ಕನ್ನಡ ಸುದ್ದಿ  /  ಕರ್ನಾಟಕ  /  Siddaramaiah New Car: ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಕಾರು ಖರೀದಿ, ಇದರ ಬೆಲೆ ಗೊತ್ತಾ? Video

Siddaramaiah new car: ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಕಾರು ಖರೀದಿ, ಇದರ ಬೆಲೆ ಗೊತ್ತಾ? VIDEO

Meghana B HT Kannada

May 19, 2023 08:51 AM IST

ಸಿದ್ದರಾಮಯ್ಯ ಹೊಸ ಕಾರು ಖರೀದಿ

    • Siddaramaiah new car: ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಾಗಿ ಸರ್ಕಾರದಿಂದ ಹೊಸ ಕಾರು ಖರೀದಿ ಮಾಡಲಾಗಿದೆ.
ಸಿದ್ದರಾಮಯ್ಯ ಹೊಸ ಕಾರು ಖರೀದಿ
ಸಿದ್ದರಾಮಯ್ಯ ಹೊಸ ಕಾರು ಖರೀದಿ

ಬೆಂಗಳೂರು: ಮತ್ತೊಮ್ಮೆ ಕರ್ನಾಟಕದ ಮುಖ್ಯಮಂತ್ರಿ ಪಟ್ಟ ಒಲಿಯುತ್ತಿದ್ದಂತೆಯೇ ಸಿದ್ದರಾಮಯ್ಯ ಅವರಿಗಾಗಿ ಸರ್ಕಾರದಿಂದ ಹೊಸ ಕಾರು ಖರೀದಿ ಮಾಡಲಾಗಿದೆ. ಟೊಯೋಟಾ ವೆಲ್ಫೈರ್​ ಕಾರು ಇದಾಗಿದ್ದು, ಇದರ ಬೆಲೆ ಬರೋಬ್ಬರಿ ಒಂದು ಕೋಟಿ ರೂಪಾಯಿ.

ಟ್ರೆಂಡಿಂಗ್​ ಸುದ್ದಿ

Hassan Scandal: ಪ್ರಜ್ವಲ್‌ ಬೆಂಗಳೂರಿಗೆ ವಾಪಾಸ್‌ ಆಗುತ್ತಿಲ್ಲ ಯಾಕೆ, ವಿಳಂಬದ ಹಿಂದಿನ ತಂತ್ರವೇನು?

Hassan Scandal: ಬೆಂಗಳೂರಿಗೆ ಬಾರದ ಪ್ರಜ್ವಲ್‌ ರೇವಣ್ಣ, ಕಾದು ಕಾದು ಸುಸ್ತಾದ ಪೊಲೀಸರು

Bangalore News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ: ಬೆಂಗಳೂರಿನ ಮಾಧ್ವ ರಾದ್ಧಾಂತ ಸಂವರ್ಧಕ ಸಭಾ ಅಧಿವೇಶನದಲ್ಲಿ ಸಲಹೆ

Bangalore News: ಪೂರ್ವ ಮುಂಗಾರು ಚುರುಕು; ಬೆಂಗಳೂರಿನಲ್ಲಿ ನೀರಿನ ಸ್ಥಿತಿ ಈಗ ಹೇಗಿದೆ?

ಇನ್ನು ಮುಂದೆ ಸಿದ್ದರಾಮಯ್ಯ ಅವರು ಇದೇ ಕಾರಿನಲ್ಲಿ ಎಲ್ಲ ಕಡೆ ಓಡಾಡಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಐದು ದಿನಗಳ ಬಳಿಕ ಕೊನೆಗೂ ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ವಿಚಾರ ನಿನ್ನೆ ( ಮೇ 18) ಬಗೆಹರಿದಿದೆ. ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಡಿಕೆ ಶಿವಕುಮಾರ್ ಏಕೈಕ ಡಿಸಿಎಂ ಎಂಬುದನ್ನು ಕಾಂಗ್ರೆಸ್​ ಪಕ್ಷ ಅಧಿಕೃತವಾಗಿ ಘೋಷಿಸಿದೆ.

ಈ ಬಗ್ಗೆ ಸ್ಪಷ್ಟಪಡಿಸಲು ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಚೇರಿಯಲ್ಲಿ ಮಹತ್ವದ ಸುದ್ದಿಗೋಷ್ಠಿಯನ್ನು ಕಾಂಗ್ರೆಸ್​ ನಡೆಸಿತ್ತು. ಸುದ್ದಿಗೋ‍ಷ್ಠಿಯಲ್ಲಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಮುಂದಿನ ಲೋಕಸಭಾ ಚುನಾವಣೆ ಮುಗಿಯುವವರೆಗೂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್ ಅವರು ಒಬ್ಬರೇ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ನಿರ್ಧಾರವನ್ನು ಎಐಸಿಸಿ ತೆಗೆದುಕೊಂಡಿದೆ ಎಂದು ತಿಳಿಸಿದ್ದರು.

ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಡೆದು ಭರ್ಜರಿ ಜಯಗಳಿಸಿದರೂ ಸಿಎಂ ಕುರ್ಚಿಗಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಸಂಧಾನ ಸಭೆಗಳು ಸಹ ಸಫಲವಾಗಿರಲಿಲ್ಲ. ಅಂತಿಮವಾಗಿ ನಿನ್ನೆ ದೆಹಲಿಯಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರನ್ನು ಪ್ರತ್ಯೇಕವಾಗಿ ಕರೆಯಿಸಿಕೊಂಡ ರಾಷ್ಟ್ರ ಕಾಂಗ್ರೆಸ್​ ನಾಯಕರು ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ ಎಂಬ ತೀರ್ಮಾನ ತೆಗೆದುಕೊಂಡಿದ್ದಾರೆ.

ಮೂಲಗಳ ಪ್ರಕಾರ, ಅಧಿಕಾರ ಹಂಚಿಕೆ ಮಾಡಲಾಗಿದ್ದು, 5 ವರ್ಷಗಳ ಅಧಿಕಾರ ಅವಧಿಯಲ್ಲಿ ತಲಾ ಎರಡೂವರೆ ವರ್ಷಗಳ ಕಾಲ ( 30 ತಿಂಗಳು) ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಸಿಎಂ ಆಗಿ ಅಧಿಕಾರ ಅನುಭವಿಸಲಿದ್ದಾರೆ. ಮೊದಲನೇ ಅವಧಿಗೆ ಸಿದ್ದರಾಮಯ್ಯ ಸಿಎಂ ಹಾಗೂ ಡಿಕೆಶಿ ಡಿಸಿಎಂ ಆಗಲಿದ್ದಾರೆ. ಎರಡನೇ ಅವಧಿಯಲ್ಲಿ ಡಿಕೆಶಿ ಸಿಎಂ ಆಗಲಿದ್ದಾರೆ.

ಮೇ 20 ರಂದು ಶನಿವಾರ ಮಧ್ಯಾಹ್ನ 12.30ಕ್ಕೆ ಸಿದ್ದರಾಮಯ್ಯ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಹಾಗೂ ಡಿಕೆಶಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಂದೇ ಕೆಲ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ