logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Politics: ವಿಧಾನಮಂಡಲದ ಉಭಯ ಸದನಗಳಲ್ಲಿ ವಿಪಕ್ಷ ನಾಯಕ ಯಾರು; ನಿರ್ಧರಿಸಲು ಇನ್ನೂ ಟೈಮ್‌ ಬೇಕು ಎನ್ನುತ್ತಿದ್ದಾರೆ ಬಿಜೆಪಿ ನಾಯಕರು

Karnataka Politics: ವಿಧಾನಮಂಡಲದ ಉಭಯ ಸದನಗಳಲ್ಲಿ ವಿಪಕ್ಷ ನಾಯಕ ಯಾರು; ನಿರ್ಧರಿಸಲು ಇನ್ನೂ ಟೈಮ್‌ ಬೇಕು ಎನ್ನುತ್ತಿದ್ದಾರೆ ಬಿಜೆಪಿ ನಾಯಕರು

HT Kannada Desk HT Kannada

Jun 14, 2023 04:10 PM IST

ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ (ಕಡತ ಚಿತ್ರ)

  • Karnataka Political News: ರಾಜ್ಯ ವಿಧಾನಸಭೆ ಚುನಾವಣೆ ಮುಗಿದು ಹೊಸ ಸರ್ಕಾರ ರಚನೆ ಆಯಿತು. ಕಳೆದ ಬಾರಿ ಅಧಿಕಾರ ಚುಕ್ಕಾಣಿ ಹಿಡಿದಿದ್ದ ಬಿಜೆಪಿ ಈ ಬಾರಿ ವಿಪಕ್ಷ ಸ್ಥಾನದಲ್ಲಿ ಕುಳಿತುಕೊಂಡಿದೆ. ವಿಪಕ್ಷ ನಾಯಕ ಯಾರು ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಪಕ್ಷದ ರಾಜ್ಯ ಅಧ್ಯಕ್ಷರ ಬದಲಾವಣೆ ವಿಚಾರವೂ ಚರ್ಚೆಯಲ್ಲಿದೆ. ಈ ವಿದ್ಯಮಾನದ ವಿವರಣೆ ಇಲ್ಲಿದೆ.

ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ (ಕಡತ ಚಿತ್ರ)
ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ (ಕಡತ ಚಿತ್ರ) (ANI)

ಕರ್ನಾಟಕ ವಿಧಾನಮಂಡಲ (Karnataka VidhanaMandala) ದ ಉಭಯ ಸದನಗಳು ಅಂದರೆ ಕರ್ನಾಟಕ ವಿಧಾನ ಪರಿಷತ್‌ (Karnataka Legislative Council) ಮತ್ತು ಕರ್ನಾಟಕ ವಿಧಾನ ಸಭೆ (Karnataka Legislative Assembly) ಗಳಲ್ಲಿ ವಿಪಕ್ಷ ನಾಯಕ (Leader of Opposition) ಯಾರು ಎಂಬುದು ಇನ್ನೂ ತೀರ್ಮಾನ ಆಗಿಲ್ಲ. ಅಧಿಕಾರ ಕಳೆದುಕೊಂಡು ವಿಪಕ್ಷ ಸ್ಥಾನದಲ್ಲಿ ಬಿಜೆಪಿ (BJP)ಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಇನ್ನೂ ಸಾಧ್ಯವಾಗಿಲ್ಲ.

ಟ್ರೆಂಡಿಂಗ್​ ಸುದ್ದಿ

Bus Accident: ಫ್ಲೈ ಓವರ್‌ಗೆ ಹಾರಿದ ಸಾರಿಗೆ ಬಸ್‌ ಪ್ರಯಾಣಿಕರು ಪಾರಾಗಿದ್ದೇ ರೋಚಕ; ನೆಲಮಂಗಲದಲ್ಲಿ ಸಿನಿಮಾ ಸ್ಟಂಟ್ ನಂತೆ ಸಂಭವಿಸಿದ ಅಪಘಾತ

Hassan Scandal: 100 ಕೋಟಿ ರೂ. ಆಫರ್ ವಿಚಾರವನ್ನು ಎಸ್‌ಐಟಿ ನೋಡಿಕೊಳ್ಳುತ್ತೆ, ದೇವರಾಜೇಗೌಡ ಜೈಲಲ್ಲೇ ಇರ್ತಾರೆ: ಗೃಹ ಸಚಿವ

Hassan Scandal : ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ

Wildlife News: ಹುಲಿ ಉಗುರು ಪ್ರಕರಣ, ವನ್ಯಜೀವಿಗಳ ಅಂಗಾಂಗ ಹಸ್ತಾಂತರ ಇನ್ನಷ್ಟು ವಿಳಂಬ ಸಾಧ್ಯತೆ

ಕರ್ನಾಟಕ ಬಿಜೆಪಿಯ ಸಾರಥ್ಯ ವಹಿಸುವುದಕ್ಕೆ ಪಕ್ಷದ ರಾಜ್ಯ ಅಧ್ಯಕ್ಷ ಸ್ಥಾನ ಮತ್ತು ಕರ್ನಾಟಕ ವಿಧಾನ ಪರಿಷತ್‌ ಮತ್ತು ಕರ್ನಾಟಕ ವಿಧಾನ ಸಭೆಗಳಲ್ಲಿ ವಿಪಕ್ಷ ನಾಯಕರ ಆಯ್ಕೆಗೆ ಇನ್ನೂ ಎರಡು ದಿನಗಳ ಕಾಲಾವಕಾಶ ಬೇಕು ಎಂದು ಪಕ್ಷದ ಪ್ರಮುಖರು ಹೇಳಿಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಮತ್ತು ಕೆಲವು ಹಿರಿಯ ನಾಯಕರು ಈ ಕುರಿತು ಮಾತನಾಡಿದ್ದು, ಇನ್ನೆರೆಡು ದಿನಗಳ ಒಳಗೆ ವಿಪಕ್ಷ ನಾಯಕರ ಆಯ್ಕೆ ಪೂರ್ಣಗೊಳ್ಳಲಿದೆ ಎಂದು ಹೇಳಿರುವುದಾಗಿ ಹಿಂದುಸ್ತಾನ್‌ ಟೈಮ್ಸ್‌ ಕನ್ನಡ ತಾಣದ ಮಾತೃಸಂಸ್ಥೆ ಹಿಂದುಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಯಾರಾಗಬಹುದು?

ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಯಾರಾಗಬಹುದು ಎಂಬ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ. ವಿಪಕ್ಷ ನಾಯಕರ ಆಯ್ಕೆ ವಿದ್ಯಮಾನದ ಅರಿವು ಇರುವಂತಹ ಬಿಜೆಪಿ ನಾಯಕರು ತಿಳಿಸಿದ ಮಾಹಿತಿ ಪ್ರಕಾರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಸರು ಮುಂಚೂಣಿಯಲ್ಲಿದೆ. ಹಿರಿಯ ನಾಯಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಅರವಿಂದ ಬೆಲ್ಲದ್‌ ಅವರ ಹೆಸರು ಕೂಡ ಕೇಳಿಬರುತ್ತಿದೆ. ಆದಾಗ್ಯೂ, ವಿಜಯೇಂದ್ರ ಅವರ ಹೆಸರನ್ನೂ ಪಕ್ಷದ ವರಿಷ್ಠರು ಗಮನದಲ್ಲಿಟ್ಟುಕೊಂಡಿದ್ದಾರೆ. ಇದಲ್ಲದೆ, ಒಬಿಸಿ ಅಥವಾ ದಲಿತ ಸಮುದಾಯದವರ ಪೈಕಿ ಒಬ್ಬರನ್ನು ಈ ಸ್ಥಾನಕ್ಕೆ ಪರಿಗಣಿಸಬೇಕು ಎಂಬ ಮಾತೂ ಇದೆ.

ವಿಧಾನ ಪರಿಷತ್‌ ನಾಯಕ ಸ್ಥಾನಕ್ಕೆ ಯಾರು

ವಿಧಾನ ಪರಿಷತ್‌ನಲ್ಲಿ ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿಗೆ ಅಲ್ಲಿ ವಿಪಕ್ಷ ನಾಯಕ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಸದ್ಯ ಎಂಎಲ್‌ಸಿ ಕೋಟಾ ಶ್ರೀನಿವಾಸ ಪೂಜಾರಿ ಹೆಸರು ಮುಂಚೂಣಿಯಲ್ಲಿದೆ. ಅಲ್ಲೂ ಇತರೆ ಹಿರಿಯ ನಾಯಕರಿದ್ದು, ಆಯ್ಕೆ ಪ್ರಕ್ರಿಯೆ ಬಹಳಷ್ಟು ಲೆಕ್ಕಾಚಾರದಿಂದ ಕೂಡಿದೆ.

ಯಾರಾಗಬಹುದು ಬಿಜೆಪಿ ರಾಜ್ಯ ಅಧ್ಯಕ್ಷ

ಬಿಜೆಪಿಯ ಕರ್ನಾಟಕ ಘಟಕದ ಅಧ್ಯಕ್ಷ ಯಾರಾಗಬಹುದು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿ.ವೈ.ವಿಜಯೇಂದ್ರ, ಪಕ್ಷದೊಳಗೆ ಅಧ್ಯಕ್ಷ ಸ್ಥಾನಕ್ಕೆ ತನ್ನನ್ನು ಪರಿಗಣಿಸುತ್ತಿದ್ದಾರೆ ಎಂಬುದು ವದಂತಿ ಅಷ್ಟೆ. ಅದರಲ್ಲಿ ಹುರುಳಿಲ್ಲ. ಯಾರೇ ಅಧ್ಯಕ್ಷರಾದರೂ ನಾವು ಎಲ್ಲರೂ ಸೇರಿ ಕರ್ನಾಟಕದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸುತ್ತೇವೆ ಎಂದು ವಿಜಯೇಂದ್ರ ಹೇಳಿದರು.

ಪಕ್ಷದ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗ ನಾಯಕನನ್ನು ನೇಮಕ ಮಾಡುವ ಆಲೋಚನೆಯಲ್ಲಿ ವರಿಷ್ಠರು ಇದ್ದು, ಆರ್.‌ ಅಶೋಕ ಅಥವಾ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರ ಹೆಸರು ರೇಸ್‌ನಲ್ಲಿ ಕಾಣಿಸಿಕೊಂಡಿದೆ. ಆದರೆ ಇನ್ನೂ ಅಂತಿಮ ತೀರ್ಮಾನ ಆಗಿಲ್ಲ.

ಪಕ್ಷದ ಸಂಘಾಟನಾತ್ಮಕ ಹೊಣೆಗಾರಿಕೆಗಳನ್ನು ಹಂಚಿಕೆ ಮಾಡುವಾಗ ಸಾಮಾಜಿಕ ಸಮತೋಲನ ಕಾಯ್ದುಕೊಳ್ಳಲು ಪಕ್ಷದ ವರಿಷ್ಠರು ಗಮನಹರಿಸಲಿದ್ದಾರೆ. ಲಿಂಗಾಯಿತ, ಒಕ್ಕಲಿಗ, ಒಬಿಸಿ ಅಥವಾ ದಲಿತ ಸಮುದಾಯದವರನ್ನೂ ಒಳಗೊಂಡು ಪಕ್ಷ ಸಂಘಟನೆ ಮಾಡಬೇಕು ಎಂಬುದರ ಕಡೆಗೆ ಅವರು ಒಲವು ತೋರಿದ್ದಾರೆ. ಕರ್ನಾಟಕ ಬಜೆಟ್‌ ಅಧಿವೇಶನ ಮುಗಿದ ಬಳಿಕ ಈ ಎಲ್ಲ ನೇಮಕವೂ ಆಗಬಹುದು ಎಂದು ವರದಿ ಹೇಳಿದೆ.

ಬೊಮ್ಮಾಯಿ ಹೇಳಿಕೆಯಲ್ಲಿರುವ ವಿವರ

ಪ್ರತಿಪಕ್ಷ ನಾಯಕರ ನೇಮಕದಲ್ಲಿ ಯಾವುದೇ ವಿಳಂಬವಾಗಿಲ್ಲ. ಸಂಪ್ರದಾಯದಂತೆ ವಿಧಾನಮಂಡಲ ಅಧಿವೇಶನ ಮುಗಿದ ನಂತರ ನೇಮಕ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ಹೇಳಿದರು. ಅಲ್ಲದೆ, ಪ್ರತಿಪಕ್ಷ ನಾಯಕ ಸ್ಥಾನದ ಆಸೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಚುನಾವಣೆಯಲ್ಲಿ ಪಕ್ಷದ ಸೋಲಿನ ನೈತಿಕ ಹೊಣೆಯನ್ನು ನಾನು ಈಗಾಗಲೇ ಹೊಂದಿದ್ದೇನೆ. ಚುನಾವಣೆ ಸೋಲಿನ ಹೊಣೆಯನ್ನು ನಾನೇ ಹೊತ್ತುಕೊಂಡಾಗ ಶಾಸಕರ ಸೋಲಿಗೆ ಕಾರಣ ಹೇಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಫಲಿತಾಂಶದ ಬಗ್ಗೆ ರಾಷ್ಟ್ರೀಯ ನಾಯಕರು ಅಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸುತ್ತ ಬೊಮ್ಮಾಯಿ ಹೇಳಿದರು.

ನಳಿನ್‌ ಕುಮಾರ್‌ ಚುನಾವಣಾ ರಾಜಕೀಯ ಭವಿಷ್ಯ

ಬಿಜೆಪಿಯ ಹಾಲಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ತವರು ಜಿಲ್ಲೆಯಲ್ಲೇ ಕಾರ್ಯಕರ್ತರ ಅಸಮಾಧಾನ ತೀವ್ರವಾಗಿದೆ. ಉಳಿದ ಜಿಲ್ಲೆಗಳಲ್ಲೂ ನಳಿನ್‌ ಕುಮಾರ್‌ ಬಗ್ಗೆ ಅಷ್ಟೇನೂ ಒಲವಿಲ್ಲ. ಇಂತಹ ಸನ್ನಿವೇಶದಲ್ಲಿ ಅವರಿಗೆ ಮತ್ತೊಮ್ಮೆ ಲೋಕಸಭೆ ಚುನಾವಣೆಗೆ ಟಿಕೆಟ್‌ ನೀಡುವ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಲಾಗಿದೆ ಎಂದು ಮಾಜಿ ಶಾಸಕರೊಬ್ಬರು ಅವರ ವಿವರ ಬಹಿರಂಗಪಡಿಸದಂತೆ ಕೋರಿ ಮಾಹಿತಿ ನೀಡಿದರು.

ನಳಿನ್‌ ಕುಮಾರ್‌ ಚುನಾವಣೆ ಸಂದರ್ಭದಲ್ಲಿ ಕೂಡ ಹೊಣೆಗಾರಿಕೆಗಳನ್ನು ಸರಿಯಾಗಿ ನಿರ್ವಹಿಸಿಲ್ಲ. ಸ್ವಕ್ಷೇತ್ರದಲ್ಲೂ ಜನರ ಅಗತ್ಯಗಳಿಗೆ, ಭಾವನೆಗಳಿಗೆ ಬೆಲೆ ಕೊಡುತ್ತಿಲ್ಲ. ಲೋಕಸಭೆ ಚುನಾವಣೆಗೆ ಅವರನ್ನು ಇಳಿಸಿದರೆ ಮತ್ತೆ ಅಸೆಂಬ್ಲಿ ಚುನಾವಣೆಯ ಫಲಿತಾಂಶವನ್ನೇ ಕಾಣಬೇಕಾದೀತು ಎಂದು ಅವರು ವಿವರಿಸಿದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ