌

ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಲು ಬೆಳಗ್ಗೆ 9 ಗಂಟೆಯಿಂದ ಬೆಳಗ್ಗೆ 11 ಗಂಟೆವರೆಗೂ ಸಾಂಕೇತಿಕ ಬಂದ್ ಮಾಡಲಾಗುವುದು. ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆ, ಸಾರಿಗೆ ಹಾಗೂ ಇತರ ಅಗತ್ಯ ಸೇವೆಗಳನ್ನು ಬಂದ್ ವ್ಯಾಪ್ತಿಯಿಂದ ಹೊರಗಿಡಲು ತೀರ್ಮಾನಿಸಲಾಗಿದೆ.

ಕಾಂಗ್ರೆಸ್ ಪಕ್ಷ ರಾಜ್ಯದ ಪ್ರತಿ ನಗರದಲ್ಲಿ ಬಿಜೆಪಿ ಹಾಗೂ ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಪ್ರತಿಭಟನೆ ನಡೆಸಲಿದೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕನ್ನಡಿಗರು ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಪಣ ತೊಟ್ಟಿದ್ದಾರೆ. ನಮ್ಮ ಬೇಡಿಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು ಅಥವಾ ಅವರನ್ನು ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ