ಕರ್ನಾಟಕದಲ್ಲಿ ಸರ್ಕಾರಿ ಶಾಲೆ ಅತಿಥಿ ಶಿಕ್ಷಕರು, ಪಿಯು ಕಾಲೇಜು ಉಪನ್ಯಾಸಕರ ಗೌರವ ಧನ 2000 ರೂ ಹೆಚ್ಚಳ, ಯಾರಿಗೆ ಎಷ್ಟು ಸಿಗಲಿದೆ ವೇತನ
Published May 15, 2025 04:46 PM IST
ಕರ್ನಾಟಕದಲ್ಲಿ ಸರ್ಕಾರಿ ಶಾಲೆ ಅತಿಥಿ ಶಿಕ್ಷಕರು, ಪಿಯು ಕಾಲೇಜು ಉಪನ್ಯಾಸಕರ ಗೌರವ ಧನ 2000 ರೂ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರು ಹಾಗೂ ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಧನ ಪರಿಷ್ಕರಣೆಯಾಗಿದೆ. 2000 ರೂಪಾಯಿ ಹೆಚ್ಚಳ ಮಾಡಿ ಸರ್ಕಾರ ಆದೇಶ ಮಾಡಿದೆ. ಯಾರಿಗೆ ಎಷ್ಟು ವೇತನ ಸಿಗಲಿದೆ ಎಂಬ ವಿವರ ಇಲ್ಲಿದೆ.

ಬೆಂಗಳೂರು: ಕರ್ನಾಟಕ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ ಪ್ರಕಾರ, ಸರ್ಕಾರಿ ಶಾಲೆ ಅತಿಥಿ ಶಿಕ್ಷಕರು ಹಾಗೂ ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಮಾಸಿಕ ಗೌರವ ಧನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದರಂತೆ, ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರು ಹಾಗೂ ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಧನ 2000 ರೂಪಾಯಿ ಹೆಚ್ಚಳವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ 2025-26 ಮಂಡಿಸಿದಾಗ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು ಎಂದು ಘೋಷಿಸಿದ್ದರು.
ಸರ್ಕಾರಿ ಶಾಲೆ ಅತಿಥಿ ಶಿಕ್ಷಕರು, ಪಿಯು ಕಾಲೇಜು ಉಪನ್ಯಾಸಕರ ಗೌರವಧನ 2000 ರೂ ಹೆಚ್ಚಳ
ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಈ ಸಂಬಂಧ ಆದೇಶ ಪ್ರಕಟಸಿದ್ದು, ಕರ್ನಾಟಕದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ/ ಪದವಿಪೂರ್ವ ಕಾಲೇಜುಗಳ ಅತಿಥಿ ಶಿಕ್ಷಕರು ಹಾೂ ಅತಿಥಿ ಉಪನ್ಯಾಸಕರ ತಿಂಗಳ ಗೌರವ ಸಂಭಾವನೆಯನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಪರಿಷ್ಕರಿಸಿ ಆದೇಶ ಹೊರಡಿಸಿದೆ.
ಇದರಂತೆ, ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 2000 ರೂಪಾಯಿ ತಿಂಗಳ ಗೌರವ ಸಂಭಾವನೆ ಹೆಚ್ಚಳವಾಗಿದ್ದು, ಇನ್ನು 12,000 ರೂಪಾಯಿ ಜಮೆಯಾಗಲಿದೆ. ಅದೇ ರೀತಿ, ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಕೂಡ ತಿಂಗಳ ಗೌರವ ಸಂಭಾವನೆ 2000 ರೂಪಾಯಿ ಹೆಚ್ಚಳವಾಗಿದ್ದು, ಒಟ್ಟು 12,500 ರೂಪಾಯಿ ಸಿಗಲಿದೆ. ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ತಿಂಗಳ ಗೌರವ ಸಂಭಾವನೆ ಕೂಡ 2000 ರೂಪಾಯಿ ಹೆಚ್ಚಳವಾಗಿದ್ದು, 14,000 ರೂಪಾಯಿ ಜಮೆಯಾಗಲಿದೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ)