logo
ಕನ್ನಡ ಸುದ್ದಿ  /  Karnataka  /  Karnataka News Gruha Jyothi Yojane Free Electricity For Tenants Cm Siddaramaiah Congress Guarantee Kannada News Rst

Gruha Jyothi Yojane: ಬಾಡಿಗೆದಾರರಿಗೂ ಉಚಿತ ವಿದ್ಯುತ್; ವಾಣಿಜ್ಯ ಕಟ್ಟಡಗಳಿಗೆ ಅನ್ವಯ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

HT Kannada Desk HT Kannada

Jun 06, 2023 01:24 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ

    • CM Siddaramaiah: ʼಗೃಹ ಜ್ಯೋತಿ ಯೋಜನೆಗೆ ಸಂಬಂಧಿಸಿ ಉಚಿತ 200 ಯೂನಿಟ್‌ಗಳ ವಿದ್ಯುತ್ ಬಳಕೆ ಮಾಡುವ ಬಾಡಿಗೆದಾರರಿಗೂ ಇದು ಅನ್ವಯಿಸುತ್ತದೆ. ಆದರೆ ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಅನ್ವಯಿಸುವುದಿಲ್ಲʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಚುನಾವಣಾ ಗ್ಯಾರೆಂಟಿ (Congress Guarantee)ಗಳ ಪೈಕಿ ಮೊದಲನೆಯದು ಪ್ರತಿ ಮನೆಗೆ 200 ಯೂನಿಟ್‌ ಕರೆಂಟ್‌ ಫ್ರೀ. ಈ ಗೃಹ ಜ್ಯೋತಿ ಯೋಜನೆ (Gruha Jyothi Yojane) ಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸ್ಪಷ್ಟನೆಯೊಂದನ್ನು ನೀಡಿದ್ದಾರೆ. ʼಉಚಿತ 200 ಯೂನಿಟ್‌ಗಳ ವಿದ್ಯುತ್ ಬಳಕೆ ಮಾಡುವ ಬಾಡಿಗೆದಾರರಿಗೂ ಇದು ಅನ್ವಯಿಸುತ್ತದೆ. ಆದರೆ ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಅನ್ವಯಿಸುವುದಿಲ್ಲʼ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Bangalore Rains: ಬೆಂಗಳೂರಲ್ಲಿ ವರುಣ ದರ್ಶನ, ಸತತ 5 ತಿಂಗಳ ನಂತರ ಸುರಿದ ಮಳೆಗೆ ತಂಪಾದ ಉದ್ಯಾನ ನಗರಿ

Indian Railways:ಬೆಳಗಾವಿ-ಭದ್ರಾಚಲಂ, ಅರಸಿಕೆರೆ-ಹೈದ್ರಾಬಾದ್‌ ರೈಲು ರದ್ದು, ವಂದೇಭಾರತ್‌ ರೈಲು ಮಾರ್ಗ ಬದಲಾವಣೆ

Tumkur News: ತುಮಕೂರು ಹರಳೂರಿನ ಐತಿಹಾಸಿಕ ಶ್ರೀವೀರಭದ್ರ ಸ್ವಾಮಿಯ ಅದ್ದೂರಿ ರಥೋತ್ಸವ

Hassan Scandal: ಬಂಧನ ಭೀತಿ, ಜಾಮೀನಿಗಾಗಿ ನ್ಯಾಯಾಲಯಕ್ಕೆ ಮೊರೆ ಹೋದ ಎಚ್‌ಡಿ ರೇವಣ್ಣ

ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 41ನೇ ಪುಣ್ಯಸ್ಮರಣೆ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ʼಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಯಾವ ನೈತಿಕ ಹಕ್ಕಿದೆ ಎಂದು ಅವರು ಪ್ರಶ್ನಿಸಿದರು. 10 ಗಂಟೆಗಳ ವಿದ್ಯುತ್ ನೀಡುತ್ತೇವೆ, ಸಾಲ ಮನ್ನಾ ಮಾಡುತ್ತೇವೆ ಎಂದರು. ಯಾವುದನ್ನೂ ಜಾರಿಗೆ ತರಲಿಲ್ಲ. ಅವರು ಹೇಳಿದ್ದನ್ನು ಮಾಡದೇ ಮೊಸರಿನಲ್ಲಿ ಕಲ್ಲು ಹುಡುಕುತ್ತಾರೆ ಎಂದರು.

ಬಿಜೆಪಿ ಜನವಿರೋಧಿ ಪಕ್ಷ

ʼಜನವಿರೋಧಿ ಪಕ್ಷವಾಗಿರುವ ಬಿಜೆಪಿ ಅಧಿಕಾರದಲ್ಲಿದ್ದಾಗ ಲೂಟಿ ಹೊಡೆದು, ರಾಜ್ಯಕ್ಕೆ ಕೆಟ್ಟ ಹೆಸರೂ ತಂದು ಹೊರಟರು. ನಮಗೆ ಈಗ ಪಾಠ ಹೇಳಿಕೊಡಲು ಬರುತ್ತಾರೆʼ ಎಂದು ದೂರಿದರು.

ʼ2018ರಲ್ಲಿ 600 ಭರವಸೆಗಳನ್ನು ನೀಡಿ ಅದರಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆʼ ಎಂದು ಪ್ರಶ್ನಿಸಿದರು.

ʼನಮ ಸರ್ಕಾರ 15 ದಿನಗಳೊಳಗೆ ಎಲ್ಲಾ 15 ಗ್ಯಾರಂಟಿಗಳನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದೆ. ಹಿಂದೆ ಅಧಿಕಾರದಲ್ಲಿದ್ದಾಗ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಇಂದಿರಾ ಕ್ಯಾಂಟೀನ್ ನಿಲ್ಲಿಸಿ, ಕೃಷಿ ಹಾಗೂ ಪಶುಭಾಗ್ಯ, ಶೂ ಭಾಗ್ಯ ಸೈಕಲ್ ಕೊಡುವುದನ್ನು ಬಿಜೆಪಿ ನಿಲ್ಲಿಸಿದರು ಎಂದರು.

ನಾಡು ಕಂಡ ಮುತ್ಸದಿ ರಾಜಕಾರಣಿ

ʼದೇವರಾಜ ಅರಸು ಅವರು ನಾಡು ಕಂಡ ಮುತ್ಸದಿ ರಾಜಕಾರಣಿ. ಸರ್ಕಾರ ಗೌರವಯುತವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಸ್ಮರಣೆ ಮಾಡಿದೆ. ಅವರು ಮುಖ್ಯಮಂತ್ರಿಯಾಗಿ ಹಾಗೂ ಅವರ ಜೀವಿತ ಕಾಲದಲ್ಲಿ ಮಾಡಿದ ಕೆಲಸ ನಮಗೆ ಸ್ಫೂರ್ತಿ. ಸಾಮಾಜಿಕ ನ್ಯಾಯದ ಹರಿಕಾರ. ಅನೇಕ ಸಾಮಾಜಿಕ, ಕ್ರಾಂತಿಕಾರಿ ತೀರ್ಮಾನಗಳನ್ನು ಕೈಗೊಂಡಿದ್ದರು. ಭೂ ಸುಧಾರಣಾ ಕಾಯ್ದೆ, ಜೀತಪದ್ಧತಿ ಮುಕ್ತಿ, ಮಲಹೊರುವ ಪದ್ಧತಿಯನ್ನು ನಿಲ್ಲಿಸಿದ್ದು, ರೈತರ ಸಾಲ ವಿಮೋಚನಾ ಕಾಯ್ದೆ, ಹಾವನೂರು ಆಯೋಗ ರಚಿಸಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ, ಧ್ವನಿಯಿಲ್ಲದ ಜನರ ದನಿಯಾದರುʼ ಎಂದರು.

ರಾಜಕೀಯ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯ

ಅನೇಕ ಜನರನ್ನು ಶಾಸಕರನ್ನಾಗಿಸಿ ಅವರಿಗೆ ಪ್ರಾತಿನಿಧ್ಯ ನೀಡುವ ಕೆಲಸ ಮಾಡಿದರು. ರಾಜಕೀಯ ವ್ಯವಸ್ಥೆಯಲ್ಲಿಯೂ ಸಾಮಾಜಿಕ ನ್ಯಾಯ ತರಲು ಶ್ರಮಿಸಿದರು. ಅಧಿಕಾರ ಎಲ್ಲರಿಗೂ ದೊರೆಯಬೇಕೆಂಬ ನಂಬಿಕೆ ಉಳ್ಳವರಾಗಿದ್ದರು. ಉಳುವುವವನೆ ಭೂಮಿ ಒಡೆಯ ಎಂಬ ಕ್ರಾಂತಿಕಾರಿ ತೀರ್ಮಾನಗಳನ್ನು ಮಾಡಿದವರು. ಅವರ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದಿಂದ 1982 ರಿಂದ 80 ರವರೆಗೆ ಮುಖ್ಯಮಂತ್ರಿಯಾಗಿ ಮಾಡಿದ ಕೆಲಸಗಳು ಜನರ ಮನಸ್ಸಿನಲ್ಲಿ ಸದಾ ಉಳಿದಿವೆ ಎಂದು ತಿಳಿಸಿದರು.

ದೇವರಾಜ ಅರಸು ಸ್ಮರಣಾರ್ಥ ಗಿಡ ನೆಟ್ಟ ಸಿಎಂ

ಅರಸು ಅವರ ಪುಣ್ಯತಿಥಿಯ ಅಂಗವಾಗಿ ಮುಖ್ಯಮಂತ್ರಿಗಳು ವಿಧಾನಸೌಧದ ಆವರಣದಲ್ಲಿ ಮಡಗಾಸ್ಕರ್ ದೇಶದ ಗಿಡವನ್ನು ನೆಟ್ಟರು. ಸದಾ ಹಸಿರಾಗಿರುವ, ಸುಮಾರು 40 ಅಡಿ ಎತ್ತರ ಬೆಳೆಯುವ ಮಾಲಿನ್ಯ ತಡೆಗಟ್ಟುವ ವಿಶೇಷ ಗಿಡವನ್ನು ಅರಸು ಅವರ ನೆನಪಿಗೆ ನೆಡಲಾಗಿದೆ ಎಂದರು.

    ಹಂಚಿಕೊಳ್ಳಲು ಲೇಖನಗಳು