logo
ಕನ್ನಡ ಸುದ್ದಿ  /  ಕರ್ನಾಟಕ  /  Priyanka Gandhi Vadra: ಚಿಕ್ಕಮಗಳೂರಿನ ಶೃಂಗೇರಿ ಪೀಠದಲ್ಲಿ ಶಾರದೆ ದರ್ಶನ ಪಡೆದು ಆನೆಗೆ ಸೇಬು ತಿನ್ನಿಸಿದ ಪ್ರಿಯಾಂಕ ಗಾಂಧಿ; ವಿಡಿಯೋ

Priyanka Gandhi Vadra: ಚಿಕ್ಕಮಗಳೂರಿನ ಶೃಂಗೇರಿ ಪೀಠದಲ್ಲಿ ಶಾರದೆ ದರ್ಶನ ಪಡೆದು ಆನೆಗೆ ಸೇಬು ತಿನ್ನಿಸಿದ ಪ್ರಿಯಾಂಕ ಗಾಂಧಿ; ವಿಡಿಯೋ

Rakshitha Sowmya HT Kannada

Apr 26, 2023 09:01 PM IST

ಆನೆಗೆ ಸೇಬು ತಿನ್ನಿಸುತ್ತಿರುವ ಪ್ರಿಯಾಂಕಾ ಗಾಂಧಿ ವಾದ್ರಾ

    • ಮೈಸೂರಿನಲ್ಲಿ ಇಡ್ಲಿ, ದೋಸೆ ಸವಿದು ಚಿಕ್ಕಮಗಳೂರಿಗೆ ತೆರಳಿದ ಪ್ರಿಯಾಂಕ ಗಾಂಧಿ ಅಲ್ಲಿ ಶೃಂಗೇರಿ ಪೀಠಕ್ಕೆ ತೆರಳಿ ಶಾರದಾಂಬೆ ದರ್ಶನ ಪಡೆದರು. ನಂತರ ದೇವಸ್ಥಾನದ ಆನೆಗೆ ಸೇಬು ತಿನ್ನಿಸಿ ಖುಷಿ ಪಟ್ಟರು. 
ಆನೆಗೆ ಸೇಬು ತಿನ್ನಿಸುತ್ತಿರುವ ಪ್ರಿಯಾಂಕಾ ಗಾಂಧಿ ವಾದ್ರಾ
ಆನೆಗೆ ಸೇಬು ತಿನ್ನಿಸುತ್ತಿರುವ ಪ್ರಿಯಾಂಕಾ ಗಾಂಧಿ ವಾದ್ರಾ

ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕರ್ನಾಟಕದಲ್ಲಿ ಪ್ರಚಾರ ಆರಂಭಿಸಿದ್ದಾರೆ. ನಿನ್ನೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಗಿರಿಜನರ ಮಹಿಳೆಯರೊಂದಿಗೆ ಸಂವಾದ ನಡೆಸಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು (ಏ.26) ಬೆಳಗ್ಗೆ ಮೈಸೂರಿಗೆ ಭೇಟಿ ನೀಡಿದ್ದರು. ನಂತರ ಅಲ್ಲಿಂದ ಚಿಕ್ಕಮಗಳೂರಿಗೆ ತೆರಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

KRS Dam: ಕೊಡಗಲ್ಲಿ ಉತ್ತಮ ಮಳೆ, ಕೆಆರ್‌ಎಸ್ ಜಲಾಶಯಕ್ಕೆ ಬಂತು 2 ಅಡಿ ನೀರು

ಬೆಂಗಳೂರು: ಖಾಸಗಿ ಶಾಲಾ ಶುಲ್ಕ ಶೇ 30- 40 ಹೆಚ್ಚಳ, ಶುಲ್ಕ ನಿಯಂತ್ರಣ ಬೇಕೆನ್ನುತ್ತಿರುವ ಪಾಲಕರು, ಕೈಕಟ್ಟಿ ಕುಳಿತ ಸರ್ಕಾರ- 10 ಮುಖ್ಯ ಅಂಶ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಮೇ 23 ರಿಂದ ಜೂನ್ 9 ರ ತನಕ ಬೃಹತ್ ಮಾವು ಹಲಸಿನ ಮೇಳ, ಒಂದೇ ಸೂರಿನಡಿ ಹತ್ತಾರು ಬಗೆಯ ಹಣ್ಣು

ಕರ್ನಾಟಕ ಬರ ಪರಿಸ್ಥಿತಿ; 32 ಲಕ್ಷಕ್ಕೂ ಅಧಿಕ ರೈತರಿಗೆ 3454 ಕೋಟಿ ರೂ ಪರಿಹಾರ, ರಾಜ್ಯದಿಂದಲೂ 16 ಲಕ್ಷ ರೈತ ಕುಟುಂಬಕ್ಕೆ ತಲಾ 3,000 ರೂ

ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಗಾಂಧಿ

ಚಿಕ್ಕಮಗಳೂರಿಗೆ ತೆರಳುತ್ತಿದ್ದಂತೆ ಪ್ರಿಯಾಂಕಾ ಗಾಂಧಿ ಶೃಂಗೇರಿ ಶಾರದಾ ಪೀಠಕ್ಕೆ ತೆರಳಿ ದೇವಿಯ ದರ್ಶನ ಪಡೆದರು. ಅಲ್ಲಿಂದ ಹೊರ ಬಂದು ದೇವಸ್ಥಾನದ ಆನೆಗೆ ಕೈ ಮುಗಿದು ಅದಕ್ಕೆ ಸೇಬು ತಿನ್ನಿಸಿದರು. ಜೊತೆಗೆ ಆನೆ ಜೊತೆ ನಿಂತು ಫೋಟೋ ತೆಗೆಸಿಕೊಂಡರು. ಅಲ್ಲಿಂದ ಪ್ರಿಯಾಂಕಾ ಗಾಂಧಿ ಪಕ್ಷದ ಇತರ ಮುಖಂಡರೊಂದಿಗೆ ಚಿತ್ರದುರ್ಗ ತೆರಳಿ ಹಿರಿಯೂರಿನಲ್ಲಿ ರೋಡ್‌ ಶೋ ನಡೆಸಿದರು.

ಮೈಸೂರಿನ ಮೈಲಾರಿ ಹೋಟೆಲ್‌ನಲ್ಲಿ ದೋಸೆ ಸವಿದ ಪ್ರಿಯಾಂಕಾ ಗಾಂಧಿ

ಇಂದು ( ಏ.26) ಮೈಸೂರಿಗೆ ತೆರಳಿದ್ದ ಪ್ರಿಯಾಂಕಾ ಗಾಂಧಿ ಅಲ್ಲಿನ ಮೈಲಾರಿ ಹೋಟೆಲ್‌ನಲ್ಲಿ ಇಡ್ಲಿ ಹಾಗೂ ದೋಸೆ ಸವಿದರು. ಅಲ್ಲದೆ ದೋಸೆ ಹೊಯ್ದು ಖುಷಿ ಪಟ್ಟರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಹೋಟೆಲ್‌ನಲ್ಲಿ ಇಡ್ಲಿ ಹಾಗೂ ದೋಸೆ ಬಹಳ ರುಚಿ ಇತ್ತು. ರೆಸಿಪಿ ತಿಳಿದುಕೊಂಡಿದ್ದೇನೆ ಒಮ್ಮೆ ಮನೆಯಲ್ಲಿ ಟ್ರೈ ಮಾಡುತ್ತೇನೆ ಎಂದರು. ನಂತರ ಮೈಲಾರಿ ಹೋಟೆಲ್ ಮಾಲೀಕರಾದ ಶೃತಿ ಲೋಕೇಶ್ ಹಾಗೂ ಪುತ್ರಿ ಪಾರ್ವತಿ ಅವರೊಂದಿಗೆ ಫೋಟೋ ತೆಗೆಸಿಕೊಂಡರು.

ಇನ್ನಷ್ಟು ರಾಜಕೀಯ ಸುದ್ದಿಗಳು

ಕುದುರೆ ವ್ಯಾಪಾರದ ಮೂಲಕ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದ ಬಿಜೆಪಿಗೆ ಜನರು ತಕ್ಕ ಉತ್ತರ ನೀಡುತ್ತಾರೆ; ಕೆಸಿ ವೇಣುಗೋಪಾಲ್‌

ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಶೇ.40 ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹೇಳಿದ್ದಾರೆ. ಬುಧವಾರ ಮಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಅವರು ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪೂರ್ತಿ ಮಾಹಿತಿಗೆ ಈ ಲಿಂಕ್‌ ಒತ್ತಿ

ನನ್ನನ್ನೇ ಬ್ಲಾಕ್‌ಮೇಲ್‌ ಮಾಡ್ತೀರ; ಸುದ್ದಿಗೋಷ್ಠಿ ಬಹಿಷ್ಕರಿಸಿದ ಪತ್ರಕರ್ತರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಗರಂ

ತಡವಾಗಿ ಬಂದಿದ್ದಕ್ಕೆ ಸುದ್ದಿಗೋಷ್ಠಿಯನ್ನು ಬಹಿಷ್ಕರಿಸಿದ ಪತ್ರಕರ್ತರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆಶಿ, ಪತ್ರಕರ್ತರ ಬಗ್ಗೆ ಕೋಪದಿಂದ ಮಾತನಾಡುತ್ತಿರುವ ವಿಡಿಯೋವೊಂದನ್ನು ಭಾರತೀಯ ಜನತಾ ಪಕ್ಷದ ನಾಯಕ ಅಮಿತ್ ಮಾಳವೀಯ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಪೂರ್ತಿ ಸ್ಟೋರಿ ಓದಲು ಈ ಲಿಂಕ್‌ ಕ್ಲಿಕ್‌ ಮಾಡಿ

ಸಿಡಿ ಹೊರ ಬರುವ ಭಯಕ್ಕೆ ಬಿಜೆಪಿಯ 6 ಮಂತ್ರಿಗಳು ಸಿವಿಲ್‌ ಕೋರ್ಟ್‌ನಲ್ಲಿ ಸ್ಟೇ ತಂದಿದ್ದಾರೆ; ಜಗದೀಶ್‌ ಶೆಟ್ಟರ್‌ ಬಾಂಬ್‌

ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಅಸಮಾಧಾನ ತೋರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ಸೇರಿರುವ ವಿಚಾರ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಶೆಟ್ಟರ್‌ ಕಾಂಗ್ರೆಸ್‌ ಸೇರುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್‌ ನಾಯಕರು ಒಬ್ಬರಿಗೊಬ್ಬರು ಟೀಕಾ ಪ್ರಹಾರ ಆರಂಭಿಸಿದ್ದಾರೆ. ಜಗದೀಶ್‌ ಶೆಟ್ಟರ್‌ ಗೆಲ್ಲುವುದಿಲ್ಲ ಎಂದು ಬಿಎಸ್‌ವೈ ಹೇಳಿದರೆ, ಜಗದೀಶ್‌ ಶೆಟ್ಟರ್‌ ಬಿಜೆಪಿ ಸಿಡಿ ಬಾಂಬ್‌ ಸಿಡಿಸಿದರು. ಸಂಪೂರ್ಣ ಸ್ಟೋರಿ ಓದಲು ಈ ಲಿಂಕ್‌ ಒತ್ತಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ