logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Investment: ಸುಮಾರು 10 ಸಾವಿರ ಕೋಟಿ ರೂ ಹೂಡಿಕೆ, 5605 ಮಂದಿಗೆ ಉದ್ಯೋಗ; ಕರ್ನಾಟಕದ ಯೋಜನೆಗಳಿಗೆ ಅನುಮತಿ

Karnataka Investment: ಸುಮಾರು 10 ಸಾವಿರ ಕೋಟಿ ರೂ ಹೂಡಿಕೆ, 5605 ಮಂದಿಗೆ ಉದ್ಯೋಗ; ಕರ್ನಾಟಕದ ಯೋಜನೆಗಳಿಗೆ ಅನುಮತಿ

Umesha Bhatta P H HT Kannada

Dec 23, 2024 05:20 PM IST

google News

ರ್ನಾಟಕದ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ ಬೆಂಗಳೂರಿನಲ್ಲಿ ನಡೆಯಿತು. ಸಿಎಂ ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ, ಪ್ರಿಯಾಂಕ ಖರ್ಗೆ, ಚಲುವರಾಯಸ್ವಾಮಿ ಹಾಜರಿದ್ದರು.

    • Karnataka Investment: ಕರ್ನಾಟಕದಲ್ಲಿ ಸುಮಾರು 10 ಸಾವಿರ ಕೋಟಿ ರೂ ಹೂಡಿಕೆಯೊಂದಿಗೆ 5605 ಉದ್ಯೋಗ ಸೃಷ್ಟಿಸುವ ಯೋಜನೆಗಳಿಗೆ ಬೆಂಗಳೂರಿನಲ್ಲಿ ಅನುಮೋದನೆ ನೀಡಲಾಗಿದೆ.
ರ್ನಾಟಕದ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ ಬೆಂಗಳೂರಿನಲ್ಲಿ ನಡೆಯಿತು. ಸಿಎಂ ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ, ಪ್ರಿಯಾಂಕ ಖರ್ಗೆ, ಚಲುವರಾಯಸ್ವಾಮಿ ಹಾಜರಿದ್ದರು.
ರ್ನಾಟಕದ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ ಬೆಂಗಳೂರಿನಲ್ಲಿ ನಡೆಯಿತು. ಸಿಎಂ ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ, ಪ್ರಿಯಾಂಕ ಖರ್ಗೆ, ಚಲುವರಾಯಸ್ವಾಮಿ ಹಾಜರಿದ್ದರು.

ಬೆಂಗಳೂರು: ಕರ್ನಾಟಕದ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64 ನೇ ಸಭೆಯು ಒಟ್ಟು 9823.31 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 5605 ಜನರಿಗೆ ಕರ್ನಾಟಕದ ರಾಜ್ಯದ ನಾನಾ ಕಡೆಗಳಲ್ಲಿ ಉದ್ಯೋಗ ಲಭ್ಯವಾಗಲಿದೆ . ಕರ್ನಾಟಕದ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಅಧ್ಯಕ್ಷರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಮುಂದಿನ ವರ್ಷದ ಫೆಬ್ರವರಿಯಲ್ಲಿ ನಡೆಯಲಿರುವ ಕರ್ನಾಟಕ ಹೂಡಿಕೆ ಸಮಾವೇಶದ ಪೂರ್ವಭಾವಿಯಾಗಿ ನಡೆದಿರುವ ಸಭೆಗಳು, ದೇಶದ ವಿದೇಶದ ಹೂಡಿಕೆ ಕಂಪೆನಿಗಳೊಂದಿಗಿನ ಭೇಟಿಯ ನಂತರ ಕರ್ನಾಟಕ ಸರ್ಕಾರವು ಇದಕ್ಕೆ ಅನುಮೋದನೆ ನೀಡಿದೆ.

ಸಚಿವರಾದ ಡಾ.ಎಂ.ಬಿ.ಪಾಟೀಲ, ಪ್ರಿಯಾಂಕ್‌ ಖರ್ಗೆ, ಎನ್‌.ಚಲುವರಾಯಸ್ವಾಮಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಸಭೆ ಹಲವು ಅನುಮೋದನೆಗಳನ್ನು ನೀಡಿತು.

ಏನೇನು ಹೂಡಿಕೆ

ಇಂದಿನ ಸಭೆಯಲ್ಲಿ ಮೂರು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಆರು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 9 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ.

ಮೆ.ಡಿ.ಎನ್ ಸಲ್ಯೂಷನ್ಸ್ ಇಂಡಿಯಾ ಪ್ರೈ.ಲಿ ಸಂಸ್ಥೆಯ 998 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 467 ಉದ್ಯೋಗ , ಮೆ. ಸೈಲೆಕ್ಟ್ರಿಕ್ ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಷರಿಂಗ್ ಪ್ರೈ.ಲಿ ಸಂಸ್ಥೆ ಯ 3425.60 ಕೋಟಿ ರೂ. ಹೂಡಿಕೆಯಿಂದ 460 ಉದ್ಯೋಗ ಹಾಗೂ ಮೆ: ಸನ್ಸೆರಾ ಇಂಜಿನಿಯರಿಂಗ್ ಲಿಮಿಟೆಡ್ ಸಂಸ್ಥೆಯ 2150 ಕೋಟಿ ರೂ. ಹೂಡಿಕೆಯಿಂದ 3500 ಉದ್ಯೋಗ ಸೃಷ್ಠಿಯಾಗುತ್ತಿರುವುದಾಗಿ ಮಾಹಿತಿ ನೀಡಲಾಯಿತು.

ಮಿಕ್ಕಂತೆ, 6 ಯೋಜನೆಗಳು ಹೆಚ್ಚುವರಿ ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಾಗಿವೆ. ಇವುಗಳಲ್ಲಿ ಮುಸಾಶಿ ಆಟೋ ಪಾರ್ಟ್ಸ್ (ದೊಡ್ಡಬಳ್ಳಾಪುರ) 122.66 ಕೋಟಿ, ಜೆಎಸ್ ಡಬ್ಲ್ಯು ಸಿಮೆಂಟ್ (ತೋರಣಗಲ್, ಬಳ್ಳಾರಿ) 486.82 ಕೋಟಿ, ನೈಡೆಕ್ ಇಂಡಸ್ಟ್ರಿಯಲ್ ಆಟೋಮೇಷನ್ (ಬೇಲೂರು, ಧಾರವಾಡ) 200 ಕೋಟಿ, ಎಪ್ಸಿಲಾನ್ ಕಾರ್ಬನ್ (ಸಂಡೂರು) 740 ಕೋಟಿ, ಕೆ.ಬಿ.ಸ್ಟೀಲ್ಸ್ (ಹೊಸಪೇಟೆ, ವಿಜಯನಗರ) 852.49 ಕೋಟಿ ಮತ್ತು ಸಿಫಿ ಡೇಟಾ ಮ್ಯಾನೇಜ್ಡ್ ಸರ್ವೀಸಸ್ (ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್) 847.74 ಕೋಟಿಗಳನ್ನು ರಾಜ್ಯದಲ್ಲಿ ಹೆಚ್ಚುವರಿಯಾಗಿ ಹೂಡಿಕೆ ಮಾಡಲಿವೆ. ಇವುಗಳಿಂದ ಕ್ರಮವಾಗಿ ಮೊದಲ ನಾಲ್ಕು ಕಂಪನಿಗಳಲ್ಲಿ ಮಾತ್ರ 478, 225, 150 ಮತ್ತು 325 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ವಿವರಿಸಿದ್ದಾರೆ.

ಮೈಸೂರು ಹೊರ ವಲಯದ ಕೋಚನಹಳ್ಳಿಯ ಎಲೆಕ್ಟ್ರಾನಿಕ್ಸ್‌ ಮ್ಯಾನುಫಾಕ್ಚರಿಂಗ್‌ ಕ್ಲಸ್ಟರ್‌ ನಲ್ಲಿ ಸೆಮಿಕಂಡಕ್ಟರ್‌ ವಲಯದಲ್ಲಿ ರೂ. 3425 ಕೋಟಿ ವೆಚ್ಚದ ಪ್ರಥಮ ಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಸಕ್ಕರೆ ಕಾರ್ಖಾನೆಗಳು ಉಪ ಉತ್ಪನ್ನಗಳ ಉತ್ಪಾದನೆ ಸಂದರ್ಭದಲ್ಲಿ ರೈತರಿಗೂ ಲಾಭಾಂಶದಲ್ಲಿ ಪಾಲು ನೀಡುವ ಕುರಿತು ಪರಿಶೀಲನೆ ನಡೆಸಬೇಕು. ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಈ ಕುರಿತು ಅನುಸರಿಸುತ್ತಿರುವ ನಿಯಮಗಳನ್ನು ಪರಿಶೀಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಕೆಐಎಡಿಬಿಯಿಂದ ಕೈಗಾರಿಕೆಗಳನ್ನು ಆರಂಭಿಸಲು ಜಮೀನು ಪಡೆಯುವ ಕಂಪೆನಿಗಳು ನಿಗದಿತ ಅವಧಿಯಲ್ಲಿ ಕೈಗಾರಿಕೆಯನ್ನು ಆರಂಭಿಸದಿದ್ದರೆ ದಂಡ ವಿಧಿಸುವುದು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಪರಿಶೀಲನೆ ನಡೆಸಬೇಕು. ಸರ್ಕಾರದ ನಿಯಮಾವಳಿಗೆ ಅನುಸಾರವಾಗಿ ಕೈಗಾರಿಕೆಗಳು ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ಮುಖ್ಯಮಂತ್ರಿ ಅವರು ಸೂಚಿಸಿದರು.

ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ ಮುಂತಾದವರು ಭಾಗವಹಿಸಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ