logo
ಕನ್ನಡ ಸುದ್ದಿ  /  ಕರ್ನಾಟಕ  /  Siddaramaiah: ಕರ್ನಾಟಕ ಚುನಾವಣೆ: ಬಿಜೆಪಿಯೊಳಗೆ ಲಿಂಗಾಯತ ನಾಯಕರನ್ನು ಮುಗಿಸಲು ಆರ್ ಎಸ್ಎಸ್, ವಿಘ್ನ ಸಂತೋಷಿಗಳಿಂದ ಸಂಚು: ಸಿದ್ದರಾಮಯ್ಯ

Siddaramaiah: ಕರ್ನಾಟಕ ಚುನಾವಣೆ: ಬಿಜೆಪಿಯೊಳಗೆ ಲಿಂಗಾಯತ ನಾಯಕರನ್ನು ಮುಗಿಸಲು ಆರ್ ಎಸ್ಎಸ್, ವಿಘ್ನ ಸಂತೋಷಿಗಳಿಂದ ಸಂಚು: ಸಿದ್ದರಾಮಯ್ಯ

Raghavendra M Y HT Kannada

Apr 23, 2023 06:33 PM IST

ಮಾಜಿ ಸಿಎಂ ಸಿದ್ದರಾಮಯ್ಯ (ಫೋಟೋ-ಫೈಲ್)

  • ರಾಜಕೀಯವಾಗಿ ತಮ್ಮನ್ನು ಮುಗಿಸಲು ಆರ್ ಎಸ್ ಎಸ್ ‘ವಿಘ್ನಸಂತೋಷಿ’ಗಳು ಮಾಡುತ್ತಿರುವ ಸಂಚನ್ನು ಅರಿಯದ ಬಿಜೆಪಿಯ ಲಿಂಗಾಯತ ನಾಯಕರು, ಕಾಂಗ್ರೆಸ್ ಪಕ್ಷ ಲಿಂಗಾಯತ ವಿರೋಧಿ ಎಂಬ ಸುಳ್ಳು ಆರೋಪ ಮಾಡುತ್ತಾ ಕಾಲ ಕಳೆಯುತ್ತಿರುವುದು ವಿಷಾದನೀಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ (ಫೋಟೋ-ಫೈಲ್)
ಮಾಜಿ ಸಿಎಂ ಸಿದ್ದರಾಮಯ್ಯ (ಫೋಟೋ-ಫೈಲ್)

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ (Assembly Election) ರಾಜಕೀಯ ನಾಯಕರು ಅಬ್ಬರದ ಪ್ರಚಾರ ಮಾಡುತ್ತಿದ್ದು, ಆರೋಪ, ಪ್ರತ್ಯಾರೋಪಗಳೂ ಅಷ್ಟೇ ಜೋರಾಗಿ ನಡೆಯುತ್ತಿವೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು: ಹೆಚ್ಚು ಹಣ ವಸೂಲಿ ಮಾಡಲು ಮುಂದಾದ ಓಲಾ ಕ್ಯಾಬ್‌ ಚಾಲಕ, ಹೊಸ ವಂಚನಾ ಕ್ರಮ ಪತ್ತೆ ಹಚ್ಚಿದ ಮಹಿಳೆ

ಬೆಂಗಳೂರು ಜಲ ಮಂಡಳಿ ಫೋನ್ ಇನ್ ಕಾರ್ಯಕ್ರಮ ಇಂದು ಬೆಳಗ್ಗೆ 9.30ಕ್ಕೆ, ಕುಂದುಕೊರತೆ, ಅಹವಾಲು ಸಲ್ಲಿಸಲು ಫೋನ್ ನಂಬರ್ ಇಲ್ಲಿದೆ..

ಕರ್ನಾಟಕ ಹವಾಮಾನ ಮೇ 17; ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉಳಿದೆಡೆ ಮಳೆ ಮುನ್ಸೂಚನೆ

Belagavi News: ಚಾಲುಕ್ಯ ರೈಲಿನಲ್ಲಿ ಟಿಕೆಟ್‌ ತಪಾಸಣೆ ವೇಳೆ ಇರಿದ ಪ್ರಯಾಣಿಕ. ಸಿಬ್ಬಂದಿ ಸಾವು, ಆರೋಪಿ ಪರಾರಿ

ನಿನ್ನೆಯಷ್ಟೇ ಸಿಎಂ ಬೊಮ್ಮಾಯಿ(CM Bommai) ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah), ಬಿಜೆಪಿಯೊಳಗೆ (BJP) ಲಿಂಗಾಯತ ನಾಯಕರನ್ನು (Lingayat Leaders) ಮುಗಿಸುವ ಸಂಚು ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ರಾಜಕೀಯವಾಗಿ ತಮ್ಮನ್ನು ಮುಗಿಸಲು ಆರ್ ಎಸ್ ಎಸ್ ‘ವಿಘ್ನಸಂತೋಷಿ’ಗಳು ಮಾಡುತ್ತಿರುವ ಸಂಚನ್ನು ಅರಿಯದ ಬಿಜೆಪಿಯ ಲಿಂಗಾಯತ ನಾಯಕರು, ಕಾಂಗ್ರೆಸ್ ಪಕ್ಷ ಲಿಂಗಾಯತ ವಿರೋಧಿ ಎಂಬ ಸುಳ್ಳು ಆರೋಪ ಮಾಡುತ್ತಾ ಕಾಲ ಕಳೆಯುತ್ತಿರುವುದು ವಿಷಾದನೀಯ ಅಂತ ಹೇಳಿದ್ದಾರೆ.

ರಾಜ್ಯ ಬಿಜೆಪಿಯಲ್ಲಿರುವ ಲಿಂಗಾಯತ ಸಮುದಾಯದ ನಾಯಕರನ್ನು ನೋಡಿದಾಗ ಹಾವಿನ ಹೆಡೆಯ ಮೇಲಿನ ಕಪ್ಪೆ ಹಾರುವ ನೊಣಕ್ಕೆ ಆಶಿಸಿದಂತೆ ಎಂಬ ಬಸವಣ್ಣನವರ ವಚನ ನೆನಪಾಗುತ್ತಿದೆ.

ರಾಜ್ಯದಲ್ಲಿ ನೆಲೆಯೇ ಇಲ್ಲದಿದ್ದ ಬಿಜೆಪಿಯನ್ನು ಅಧಿಕಾರದ ಪೀಠದಲ್ಲಿ ತಂದು ಕುಳ್ಳಿರಿಸಿದ ಲಿಂಗಾಯತ ನಾಯಕ ಬಿ.ಎಸ್.ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದ್ದು ಆರ್ ಎಸ್ ಎಸ್ ನ ‘ವಿಘ್ನ ಸಂತೋಷಿ’ಗಳೇ ಹೊರತು, ಕಾಂಗ್ರೆಸ್ ಪಕ್ಷ ಅಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜಗದೀಶ್ ಶೆಟ್ಟರ ರಾಜಕೀಯ ಜೀವನವನ್ನು ಮುಗಿಸುವ ಹುನ್ನಾರದ ರೂವಾರಿಗಳು ಕೂಡಾ ಇದೇ ‘ವಿಘ್ನ ಸಂತೋಷಿ’ ಗಳು. ಕಾಂಗ್ರೆಸ್ ಅಲ್ಲ. ಗೆಲ್ಲುವ ಅವಕಾಶವೇ ಇಲ್ಲದ ವರುಣಾ ಕ್ಷೇತ್ರದಲ್ಲಿ ಒಲ್ಲೆನೆಂದರೂ ಬಲಾತ್ಕಾರವಾಗಿ ವಿ.ಸೋಮಣ್ಣ ಎಂಬ ಲಿಂಗಾಯತ ನಾಯಕನನ್ನು ಅಭ್ಯರ್ಥಿ ಮಾಡಿದ್ದು ಕೂಡಾ ಇದೇ ಆರ್ ಎಸ್ ಎಸ್ ‘ವಿಘ್ನ ಸಂತೋಷಿ’ಗಳು ಎಂದು ಆರೋಪಿಸಿದ್ದಾರೆ.

ಲಕ್ಷ್ಮಣ ಸವದಿ, ಸೊಗಡು ಶಿವಣ್ಣ, ಸಂಜಯ್ ಪಾಟೀಲ್ ಮೊದಲಾದ ಲಿಂಗಾಯತ ನಾಯಕರಿಗೆ ಟಿಕೆಟ್ ನಿರಾಕರಿಸಿ ಅವರನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ್ದು ಕೂಡಾ ಇದೇ ಆರ್ ಎಸ್.ಎಸ್ ‘ವಿಘ್ನ ಸಂತೋಷಿ’ಗಳು. ಈಗ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ಹೊಣೆಯನ್ನು ಕೂಡಾ ಯಡಿಯೂರಪ್ಪನವರ ಮೇಲೆ ಹೊರಿಸಲಾಗಿದೆ. ಇವರಲ್ಲಿ ಯಾರೂ ಸೋತರೂ ಒಬ್ಬ ಲಿಂಗಾಯತ ನಾಯಕರು ಸೋತ ಹಾಗೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಆದರೆ ಬಿಜೆಪಿಯಲ್ಲಿರುವ ಲಿಂಗಾಯತ ನಾಯಕರು ತಮ್ಮ ನಿಜವಾದ ಶತ್ರುಗಳು ಯಾರೆಂದು ಅರ್ಥಮಾಡಿಕೊಳ್ಳದೆ, ವೃಥಾ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಇದು ಕೂಡಾ ಆರ್ ಎಸ್ ಎಸ್ ನ ‘ವಿಘ್ನ ಸಂತೋಷಿ’ಗಳ ಹುನ್ನಾರವೇ ಆಗಿದೆ.

ಬದಲಾವಣೆಯ ಹೆಸರಲ್ಲಿ ಬಿಜೆಪಿಯೊಳಗಿನ ಆರ್ ಎಸ್ ಎಸ್ ‘ವಿಘ್ನ ಸಂತೋಷಿ’ಗಳು ಮಾಡುತ್ತಿರುವ ಈ ಎಲ್ಲ ಪ್ರಯೋಗಗಳು ಅಂತಿಮವಾಗಿ ಪಕ್ಷದೊಳಗಿನ ಹಿರಿಯ ಮತ್ತು ಪ್ರಭಾವಿ ಲಿಂಗಾಯತ ನಾಯಕರ ತಲೆದಂಡ ತೆಗೆದುಕೊಳ್ಳುವ ರಾಜಕೀಯ ಕುತಂತ್ರವೇ ಆಗಿದೆ ಎನ್ನುವುದನ್ನು ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಹಾಗೂ ಒಟ್ಟು ಲಿಂಗಾಯತ ಸಮುದಾಯ ಅರಿತುಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.

ಈಗಲೂ ಕಾಲ ಮಿಂಚಿಲ್ಲ, ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಕಲ್ಪಿತ ಶತ್ರುವಿನ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಿ ತಮ್ಮ ನಿಜವಾದ ಶತ್ರುಗಳನ್ನು ಗುರುತಿಸಿ ಹೋರಾಟ ನಡೆಸಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದ ಚುನಾವಣಾ ಪ್ರಚಾರದಲ್ಲಿ ಈಗಾಗ್ಲೆ ಲಿಂಗಾಯತ ಚೀಫ್ ಮಿನಿಸ್ಟರ್ ಇದ್ದಾರಲ್ಲಾ ಅವ್ರೇ, ಭ್ರಷ್ಟಾಚಾರ ಮಾಡಿ ರಾಜ್ಯ ಹಾಳು ಮಾಡಿರೋದು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಬಿಜೆಪಿ ನಾಯಕರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ