logo
ಕನ್ನಡ ಸುದ್ದಿ  /  ಕರ್ನಾಟಕ  /  ವಿವಾಹ ನೋಂದಣಿ ಮತ್ತಷ್ಟು ಸುಲಭ; ಆನ್‌ಲೈನ್ ಮ್ಯಾರೇಜ್ ರಿಜಿಸ್ಟ್ರೇಷನ್‌ಗೆ ಸಚಿವ ಸಂಪುಟ ಅನುಮೋದನೆ

ವಿವಾಹ ನೋಂದಣಿ ಮತ್ತಷ್ಟು ಸುಲಭ; ಆನ್‌ಲೈನ್ ಮ್ಯಾರೇಜ್ ರಿಜಿಸ್ಟ್ರೇಷನ್‌ಗೆ ಸಚಿವ ಸಂಪುಟ ಅನುಮೋದನೆ

Raghavendra M Y HT Kannada

Feb 02, 2024 09:11 AM IST

google News

ಆನ್‌ಲೈನ್ ವಿವಾಹ ನೋಂದಣಿಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್.

  • ನೀವಿರುವ ಸ್ಥಳದಿಂದಲೇ ವಿವಾಹ ನೋಂದಣಿ ಮಾಡಿಕೊಳ್ಳುವ ಅವಕಾಶ ಕಲ್ಪಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಆನ್‌ಲೈನ್ ವಿವಾಹ ನೋಂದಣಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಆನ್‌ಲೈನ್ ವಿವಾಹ ನೋಂದಣಿಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್.
ಆನ್‌ಲೈನ್ ವಿವಾಹ ನೋಂದಣಿಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್.

ಬೆಂಗಳೂರು: ಆನ್‌ಲೈನ್ ಮೂಲಕ ವಿವಾಹ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ಸಲುವಾಗಿ ಹಿಂದೂ ವಿವಾಹ ನೋಂದಣಿ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗುರುವಾರ (ಫೆಬ್ರವರಿ 1) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆನ್‌ಲೈನ್ ವಿವಾಹ ನೋಂದಣಿ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಸಭೆ ಬಳಿಕ ಮಾಹಿತಿ ನೀಡಿರುವ ಕಾನೂನು ಸಚಿವ ಹೆಚ್‌ಕೆ ಪಾಟೀಲ್, ತಂತ್ರಜ್ಞಾನವನ್ನು ಬಳಸಿಕೊಂಡು ವಿವಾಹ ನೋಂದಣಿಗಳನ್ನು ಸರಳಗೊಳಿಸುವ ಸಲುವಾಗಿ ಹಿಂದೂ ವಿವಾಹ ನೋಂದಣಿ ಕಾಯ್ದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಹಿಂದಿನ ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡಿದ್ದರು. ಕಾವೇರಿ 2 ಸಾಫ್ಟ್‌ವೇರ್ ಬಳಿಸಿ ಆನ್‌ಲೈನ್‌ನಲ್ಲಿ ನೋಂದಣಿಗೆ ಅವಕಾಶ ಕಲ್ಪಿಸಲಾಗುತ್ತದೆ. ಬಾಪೂಜಿ ಕೇಂದ್ರಗಳು, ಗ್ರಾಮ್‌ಒನ್ ಕೇಂದ್ರಗಳಲ್ಲಿ ಅರ್ಜಿ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ. ಈ ಮೊದಲು ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಮಾತ್ರ ಅರ್ಜಿ ಸಲ್ಲಿಸುವ ಪದ್ದತಿ ಇತ್ತು.

ಆಧಾರ್ ಕಾರ್ಡ್ ದೃಢೀಕರಣವನ್ನು ಬಳಸಿಕೊಂಡು ವಿವಾಹವನ್ನು ನೋಂದಾಯಿಸು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಯೋಜನೆ ರೂಪಿಸುತ್ತಿದೆ. ಮದುವೆ ನೋಂದಣಿಗಳನ್ನು ಹೆಚ್ಚಿಸುವ ಸಲುವಾಗಿ ಸರ್ಕಾರ ಈ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ. ಆದರೆ ಆಧಾರ್ ದೃಢೀಕರಣವನ್ನು ನೀಡಲು ಒಪ್ಪದ ಜನರು ಆಫ್‌ಲೈನ್ ಮೂಲಕ ಅಂದರೆ ಸಬ್ ರಿಜಿಸ್ಟ್ರಾರ್ ಕಚೇರಿಗೆ ನೇರವಾಗಿ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.

ಈಗಾಲೇ ನೋಂದಣಿ ಮಾಡಿಕೊಂಡಿರುವವರಿಗೆ ಹೊಸ ನಿಮಯಗಳು ಅನ್ವಯಿಸುವುದಿಲ್ಲ. ವಿಶೇಷ ವಿವಾಹ ಕಾಯಿದೆ, 1954ರ ಪ್ರಕಾರ ದಂಪತಿ ಮದುವೆಯ ನೋಂದಣಿ ದಿನಾಂಕಕ್ಕೂ 1 ತಿಂಗಳು ಮೊದಲೇ ಸೂಚನೆ ನೀಡಬೇಕು. ಸಬ್ ರಿಜಿಸ್ಟ್ರಾರ್ ಮುಂದೆ ವಧು ಮತ್ತು ವರನ ಕಡ್ಡಾಯ ಉಪಸ್ಥಿತಿಯೊಂದಿಗೆ ನೋಂದಣಿ ಮಾಡಿಕೊಳ್ಳಲಾಗುತ್ತಿದೆ.

ರಾಜ್ಯದಲ್ಲಿ ಕೇವಲ 30 ರಷ್ಟು ಮಾತ್ರ ಮದುವೆ ನೋಂದಣಿಗಳು ಆಗುತ್ತಿವೆ. ಈ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ನೋಂದಣಿ ಪ್ರಕ್ರಿಯೆಯನ್ನು ಜನ ಸ್ನೇಹಿಯಾಗಿ ಮಾಡಲಾಗುತ್ತಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಬರುವುದನ್ನು ತಪ್ಪಿಸಲಾಗುತ್ತಿದೆ. ಹೊಸ ಪ್ರಕ್ರಿಯೆಗಾಗಿ ಸರ್ಕಾರ ಅತಿ ಶೀಘ್ರದಲ್ಲೇ ಆನ್‌ಲೈನ್ ಪೋರ್ಟಲ್ ಆರಂಭಿಸಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. (This copy first appeared in Hindustan Times Kannada website. To read more like this please logon to kannada.hindustantime.com).

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ