logo
ಕನ್ನಡ ಸುದ್ದಿ  /  ಕರ್ನಾಟಕ  /  Nikhil Kumaraswamy: ಹೆಡ್ ಮಾಸ್ಟರ್ ಮಗನೇ ಎಲ್ಲ ಸಬ್ಜೆಕ್ಟ್ ಫೇಲ್; ಜೆಡಿಎಸ್‌ ಭದ್ರಕೋಟೆಯಲ್ಲೇ ನಿಖಿಲ್‌ ಕುಮಾರಸ್ವಾಮಿಗೆ ಸೋಲು

Nikhil Kumaraswamy: ಹೆಡ್ ಮಾಸ್ಟರ್ ಮಗನೇ ಎಲ್ಲ ಸಬ್ಜೆಕ್ಟ್ ಫೇಲ್; ಜೆಡಿಎಸ್‌ ಭದ್ರಕೋಟೆಯಲ್ಲೇ ನಿಖಿಲ್‌ ಕುಮಾರಸ್ವಾಮಿಗೆ ಸೋಲು

HT Kannada Desk HT Kannada

May 13, 2023 12:57 PM IST

ನಿಖಿಲ್‌ ಕುಮಾರಸ್ವಾಮಿ (ಸಂಗ್ರಹ ಚಿತ್ರ)

    • ರಾಮನಗರ ಕ್ಷೇತ್ರದಲ್ಲಿ 12ನೇ ಸುತ್ತಿನ ಮತೆಣಿಕೆ ಬಳಿಕ ನಿಖಿಲ್‌ ಕುಮಾರಸ್ವಾಮಿ 14,377 ಮತಗಳ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್‌ನ ಇಕ್ಬಾಲ್ ಹುಸೇನ್‌ 57,839 ಮತ ಗಳಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ 43,362 ಮತ ಪಡೆದಿದ್ದಾರೆ.
ನಿಖಿಲ್‌ ಕುಮಾರಸ್ವಾಮಿ (ಸಂಗ್ರಹ ಚಿತ್ರ)
ನಿಖಿಲ್‌ ಕುಮಾರಸ್ವಾಮಿ (ಸಂಗ್ರಹ ಚಿತ್ರ)

ಜೆಡಿಎಸ್‌ನ ಘನನಾಯಕ ಹೆಚ್‌ಡಿ ಕುಮಾರಸ್ವಾಮಿ ಪುತ್ರ, ಪಕ್ಷವನ್ನು ಮುನ್ನಡೆಸಲು ವಿಫಲರಾಗುವ ಸೂಚನೆ ನೀಡುತ್ತಿದ್ದಾರೆ. ಕಳೆದ ಬಾರಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ಸೋತಿದ್ದ ನಿಖಿಲ್‌ ಕುಮಾರಸ್ವಾಮಿ, ಇದೀಗ ಮತ್ತೆ ವಿಧಾನಸಭಾ ಚುನಾವಣೆಯಲ್ಲೂ ಸೋಲನುಭವಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Bengaluru Crime: ಕೆಲಸ ಮಾಡಿಕೊಂಡಿದ್ದ ಮನೆಯಲ್ಲೇ ಮಹಿಳೆಯಿಂದ ಕಳ್ಳತನ; 34 ಲಕ್ಷ ಬೆಲೆಬಾಳುವ ವಜ್ರ, ಚಿನ್ನ, ಬೆಳ್ಳಿಯ ಆಭರಣ, ನಗದು ವಶಕ್ಕೆ

Mangaluru Rains: 10 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಸಿಡಿಲು ಬಡಿದು ಸಾವು; ಸುಬ್ರಹ್ಮಣ್ಯದಲ್ಲಿ ಘಟನೆ

SWRailway Updates: ಬೇಸಿಗೆಯ ಪ್ರಯಾಣಿಕ ದಟ್ಟಣೆ ನಿವಾರಣೆಗೆ ಕರ್ನಾಟಕದಲ್ಲಿ 9 ವಿಶೇಷ ರೈಲು ಸಂಚಾರ; ಭಾರತೀಯ ರೈಲ್ವೆ ವೇಳಾಪಟ್ಟಿ

BMTC Updates; ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ, ಸಂಚಾರ ದಟ್ಟಣೆ ಕಡಿಮೆ ಮಾಡಲು ಬಿಎಂಟಿಸಿ ವಿಶೇಷ ಬಸ್ ಸಂಚಾರ, ಮಾರ್ಗ ಮತ್ತು ಇತರೆ ವಿವರ

ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಯಿಂದಾಗಿ ಈ ಬಾರಿ ರಾಮನಗರ ಕ್ಷೇತ್ರ ಕುತೂಹಲ ಮೂಡಿಸಿತ್ತು. ಇಲ್ಲಿ ಕಾಂಗ್ರೆಸ್‌ನ ಇಕ್ಬಾಲ್‌ ಹುಸೇನ್‌ ಅವರು ನಿಖಿಲ್‌ಗೆ ತೀವ್ರ ಸ್ಪರ್ಧೆ ಒಡ್ಡಿ ಗೆದ್ದಿದ್ದಾರೆ. ತಮ್ಮ ತಂದೆಯ ಭದ್ರಕೋಟೆಯಲ್ಲಿಯೇ ನಿಖಿಲ್ ಹಿನ್ನಡೆ ಅನುಭವಿಸಿರುವುದು ಅಚ್ಚರಿಯ ಫಲಿತಾಂಶಕ್ಕೆ ಕಾರಣವಾಗಿದೆ.

ರಾಮನಗರ ಮೊದಲಿನಿಂದಲೂ ಜೆಡಿಎಸ್‌ನ ಭದ್ರಕೋಟೆ. ಮುಖ್ಯವಾಗಿ ಹೆಚ್‌ಡಿ ಕುಮಾರಸ್ವಾಮಿ ಅವರ ಭದ್ರಕೋಟೆ. ಈ ಕ್ಷೇತ್ರದಲ್ಲಿ ಸತತ ಗೆಲುವಿನ ಇತಿಹಾಸ ಹೊಂದಿರುವ ಎಚ್‌ಡಿಕೆ, ಈ ಹಿಂದೆ ಈ ಕ್ಷೇತ್ರವನ್ನು ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿಗೆ ಬಿಟ್ಟುಕೊಟ್ಟಿದ್ದರು. ಕಳೆದ ಬಾರಿ ಇಲ್ಲಿ ಗೆಲುವು ಸಾಧಿಸಿದ್ದ ಅನಿತಾ, ಪತಿ ಹೆಸರು ಉಳಿಸಿದ್ದರು. ಆದರೆ, ಈ ಬಾರಿ ಆ ತಂದೆಯ ಹೆಸರನ್ನು ಉಳಿಸುವಲ್ಲಿ ‌ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ವಿಫಲರಾಗಿದ್ದಾರೆ. ಕಳೆದ ಬಾರಿ ನಡೆದ ಲೋಕಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಳಿಕ, ಇದೀಗ ವಿಧಾನಸಭೆ ಚುನಾವಣೆಯಲ್ಲೂ ಸೋತಿದ್ದಾರೆ. ಜೆಡಿಎಸ್‌ನ ಭದ್ರಕೋಟೆಯಲ್ಲಿ ಜೆಡಿಎಸ್‌ನ ಕುಡಿಗೆ ಸಿಕ್ಕಿರುವ ಸೋಲು ಅಚ್ಚರಿಯ ಫಲಿತಾಂಶಕ್ಕೆ ಕಾರಣವಾಗಿದೆ.

ಜೆಡಿಎಸ್‌ನ ಉತ್ತರಾಧಿಕಾರಿ ಎನ್ನಲಾಗಿರುವ ನಿಖಿಲ್‌, ಸತತ ಎರಡು ಪ್ರಮುಖ ಸೋಲು ಕಂಡಿದ್ದಾರೆ. ಹೀಗಾಗಿ ಇದು ಪಕ್ಷದ ಭವಿಷ್ಯಕ್ಕೆ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ.

    ಹಂಚಿಕೊಳ್ಳಲು ಲೇಖನಗಳು