logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Police Recruitment 2022: 1,137 ಪೊಲೀಸ್ ಕಾನ್ಸ್​ಟೇಬಲ್ ಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ; ಸಂಪೂರ್ಣ ಮಾಹಿತಿ ಇಲ್ಲಿದೆ

Karnataka police recruitment 2022: 1,137 ಪೊಲೀಸ್ ಕಾನ್ಸ್​ಟೇಬಲ್ ಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ; ಸಂಪೂರ್ಣ ಮಾಹಿತಿ ಇಲ್ಲಿದೆ

HT Kannada Desk HT Kannada

Oct 13, 2022 09:07 AM IST

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1137 ಪೊಲೀಸ್ ಕಾನ್ಸ್​ಟೇಬಲ್ ಸಿವಿಲ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

  • ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್​ಟೇಬಲ್ ಸಿವಿಲ್ (ಪುರುಷ ಮತ್ತು ಮಹಿಳಾ) ಖಾಲಿ ಇರುವ 1137 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ದಿನಾಂಕ, ಶುಲ್ಕ ಸೇರಿದಂತೆ ಇತರೆ ಮಾಹಿತಿ ಇಲ್ಲಿದೆ.

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1137 ಪೊಲೀಸ್ ಕಾನ್ಸ್​ಟೇಬಲ್ ಸಿವಿಲ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1137 ಪೊಲೀಸ್ ಕಾನ್ಸ್​ಟೇಬಲ್ ಸಿವಿಲ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್​ಟೇಬಲ್ ಸಿವಿಲ್ (ಪುರುಷ ಮತ್ತು ಮಹಿಳಾ) ಖಾಲಿ ಇರುವ 1137 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ದಿನಾಂಕ, ಶುಲ್ಕ ಸೇರಿದಂತೆ ಇತರೆ ಮಾಹಿತಿ ಇಲ್ಲಿದೆ.

ಟ್ರೆಂಡಿಂಗ್​ ಸುದ್ದಿ

KRS Dam: ಕೊಡಗಲ್ಲಿ ಉತ್ತಮ ಮಳೆ, ಕೆಆರ್‌ಎಸ್ ಜಲಾಶಯಕ್ಕೆ ಬಂತು 2 ಅಡಿ ನೀರು

ಬೆಂಗಳೂರು: ಖಾಸಗಿ ಶಾಲಾ ಶುಲ್ಕ ಶೇ 30- 40 ಹೆಚ್ಚಳ, ಶುಲ್ಕ ನಿಯಂತ್ರಣ ಬೇಕೆನ್ನುತ್ತಿರುವ ಪಾಲಕರು, ಕೈಕಟ್ಟಿ ಕುಳಿತ ಸರ್ಕಾರ- 10 ಮುಖ್ಯ ಅಂಶ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಮೇ 23 ರಿಂದ ಜೂನ್ 9 ರ ತನಕ ಬೃಹತ್ ಮಾವು ಹಲಸಿನ ಮೇಳ, ಒಂದೇ ಸೂರಿನಡಿ ಹತ್ತಾರು ಬಗೆಯ ಹಣ್ಣು

ಕರ್ನಾಟಕ ಬರ ಪರಿಸ್ಥಿತಿ; 32 ಲಕ್ಷಕ್ಕೂ ಅಧಿಕ ರೈತರಿಗೆ 3454 ಕೋಟಿ ರೂ ಪರಿಹಾರ, ರಾಜ್ಯದಿಂದಲೂ 16 ಲಕ್ಷ ರೈತ ಕುಟುಂಬಕ್ಕೆ ತಲಾ 3,000 ರೂ

ಪೊಲೀಸ್ ಕಾನ್ಸ್​ಟೇಬಲ್(ಸಿವಿಲ್) (ಪುರುಷ & ಮಹಿಳಾ) & (ತೃತೀಯಲಿಂಗ ಪುರುಷ & ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‌ಲಾಗ್ (ಮಿಕ್ಕುಳಿದ ವೃಂದ) 1137 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

1. ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್​ಟೇಬಲ್ ಸಿವಿಲ್ (ಪುರುಷ ಮತ್ತು ಮಹಿಳಾ) ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ನೌಕರರ ಸೇವೆಗಳು ಸೇರಿದಂತೆ (ನೇಮಕಾತಿ) ನಿಯಮ 2004 ಮತ್ತು ಅದರ (ತಿದ್ದುಪಡಿ) ನಿಯಮ, 2009, ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ, ಸೇವೆಗಳನ್ನು ಒಳಗೊಂಡ (ನೇಮಕಾತಿ) (ತಿದ್ದುಪಡಿ) ನಿಯಮಗಳು 2014, 2016, 2020 ಮತ್ತು 2021 ಹಾಗೂ ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಾವಳಿ 1977 ಹಾಗೂ ಮೇಲೆ ತಿಳಿಯಪಡಿಸಿದ ನಿಯಮಗಳಿಗೆ ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಈ ಅಧಿಸೂಚನೆಯನ್ನು ಪ್ರಕಟಿಸುತ್ತ ಅರ್ಹತೆಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ https://ksp.karnataka.gov.in/ ಅಥವಾ https://ksp-recruitment.in/ ಗಳಲ್ಲಿ ಆನ್ ಲೈನ್‌ (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಖುದ್ಧಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ವಿಶೇಷ ಸೂಚನೆಗಳು

* ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕವು ಮುಕ್ತಾಯವಾದ ನಂತರ 10 ದಿನಗಳ ಕಾಲಾವಕಾಶ ನೀಡಲಾಗುತ್ತಿದ್ದು, ಸದರಿ ದಿನಾಂಕದೊಳಗಾಗಿ ಅಭ್ಯರ್ಥಿಯು ತಾನು ಸಲ್ಲಿಸಿರುವ ಅರ್ಜಿಯಲ್ಲಿ ಹೆಸರು, ಜನ್ಮ ದಿನಾಂಕ, ಕೋರಿರುವ ಮೀಸಲಾತಿ ಹಾಗೂ ಇತರೇ ಯಾವುದೇ ಅಂಶಗಳಬದಲಾವಣೆ ಬೇಕಾದಲ್ಲಿ ಖುದ್ದಾಗಿ / ಅಂಚೆಮೂಲಕ ಸಂಬಂಧಪಟ್ಟ ದೃಢೀಕೃತದಾಖಲೆಗಳೊಂದಿಗೆ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ನೇಮಕಾತಿ, ಕಾರ್ಲಟನ್ ಭವನ, ಅರಮನೆ ರಸ್ತೆ, ಬೆಂಗಳೂರು ರವರ ಕಛೇರಿಗೆ ಸಲ್ಲಿಸತಕದ್ದು. ನಿಗಧಿಪಡಿಸಿದ ಕೊನೆಯ ದಿನಾಂಕದ ನಂತರ ಸಲ್ಲಿಸುವ ಯಾವುದೇ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.

* ಅರ್ಹ ಅಭ್ಯರ್ಥಿಗಳು “ಅನುಬಂಧ-ಅ” ರಲ್ಲಿ ನೀಡಲಾಗಿರುವ ಖಾಲಿ ಹುದ್ದೆಗಳ ವರ್ಗೀಕರಣವನ್ನು ನೋಡಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

2. ಶುಲ್ಕ:

- ಸಾಮಾನ್ಯ ಅರ್ಹತೆ ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ 400 ರೂಪಾಯಿ ಶುಲ್ಕ

- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 200 ರೂಪಾಯಿ ಶುಲ್ಕ

ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಮುಖಾಂತರ ಪಾವತಿಸಬಹುದು. ಹಾಗೂ ಚಲನ್ ಡೌನ್‌ಲೋಡ್ ಮಾಡಿಕೊಂಡು ಕೆನರಾ ಬ್ಯಾಂಕ್ ಮತ್ತು ಸ್ಥಳೀಯ ಅಂಚೆ ಕಚೇರಿಗಳಲ್ಲಿ ಪಾವತಿಸಬಹುದು. ಆನ್‌ಲೈನ್ / ಬ್ಯಾಂಕ್ / ಅಂಚೆ ಕಚೇರಿಯಲ್ಲಿ ಅರ್ಜಿ ಶುಲ್ಕದೊಂದಿಗೆ ಸೇವಾ ಶುಲ್ಕವನ್ನು ಅಭ್ಯರ್ಥಿಗಲೇ ಪಾವತಿಸಬೇಕು.

ಟಿಪ್ಪಣಿ: ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರುಗಿಸಲಾಗುವುದಿಲ್ಲ ಅಥವಾ ಅದನ್ನು ನೇಮಕಾತಿ ಸಮಿತಿಯು ನಡೆಸುವ ಇತರೆ ಯಾವುದೇ ಪರೀಕ್ಷೆ ಅಥವಾ ನೇಮಕಾತಿಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20.10.2022, ಬೆಳಿಗ್ಗೆ 10.00 ಗಂಟೆಯಿಂದ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21.11.2022, ಸಂಜೆ 06.00 ಗಂಟೆಯವರೆಗೆ

ಆನ್ ಲೈನ್ / ಅಧಿಕೃತ ಬ್ಯಾಂಕ್ ಶಾಖೆಗಳ/ ಸ್ಥಳೀಯ ಅಂಚೆ ಕಚೇರಿಗಳ ಕಚೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 23.11.2022.

ಟಿಪ್ಪಣಿ:-ಈ ಕೆಳಗೆ ನಮೂದಿಸಿರುವ ಖಾಲಿ ಹುದ್ದೆಗಳ ಸಂಖ್ಯೆ ತಾತ್ಕಾಲಿಕವಾಗಿದ್ದು, ಅವಶ್ಯಕತೆ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ಬದಲಾವಣೆ ಮಾಡಲಾಗುವುದು.

ಪೊಲೀಸ್ ಕಾನ್ಸ್​ಟೇಬಲ್ (ಸಿವಿಲ್) (ಪುರುಷ & ಮಹಿಳಾ) & (ತೃತೀಯಲಿಂಗ ಪುರುಷ & ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‌ಲಾಗ್ (ಮಿಕ್ಕುಳಿದ ವೃಂದ) ಖಾಲಿ ಹುದ್ದೆಗಳ ವಿವರ ಹೀಗಿದೆ.

ಪೊಲೀಸ್ ಕಾನ್ಸ್​ಟೇಬಲ್ (ಸಿವಿಲ್) (ಪುರುಷ) 683

ಪೊಲೀಸ್ ಕಾನ್ಸ್​ಟೇಬಲ್ (ಸಿವಿಲ್) (ಮಹಿಳಾ) 229

ಪೊಲೀಸ್ ಕಾನ್ಸ್​ಟೇಬಲ್ (ಸಿವಿಲ್) (ಪುರುಷ) (ತೃತೀಯ ಲಿಂಗ) 22

ಪೊಲೀಸ್ ಕಾನ್ಸ್​ಟೇಬಲ್ (ಸಿವಿಲ್) (ಮಹಿಳಾ) (ತೃತೀಯ ಲಿಂಗ) 10

ಸೇವಾನಿರತ ಪೊಲೀಸ್ ಕಾನ್ಸ್​ಟೇಬಲ್ (ಸಿವಿಲ್) (ಪುರುಷ) 134

ಸೇವಾನಿರತ ಪೊಲೀಸ್ ಕಾನ್ಸ್​ಟೇಬಲ್ (ಸಿವಿಲ್) (ಮಹಿಳಾ) 57

ಸೇವಾನಿರತ ಪೊಲೀಸ್ ಕಾನ್ಸ್​ಟೇಬಲ್ (ಸಿವಿಲ್) (ಪುರುಷ) (ತೃತೀಯ ಲಿಂಗ) 1

ಸೇವಾನಿರತ ಪೊಲೀಸ್ ಕಾನ್ಸ್​ಟೇಬಲ್ (ಸಿವಿಲ್) (ಮಹಿಳಾ) (ತೃತೀಯ ಲಿಂಗ) 1

ಸೇರಿದಂತೆ ಒಟ್ಟು 1137 ಹುದ್ದೆಗಳ ನೇಮಕಾತಿಗೆ ಇಲಾಖೆ ಮುಂದಾಗಿದೆ. ಹೆಚ್ಚಿನ ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಮೇಲೆ ನೀಡಿರುವ ಸರ್ಕಾರದ ಇಲಾಖೆಯ ವೆಬ್ ಸೈಟ್ ಗೆ ಭೇಟಿ ನೀಡಿ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ