logo
ಕನ್ನಡ ಸುದ್ದಿ  /  ಕರ್ನಾಟಕ  /  Nps Vs Ops: ಹೊಸ ಪಿಂಚಣಿ ಯೋಜನೆ ರದ್ದು ತೀರ್ಮಾನ ಶೀಘ್ರ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

NPS vs OPS: ಹೊಸ ಪಿಂಚಣಿ ಯೋಜನೆ ರದ್ದು ತೀರ್ಮಾನ ಶೀಘ್ರ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

HT Kannada Desk HT Kannada

Jun 13, 2023 07:12 PM IST

google News

ನೌಕರರ ನಿಯೋಗದ ಜತೆಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್‌ನ ಮಾಜಿ ಸದಸ್ಯ ವಿ.ಎಸ್.‌ ಉಗ್ರಪ್ಪ ಜತೆಗಿದ್ದರು.

  • NPS vs OPS: ಹಳೆ ಪಿಂಚಣಿ ಯೋಜನೆ ಮರುಜಾರಿಗೊಳಿಸಬೇಕು ಎಂಬ ನೌಕರರ ಆಗ್ರಹಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕ್ಯಾಬಿನೆಟ್‌ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಈ ಕುರಿತ ವಿವರ ವರದಿ ಇಲ್ಲಿದೆ.

ನೌಕರರ ನಿಯೋಗದ ಜತೆಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್‌ನ ಮಾಜಿ ಸದಸ್ಯ ವಿ.ಎಸ್.‌ ಉಗ್ರಪ್ಪ ಜತೆಗಿದ್ದರು.
ನೌಕರರ ನಿಯೋಗದ ಜತೆಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್‌ನ ಮಾಜಿ ಸದಸ್ಯ ವಿ.ಎಸ್.‌ ಉಗ್ರಪ್ಪ ಜತೆಗಿದ್ದರು.

ಬೆಂಗಳೂರು: ಹಳೇ ಪಿಂಚಣಿ ಯೋಜನೆ (Old Pension Scheme)ಯ ಜಾರಿಗೆ ಸಂಬಂಧಿಸಿ ಸಚಿವ ಸಂಪುಟದಲ್ಲಿ ಚರ್ಚಿಸಿ ಕರ್ನಾಟಕ ಬಜೆಟ್ (Karnataka Budget 2023) ನಲ್ಲಿ ಘೋಷಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Chief Minister Siddaramaiah) ತಿಳಿಸಿದರು.

ಅವರು ಮಂಗಳವಾರ, ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನಿಯೋಗದ ಜತೆಗೆ ಮಾತನಾಡುತ್ತ ಈ ವಿಚಾರ ತಿಳಿಸಿದರು.

ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ನೌಕರರು ಕೆಲಸ ಮಾಡಬೇಕು. ಪ್ರಾಮಾಣಿಕವಾಗಿ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ನೌಕರರ ಸಂಘದ ಸದಸ್ಯರಿಗೆ ತಿಳಿಸಿದರು.

ಎನ್‌ಪಿಎಸ್‌ ವರ್ಸಸ್‌ ಒಪಿಎಸ್‌ (NPS vs OPS)

ವಿಧಾನ ಪರಿಷತ್ತಿನ ಮಾಜಿ ಸದಸ್ಯ ವಿ.ಎಸ್ ಉಗ್ರಪ್ಪ ಮಾತನಾಡಿ, 2006ರ ಏಪ್ರಿಲ್‌ 1ರಂದು ಹೊಸ ಪಿಂಚಣಿ ಯೋಜನೆ (News Pension Scheme) ಜಾರಿಯಾಗಿದೆ. 2.98 ಲಕ್ಷ ನೌಕರರು ಇದರ ವ್ಯಾಪ್ತಿಗೆ ಒಳಪಡುತ್ತಾರೆ. ಪಿಂಚಣಿ ಮೊತ್ತವನ್ನು ಎನ್.ಎಸ್.ಡಿ.ಎಲ್ ನಲ್ಲಿ ಠೇವಣಿ ಇಡಲಾಗಿದೆ. ಈ ಮೊತ್ತ ಬಳಕೆ ಮಾಡಿ ಇವರು ನಿವೃತ್ತಿಯಾಗುವ ವೇಳೆಗೆ ಲಭ್ಯವಾಗುವಂತೆ ಜಿ.ಪಿ.ಎಫ್ ನಲ್ಲಿ ಇಡಬಹುದು. ವೋಟ್ ಫಾರ್ ಒಪಿಎಸ್ ನಲ್ಲಿ ಭಾಗಿಯಾದವರ ಮೇಲೆ ಕೈಗೊಂಡಿರುವ ಶಿಸ್ತಿನ ಕ್ರಮ ಕೈಬಿಡುವ ಕುರಿತು ಸರ್ಕಾರ ತೀರ್ಮಾನಿಸಬೇಕು ಎಂದು ಮುಖ್ಯಮಂತ್ರಿಯವರಿಗೆ ವಿವರಿಸಿದರು.

ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಎನ್‌ಪಿಎಸ್‌ ರದ್ದು

ರಾಜಾಸ್ತಾನ, ಛತ್ತೀಸ್ ಗಡದಲ್ಲಿ ಎನ್.ಪಿ.ಎಸ್ ರದ್ದಾಗಿದೆ. ಕರ್ನಾಟಕದಲ್ಲಿಯೂ ಅದನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಎಂದು ಕರ್ನಾಟಕ ರಾಜ್ಯ ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ ಆಗ್ರಹಿಸಿದರು.

ಎನ್.ಪಿ.ಎಸ್ ರದ್ದು ಮಾಡುವುದರಿಂದ ಯೋಜನೆಯಡಿ ಲಭ್ಯವಿರುವ ಒಟ್ಟು 19000 ಕೋಟಿ ಹಣವನ್ನು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ದೊರೆಯಲಿದೆ. ನೌಕರರ ಪಾಲಿನ 9,000 ಕೋಟಿ ರೂಪಾಯಿ ಜಿಪಿಎಫ್ ಗೆ ಪರಿವರ್ತನೆ ಮಾಡಿಕೊಳ್ಳುಬಹುದು ಹಾಗೂ ಸರ್ಕಾರದ 10,000 ಕೋಟಿ ರೂಪಾಯಿ ಸರ್ಕಾರದ ಪಾಲನ್ನು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಿಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ ತಿಳಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಕೆ.ಪಿ.ಟಿ.ಸಿಎಲ್, ಆರೋಗ್ಯ, ಜಲಮಂಡಳಿ, ಕಂದಾಯ ಇಲಾಖೆ ನೌಕರರ ಸಂಘ ಸೇರಿದಂತೆ ಹಲವು ಸಂಘಟನೆಗಳ ನೂರಕ್ಕೂ ಹೆಚ್ಚು ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ