logo
ಕನ್ನಡ ಸುದ್ದಿ  /  ಕರ್ನಾಟಕ  /  Basavaraj Bommai: ಕಾಂಗ್ರೆಸ್ ರಾಜಕೀಯವಾಗಿ ದಿವಾಳಿಯಾಗಿದೆ, ಮೊದಲು ನಿಮ್ಮ ಮನೆ ಸ್ವಚ್ಛ ಮಾಡಿ ಎಂದು ಗುಂಡೂರಾವ್‌ಗೆ ಹೇಳಿದ ಬೊಮ್ಮಾಯಿ

Basavaraj Bommai: ಕಾಂಗ್ರೆಸ್ ರಾಜಕೀಯವಾಗಿ ದಿವಾಳಿಯಾಗಿದೆ, ಮೊದಲು ನಿಮ್ಮ ಮನೆ ಸ್ವಚ್ಛ ಮಾಡಿ ಎಂದು ಗುಂಡೂರಾವ್‌ಗೆ ಹೇಳಿದ ಬೊಮ್ಮಾಯಿ

HT Kannada Desk HT Kannada

Jan 12, 2023 01:56 PM IST

Basavaraj Bommai: ಕಾಂಗ್ರೆಸ್ ರಾಜಕೀಯವಾಗಿ ದಿವಾಳಿಯಾಗಿದೆ: ಸಿಎಂ ಬೊಮ್ಮಾಯಿ

    • ಕಾಂಗ್ರೆಸ್ ರಾಜಕೀಯವಾಗಿ ದಿವಾಳಿಯಾಗಿದೆ. ಕಾಂಗ್ರೆಸ್ ನಲ್ಲಿ ಎಂಥವರಿದ್ದಾರೆ ಎಂದು ದಿನೇಶ್ ಗುಂಡೂರಾವ್ ಅವರಿಗೆ ತಿಳಿದಿದೆ. ನಾನು ಅವರ ಮಟ್ಟಕ್ಕೆ ಇಳಿಯಲಾಗದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Basavaraj Bommai: ಕಾಂಗ್ರೆಸ್ ರಾಜಕೀಯವಾಗಿ ದಿವಾಳಿಯಾಗಿದೆ: ಸಿಎಂ ಬೊಮ್ಮಾಯಿ
Basavaraj Bommai: ಕಾಂಗ್ರೆಸ್ ರಾಜಕೀಯವಾಗಿ ದಿವಾಳಿಯಾಗಿದೆ: ಸಿಎಂ ಬೊಮ್ಮಾಯಿ (HT_PRINT)

ಹುಬ್ಬಳ್ಳಿ: ಕಾಂಗ್ರೆಸ್ ರಾಜಕೀಯವಾಗಿ ದಿವಾಳಿಯಾಗಿದೆ. ಕಾಂಗ್ರೆಸ್ ನಲ್ಲಿ ಎಂಥವರಿದ್ದಾರೆ ಎಂದು ದಿನೇಶ್ ಗುಂಡೂರಾವ್ ಅವರಿಗೆ ತಿಳಿದಿದೆ. ನಾನು ಅವರ ಮಟ್ಟಕ್ಕೆ ಇಳಿಯಲಾಗದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೆಟ್ಟ ಸಂಸ್ಕೃತಿಯು ರಾಜಕಾರಣ ಪ್ರವೇಶಿಸಲು ಕಾಂಗ್ರೆಸ್ ಮಹಾದ್ವಾರ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Ambulance Strike: ಅನಿರ್ಧಿಷ್ಟಾವಧಿ ಮುಷ್ಕರದಿಂದ ಹಿಂದೆ ಸರಿದ 108 ಆರೋಗ್ಯ ಕವಚ ಸಿಬ್ಬಂದಿ; ಸಚಿವರ ಮಾತುಕತೆ ಯಶಸ್ವಿ

ಕೈಮಗ್ಗ ಜವಳಿ ತಂತ್ರಜ್ಞಾನ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶ, ಯಾರಿಗೆ ಉಂಟು ಅವಕಾಶ

ಕರ್ನಾಟಕದ 2ನೇ ಹಂತದ ಮತದಾನ ಮುಕ್ತಾಯ, ಘರ್ಷಣೆ, ಬಿಸಿಲ ನಡುವೆ ಭಾರೀ ಹಕ್ಕು ಚಲಾವಣೆ

Bangalore News: ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಬಂಧನ; ಎಸ್‌ಐಟಿ ವಿಚಾರಣೆಗೆ ತಪ್ಪಿಸಿಕೊಳ್ಳುತ್ತಿದ್ದ ಆರೋಪಿ

ಅವರ ಮನೆ ಸ್ವಚ್ಛ ಮಾಡಿಕೊಳ್ಳಲಿ

ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ ಎನ್ನುವ ಬಗ್ಗೆ ಶಾಸಕ ದಿನೇಶ್ ಗುಂಡೂರಾವ್ ಮಾಡಿರುವ ಟ್ವೀಟ್ ಕುರಿತು ಪ್ರತಿಕ್ರಿಯೆ ನೀಡಿ ಕಾರ್ಯಕರ್ತ ಹೌದೋ ಅಲ್ಲವೋ ಎಂದು ಪರಿಶೀಲಿಸಲು ಸೂಚಿಸಲಾಗಿದೆ. ಕಾಂಗ್ರೆಸ್ ರಾಜಕೀಯವಾಗಿ ದಿವಾಳಿಯಾಗಿದೆ. ಕಾಂಗ್ರೆಸ್ ನಲ್ಲಿ ಎಂಥವರಿದ್ದಾರೆ ಎಂದು ದಿನೇಶ್ ಗುಂಡೂರಾವ್ ಅವರಿಗೆ ತಿಳಿದಿದೆ. ನಾನು ಅವರ ಮಟ್ಟಕ್ಕೆ ಇಳಿಯಲಾಗದು. ಮೊದಲು ಅವರ ಮನೆ ಸ್ವಚ್ಛ ಮಾಡಿಕೊಳ್ಳುವುದನ್ನು ಕಲಿಯಲಿ ಎಂದರು. ಸ್ಯಾಂಟ್ರೋ ರವಿ ಬಂಧವಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಡಿ.ಕೆ.ಶಿವಕುಮಾರ್ ಅವರು ಉಚಿತ ವಿದ್ಯುತ್ ನೀಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಉತ್ತರಿಸಿ ಡಿ.ಕೆ.ಶಿವಕುಮಾರ್ ಹತಾಶರಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ.ಈ ಹೇಳಿಕೆಗಳನ್ನು ಗಮನಿಸಿದರೆ, ಮುಂದೆ ಅನುಷ್ಠಾನ ಮಾಡುವ ಉದ್ದೇಶ ಅವರಿಗಿಲ್ಲ. ಹೇಗಾದರೂ ಮಾಡಿ, ಸುಳ್ಳು ಭರವಸೆ ನೀಡಿ ಚುನಾವಣೆ ಗೆಲ್ಲಬೇಕೆನ್ನುವುದು ಸ್ಪಷ್ಟವಾಗಿದೆ. ಇಷ್ಟು ವರ್ಷ ಆಡಳಿತ ಮಾಡಿದ ಜವಾಬ್ದಾರಿಯುತ ಪಕ್ಷ ಕಾಂಗ್ರೆಸ್ ಹೀಗೆ ಹೇಳುವುದು ಸಲ್ಲದು. ಅರವಿಂದ ಕೇಜ್ರಿವಾಲ್ ಹೇಳಿದರೆ ನಡೆಯುತ್ತದೆ. ಅವರಿನ್ನೂ ಹೊಸಬರು. ಕಾಂಗ್ರೆಸ್ ಕಾಲದಲ್ಲಿ 6 ತಾಸು ವಿದ್ಯುತ್ ಸರಿಯಾಗಿ ನೀಡಲಾಗಲಿಲ್ಲ. ಇನ್ನು ಉಚಿತ ವಿದ್ಯುತ್ ಹೇಗೆ ನೀಡಲಿದ್ದಾರೆ ಎಂದರು.

ದಿನೇಶ್‌ ಗುಂಡುರಾವ್‌ ಏನು ಟ್ವೀಟ್‌ ಮಾಡಿದ್ದರು?

ಬಿಜೆಪಿ ವಿರುದ್ಧ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಟ್ವೀಟ್‌ ಮಾಡಿ ಸ್ಯಾಂಟ್ರೋ ರವಿ ಬಂಧನ ಯಾವಾಗ ಎಂದು ಪ್ರಶ್ನಿಸಿದ್ದರು. ನಾನು ಬಿಜೆಪಿ ಕಾರ್ಯಕರ್ತ ಎಂದು ಸ್ಯಾಂಟ್ರೋ ರವಿಯೇ ಹೇಳಿಕೊಂಡಿದ್ದಾನೆ. ಇಂತಹ ತಲೆಹಿಡುಕರು ಬಿಜೆಪಿಯಲ್ಲಿ ಮಾತ್ರ ಇರಲು ಸಾಧ್ಯ. ಯಾಕೆಂದರೆ ಬಿಜೆಪಿಯೇ ಕಳ್ಳ ಖದೀಮರ ಸಂತೆ. ಲಂಪಟರು, ನುಂಗುಬಾಕರು, ಲಂಚ-ಮಂಚ ಪ್ರಹಸನ ಶೂರರಿಂದ ಬಿಜೆಪಿ ತುಂಬಿ ತುಳುಕುತ್ತಿದೆ. ಇಂತಹ ಭಂಡ ಬಿಜೆಪಿ ಯವರಿಗೆ ಸಂಸ್ಕೃತಿ, ಆಚಾರ, ವಿಚಾರಗಳ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದರು.

ಟ್ರೋ ರವಿಯಂತಹ ಪಿಂಪ್ ಬಿಜೆಪಿ ಕಾರ್ಯಕರ್ತ. ಮತ್ತೊಂದು ಕಡೆ ನಟೋರಿಯಸ್ ರೌಡಿ ಶೀಟರ್‍ಗಳನ್ನು, ಪೋಲಿ ಪುಡಾರಿಗಳನ್ನು ಬಿಜೆಪಿಯವರೇ, ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಇಂತಹ ಬಿಜೆಪಿಯವರು ನೈತಿಕತೆಯ ಬಗ್ಗೆ ನೀತಿ ಪಾಠ ಮಾಡುವುದು ದೆವ್ವದ ಬಾಯಲ್ಲಿ ಸುಪ್ರಭಾತ ಕೇಳಿದಂತೆ. ಬಿಜೆಪಿ ಜನ ‘ಬ್ಲ್ಯೂ’ಜೆಪಿ ಎನ್ನುವುದು ಇದೇ ಕಾರಣಕ್ಕಾಗಿಯೇ ಎಂದು ಅವರು ಟ್ವೀಟ್ ಮಾಡಿದ್ದರು.

ಸ್ಯಾಂಟ್ರೋ ರವಿ ವಿರುದ್ಧ ಎಫ್‍ಐಆರ್ (FIR) ದಾಖಲಾಗಿ ಹತ್ತು ದಿನಗಳಾಗಿವೆ. ಇಷ್ಟಾದರೂ ಸ್ಯಾಂಟ್ರೋ ರವಿಯ ಬಂಧನವಾಗಿಲ್ಲ. ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ ಅಥವಾ ಕೆಲ ಬಿಜೆಪಿಯವರಿಗೆ ಅವನು ಸಲ್ಲಿಸಿದ ‘ಸೇವೆ’ಯ ಕೃತಾಜ್ಞಾರ್ಥವಾಗಿ ಬಂಧನದಿಂದ ಆತನ ರಕ್ಷಣೆ ಮಾಡಲಾಗುತ್ತಿದೆಯೇ.? ಸ್ಯಾಂಟ್ರೋ ರವಿ ಬಂಧನ ಯಾವಾಗ ಎಂದು ದಿನೇಶ್‌ ಗುಂಡುರಾವ್‌ ಸರಣಿ ಟ್ವೀಟ್‌ ಮಾಡಿ ಸರಕಾರವನ್ನು ಪ್ರಶ್ನಿಸಿದ್ದರು.

    ಹಂಚಿಕೊಳ್ಳಲು ಲೇಖನಗಳು