logo
ಕನ್ನಡ ಸುದ್ದಿ  /  ಕರ್ನಾಟಕ  /  Gruhalakshmi Scheme: ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಿದ್ದತೆ: ಸಹಕರಿಸಲಿದ್ದಾರೆ ಪ್ರಜಾಪ್ರತಿನಿಧಿಗಳು: ಹೀಗಿದೆ ಆಯ್ಕೆ ಪ್ರಕ್ರಿಯೆ

Gruhalakshmi Scheme: ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಿದ್ದತೆ: ಸಹಕರಿಸಲಿದ್ದಾರೆ ಪ್ರಜಾಪ್ರತಿನಿಧಿಗಳು: ಹೀಗಿದೆ ಆಯ್ಕೆ ಪ್ರಕ್ರಿಯೆ

HT Kannada Desk HT Kannada

Jul 15, 2023 11:16 AM IST

google News

ಕರ್ನಾಟಕದಲ್ಲಿ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆ ಜಾರಿ ಶುರುವಾಗಿದೆ.

    • Gruhalakshmi Scheme ಕರ್ನಾಟಕ ಸರ್ಕಾರವು ಗ್ಯಾರಂಟಿ ಯೋಜನೆಯಡಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲು ಸಿದ್ದತೆ ನಡೆಸಿದೆ. ಇದಕ್ಕೆ ಪೂರಕವಾಗಿ ಪ್ರಜಾಪ್ರತಿನಿಧಿ ಸೇವಕರನ್ನುಇ ನಿಯೋಜಿಸುತ್ತಿದೆ. ಗೃಹಲಕ್ಷ್ಮಿ ಯೋಜನೆ ಜಾರಿ ಕುರಿತ ಮಾಹಿತಿ ಇಲ್ಲಿದೆ..
ಕರ್ನಾಟಕದಲ್ಲಿ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆ ಜಾರಿ ಶುರುವಾಗಿದೆ.
ಕರ್ನಾಟಕದಲ್ಲಿ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆ ಜಾರಿ ಶುರುವಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಈಗಾಗಲೇ ಮೂರು ಜಾರಿಯಾಗಿದ್ದು, ಪ್ರಮುಖವಾದ ಗೃಹಲಕ್ಷ್ಮಿ ಯೋಜನೆ ಆರಂಭಕ್ಕೂ ತಯಾರಿ ಶುರುವಾಗಿದೆ.

ಕರ್ನಾಟಕ ಸರ್ಕಾರವು ಉಚಿತ ಬಸ್‌ ಪ್ರಯಾಣದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳು ಆರಂಭವಾಗಿವೆ. ಮಹಿಳೆಯರಿಗೆ ಮಾಸಿಕ 2000 ರೂ. ಸಹಾಯಧನ ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲು ಪೂರ್ವಭಾವಿ ತಯಾರಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಆರಂಭಿಸಿದೆ. ಇದರ ಭಾಗವಾಗಿಯೇ ಪ್ರಜಾಪ್ರತಿನಿಧಿಗಳನ್ನು ಪ್ರತಿ ಜಿಲ್ಲೆಯಲ್ಲೂ ನೇಮಿಸಲಿದೆ. ಇದಕ್ಕೆ ಸಂಬಂಧಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಶನಿವಾರ ಮಾಹಿತಿ ನೀಡಲಿದ್ದಾರೆ.

ಮನೆಯ ಯಜಮಾನಿ ಖಾತೆಗೆ ಮಾಸಿಕ 2 ಸಾವಿರ ರೂಪಾಯಿ ಜಮಾ ಮಾಡುವ ಕರ್ನಾಟಕ ಕಾಂಗ್ರೆಸ್​ನ ಮಹಾತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆ ಜಾರಿಗೆ ಸರ್ಕಾರ ಸಜ್ಜಾಗಿದೆ.

ಗೃಹಲಕ್ಷ್ಮಿ ಯೋಜನೆ ಅನುಷ್ಠಾನ

ರಾಜ್ಯದ ಹೆಣ್ಣುಮಕ್ಕಳ ಕಣ್ಣೊರೆಸುವ ಭಾಗ್ಯ ಎನ್ನಬಹುದಾದ ಗೃಹಲಕ್ಷ್ಮಿ ಯೋಜನೆ ಈಗಾಗಲೇ ಜಾರಿಯಾಗಿದೆ. ಅರ್ಜಿ ಸಲ್ಲಿಕೆ ಕೂಡ ಆರಂಭವಾಗಿದೆ. ಮನೆಯೊಡತಿಗೆ ಪ್ರತಿ ತಿಂಗಳು 2000 ನೀಡುವ ಈ ಯೋಜನೆಯು ಹಲವು ಗೊಂದಲಗಳ ನಡುವೆಯು ಯಶಸ್ವಿಯಾಗಿ ಜಾರಿಯಾಗಿದೆ. ಇದು ಬಡ ಹಾಗೂ ಮಧ್ಯಮ ವರ್ಗದ ಹೆಣ್ಣುಮಕ್ಕಳ ಪಾಲಿಗೆ ವರ ಅಂತಲೂ ಹೇಳಬಹುದು. ಈ ಯೋಜನೆಗೆ ಸುಮಾರು 32,000 ಕೋಟಿ ಬೇಕಾಗಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಈ ಯೋಜನೆಯನ್ನು ಪ್ರತಿಯೊಬ್ಬರಿಗೂ ಅನ್ವಯಿಸಿದರೆ ದೊಡ್ಡ ಪ್ರಮಾಣದಲ್ಲಿ ಹಣ ಬೇಕಾಗುತ್ತದೆ, ಆ ಕಾರಣಕ್ಕೆ ಬಡತನ ರೇಖೆಗಿಂತ ಕೆಳಗಿರುವ ಮಹಿಳೆಯರಿಗೆ ಮಾತ್ರ ನೀಡಬೇಕು ಎಂದು ಯೋಜನೆ ಜಾರಿಗೂ ಮೊದಲು ಚರ್ಚಿಸಲಾಗಿತ್ತು. ಅಲ್ಲದೆ ಕೆಲ ಷರತ್ತುಗಳನ್ನು ವಿಧಿಸಿ ನಂತರ ಜಾರಿಗೊಳಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಗಿತ್ತು. ಆದರೆ ಇದೆಲ್ಲವನ್ನೂ ಮೀರಿ ಸಿದ್ದರಾಮಯ್ಯ ಸರ್ಕಾರ ಎಪಿಎಲ್‌ ಹಾಗೂ ಬಿಪಿಎಲ್‌ ಎಲ್ಲರಿಗೂ 2000 ರೂ ನೀಡುವ ನಿರ್ಧಾರ ಮಾಡಿದೆ.

ಬರಲಿದ್ದಾರೆ ಪ್ರಜಾಪ್ರತಿನಿಧಿಗಳು

ಗೌರವಧನದ ಆಧಾರದ ಮೇಲೆ ಒಂದು ತಿಂಗಳ ಅವಧಿಗೆ ಮಾತ್ರ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಪ್ರತಿ ಒಂದು ಸಾವಿರ ಜನರಿಗೆ ಅಥವಾ ಒಂದು ಗ್ರಾಮಕ್ಕೆ ಓರ್ವ ಮಹಿಳೆ ಸೇರಿದಂತೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಲಾಗುತ್ತದೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್‌ಗಳಲ್ಲಿ ಹಾಗ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ಕಲ್ಪಿಸಲಾಗಿದೆ. ಆದರೆ ಈ ಕೇಂದ್ರಗಳಲ್ಲಿ ಉಂಟಾಗಬಹುದಾಗ ಒತ್ತಡವನ್ನು ತಪ್ಪಿಸುವ ಸಲುವಾಗಿ ಮೊಬೈಲ್​ ಆ್ಯಪ್​ ಮೂಲಕವು ಸಹ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗುತ್ತದೆ. ಈ ಮೊಬೈಲ್​ ಆ್ಯಪ್​ ಮೂಲಕ ಅರ್ಜಿ ಭರ್ತಿ ಮಾಡಿ ಸಲ್ಲಿಸಲು ಪ್ರಜಾ ಪ್ರತಿನಿಧಿಗಳನ್ನು ನೇಮಕ ಮಾಡಲಾಗುವುದು.

ಪ್ರಜಾಪ್ರತಿನಿಧಿಗಳು ಯಾರು

ಇದೀಗ ಯೋಜನೆ ಜಾರಿಗಾಗಿ ಪ್ರಜಾಪ್ರತಿನಿಧಿ (Citizen Volunteer) ನೇಮಕಕ್ಕೆ ನಿರ್ಧಾರ ಮಾಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.

ಪ್ರಜಾಪ್ರತಿನಿಧಿಗಳು ಆಯಾ ತಾಲೂಕಿನ ನಿವಾಸಿಗಳಾಗಿದ್ದು, 10ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಗೃಹಲಕ್ಷ್ಮೀ ಯೋಜನೆಯಡಿ ಕೆಲಸ ನಿರ್ವಹಿಸಲು ಆಸಕ್ತಿಯುಳ್ಳವರಾಗಿರಬೇಕು.

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಪ್ರಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. 1000 ಜನಸಂಖ್ಯೆಗಿಂತ ಕಡಿಮೆ ಅಥವಾ ಅದಕ್ಕೆ ಸಮನಾದ ಪ್ರತಿ ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿ ಹೆಚ್ಚುವರಿ 500 ಜನ ಸಂಖ್ಯೆಗೆ, ಒಂದು ಹೆಚ್ಚುವರಿ ಪ್ರಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತದೆ.

ನಗರ ಪ್ರದೇಶದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರತಿ ವಾರ್ಡ್​ನಲ್ಲಿ 1000 ಜನಸಂಖ್ಯೆಗೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿ ಹೆಚ್ಚುವರಿ 500 ಜನ ಸಂಖ್ಯೆಗ ಒಂದು ಹೆಚ್ಚುವರಿ ಪ್ರಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುವುದು ಎನ್ನುವುದು ಮಹಿಳಾ ಮತ್ತು ಅಭಿವೃದ್ದಿ ಇಲಾಖೆ ಹೊರಡಿಸಿರುವ ಮಾರ್ಗಸೂಚಿ ವಿವರಗಳಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಅವಕಾಶ

ರಾಜ್ಯ ಸರ್ಕಾರ ಘೋಷಿಸಿರುವ ಹೆಣ್ಣು ಮಕ್ಕಳಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಆನ್‌ಲೈನ್‌ ಹಾಗೂ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಬಿಪಿಎಲ್ ಮತ್ತು ಅಂತ್ಯೋದಯ ಯೋಜನೆಯ ಫಲಾನುಭವಿಗಳು 'ಗೃಹಲಕ್ಷ್ಮೀ' ಯೋಜನೆಗೆ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಪೋರ್ಟಲ್‌ಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವಿಲ್ಲ ಹಾಗೂ ಕೊನೆಯ ದಿನಾಂಕವನ್ನು ನಿಗದಿ ಪಡಿಸಿಲ್ಲ.

ʼಆನ್‌ಲೈನ್‌ ಆಫ್‌ಲೈನ್‌ ಎರಡರಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕವನ್ನು ನಿಗದಿ ಪಡಿಸಿಲ್ಲ, ಅಲ್ಲದೇ ವರ್ಷವಿಡೀ ಅರ್ಜಿ ಸಲ್ಲಿಸಬಹುದುʼ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಈ ಹಿಂದೆಯೇ ತಿಳಿಸಿದ್ದರು.

ಅರ್ಜಿ ಹೀಗೆ ಸಲ್ಲಿಕೆ

ಗೃಹಲಕ್ಷ್ಮೀ ಯೋಜನೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವಿಧಾನ

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರು ಸೇವಾಸಿಂಧು ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸುವ ಅವಕಾಶವಿದೆ.

* ಮೊದಲು ಸೇವಾಸಿಂಧು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

https://sevasindhuservices.karnataka.gov.in/

* ಮೊದಲ ಬಾರಿ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಬೇಕು. ಇದಕ್ಕಾಗಿ New user ? Register here ಇಲ್ಲಿ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ಹಾಕಿ ಅಕೌಂಟ್‌ ಕ್ರಿಯೇಟ್ ಮಾಡಿಕೊಳ್ಳಿ.

* ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್‌ವರ್ಡ್‌ ಅಥವಾ ಓಟಿಪಿ ಮೂಲಕ ಲಾಗಿನ್ ಆಗಿ. ಅದರಲ್ಲಿ ಗೃಹಲಕ್ಷ್ಮೀ ಯೋಜನೆ ಆಯ್ಕೆ ಮಾಡಿ.

* ಗೃಹಲಕ್ಷ್ಮೀ ಯೋಜನೆಯ ಟ್ಯಾಬ್‌ನಲ್ಲಿ ಅರ್ಜಿ ಫಾರಂ ಅನ್ನು ಡೌನ್‌ಲೋಡ್‌ ಮಾಡಿಕೊಂಡು ಭರ್ತಿ ಮಾಡಿ.

* ಅರ್ಜಿಯಲ್ಲಿ ಅರ್ಜಿದಾರರ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ. ಅರ್ಜಿ ಫಾರಂನಲ್ಲಿ ತಿಳಿಸಿರುವ ಎಲ್ಲಾ ದಾಖಲೆಗಳೊಂದಿಗೆ, ಭರ್ತಿ ಮಾಡಿದ ಅರ್ಜಿ ಫಾರಂ ಹಾಗೂ ದಾಖಲೆಗಳನ್ನು ಸಲ್ಲಿಸಿ.

ಗೃಹಲಕ್ಷ್ಮೀ ಯೋಜನೆಗೆ ಬೇಕಾಗುವ ಅಗತ್ಯ ದಾಖಲೆಗಳು

* ಆಧಾರ್‌ ಕಾರ್ಡ್‌

* ರೇಷನ್‌ ಕಾರ್ಡ್‌

* ಬ್ಯಾಂಕ್‌ ಪಾಸ್‌ ಪುಸ್ತಕ

* ವಿಳಾಸ ದಾಖಲಾಗಿರುವ ಗುರುತಿನ ಚೀಟಿ\

ಟ್ಯಾಕ್ಸ್‌ ಪಾವತಿಸುವವರು, ಜಿಎಸ್‌ಟಿ ರಿಟರ್ನ್ಸ್‌ ಸಲ್ಲಿಸುವವರು ಈ ಯೋಜನೆಗೆ ಅರ್ಹರಾಗುವುದಿಲ್ಲ. ಯೋಜನೆಯ ಫಲಾನುಭವಿಗಳು ಬ್ಯಾಂಕ್‌ ಖಾತೆಯೊಂದಿಗೆ ಆಧಾರ್‌ ಕಾರ್ಡ್‌ ಜೋಡಣೆ ಮಾಡುವುದು ಕಡ್ಡಾಯವಾಗಿದೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ