DK Shivakumar: ನನ್ನನ್ನೇ ಬ್ಲಾಕ್‌ಮೇಲ್ ಮಾಡ್ತೀರ; ಸುದ್ದಿಗೋಷ್ಠಿ ಬಹಿಷ್ಕರಿಸಿದ ಪತ್ರಕರ್ತರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಗರಂ
Apr 26, 2023 07:01 PM IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಎಲ್ಲಾ ಪತ್ರಕರ್ತರು ಆಹಾರ ಹಾಗೂ ವೈನ್‌ಗಾಗಿ ತಮ್ಮ ಆತ್ಮಸಾಕ್ಷಿಯನ್ನು ಮಾರಿಕೊಳ್ಳುವವರಲ್ಲ ಎಂಬುದನ್ನು ಡಿ ಕೆ ಶಿವಕುಮಾರ್ ಅವರು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಬಿಜೆಪಿ ನಾಯಕ ಅಮಿತ್ ಮಾಳವೀಯ ಹೇಳಿದ್ದಾರೆ.
ತಡವಾಗಿ ಬಂದಿದ್ದಕ್ಕೆ ಸುದ್ದಿಗೋಷ್ಠಿಯನ್ನು ಬಹಿಷ್ಕರಿಸಿದ ಪತ್ರಕರ್ತರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆಶಿ, ಪತ್ರಕರ್ತರ ಬಗ್ಗೆ ಕೋಪದಿಂದ ಮಾತನಾಡುತ್ತಿರುವ ವಿಡಿಯೋವೊಂದನ್ನು ಭಾರತೀಯ ಜನತಾ ಪಕ್ಷದ ನಾಯಕ ಅಮಿತ್ ಮಾಳವೀಯ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಡಿ.ಕೆ. ಶಿವಕುಮಾರ್ ಸುದ್ದಿಗೋಷ್ಠಿ ಆಯೋಜಿಸಿದ್ದರು. ನಿಗದಿಪಡಿಸಿದ ಸಮಯಕ್ಕಿಂತ ಡಿಕೆಶಿ ಒಂದು ಗಂಟೆ ತಡವಾಗಿ ಬಂದಿದ್ದಕ್ಕೆ ಪತ್ರಕರ್ತರು ಅಲ್ಲಿಂದ ಹೊರಟಿದ್ದಾರೆ. ನಂತರ ಸ್ಥಳಕ್ಕೆ ಬಂದ ಡಿಕೆಶಿ ಸುದ್ದಿಗೋಷ್ಠಿ ಬಹಿಷ್ಕರಿಸಿ ಹೊರ ನಡೆದ ಪತ್ರಕರ್ತರ ವಿರುದ್ಧ ಹರಿಹಾಯ್ದರು. ''ಎಲ್ಲಾ ಟೈಂ ನೋಡಲು ವಾಚ್ ಹಿಡಿದೇ ನಿಂತಿರುತ್ತಾರೆ. ನನಗೆ ಎಲ್ಲಿ ಸುದ್ದಿಗೋಷ್ಠಿ ನಡೆಸಬೇಕು, ಯಾರನ್ನು ಕರೆಯಬೇಕು ಎಂದು ಗೊತ್ತಿದೆ. ನನ್ನೇ ಬ್ಲಾಕ್‌ಮೇಲ್ ಮಾಡ್ತೀರ?'' ಎಂದು ಡಿಕೆಶಿ ಗರಂ ಆದರು. ನಂತರ ಸುದ್ದಿಗೋಷ್ಠಿ ಆಯೋಜಕರನ್ನು ಉದ್ಧೇಶಿಸಿ ''ಯಾರೆಲ್ಲಾ ಎದ್ದು ಹೋಗಿದ್ದಾರೆ ಅವರ ಹೆಸರು ಕೊಡಿ, ಅವರ ಮ್ಯಾನೇಜ್‌ಮೆಂಟ್ ಬಳಿ ನಾನು ಮಾತನಾಡುತ್ತೇನೆ'' ಎಂದರು.
ಈ ವಿಡಿಯೋವನ್ನು ಬಿಜೆಪಿ ನಾಯಕ ಅಮಿತ್ ಮಾಳವೀಯ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ''ಎಲ್ಲಾ ಪತ್ರಕರ್ತರು ಆಹಾರ ಹಾಗೂ ವೈನ್‌ಗಾಗಿ ತಮ್ಮ ಆತ್ಮಸಾಕ್ಷಿಯನ್ನು ಮಾರಿಕೊಳ್ಳುವವರಲ್ಲ ಎಂಬುದನ್ನು ಡಿ ಕೆ ಶಿವಕುಮಾರ್ ಅವರು ನೆನಪಿನಲ್ಲಿಟ್ಟುಕೊಳ್ಳಬೇಕು'' ಎಂದು ಬರೆದುಕೊಂಡಿದ್ದಾರೆ.
ಕರ್ನಾಟಕ ರಾಜಕೀಯ ಕುರಿತ ಮತ್ತಷ್ಟು ಸುದ್ದಿಗಳನ್ನು ಇಲ್ಲಿ ಓದಿ
ಸಿಡಿ ಹೊರ ಬರುವ ಭಯಕ್ಕೆ ಬಿಜೆಪಿಯ 6 ಮಂತ್ರಿಗಳು ಸಿವಿಲ್ ಕೋರ್ಟ್‌ನಲ್ಲಿ ಸ್ಟೇ ತಂದಿದ್ದಾರೆ; ಜಗದೀಶ್ ಶೆಟ್ಟರ್ ಬಾಂಬ್
ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಅಸಮಾಧಾನ ತೋರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿರುವ ವಿಚಾರ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಶೆಟ್ಟರ್ ಕಾಂಗ್ರೆಸ್ ಸೇರುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್ ನಾಯಕರು ಒಬ್ಬರಿಗೊಬ್ಬರು ಟೀಕಾ ಪ್ರಹಾರ ಆರಂಭಿಸಿದ್ದಾರೆ. ಜಗದೀಶ್ ಶೆಟ್ಟರ್ ಗೆಲ್ಲುವುದಿಲ್ಲ ಎಂದು ಬಿಎಸ್‌ವೈ ಹೇಳಿದರೆ, ಜಗದೀಶ್ ಶೆಟ್ಟರ್ ಬಿಜೆಪಿ ಸಿಡಿ ಬಾಂಬ್ ಸಿಡಿಸಿದರು. ಪೂರ್ತಿ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ
ಕುಣಿಗಲ್ ಕ್ಷೇತ್ರದಲ್ಲಿ ಒಕ್ಕಲಿಗ ಅಭ್ಯರ್ಥಿಗಳದ್ದೇ ಪಾರುಪತ್ಯ; ಕಣದಲ್ಲಿ ವೈದ್ಯರು, ಬ್ಯಾಂಕ್ ರಾಜ್ಯಾಧ್ಯಕ್ಷರು
ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಪ್ರತಿ ಪಕ್ಷಗಳೂ ಸ್ಟಾರ್ ಪ್ರಚಾರಕರನ್ನು ಕರೆಸಿ ತಮ್ಮ ಪಕ್ಷದ ಪರ ಕ್ಯಾಂಪೇನ್ ಆರಂಭಿಸಿದ್ದಾರೆ. ಈ ಬಾರಿ ಅನೇಕ ಹೊಸ ಅಭ್ಯರ್ಥಿಗಳು ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಹಾಗೇ ತುಮಕೂರು ಜಿಲ್ಲೆಯ ಕುಣಿಗಲ್ ವಿಧಾನಸಭೆ ಕ್ಷೇತ್ರ ಈ ಬಾರಿ ಕೆಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಅಪ್ಪ-ಮಗ, ತಜ್ಞ ವೈದ್ಯರು, ಬ್ಯಾಂಕ್ ರಾಜ್ಯಾಧ್ಯಕ್ಷರು ಈ ಬಾರಿ ಚುನಾಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಹೆಚ್ಚಿನ ಮಾಹಿತಿ ತಿಳಿಯಲು ಈ ಲಿಂಕ್ ಒತ್ತಿ