logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Exit Polls: ಕಾಂಗ್ರೆಸ್ 122 ರಿಂದ 140, ಬಿಜೆಪಿ 62 ರಿಂದ 80 ಸ್ಥಾನಗಳಿಸಲಿದೆ ಎಂದು ಇಂಡಿಯಾ ಟುಡೇ ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ

Karnataka Exit Polls: ಕಾಂಗ್ರೆಸ್ 122 ರಿಂದ 140, ಬಿಜೆಪಿ 62 ರಿಂದ 80 ಸ್ಥಾನಗಳಿಸಲಿದೆ ಎಂದು ಇಂಡಿಯಾ ಟುಡೇ ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ

Raghavendra M Y HT Kannada

May 10, 2023 10:56 PM IST

google News

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ಇಂಡಿಯಾ ಟುಡೇ ಹಾಗೂ ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಹೇಳಿದೆ.

  • ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ 122 ರಿಂದ 140 ಸ್ಥಾನಗಳನ್ನು ಗೆಲ್ಲಲಿದೆ ಎಂದು ಇಂಡಿಯಾ ಟುಡೇ ಮತ್ತು ಆಕ್ಸಿಸ್ ಮೈ ಇಂಡಿಯಾ ಮತಗಟ್ಟೆ ಸಮೀಕ್ಷೆಯಲ್ಲಿ ಭವಿಷ್ಯ ನುಡಿದಿದೆ.

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ಇಂಡಿಯಾ ಟುಡೇ ಹಾಗೂ ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಹೇಳಿದೆ.
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ಇಂಡಿಯಾ ಟುಡೇ ಹಾಗೂ ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಹೇಳಿದೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳು (Karnataka Exit Polls ಬಹಿರಂಗವಾಗಿದ್ದು, ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ (India Today Axis My India) ಎಲ್ಲಾ ಸಂಸ್ಥೆಗಳಿಗಿಂತ ವಿಭಿನ್ನವಾದ ಸಮೀಕ್ಷೆಯನ್ನು ನೀಡಿದೆ.

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ 122 ರಿಂದ 140 ಸ್ಥಾನಗಳನ್ನು ಪಡೆಯುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದೆ.

ಆದರೆ ಭಾರತೀಯ ಜನತಾ ಪಾರ್ಟಿ-ಬಿಜೆಪಿ 62 ರಿಂದ 80 ಸ್ಥಾನಗಳಿಗೆ ಕುಸಿಯುವ ಮೂಲಕ ಎರಡನೇ ಸ್ಥಾನ ಗಳಿಸುವ ಸಾಧ್ಯತೆ ಇದೆ ಎಂದು ತನ್ನ ಸಮೀಕ್ಷೆಯಲ್ಲಿ ತೋರಿಸಿದೆ. ಇನ್ನ ದಳಪತಿಗಳ ಪಕ್ಷ ಜೆಡಿಎಸ್ ಮೂರನೇ ಸ್ಥಾನ ಪಡೆಯಲಿದೆ. ಜನತಾ ದಳ 20 ರಿಂದ 25 ಸ್ಥಾನಗಳಲ್ಲಿ ಗೆಲುವ ಸಾಧಿಸುವ ನಿರೀಕ್ಷೆಯಿದೆ. ಇತರೆ ಪಕ್ಷಗಳು 0-3 ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ಹೇಳಿದೆ.

ರಾಜ್ಯ ವಿಧಾನಸಭೆಯಲ್ಲಿ 224 ಸ್ಥಾನಗಳು ಇದ್ದು, ಸ್ಪಷ್ಟ ಬಹುಮತಕ್ಕೆ ಬರಲು 113 ಮ್ಯಾಜಿಕ್ ಸಂಖ್ಯೆಯಾಗಿದೆ. ಕಾಂಗ್ರೆಸ್ ಇದನ್ನು ಸುಲಭವಾಗಿ ಪಡೆಯಬಹುದು ಅಂತ ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಮತಗಟ್ಟೆ ಸಮೀಕ್ಷೆಯಲ್ಲಿ ಹೇಳಿದೆ. ಎಲ್ಲಾ ಸಂಸ್ಥೆಗಳ ವರದಿಗಳು ಕೇವಲ ಸಮೀಕ್ಷೆಗಳಷ್ಟೇ. ಇದೇ ಅಂತಿಮವಲ್ಲ.

ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌ಗೆ ಡಿಚ್ಚಿ ಕೊಡಲಿದೆ ಕಾಂಗ್ರೆಸ್

ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ 64 ಸ್ಥಾನಗಳ ಪೈಕಿ 36ರಲ್ಲಿ ಗೆಲ್ಲಲಿದೆ ಎಂದು ಈ ಚುನವಾಣೋತ್ತರ ಮತಗಟ್ಟೆ ಸಮೀಕ್ಷೆ ಹೇಳಿದ್ದು, ಇಲ್ಲಿ ಜೆಡಿಎಸ್ 18 ಸ್ಥಾನಗಳೊಂದಿಗೆ 2ನೇ ಸ್ಥಾನ ಪಡೆಯಲಿದೆ ಎಂದು ಅಂದಾಜಿಸಲಾಗಿದೆ. ಬಿಜೆಪಿ 6 ಹಾಗೂ ಇತರರು ಆರಲಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದಿದೆ.

ಇನ್ನ ಮತಹಂಚಿಕೆಗೆ ಸಂಬಂಧಿಸಿದಂತೆ ಈ ಪ್ರದೇಶದಲ್ಲಿ ಕಾಂಗ್ರೆಸ್ ಶೇ. 40, ಜೆಡಿಎಸ್ ಶೇ 28, ಬಿಜೆಪಿ ಶೇ 25 ಹಾಗೂ ಇತರೆ ಪಕ್ಷಗಳು ಶೇ 7 ರಷ್ಟು ಮತಗಳನ್ನು ಪಡೆಯುವ ಸಾಧ್ಯತೆ ಇದೆ ಎಂದು ಮತಗಟ್ಟೆ ಸಮೀಕ್ಷೆ ಹೇಳಿದೆ.

ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಪ್ರಾಬಲ್ಯ

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಮತಗಟ್ಟೆ ಸಮೀಕ್ಷೆ ಪ್ರಕಾರ, ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಲಿದೆ. ಇಲ್ಲಿನ 19 ಕ್ಷೇತ್ರಗಳ ಪೈಕಿ 16ರಲ್ಲಿ ಬಿಜೆಪಿ, ಮೂರರಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದಲ್ಲಿ ಜನತಾ ದಳ ಖಾತೆಯನ್ನೇ ತೆರೆಯುವುದಿಲ್ಲ ಈ ಸರ್ವೇಯಲ್ಲಿ ತಿಳಿಸಿದೆ.

ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಶೇಕಡಾ 50 ಮತಗಳನ್ನು ಪಡೆದರೆ, ಕಾಂಗ್ರೆಸ್ ಶೇ.40 ಹಾಗೂ ಜೆಡಿಎಸ್ ಶೇ 6 ರಷ್ಟು, ಇತರೆ ಪಕ್ಷಗಳು ಶೇ.4 ರಷ್ಟು ಮತಗಳನ್ನು ಪಡೆಯಲಿದ್ದಾರೆ ಎಂದು ಅಂದಾಜಿಸಿದೆ.

ಹೈದರಾಬಾದ್ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನಗಳ ಅಂದಾಜು

ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್ 40 ಸ್ಥಾನಗಳ ಪೈಕಿ 32 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ. ಉಳಿದಂತೆ ಬಿಜೆಪಿ 7, ಜೆಡಿಎಸ್ 1 ಪಡೆಯುವ ನಿರೀಕ್ಷೆ ಇದೆ ಅಂತ ಸಮೀಕ್ಷೆ ಹೇಳಿದ್ದು, ಇಲ್ಲಿ ಕಾಂಗ್ರೆಸ್ ಶೇ 47 ರಷ್ಟು ಮತಗಳನ್ನು ಪಡೆಯಲಿದೆ. ಬಿಜೆಪಿ 36 ರಷ್ಟು, ಜೆಡಿಎಸ್ 13 ರಷ್ಚು ಪಡೆಲಿದ್ದಾರೆ.

ಮುಂಬೈ-ಕರ್ನಾಟಕದಲ್ಲೂ ಕಾಂಗ್ರೆಸ್‌ಗೆ ಮುನ್ನಡೆ

ಈ ಬಾರಿಯ ಚುನಾವಣೆಯಲ್ಲಿ ಮುಂಬೈ ಕರ್ನಾಕಟದ ಪ್ರದೇಶದ 50 ಸ್ಥಾನಗಳ ಪೈಕಿ 28ರಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಇಲ್ಲಿ ಬಿಜೆಪಿ 21, ಜೆಡಿಎಸ್ ಒಂದರಲ್ಲಿ ಗೆಲ್ಲುವ ನಿರೀಕ್ಷೆ ಇದೆ ಎಂದು ಅಂದಾಜಿಸಿದೆ. ಜೊತೆಗೆ ಕಾಂಗ್ರೆಸ್‌ಗೆ 45 ರಷ್ಟು ಮತ, ಬಿಜೆಪಿಗೆ 42, ಜೆಡಿಎಸ್ 8 ಹಾಗೂ ಇತರೆ ಪಕ್ಷಗಳು 5 ರಷ್ಟು ಮತಗಳನ್ನು ಪಡೆಯುವ ನಿರೀಕ್ಷೆ ಇದೆ.

ಬೆಂಗಳೂರು ವಲಯದಲ್ಲೂ ಕೈ ಕಮಾಲ್

ಬೆಂಗಳೂರು ಪ್ರದೇೇಶದ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 17ರಲ್ಲಿ ಗೆಲುವು ಸಾಧಿಸಲಿದೆ ಎಂದು ಇಂಡಿಯಾ ಟುಡೇ- ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಹೇಳಿದೆ. ಉಳಿದಂತೆ ಬಿಜೆಪಿ 10, ಜೆಡಿಎಸ್‌ 1 ರಲ್ಲಿ ಜಯ ಗಳಿಸಲಿದೆ ಎಂದು ಅಂದಾಜಿಸಿದೆ. ರಾಜಧಾನಿಯಲ್ಲಿ ಕಾಂಗ್ರೆಸ್‌ಗೆ 44 ರಷ್ಟು ಮತಗಳು ಸಿಗಲಿವೆ. ಬಿಜೆಪಿಗೆ 40, ಜೆಡಿಎಸ್‌ಗೆ 15 ರಷ್ಟು ಮತಗಳ ಬರಲಿದೆ ಎಂದು ಹೇಳಿದೆ.

ಮಧ್ಯ ಕರ್ನಾಟಕರದಲ್ಲೂ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನಗಳ ನಿರೀಕ್ಷೆ

ಮಧ್ಯ ಕರ್ನಾಟಕದಲ್ಲೂ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗಳಿಸಲಿದೆ ಎಂದು ಸಮೀಕ್ಷೆ ಹೇಳಿದೆ. 23 ಸ್ಥಾನಗಳ ಪೈಕಿ 12ರಲ್ಲಿ ಕಾಂಗ್ರೆಸ್, 10ರಲ್ಲಿ ಬಿಜೆಪಿ, ಒಂದರಲ್ಲಿ ಜೆಡಿಎಸ್ ಗೆಲ್ಲಲಿದೆ. ಇಲ್ಲಿ ಕಾಂಗ್ರೆಸ್‌ಗೆ 41 ರಷ್ಟು ಬಿಜೆಪಿಗೆ 35 ರಷ್ಟು, ಜೆಡಿಎಸ್‌ಗೆ 17 ರಷ್ಟು ಹಾಗೂ ಇತರೆ ಪಕ್ಷಗಳು ಶೇಕಡಾ 7 ರಷ್ಟು ಮತಗಳನ್ನು ಗಳಿಸಲಿದ್ದಾರೆ ಎಂದು ಸಮೀಕ್ಷೆಯಲ್ಲಿ ವಿವರಿಸಲಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ