logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Election: ಕರ್ನಾಟಕ ಚುನಾವಣೆಗೆ 3,632 ಅಭ್ಯರ್ಥಿಗಳಿಂದ 5,102 ನಾಮಪತ್ರ ಸಲ್ಲಿಕೆ, ಮಹಿಳಾ ಅಭ್ಯರ್ಥಿಗಳಿಗೆ ಕೊರತೆ

Karnataka Election: ಕರ್ನಾಟಕ ಚುನಾವಣೆಗೆ 3,632 ಅಭ್ಯರ್ಥಿಗಳಿಂದ 5,102 ನಾಮಪತ್ರ ಸಲ್ಲಿಕೆ, ಮಹಿಳಾ ಅಭ್ಯರ್ಥಿಗಳಿಗೆ ಕೊರತೆ

Praveen Chandra B HT Kannada

Apr 21, 2023 08:21 AM IST

google News

Karnataka Election: ಕರ್ನಾಟಕ ಚುನಾವಣೆಗೆ 3,632 ಅಭ್ಯರ್ಥಿಗಳಿಂದ 5,102 ನಾಮಪತ್ರ ಸಲ್ಲಿಕೆ, ಮಹಿಳಾ ಅಭ್ಯರ್ಥಿಗಳಿಗೆ ಕೊರತೆ

  • ಕರ್ನಾಟಕ ಚುನಾವಣೆಗೆ (Karnataka Elections) 3,600 ಅಭ್ಯರ್ಥಿಗಳು 5,102 ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Karnataka Election: ಕರ್ನಾಟಕ ಚುನಾವಣೆಗೆ 3,632 ಅಭ್ಯರ್ಥಿಗಳಿಂದ 5,102 ನಾಮಪತ್ರ ಸಲ್ಲಿಕೆ, ಮಹಿಳಾ ಅಭ್ಯರ್ಥಿಗಳಿಗೆ ಕೊರತೆ
Karnataka Election: ಕರ್ನಾಟಕ ಚುನಾವಣೆಗೆ 3,632 ಅಭ್ಯರ್ಥಿಗಳಿಂದ 5,102 ನಾಮಪತ್ರ ಸಲ್ಲಿಕೆ, ಮಹಿಳಾ ಅಭ್ಯರ್ಥಿಗಳಿಗೆ ಕೊರತೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Elections) ಕಳೆದ ಕೆಲವು ದಿನಗಳಿಂದ ಅಭ್ಯರ್ಥಿಗಳು ನಾಮಪತ್ರ (Nominations) ಸಲ್ಲಿಸುತ್ತಿದ್ದಾರೆ. ಪ್ರಬಲ ರಾಜಕಾರಣಿಗಳು ತಮ್ಮ ಕಾರ್ಯಕರ್ತರ ಪಡೆಯ ನಡುವೆ ಶಕ್ತಿಪ್ರದರ್ಶನ ಮಾಡುತ್ತ ನಾಮಪತ್ರ ಸಲ್ಲಿಸಿದರೆ, ಸಾಮಾನ್ಯ ಅಭ್ಯರ್ಥಿಗಳು ಸೈಲೆಂಟ್‌ ಆಗಿ ಹೋಗಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಗುರುವಾರದವರೆಗೆ ಕರ್ನಾಟಕದಲ್ಲಿ 3,600 ಅಭ್ಯರ್ಥಿಗಳು 5,102 ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಏಪ್ರಿಲ್‌ 13ರಿಂದ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಈ ಬಾರಿ ನಾಮಪತ್ರ ಸಲ್ಲಿಕೆಯಲ್ಲಿ ಪುರುಷ ಅಭ್ಯರ್ಥಿಗಳು ಹೆಚ್ಚಿದ್ದಾರೆ. ಮಹಿಳಾ ಅಭ್ಯರ್ಥಿಗಳ ಸಂಖ್ಯೆ ಗಮನಾರ್ಹವಾಗಿ ಕಡಿಮೆಯಾಗಿದೆ. 4,710 ನಾಮಪತ್ರಗಳಲ್ಲಿ 3,327 ಪುರುಷ ಅಭ್ಯರ್ಥಿಗಳಾಗಿದ್ದಾರೆ. 391 ನಾಮಪತ್ರಗಳಲ್ಲಿ 304 ಮಹಿಳಾ ಅಭ್ಯರ್ಥಿಗಳಾಗಿದ್ದಾರೆ. ಇತರೆ ಲಿಂಗದ ಒಬ್ಬ ಅಭ್ಯರ್ಥಿ ನಾಮಮತ್ರ ಸಲ್ಲಿಸಿದ್ದಾರೆ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.

ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳಲ್ಲಿ 707 ಅಭ್ಯರ್ಥಿಗಳು ಬಿಜೆಪಿ, 651 ಅಭ್ಯರ್ಥಿಗಳು ಕಾಂಗ್ರೆಸ್‌ ಮತ್ತು 455 ಅಭ್ಯರ್ಥಿಗಳು ಜೆಡಿಎಸ್‌ ಪಕ್ಷವೆಂದು ಗುರುತಿಸಿಕೊಂಡಿದ್ದಾರೆ. ಉಳಿದ ಅಭ್ಯರ್ಥಿಗಳು ಇತರೆ ಸಣ್ಣ ಪಕ್ಷ ಅಥವಾ ಪಕ್ಷೇತರ ಅಭ್ಯರ್ಥಿಗಳಾಗಿದ್ದಾರೆ. ಹೆಚ್ಚೆಂದರೆ, ಒಬ್ಬ ಅಭ್ಯರ್ಥಿಯು ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಆರನೇ ಮತ್ತು ಕೊನೆಯ ದಿನವಾದ ಗುರುವಾರ ಹಲವು ಪ್ರಮುಖ ನಾಯಕರು ಸೇರಿದಂತೆ 1,691 ಅಭ್ಯರ್ಥಿಗಳಿಂದ 1,934 ನಾಮಪತ್ರಗಳು ಸಲ್ಲಿಕೆಯಾಗಿದೆ. ನಾಮಪತ್ರ ಸಲ್ಲಿಕೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗ ಅಚ್ಚರಿಯ ನಡೆಯಲ್ಲಿ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಅವರು ಕನಕಪುರ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ. ಅವರ ಹಿರಿಯ ಸಹೋದರ ಹಾಗೂ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್‌ಗೆ ಇಡಿ ಇತ್ಯಾದಿ ತನಿಖಾ ಸಂಸ್ಥೆಗಳ ಭಯ ಇರುವ ಕಾರಣ ಡಿಕೆ ಸುರೇಶ್‌ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡರೆ "ಬ್ಯಾಕಪ್ ಪ್ಲಾನ್" ಆಗಿ ಸುರೇಶ್‌ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್ ಪಿ ಸ್ವರೂಪ್ ಅವರು ಮಾಜಿ ಪ್ರಧಾನಿ, ಜೆಡಿಎಸ್ ಕುಲಪತಿ ಹೆಚ್ ಡಿ ದೇವೇಗೌಡರ ಸಂಪೂರ್ಣ ಕುಟುಂಬದ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಅವರಿಗೆ ಬುಧವಾರ ರಾತ್ರಿ ಪಕ್ಷದಿಂದ ಟಿಕೆಟ್ ಘೋಷಣೆಯಾಗಿದ್ದು, ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಹಿರಿಯ ಮುಖಂಡ ಮತ್ತು ಹಾಲಿ ಶಾಸಕ ಕೆ ಎಸ್ ಈಶ್ವರಪ್ಪ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.

ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್, ಸಚಿವ ಸಿಎನ್ ಅಶ್ವಥ್ ನಾರಾಯಣ್ ಅವರೊಂದಿಗೆ ಮಂಡ್ಯ ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ನಾಮಪತ್ರ ಸಲ್ಲಿಸಿದರು.

ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (ಏ.19) ಶಿಗ್ಗಾಂವಿಯಲ್ಲಿ ರೋಡ್​ಶೋ ನಡೆಸಿ, ಪಕ್ಷದ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಇದೀಗ ಪ್ರಧಾನಿ ಮೋದಿ ಯಾವಾಗ ಪ್ರಚಾರಕ್ಕೆ ಎಂಬುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತ ವರದಿ ಇಲ್ಲಿದೆ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ