CT Ravi: ಸಿಟಿ ರವಿ ಬಿಡುಗಡೆಗೆ ಕರ್ನಾಟಕ ಹೈಕೋರ್ಟ್ ಆದೇಶ, ಬಿಜೆಪಿ ಎಂಎಲ್‌ಸಿಗೆ ಬಿಗ್ ರಿಲೀಫ್
Dec 20, 2024 06:06 PM IST
ಸಿಟಿ ರವಿ ಬಿಡುಗಡೆಗೆ ಆದೇಶ ಹೊರಡಿಸಿದ ಹೈಕೆೋರ್ಟ್
- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಕೇಸ್‌ನಲ್ಲಿ ಪೊಲೀಸರ ವಶವಾಗಿದ್ದ ಸಿಟಿ ರವಿ ಬಿಡುಗಡೆಗೆ ಆದೇಶ ಹೊರಡಿಸಲಾಗಿದೆ. ಅಶ್ಲೀಲ ಶಬ್ದ ಬಳಸಿದ್ದಾರೆ ಎನ್ನಲಾದ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿದ್ದ ಸಿಟಿ ರವಿಗೆ ಹೈಕೆೋರ್ಟ್ ರಿಲೀಫ್ ನೀಡಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಕೇಸ್‌ನಲ್ಲಿ ಪೊಲೀಸರ ವಶವಾಗಿದ್ದ ಸಿಟಿ ರವಿ ಬಿಡುಗಡೆಗೆ ಆದೇಶ ಹೊರಡಿಸಲಾಗಿದೆ. ಅಶ್ಲೀಲ ಶಬ್ದ ಬಳಸಿದ್ದಾರೆ ಎನ್ನಲಾದ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿದ್ದ ಸಿಟಿ ರವಿಗೆ ಹೈಕೆೋರ್ಟ್ ರಿಲೀಫ್ ನೀಡಿದೆ. ಹೈಕೋರ್ಟ್‌ನಲ್ಲಿ ಇಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ವಿಚಾರವಾಗಿ ಸಾಕಷ್ಟು ಚರ್ಚೆ ವಿಚರ್ಚೆ ನಡೆಯಿತು. ಅದಾದ ಬಳಿಕ ಹೈಕೋರ್ಟ್ ಈ ನಿರ್ಧಾರಕ್ಕೆ ಬಂದಿದ್ದು ಸಿಟಿ ರವಿ ಮೇಲಿನ ಎಫ್‌ಐಆರ್ (FIR) ತಡೆಗೆ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಎಂ.ಜಿ. ಉಮಾ ಅವರ ಪೀಠದ ಮುಂದೆ ಅರ್ಜಿ ವಿಚಾರಣೆ ನಡೆದಿತ್ತು.
ಸುದೀರ್ಘ ವಾದ ಪ್ರತಿವಾದ ಆಲಿಸಿದ ನಂತರದಲ್ಲಿ ಹೈಕೋರ್ಟ್ ಸಿಟಿ ರವಿ ಬಿಡುಗಡೆಗೆ ಆದೇಶ ನೀಡಿದೆ. ಸಿಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ.
ಈ ಹಿಂದೆ ಆಗಿದ್ದೇನು?
ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಧಾನ ಪರಿಷತ್‌ನಲ್ಲಿ ಆಕ್ಷೇಪಾರ್ಹ ಪದ ಬಳಕೆ ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೀರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸಿಟಿ ರವಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಧಾನಸೌಧದ ಕಾರಿಡಾರ್ ಬಳಿ ಸಿಟಿ ರವಿ ಮೇಲೆ ಹೆಬ್ಬಾಳ್ಕರ್ ಬೆಂಬಲಿಗರು ಹಲ್ಲೆ ನಡೆಸಿದ್ದರು. ಅದಾದ ನಂತರ, ಕೊಲೆ ಯತ್ನ ಆರೋಪಿಸಿದ ಸಿಟಿ ರವಿ ಸುವರ್ಣಸೌಧದ ಕಾರಿಡಾರ್‌ನಲ್ಲಿ ಧರಣಿ ಕುಳಿತ್ತಿದ್ದರು.
ನಾನು ಅವಾಚ್ಯ ಶಬ್ದ ಬಳಸಿಲ್ಲ ಎಂದಿದ್ದ ಸಿಟಿ ರವಿ
ಹಲ್ಲೆ ಯತ್ನ ಬಳಿಕ ಸುವರ್ಣ ಸೌಧದ ಕಾರಿಡಾರ್‌ನಲ್ಲಿ ಧರಣಿ ಕುಳಿತ ಸಿಟಿ ರವಿ, ಪ್ರತಿಭಟನೆ ನಡೆಸಿದ್ದರು. “ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ಸುವರ್ಣ ಸೌಧದ ಮೊಗಸಾಲೆಯಲ್ಲಿ ಹೋಗುತ್ತಿದ್ದಾಗ ನನ್ನ ಮೇಲೆ ಹಲ್ಲೆ ಮಾಡಲು ಬಂದಿದ್ದಾರೆ. ಒಬ್ಬ ಶಾಸಕನಿಗೆ ರಕ್ಷಣೆ ಇಲ್ಲ ಎಂದಾದರೆ, ರಾಜ್ಯದ ಇತರ ಜನರ ಪರಿಸ್ಥಿತಿ ಏನು? ಕಾಂಗ್ರೆಸ್ ವಿರುದ್ಧ ಧರಣಿ ನಡೆಸುತ್ತಿದ್ದೇನೆ. ನಾನು ಯಾವುದೇ ಅವಾಚ್ಯ ಶಬ್ದ ಬಳಕೆ ಮಾಡಿಲ್ಲ. ಬೇಕಿದ್ದರೆ ವಿಡಿಯೋ ನೋಡಿ. ನನಗೆ ಯಾವುದೇ ಭಯ ಇಲ್ಲ. ಇದೆಲ್ಲಾ ಕಾಂಗ್ರೆಸ್ ಶಡ್ಯಂತ್ರ" ಎಂದು ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದರು. ನಂತರ ಸಿಟಿ ರವಿ ಕೇಸ್ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ಗೆ ಶಿಫ್ಟ್ ಆಗಿತ್ತು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದೇನು?
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಬಿಜೆಪಿ ಸದಸ್ಯ ಸಿಟಿ ರವಿ ಅವರು ಆಕ್ಷೇಪಾರ್ಹ ಪದ ಬಳಿಸಿದ್ದಾರೆ ಎಂಬ ದೂರು ಸಲ್ಲಿಕೆಯಾಗಿತ್ತು. ಆದರೆ ಅದಕ್ಕೆ ಸಂಬಂಧಪಟ್ಟ ಆಡಿಯೋ, ವಿಡಿಯೋ ದಾಖಲೆ ಸಿಕ್ಕಿಲ್ಲ. ನಾಲ್ವರು ಈ ಬಗ್ಗೆ ಸಾಕ್ಷಿ ಹೇಳಿದ್ದರು. ಸಿಟಿ ರವಿ ಅವರೂ ದೂರು ನೀಡಿದ್ದರು. ಇಬ್ಬರ ದೂರು ಪಡೆದಿದ್ದೇವೆ. ಆಡಿಯೋ ವಿಡಿಯೋ ದಾಖಲೆಗಳು ಇಲ್ಲದ ಕಾರಣ ಇಬ್ಬರಿಗೂ ಬುದ್ಧಿ ಹೇಳಿದ್ದೇವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾಗಿ ವರದಿಯಾಗಿದೆ.