logo
ಕನ್ನಡ ಸುದ್ದಿ  /  ಕರ್ನಾಟಕ  /  Election Result: ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದದ್ದು ಹೇಗೆ? ಬಯೋಕಾನ್‌ನ ಕಿರಣ್‌ ಮಜುಂದಾರ್‌ ಶಾ ನೀಡಿದ್ರು 3 ಕಾರಣ

Election Result: ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದದ್ದು ಹೇಗೆ? ಬಯೋಕಾನ್‌ನ ಕಿರಣ್‌ ಮಜುಂದಾರ್‌ ಶಾ ನೀಡಿದ್ರು 3 ಕಾರಣ

Praveen Chandra B HT Kannada

May 14, 2023 03:42 PM IST

ಬಯೋಕಾನ್‌ನ ಕಿರಣ್‌ ಮಜುಂದಾರ್‌ ಶಾ

  • How Congress won Karnataka Election: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ, ಕಳೆದ 34 ವರ್ಷಗಳಲ್ಲಿಯೇ ಅತಿಹೆಚ್ಚು ಮತಗಳ ಹಂಚಿಕೆಯೊಂದಿಗೆ ಕಾಂಗ್ರೆಸ್‌ ಅಧಿಕಾರಕ್ಕೆ ಮರಳುತ್ತಿರುವ ಸಂದರ್ಭದಲ್ಲಿ ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ಅವರು ತಮ್ಮ ಅಭಿಪ್ರಾಯವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಬಯೋಕಾನ್‌ನ ಕಿರಣ್‌ ಮಜುಂದಾರ್‌ ಶಾ
ಬಯೋಕಾನ್‌ನ ಕಿರಣ್‌ ಮಜುಂದಾರ್‌ ಶಾ (Mint file)

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಬಯೋಕಾನ್‌ ಕಂಪನಿಯ ಸಿಇಒ ಕಿರಣ್‌ ಮಜುಂದಾರ್‌ ಶಾ ಅವರು ಆಗಾಗ ಸೋಷಿಯಲ್‌ ಮೀಡಿಯಾದಲ್ಲಿ ಸಾಮಾಜಿಕ ಸಮಸ್ಯೆಗಳ ಕುರಿತು ಧ್ವನಿ ಎತ್ತುತ್ತಿರುತ್ತಾರೆ. ಇದೀಗ ಅವರು ಕರ್ನಾಟಕದ ಚುನಾವಣೆಯ ಫಲಿತಾಂಶದ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇವರು 2024 ರ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಅವರು ಟ್ವೀಟ್‌ ಮಾಡಿದ್ದು, ಕಾಂಗ್ರೆಸ್‌ ಗೆಲ್ಲಲು ಕಾರಣವಾದ ಮೂರು ಪ್ರಮುಖ ಅಂಶಗಳ ಕುರಿತು ಹೇಳಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿ, ಸಮೃದ್ಧ ಆರ್ಥಿಕತೆ ಮತ್ತು ಸಾಮಾಜಿಕ ಸಾಮರಸ್ಯವು ಜನರು ಮತದಾನ ಮಾಡುವಾಗ ಪರಿಶೀಲಿಸುವ ಮೂರು ಪ್ರಮುಖ ಮಾನದಂಡಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಕೊಚ್ಚಿಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ, ಬೆಂಗಳೂರು ವಿಮಾನನಿಲ್ದಾಣದಲ್ಲಿ ತುರ್ತುಭೂಸ್ಪರ್ಶ, 150 ಪ್ರಯಾಣಿಕರು ಸೇಫ್

ಅಂಜಲಿ ಅಂಬಿಗೇರ ಸಹೋದರಿ ಯಶೋದಾ ಆತ್ಮಹತ್ಯೆ ಯತ್ನ, ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ ಸಂಬಂಧಿಸಿದ ಇತ್ತೀಚಿನ 10 ವಿದ್ಯಮಾನಗಳು

ಕರ್ನಾಟಕ ಹವಾಮಾನ ಮೇ 19; ರಾಜ್ಯದಲ್ಲಿ ಮಳೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Bus Accident: ಫ್ಲೈ ಓವರ್‌ಗೆ ಹಾರಿದ ಸಾರಿಗೆ ಬಸ್‌ ಪ್ರಯಾಣಿಕರು ಪಾರಾಗಿದ್ದೇ ರೋಚಕ; ನೆಲಮಂಗಲದಲ್ಲಿ ಸಿನಿಮಾ ಸ್ಟಂಟ್ ನಂತೆ ಸಂಭವಿಸಿದ ಅಪಘಾತ

"ಲಾಸ್‌ ಏಂಜಲಿಸ್‌ನಲ್ಲಿ ನಾನಿರುವಂತಹ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ಕರ್ನಾಟಕದ ಜನರಿಂದ ಜನಾದೇಶ ಬಂದ ಸುದ್ದಿ ಕೇಳಿ ಎಚ್ಚರವಾಯಿತು. ಮೂಲಸೌಕರ್ಯ ಅಭಿವೃದ್ಧಿ, ಆರ್ಥಿಕ ಸಮೃದ್ಧಿ ಮತ್ತು ಸಾಮಾಜಿಕ ಸಾಮರಸ್ಯವು ತನ್ನ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಜನರು ಪರಿಗಣಿಸುವ ಪ್ರಮುಖ ಅಂಶಗಳು" ಎಂದು ಅವರು ಟ್ವೀಟ್‌ ಮಾಡಿದ್ದಾರೆ.

"ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಕೋಮುವಾದ ಬೆಳೆದರೆ ಭಾರತದ ಜಾಗತಿಕ ನಾಯಕತ್ವಕ್ಕೆ ಹಾನಿಯಾಗಲಿದೆ" ಎಂದು ಅವರು ಎಚ್ಚರಿಸಿದ್ದರು. ಕರ್ನಾಟಕವು ಆರ್ಥಿಕ ಅಭಿವೃದ್ಧಿಯನ್ನು ಹೊಂದಿದೆ. ಇಲ್ಲಿ ಕೋಮುವಾದಕ್ಕೆ ಅವಕಾಶ ನೀಡಬಾರದು. ಕರ್ನಾಟಕವು ಎಲ್ಲಾ ಸಮುದಾಯವನ್ನು ಒಳಗೊಂಡಿರುವ ಆರ್ಥಿಕ ಅಭಿವೃದ್ಧಿಯನ್ನು ಹೊಂದಿದೆ. ಮುಖ್ಯಮಂತ್ರಿ (ಆಗಿನ) ಬಸವರಾಜ ಬೊಮ್ಮಾಯಿಯವರೇ ದಯವಿಟ್ಟು ಕೋಮುಗಳ ನಡುವಿನ ವಿಭಜನೆಯನ್ನು ತಡೆಯಿರಿ" ಎಂದು ಅವರು ಈ ಹಿಂದೆ ಟ್ವೀಟ್‌ ಮಾಡಿದ್ದರು.

ಕಳೆದ ವರ್ಷ ಬೆಂಗಳೂರು ಮಳೆಯ ಅವಾಂತರದ ಸಂದರ್ಭದಲ್ಲಿಯೂ ಕಿರಣ್‌ ಮುಜುಂದಾರ್‌ ಶಾ ಅವರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಟ್ರಾಫಿಕ್‌ ಸಮಸ್ಯೆಯ ಸಂದರ್ಭದಲ್ಲಿ ಅಧಿಕಾರಿಗಳ ಕಾರ್ಯವೈಖರಿಯನ್ನೂ ಪ್ರಶ್ನಿಸಿದ್ದರು. "ಅಧಿಕಾರಿಗಳು ಬೆಂಗಳೂರಿನ ಸಂಚಾರ ವ್ಯವಸ್ಥೆಯ ಕುರಿತು ಕ್ರಮ ವಹಿಸುತ್ತಾರೆಯೇ. ಇಲ್ಲದಿದ್ದರೆ ನಾಗರಿಕರು ಅವರನ್ನು ಅವಮಾನಿಸುತ್ತಲೇ ಇರಬೇಕಾಗುತ್ತದೆ. ಎಲ್ಲದಕ್ಕೂ ನಾವು ರಾಜಕಾರಣಿಗಳು ದೂಷಿಸಲು ಸಾಧ್ಯವಿಲ್ಲ. ಗುತ್ತಿಗೆದಾರರು, ಅಧಿಕಾರಿಗಳು ಕೂಡ ಹೊಣೆಗಾರರು" ಎಂದು ಅವರು ಟ್ವೀಟ್‌ ಮಾಡಿದ್ದರು. ಪಣತ್ತೂರು ಆರ್‌ಯುಬಿ ಜಂಕ್ಷನ್‌ ಬಳಿ ಸ್ಥಳೀಯ ನಿವಾಸಿಯೊಬ್ಬರ ಪ್ರತಿಭಟನೆಯ ವಿಡಿಯೋಗೆ ಪ್ರತಿಕ್ರಿಯೆಯಾಗಿ ಬಯೋಕಾನ್‌ ಲಿಮಿಟೆಡ್‌ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಟ್ವೀಟ್‌ ಮಾಡಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ