logo
ಕನ್ನಡ ಸುದ್ದಿ  /  ಕರ್ನಾಟಕ  /  Gruha Lakshmi: ಗೃಹಲಕ್ಷ್ಮೀ ಯೋಜನೆಯಡಿ ಪ್ರಜಾಪ್ರತಿನಿಧಿಗಳ ನೇಮಕಕ್ಕೆ ಸರ್ಕಾರ ನಿರ್ಧಾರ; ಹೀಗಿದೆ ಮಾರ್ಗಸೂಚಿ

Gruha Lakshmi: ಗೃಹಲಕ್ಷ್ಮೀ ಯೋಜನೆಯಡಿ ಪ್ರಜಾಪ್ರತಿನಿಧಿಗಳ ನೇಮಕಕ್ಕೆ ಸರ್ಕಾರ ನಿರ್ಧಾರ; ಹೀಗಿದೆ ಮಾರ್ಗಸೂಚಿ

Meghana B HT Kannada

Jul 14, 2023 10:47 PM IST

google News

ಗೃಹಲಕ್ಷ್ಮೀ ಯೋಜನೆಯಡಿ ಪ್ರಜಾಪ್ರತಿನಿಧಿಗಳ ನೇಮಕ

    • Citizen Volunteers: ಗೌರವಧನದ ಆಧಾರದ ಮೇಲೆ ಒಂದು ತಿಂಗಳ ಅವಧಿಗೆ ಮಾತ್ರ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಪ್ರತಿ ಒಂದು ಸಾವಿರ ಜನರಿಗೆ ಅಥವಾ ಒಂದು ಗ್ರಾಮಕ್ಕೆ ಓರ್ವ ಮಹಿಳೆ ಸೇರಿದಂತೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಲಾಗುತ್ತದೆ.
ಗೃಹಲಕ್ಷ್ಮೀ ಯೋಜನೆಯಡಿ ಪ್ರಜಾಪ್ರತಿನಿಧಿಗಳ ನೇಮಕ
ಗೃಹಲಕ್ಷ್ಮೀ ಯೋಜನೆಯಡಿ ಪ್ರಜಾಪ್ರತಿನಿಧಿಗಳ ನೇಮಕ

ಬೆಂಗಳೂರು: ಮನೆಯ ಯಜಮಾನಿ ಖಾತೆಗೆ ಮಾಸಿಕ 2 ಸಾವಿರ ರೂಪಾಯಿ ಜಮಾ ಮಾಡುವ ಕರ್ನಾಟಕ ಕಾಂಗ್ರೆಸ್​ನ ಮಹಾತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆ ಜಾರಿಗೆ ಸರ್ಕಾರ ಸಜ್ಜಾಗಿದೆ. ಇದೀಗ ಯೋಜನೆ ಜಾರಿಗಾಗಿ ಪ್ರಜಾಪ್ರತಿನಿಧಿ (Citizen Volunteer) ನೇಮಕಕ್ಕೆ ನಿರ್ಧಾರ ಮಾಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.

ಗೌರವಧನದ ಆಧಾರದ ಮೇಲೆ ಒಂದು ತಿಂಗಳ ಅವಧಿಗೆ ಮಾತ್ರ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಪ್ರತಿ ಒಂದು ಸಾವಿರ ಜನರಿಗೆ ಅಥವಾ ಒಂದು ಗ್ರಾಮಕ್ಕೆ ಓರ್ವ ಮಹಿಳೆ ಸೇರಿದಂತೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಲಾಗುತ್ತದೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್‌ಗಳಲ್ಲಿ ಹಾಗ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ಕಲ್ಪಿಸಲಾಗಿದೆ. ಆದರೆ ಈ ಕೇಂದ್ರಗಳಲ್ಲಿ ಉಂಟಾಗಬಹುದಾಗ ಒತ್ತಡವನ್ನು ತಪ್ಪಿಸುವ ಸಲುವಾಗಿ ಮೊಬೈಲ್​ ಆ್ಯಪ್​ ಮೂಲಕವು ಸಹ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗುತ್ತದೆ. ಈ ಮೊಬೈಲ್​ ಆ್ಯಪ್​ ಮೂಲಕ ಅರ್ಜಿ ಭರ್ತಿ ಮಾಡಿ ಸಲ್ಲಿಸಲು ಪ್ರಜಾ ಪ್ರತಿನಿಧಿಗಳನ್ನು ನೇಮಕ ಮಾಡಲಾಗುವುದು.

ಪ್ರಜಾಪ್ರತಿನಿಧಿಗಳ ಆಯ್ಕೆ ಹೇಗೆ?

ಪ್ರಜಾಪ್ರತಿನಿಧಿಗಳು ಆಯಾ ತಾಲೂಕಿನ ನಿವಾಸಿಗಳಾಗಿದ್ದು, 10ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಗೃಹಲಕ್ಷ್ಮೀ ಯೋಜನೆಯಡಿ ಕೆಲಸ ನಿರ್ವಹಿಸಲು ಆಸಕ್ತಿಯುಳ್ಳವರಾಗಿರಬೇಕು.

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಪ್ರಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. 1000 ಜನಸಂಖ್ಯೆಗಿಂತ ಕಡಿಮೆ ಅಥವಾ ಅದಕ್ಕೆ ಸಮನಾದ ಪ್ರತಿ ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿ ಹೆಚ್ಚುವರಿ 500 ಜನ ಸಂಖ್ಯೆಗೆ, ಒಂದು ಹೆಚ್ಚುವರಿ ಪ್ರಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತದೆ.

ನಗರ ಪ್ರದೇಶದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರತಿ ವಾರ್ಡ್​ನಲ್ಲಿ 1000 ಜನಸಂಖ್ಯೆಗೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿ ಹೆಚ್ಚುವರಿ 500 ಜನ ಸಂಖ್ಯೆಗ ಒಂದು ಹೆಚ್ಚುವರಿ ಪ್ರಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುವುದು.

ಇನ್ನು ಗೃಹಲಕ್ಷ್ಮೀ ಯೋಜನೆ ಜಾರಿ ವಿಚಾರವಾಗಿ ನಾಳೆ (ಜುಲೈ 15, ಶನಿವಾರ) ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸುದ್ದಿಗೋಷ್ಠಿ ಮಾಡಲಿದ್ದು, ಮಾಹಿತಿ ನೀಡಲಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ