logo
ಕನ್ನಡ ಸುದ್ದಿ  /  ಕರ್ನಾಟಕ  /  Sonia Gandhi: ಕರ್ನಾಟಕ ಚುನಾವಣೆ; ರಾಜ್ಯದ ಜನತೆ ನಿಮ್ಮ ಬೆದರಿಕೆಗಳಿಗೆ ಹೆದರುವುದಿಲ್ಲ; ಬಿಜೆಪಿ ನಾಯಕರಿಗೆ ಸೋನಿಯಾ ಗಾಂಧಿ ತಿರುಗೇಟು

Sonia Gandhi: ಕರ್ನಾಟಕ ಚುನಾವಣೆ; ರಾಜ್ಯದ ಜನತೆ ನಿಮ್ಮ ಬೆದರಿಕೆಗಳಿಗೆ ಹೆದರುವುದಿಲ್ಲ; ಬಿಜೆಪಿ ನಾಯಕರಿಗೆ ಸೋನಿಯಾ ಗಾಂಧಿ ತಿರುಗೇಟು

Raghavendra M Y HT Kannada

May 06, 2023 09:38 PM IST

ಹುಬ್ಬಳ್ಳಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮಾತನಾಡಿದರು.

  • ಬಿಜೆಪಿ ನಾಯಕರು ಎಷ್ಟು ಅಹಂಕಾರದಲ್ಲಿದ್ದಾರೆ ಎಂದರೆ ಅವರು ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡುತ್ತಿಲ್ಲ. ಯಾವುದೇ ಪತ್ರಕ್ಕೂ ಉತ್ತರ ನೀಡುತ್ತಿಲ್ಲ. ಸಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ನಿಯಂತ್ರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮಾತನಾಡಿದರು.
ಹುಬ್ಬಳ್ಳಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮಾತನಾಡಿದರು.

ಹುಬ್ಬಳ್ಳಿ: ಚುನಾವಣೆಯಲ್ಲಿ (Assembly Elections) ಗೆಲ್ಲದಿದ್ದರೆ ಕರ್ನಾಟಕಕ್ಕೆ (Karnataka) ಮೋದಿ (PM Modi) ಅವರ ಆಶೀರ್ವಾದ ಸಿಗುವುದಿಲ್ಲ ಎಂದು ಬಹಿರಂಗವಾಗಿ ಧಮ್ಕಿ ಹಾಕುತ್ತಿದ್ದಾರೆ. ಬಿಜೆಪಿ ಸೋತರೆ ರಾಜ್ಯದಲ್ಲಿ ಗಲಭೆಯಾಗುತ್ತದೆ ಎಂದು ಹೇಳುತ್ತಾರೆ. ಆದರೆ ಕರ್ನಾಟಕದ ಜನತೆ ಇವರ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಕಾಂಗ್ರೆಸ್‌ ಅಧಿ ನಾಯಕಿ ಸೋನಿಯಾ ಗಾಂಧಿ (Sonia Gandhi) ತಿರುಗೇಟು ನೀಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಕೊಚ್ಚಿಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ, ಬೆಂಗಳೂರು ವಿಮಾನನಿಲ್ದಾಣದಲ್ಲಿ ತುರ್ತುಭೂಸ್ಪರ್ಶ, 150 ಪ್ರಯಾಣಿಕರು ಸೇಫ್

ಅಂಜಲಿ ಅಂಬಿಗೇರ ಸಹೋದರಿ ಯಶೋದಾ ಆತ್ಮಹತ್ಯೆ ಯತ್ನ, ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ ಸಂಬಂಧಿಸಿದ ಇತ್ತೀಚಿನ 10 ವಿದ್ಯಮಾನಗಳು

ಕರ್ನಾಟಕ ಹವಾಮಾನ ಮೇ 19; ರಾಜ್ಯದಲ್ಲಿ ಮಳೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Bus Accident: ಫ್ಲೈ ಓವರ್‌ಗೆ ಹಾರಿದ ಸಾರಿಗೆ ಬಸ್‌ ಪ್ರಯಾಣಿಕರು ಪಾರಾಗಿದ್ದೇ ರೋಚಕ; ನೆಲಮಂಗಲದಲ್ಲಿ ಸಿನಿಮಾ ಸ್ಟಂಟ್ ನಂತೆ ಸಂಭವಿಸಿದ ಅಪಘಾತ

ಹುಬ್ಬಳ್ಳಿಯಲ್ಲಿಂದು (ಮೇ 6) ಹಮ್ಮಿಕೊಂಡಿದ್ದ ಸಾರ್ವಜನಿಕ ಸಮಾವೇಶದಲ್ಲಿ ಕೇಸರಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು, 2018ರಲ್ಲಿ ನೀವು ಬಿಜೆಪಿಗೆ ಅಧಿಕಾರ ನೀಡಲಿಲ್ಲ. ಆದರೂ ಇವರು ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬಂದಿದ್ದರು. ನಂತರ ಅವರ 40 ಪರ್ಸೆಂಟ್ ಸರ್ಕಾರ ನಿಮ್ಮನ್ನು ಲೂಟಿ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕರು ಎಷ್ಟು ಅಹಂಕಾರದಲ್ಲಿದ್ದಾರೆ ಎಂದರೆ ಅವರು ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡುತ್ತಿಲ್ಲ. ಯಾವುದೇ ಪತ್ರಕ್ಕೂ ಉತ್ತರ ನೀಡುತ್ತಿಲ್ಲ. ಸಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ನಿಯಂತ್ರಿಸುತ್ತಿದ್ದಾರೆ. ಯಾವುದೇ ಸರ್ಕಾರದಲ್ಲಿ ಇಂತಹ ದುರಾಡಳಿತವನ್ನು ನೀವು ಎಂದಾದರೂ ನೋಡಿದ್ದೀರಾ? ಪ್ರಜಾತಂತ್ರ ವ್ಯವಸ್ಥೆ ನಡೆಯುವುದು ಹೀಗೆಯೇ? ಅವರು ಚುನಾವಣೆಯಲ್ಲಿ ಗೆಲ್ಲದಿದ್ದರೆ ಕರ್ನಾಟಕ ರಾಜ್ಯಕ್ಕೆ ಮೋದಿ ಅವರ ಆಶೀರ್ವಾದ ಸಿಗುವುದಿಲ್ಲ ಎಂದು ಬಹಿರಂಗವಾಗಿ ಧಮ್ಕಿ ಹಾಕುತ್ತಿದ್ದಾರೆ.

ನಿಮ್ಮ ಪರವಾಗಿ ನಾನು ಅವರಿಗೆ ಒಂದು ಮಾತು ಹೇಳಬಯಸುತ್ತೇನೆ. ನೀವು ಕರ್ನಾಟಕ ರಾಜ್ಯದ ಜನರನ್ನು ಇಷ್ಟು ದಡ್ಡರೆಂದು ಭಾವಿಸಬೇಡಿ. ಕರ್ನಾಟಕದ ಜನ ತಮ್ಮ ಪರಿಶ್ರಮ ಹಾಗೂ ಸಂಕಲ್ಪದ ಮೇಲೆ ಭರವಸೆ ಇಟ್ಟಿದ್ದಾರೆ ಹೊರತು ಬೇರೆ ಯಾರ ಆಶೀರ್ವಾದದಿಂದಲೂ ಅಲ್ಲ. ಕರ್ನಾಟಕದ ಜನ ದುರಾಸೆ ಇರುವವರಲ್ಲ, ನಿಮ್ಮ ಬೆದರಿಕೆಗಳಿಗೆ ಹೆದರುವವರೂ ಅಲ್ಲ. ಕರ್ನಾಟಕದ ಜನ ಮೇ 10 ರಂದು ನಿಮಗೆ ಈ ಮಣ್ಣಿನ ಶಕ್ತಿ ಏನು ಎಂದು ತೋರಿಸುತ್ತಾರೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಇಂದು ಲಕ್ಷಾಂತರ ರೈತರು ಹಾಗೂ ಹಾಲು ಉತ್ಪಾದಕರನ್ನು ಕತ್ತಲೆಗೆ ದೂಡಲು ನಂದಿನಿಯಂತಹ ಅತ್ಯುತ್ತಮ ಸಂಸ್ಥೆಯನ್ನು ನಾಶ ಮಾಡಲು ಷಡ್ಯಂತ್ರ ರೂಪಿಸಿದ್ದಾರೆ. ಇದು ರಾಜ್ಯದಲ್ಲಿ ಯಶಸ್ವಿಯಾಗುವುದಿಲ್ಲ. ಜನರ ಆಶೀರ್ವಾದದಿಂದ ನಾಯಕರಾಗುತ್ತಾರೆಯೇ ಹೊರತು, ಯಾವುದೇ ನಾಯಕರ ಆಶೀರ್ವಾದದಿಂದ ಈ ರಾಜ್ಯದ ಜನರ ಭವಿಷ್ಯ ನಿರ್ಧಾರವಾಗುವುದಿಲ್ಲ ಎಂದು ಬಿಜೆಪಿಯವರಿಗೆ ಹೇಳಬಯಸುತ್ತೇನೆ. ಜನರು ತಮ್ಮ ಭವಿಷ್ಯವನ್ನು ತಾವೇ ಬರೆದುಕೊಳ್ಳುತ್ತಾರೆ.

ಭಗವಾನ್ ಬಸವಣ್ಣ ಅವರು ಈ ಮಣ್ಣಿನಲ್ಲಿ ಹುಟ್ಟಿದ್ದಾರೆ. ಅವರು ಯಾರ ಮಾತಿಗೂ ಅಂಜದೇ ಎಲ್ಲರನ್ನು ಸಮಾನತೆ ನೀಡುವ ಹೋರಾಟ ಮಾಡಿದ್ದರು. ಇದು ಕುವೆಂಪು ಅವರ ಭೂಮಿಯಾಗಿದ್ದು, ಬಿಜೆಪಿ ಇವರ ತತ್ವಗಳನ್ನು ಪ್ರತಿನಿತ್ಯ ಅಪಮಾನಿಸುತ್ತಲೇ ಬಂದಿದೆ. ದೇಶದ ಇತಿಹಾಸ ಹಾಗೂ ಕರ್ನಾಟಕದ ಸಾಮಾಜಿಕ ನ್ಯಾಯದ ಪರಂಪರೆಯನ್ನು ನಾಶ ಮಾಡುವ ಪ್ರಯತ್ನ ಮಾಡಬೇಡಿ.

ಬಿಜೆಪಿ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ರಾಜ್ಯ ಹಾಗೂ ದೇಶವನ್ನು ಒಡೆಯುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯವನ್ನು ಯಾವ ಸ್ಥಿತಿಗೆ ತಂದಿದ್ದಾರೆ ಎಂದು ಎಲ್ಲರೂ ನೋಡಿದ್ದಾರೆ. ಇಂತಹ ಸರ್ಕಾರವನ್ನು ತೊಲಗಿಸುವ ಶಪತವನ್ನು ನಿವೆಲ್ಲರೂ ಕೈಗೊಳ್ಳಬೇಕು ಎಂದು ಸೋನಿಯಾ ಗಾಂಧಿ ಕರೆ ನೀಡಿದ್ದಾರೆ.

ಕಾಂಗ್ರೆಸ್ ಇಸಿಹಾಸದಲ್ಲಿ ಕರ್ನಾಟಕ ರಾಜ್ಯಕ್ಕೆ ವಿಶೇಷ ಸ್ಥಾನವಿದೆ. ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿರುವುದು ಹೆಮ್ಮೆಯ ವಿಚಾರ. ಇಂದಿರಾ ಗಾಂಧಿ ಅವರು ಕೇಂದ್ರದ ಜನ ವಿರೋಧಿ ನೀತಿ ವಿರುದ್ಧ ಹೋರಾಟ ಮಾಡಿದ್ದರು. ಆಗ ಚಿಕ್ಕಮಗಳೂರಿನ ಜನ ಅವರ ಬೆಂಬಲಕ್ಕೆ ನಿಂತಿದ್ದರು. 25 ವರ್ಷಗಳ ಹಿಂದೆ ನಾನು ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದಾಗ ಬಳ್ಳಾರಿಯ ಜನ ನನ್ನನ್ನು ಬೆಂಬಲಿಸಿದ್ದರು. ಈ ಕತ್ತಲ ಸಮಯದಲ್ಲಿ ನಾವು ಸರ್ಕಾರದ ವಿರುದ್ಧ ಧ್ವನಿ ಎತ್ತುವುದು ನಮ್ಮ ಕರ್ತವ್ಯ ಎಂದಿದ್ದಾರೆ.

ರಾಜ್ಯದ ಜನ ಕರ್ನಾಟಕ ರಾಜ್ಯವನ್ನು ಬಿಜೆಪಿಯ ಲೂಟಿಯಿಂದ ರಕ್ಷಿಸಲು ಮೇ 10 ರಂದು ನಿಮ್ಮ ಅಮೂಲ್ಯವಾದ ಮತಗಳನ್ನು ಕಾಂಗ್ರೆಸ್‌ನ ಪ್ರತಿ ಅಭ್ಯರ್ಥಿಗಳಿಗೆ ನೀಡಿ ಜಯಶೀಲರನ್ನಾಗಿ ಮಾಡಬೇಕು. ಆಮೂಲಕ ನಿಮ್ಮ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ