logo
ಕನ್ನಡ ಸುದ್ದಿ  /  ಕರ್ನಾಟಕ  /  Appointment Of Chancellor: 7 ನೂತನ ವಿವಿಗಳಿಗೆ ಕುಲಪತಿಗಳ ನೇಮಕ ಮಾಡಿ ಸರ್ಕಾರ ಆದೇಶ: ಸಚಿವ ಅಶ್ವತ್ಥ್ ನಾರಾಯಣ

Appointment of Chancellor: 7 ನೂತನ ವಿವಿಗಳಿಗೆ ಕುಲಪತಿಗಳ ನೇಮಕ ಮಾಡಿ ಸರ್ಕಾರ ಆದೇಶ: ಸಚಿವ ಅಶ್ವತ್ಥ್ ನಾರಾಯಣ

HT Kannada Desk HT Kannada

Mar 20, 2023 09:04 PM IST

google News

ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ್ ನಾರಾಯಣ

  • ಹೊಸದಾಗಿ ಸ್ಥಾಪಿಸಿರುವ 7 ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಸಚಿವ ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದ್ದಾರೆ.

ಉನ್ನತ  ಶಿಕ್ಷಣ ಸಚಿವ ಡಾ ಅಶ್ವತ್ಥ್ ನಾರಾಯಣ
ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ್ ನಾರಾಯಣ

ಬೆಂಗಳೂರು: ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ.

ಬೆಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ ಡಾ.ಬಿ ಕೆ ರವಿ ಅವರನ್ನು ಕೊಪ್ಪಳ ವಿಶ್ವವಿದ್ಯಾಲಯಕ್ಕೆ, ಬಾಗಲಕೋಟೆಯ ತೋಟಗಾರಿಕೆ ವಿ.ವಿಯ ಡಾ.ಅಶೋಕ ಸಂಗಪ್ಪ ಆಲೂರು ಅವರನ್ನು ಕೊಡಗು ವಿವಿಗೆ ನೇಮಕ ಮಾಡಲಾಗಿದೆ.

ಮೈಸೂರು ವಿವಿ ಮಾನವಶಾಸ್ತ್ರ ವಿಭಾಗದ ಡಾ.ಎಂ ಆರ್ ಗಂಗಾಧರ ಅವರನ್ನು ಚಾಮರಾಜನಗರ ವಿವಿ, ಬೆಳಗಾವಿಯ ಕೆ.ಎಸ್‌.ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್‌ ಶರದ್‌ ದೇಶಪಾಂಡೆ ಅವರನ್ನು ಬಾಗಲಕೋಟೆ ವಿವಿ, ಕುವೆಂಪು ವಿ.ವಿಯ ಡಾ.ಬಿ ಎಸ್‌ ಬಿರಾದಾರ್ ಅವರನ್ನು ಬೀದರ್ ವಿವಿ ನೇಮಿಸಲಾಗಿದೆ.

ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ ವಿಭಾಗದ ಡಾ.ಸುರೇಶ್‌ ಹೆಚ್‌ ಜಂಗಮಶೆಟ್ಟಿ ಅವರನ್ನು ಹಾವೇರಿ ವಿವಿ ಮತ್ತು ಧಾರವಾಡದ ಕರ್ನಾಟಕ ವಿ.ವಿಯ ನಿವೃತ್ತ ಪ್ರೊಫೆಸರ್ ಆಗಿರುವ ಡಾ.ಟಿ ಸಿ ತಾರಾನಾಥ್‌ ಅವರನ್ನು ಹಾಸನ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಿಸಲಾಗಿದೆ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸರ್ಕಾರ ಜಿಲ್ಲೆಗೆ ಒಂದಾದರೂ ವಿಶ್ವವಿದ್ಯಾಲಯ ಇರಬೇಕು ಎನ್ನುವ ತತ್ವದಡಿಯಲ್ಲಿ ಈ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ