logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Polls 2023: ಇಂದು, ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರವಾಸ; ಚಿಕ್ಕಮಗಳೂರಲ್ಲಿ ಅಡಕೆ ಬೆಳೆಗಾರರ ಸಮಾವೇಶ

Karnataka Polls 2023: ಇಂದು, ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರವಾಸ; ಚಿಕ್ಕಮಗಳೂರಲ್ಲಿ ಅಡಕೆ ಬೆಳೆಗಾರರ ಸಮಾವೇಶ

HT Kannada Desk HT Kannada

Feb 20, 2023 10:13 AM IST

ಜೆಪಿ ನಡ್ಡಾ ಅವರನ್ನು ಮಂಗಳೂರಿನಲ್ಲಿ ಬರಮಾಡಿಕೊಂಡ ಸ್ಥಳೀಯ ನಾಯಕರು

    • ವಿಧಾನಸಭೆ ಚುನಾವಣೆ (Karnataka Assembly Election 2023)ಘೋಷಣೆಯ ನಿರೀಕ್ಷೆಯಲ್ಲಿದೆ ರಾಜ್ಯ. ರಾಜಕೀಯ ಪಕ್ಷಗಳೂ ಅಷ್ಟೆ- ಪ್ರಚಾರ ಕಾರ್ಯ ಚುರುಕುಗೊಳಿಸುವ ಪ್ರಯತ್ನದಲ್ಲಿವೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನಿನ್ನೆ ರಾತ್ರಿ ಮಂಗಳೂರಿಗೆ ಆಗಮಿಸಿದ್ದು, ಇಂದು ನಾಳೆ ರಾಜ್ಯ ಪ್ರವಾಸ ಕೈಗೊಂಡು ವಿವಿಧ ಪ್ರಚಾರ ಅಭಿಯಾನದಲ್ಲಿ ತೊಡಗಲಿದ್ದಾರೆ.
 ಜೆಪಿ ನಡ್ಡಾ ಅವರನ್ನು ಮಂಗಳೂರಿನಲ್ಲಿ ಬರಮಾಡಿಕೊಂಡ ಸ್ಥಳೀಯ ನಾಯಕರು
ಜೆಪಿ ನಡ್ಡಾ ಅವರನ್ನು ಮಂಗಳೂರಿನಲ್ಲಿ ಬರಮಾಡಿಕೊಂಡ ಸ್ಥಳೀಯ ನಾಯಕರು (BJP)

ಬೆಂಗಳೂರು: ಕರ್ನಾಟಕ ವಿದಾನಸಭೆ ಚುನಾವಣೆ (Karnataka Assembly Election 2023) ಘೋಷಣೆಯನ್ನು ನಿರೀಕ್ಷಿಸುತ್ತಿದ್ದಾರೆ ರಾಜ್ಯದ ಜನತೆ. ಈ ನಡುವೆ, ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯ ಆರಂಭಿಸಿವೆ. ಅಧಿಕಾರ ಚುಕ್ಕಾಣಿ ಉಳಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದ್ದರೆ, ಕಾಂಗ್ರೆಸ್‌ ಮತ್ತೆ ಅಧಿಕಾರ ಪಡೆಯಲು ಪ್ರಯತ್ನ ನಡೆಸಿದೆ. ಜೆಡಿಎಸ್‌ ಕಿಂಗ್‌ ಮೇಕರ್‌ ಆಗುವ ಪ್ರಯತ್ನದಲ್ಲಿದ್ದು, ಮೈತ್ರಿ ಸರ್ಕಾರ ಬರಲಿ ಎಂದು ಆಶಿಸುತ್ತಿದೆ.

ಟ್ರೆಂಡಿಂಗ್​ ಸುದ್ದಿ

Prajwal Revanna Scandal: ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣ; ಜೆಡಿಎಸ್ ನಾಯಕ, ಮಾಜಿ ಸಚಿವ ಎಚ್‌ಡಿ ರೇವಣ್ಣ ಬಂಧನ

ಬೆಂಗಳೂರು ಸುತ್ತ ಮುತ್ತ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಅತ್ತ ಕರಾವಳಿ, ಉತ್ತರ ಕರ್ನಾಟಕದಲ್ಲಿ ಮತ್ತಷ್ಟು ಬಿಸಿಯ ಎಚ್ಚರಿಕೆ

SSLC Result 2024: ಎಸ್‌ಎಸ್‌ಎಲ್‌ಸಿ ರಿಸಲ್ಟ್ ಯಾವಾಗ? ಫಲಿತಾಂಶ ನೋಡುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ

Mangalore News: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಏರ್ಪೋರ್ಟ್‌ಗೆ ಬಿಗಿ ಭದ್ರತೆ, ವಾರದ ಹಿಂದಿನ ಪ್ರಕರಣ ತಡವಾಗಿ ಬೆಳಕಿಗೆ

ರಾಜ್ಯದ ವಿಧಾನಸಭಾ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನಿನ್ನೆ ರಾತ್ರಿಯೇ ಮಂಗಳೂರಿಗೆ ಆಗಮಿಸಿದ್ದಾರೆ. ಇಂದು ಮತ್ತು ನಾಳೆ ಅವರ ಪ್ರವಾಸ ರಾಜ್ಯದಲ್ಲಿ ನಿಗದಿ ಆಗಿದೆ. ಉಡುಪಿಯಲ್ಲಿ ನಡ್ಡಾ ಅವರು ಇಂದು ಮೂರು ಪ್ರಮುಖ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇಂದು ಅವರು ಉಡುಪಿಗೆ ಪ್ರಯಾಣಿಸಿದ್ದು, ಅಲ್ಲಿ ‍ಶ್ರೀಕೃಷ್ಣ ಮಠಕ್ಕೆ ತೆರಳಿ ದರ್ಶನದ ನಂತರ ಪರ್ಯಾಯ ಕೃಷ್ಣಾಪುರ ಮಠಾಧೀಶರಿಂದ ಆಶೀರ್ವಾದ ಪಡೆದು ಮುಂದುವರಿಯುವ ಯೋಜನೆಯಲ್ಲಿದ್ದಾರೆ.

ಸದ್ಯದ ಅವರ ಪ್ರವಾಸ ಪಟ್ಟಿ ಪ್ರಕಾರ, ಉಡುಪಿಯ ಎಂಜಿಎಂ ಮೈದಾನದಲ್ಲಿ ಜಿಲ್ಲೆಯ 1,111 ಬೂತ್ ಗಳ 14,000 ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಇಂದು ಮಧ್ಯಾಹ್ನ ಸಾರ್ವಜನಿಕ ಸಭೆ ಆಯೋಜನೆ ಆಗಿದೆ. ಇದರಲ್ಲಿ 20,000 ಜನ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಜೆ 4.45ಕ್ಕೆ ಅಡಕೆ ಬೆಳೆಗಾರರ ಸಮಾವೇಶ ನಡೆಯಲಿದೆ. ಇದಾದ ಬಳಿಕ ರಾತ್ರಿ 7.45ಕ್ಕೆ ಶೃಂಗೇರಿ ದೇವಸ್ಥಾನದಕ್ಕೆ ಭೇಟಿ ನಿಗದಿಯಾಗಿದೆ.

ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಪಕ್ಷದ ಉಡುಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ನಾಳೆ ಏನು ಕಾರ್ಯಕ್ರಮ?

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಫೆ.20ರ ರಾತ್ರಿ ಶೃಂಗೇರಿಯಲ್ಲೇ ಉಳಿಯಲಿದ್ದು, ಫೆ.21ಕ್ಕೆ ಚಿಕ್ಕಮಗಳೂರು ಪ್ರವಾಸ ಮುಂದುವರಿಸಲಿದ್ದಾರೆ. ಅಲ್ಲಿ ನಾಳೆ ಬೆಳಗ್ಗೆ ಪ್ರಬುದ್ಧರ ಸಭೆ ನಡೆಯಲಿದೆ. ಮಧ್ಯಾಹ್ನ ಹಾಸನ ಜಿಲ್ಲೆಯ ಬೇಲೂರಿನಲ್ಲಿ ಸಾರ್ವಜನಿಕ ಸಭೆ, ಸಂಜೆ ಬೂತ್‌ ಮಟ್ಟದ ಸಭೆ ನಿಗದಿಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪ್ರವಾಸದ ಕುರಿತು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೆ.20 ಮತ್ತು 21ರಂದು ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುವರು. ವಿವಿಧ ಸಭೆ, ಸಮಾವೇಶಗಳಲ್ಲಿ ಪಾಲ್ಗೊಂಡು ಬಳಿಕ ಫೆ.21ರ ರಾತ್ರಿ ಬೆಂಗಳೂರಿನಿಂದ ದೆಹಲಿಗೆ ಹಿಂತಿರುಗುವವರಿದ್ದಾರೆ ಎಂದು ಎನ್. ರವಿಕುಮಾರ್ ತಿಳಿಸಿದ್ದಾರೆ.

ಮೂರು ಜಿಲ್ಲೆಗಳಲ್ಲಿ ಪಕ್ಷದ ಬಲ ಹೇಗಿದೆ?

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪ್ರವಾಸ ಆಯೋಜನೆ ಆಗಿರುವ ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ 17 ವಿಧಾನ ಸಭಾ ಕ್ಷೇತ್ರಗಳಿವೆ. ಇಲ್ಲಿ, 10 ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 5 ಕ್ಷೇತ್ರದಲ್ಲಿ ಬಿಜೆಪಿ ಇದ್ದು ಮತ್ತೆ ಎಲ್ಲ ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆ ಹೊಂದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಐದು ಕ್ಷೇತ್ರಗಳ ಪೈಕಿ ನಾಲ್ಕಷ್ಟೇ ಬಿಜೆಪಿ ತೆಕ್ಕೆಯಲ್ಲಿದೆ. ಈ ನಾಲ್ಕನ್ನು ಉಳಿಸಿಕೊಂಡು ಐದನೇಯದನ್ನು ಗೆಲ್ಲುವುದು ಬಿಜೆಪಿ ರಣತಂತ್ರದಲ್ಲಿ ಅಡಗಿದೆ. ಇನ್ನು ಹಾಸನದಲ್ಲಿ ಏಳು ಕ್ಷೇತ್ರದಲ್ಲಿ ಒಂದು ಮಾತ್ರ ಬಿಜೆಪಿ ತೆಕ್ಕೆಯಲ್ಲಿದೆ. ಉಳಿದ ಆರು ಗೆಲ್ಲುವ ಬಹುದೊಡ್ಡ ಸವಾಲು ಬಿಜೆಪಿ ಮುಂದಿದೆ.

    ಹಂಚಿಕೊಳ್ಳಲು ಲೇಖನಗಳು