logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Psi Scam: ಜೈಲಿನಲ್ಲಿರುವ ಐಪಿಎಸ್‌ ಅಧಿಕಾರಿ ಮತ್ತು ಇತರರ ಮನೆ ಶೋಧ ನಡೆಸಿದ Ed ತಂಡ

Karnataka PSI scam: ಜೈಲಿನಲ್ಲಿರುವ ಐಪಿಎಸ್‌ ಅಧಿಕಾರಿ ಮತ್ತು ಇತರರ ಮನೆ ಶೋಧ ನಡೆಸಿದ ED ತಂಡ

HT Kannada Desk HT Kannada

Nov 12, 2022 12:51 PM IST

ಜಾರಿ ನಿರ್ದೇಶನಾಲಯ

  • Karnataka PSI scam: ರಾಜ್ಯದಲ್ಲಿ 2021ರಲ್ಲಿ ನಡೆದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆಗೆ ಜೈಲು ಪಾಲಾಗಿರುವ ಐಪಿಎಸ್ ಅಧಿಕಾರಿ ಅಮೃತ್ ಪಾಲ್, ಕೆಲವು ಸರ್ಕಾರಿ ಅಧಿಕಾರಿಗಳು ಮತ್ತು ಖಾಸಗಿ ವ್ಯಕ್ತಿಗಳ ಮನೆ, ಕಚೇರಿ ಆವರಣದಲ್ಲಿ ಶೋಧ ನಡೆಸಿರುವುದಾಗಿ ಜಾರಿ ನಿರ್ದೇಶನಾಲಯ (ED) ಶುಕ್ರವಾರ ತಿಳಿಸಿದೆ.

ಜಾರಿ ನಿರ್ದೇಶನಾಲಯ
ಜಾರಿ ನಿರ್ದೇಶನಾಲಯ

ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ 2021ರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆಗೆ ಜೈಲು ಪಾಲಾಗಿರುವ ಐಪಿಎಸ್ ಅಧಿಕಾರಿ ಅಮೃತ್ ಪಾಲ್, ಕೆಲವು ಸರ್ಕಾರಿ ಅಧಿಕಾರಿಗಳು ಮತ್ತು ಖಾಸಗಿ ವ್ಯಕ್ತಿಗಳ ಮನೆ, ಕಚೇರಿ ಆವರಣದಲ್ಲಿ ಶೋಧ ನಡೆಸಿರುವುದಾಗಿ ಜಾರಿ ನಿರ್ದೇಶನಾಲಯ (ED) ಶುಕ್ರವಾರ ತಿಳಿಸಿದೆ.

ಟ್ರೆಂಡಿಂಗ್​ ಸುದ್ದಿ

Ambulance Strike: ಅನಿರ್ಧಿಷ್ಟಾವಧಿ ಮುಷ್ಕರದಿಂದ ಹಿಂದೆ ಸರಿದ 108 ಆರೋಗ್ಯ ಕವಚ ಸಿಬ್ಬಂದಿ; ಸಚಿವರ ಮಾತುಕತೆ ಯಶಸ್ವಿ

ಕೈಮಗ್ಗ ಜವಳಿ ತಂತ್ರಜ್ಞಾನ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶ, ಯಾರಿಗೆ ಉಂಟು ಅವಕಾಶ

ಕರ್ನಾಟಕದ 2ನೇ ಹಂತದ ಮತದಾನ ಮುಕ್ತಾಯ, ಘರ್ಷಣೆ, ಬಿಸಿಲ ನಡುವೆ ಭಾರೀ ಹಕ್ಕು ಚಲಾವಣೆ

Bangalore News: ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಬಂಧನ; ಎಸ್‌ಐಟಿ ವಿಚಾರಣೆಗೆ ತಪ್ಪಿಸಿಕೊಳ್ಳುತ್ತಿದ್ದ ಆರೋಪಿ

ಬೆಂಗಳೂರು ಮತ್ತು ಪಂಜಾಬ್‌ನ ಪಟಿಯಾಲಾದಲ್ಲಿ ಗುರುವಾರ 11 ಕಟೆಗಳಲ್ಲ ಈ ಶೋಧ ಕಾರ್ಯ ನಡೆಸಲಾಗಿತ್ತು. ಶೋಧದ ವೇಳೆ ಅನೇಕ ಇಲೆಕ್ಟ್ರಾನಿಕ್‌ ಗ್ಯಾಜೆಟ್ಸ್‌, ದಾಖಲೆಗಳು ಪತ್ತೆಯಾಗಿದ್ದು ಅವೆಲ್ಲವನ್ನೂ ವಶಪಡಿಸಲಾಗಿದೆ. ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ ಅವರ ಮನೆಯ ಆವರಣವನ್ನೂ ಶೋಧಿಸಲಾಗಿದೆ ಎಂದು ಕೇಂದ್ರೀಯ ತನಿಖಾ ಏಜೆನ್ಸಿ ತಿಳಿಸಿದೆ.

ಕಳೆದ ವರ್ಷ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 545 ಸಬ್ ಇನ್ಸ್‌ಪೆಕ್ಟರ್‌ಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪೊಲೀಸ್ ನೇಮಕಾತಿ ಸೆಲ್ ಪರೀಕ್ಷೆಯನ್ನು ನಡೆಸಿದ್ದಕ್ಕೆ ಸಂಬಂಧಿಸಿದಂತೆ ಈ ಹಗರಣ ನಡೆದಿದೆ.

"ಫಲಿತಾಂಶಗಳು ಹೊರಬಿದ್ದ ನಂತರ, ಈ ಪರೀಕ್ಷೆಯಲ್ಲಿ ವಂಚನೆ ಮತ್ತು ಭ್ರಷ್ಟಾಚಾರದ ಆರೋಪಗಳಿವೆ, ಈ ಕಾರಣದಿಂದಾಗಿ ಕರ್ನಾಟಕ ಸರ್ಕಾರವು ಈ ಬಗ್ಗೆ ತನಿಖೆಗೆ ಆದೇಶಿಸಿದೆ" ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಇಡಿ ದೂರಿನ ಆಧಾರದಲ್ಲಿ ಬೆಂಗಳೂರು ಪೊಲೀಸರ ಸಿಐಡಿ ವಿಭಾಗವು ತನಿಖೆಯನ್ನು ವಹಿಸಿಕೊಂಡಿದೆ.

ಬೆಂಗಳೂರು ಮತ್ತು ಕಲಬುರಗಿಯಲ್ಲಿ ಅಭ್ಯರ್ಥಿಗಳು, ಮಧ್ಯವರ್ತಿಗಳು ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ಪೊಲೀಸರು ವಿವಿಧ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ನಂತರ ಪೊಲೀಸರು ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದರು ಮತ್ತು ಈ ಪ್ರಕರಣದಲ್ಲಿ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಪಾಲ್ ಮತ್ತು ಆಯ್ಕೆಯಾಗಲು ಹಣ ಪಾವತಿಸಿದ ಆಕಾಂಕ್ಷಿಗಳು ಸೇರಿದಂತೆ 100 ಕ್ಕೂ ಹೆಚ್ಚು ಜನರನ್ನು ಬಂಧಿಸಿದರು. ಆಪಾದಿತ ಅಕ್ರಮಗಳು ನಡೆದಾಗ ಅಮೃತ್‌ ಪೌಲ್‌ ಪೊಲೀಸ್ ನೇಮಕಾತಿ ಕೋಶದ ಮುಖ್ಯಸ್ಥರಾಗಿದ್ದರು, ಅದರ ಹೆಚ್ಚುವರಿ ಮಹಾನಿರ್ದೇಶಕ (ನೇಮಕಾತಿ)ರಾಗಿದ್ದರು.

ಬೆಂಗಳೂರಿನ ಕಾರ್ಲ್‌ಟನ್ ಹೌಸ್‌ನಲ್ಲಿರುವ ಸಿಐಡಿ ಪ್ರಧಾನ ಕಚೇರಿಯ ನೇಮಕಾತಿ ಸೆಲ್‌ನ ಸ್ಟ್ರಾಂಗ್ ರೂಂನಲ್ಲಿ ಒಎಂಆರ್ ಶೀಟ್‌ಗಳನ್ನು ಟ್ಯಾಂಪರಿಂಗ್ ಮಾಡಿರುವುದು ಸಿಐಡಿ ತನಿಖೆಯ ವೇಳೆ ಕಂಡುಬಂದಿದೆ.

“ನೇಮಕಾತಿ ಸೆಲ್‌ನ ಸ್ಟ್ರಾಂಗ್ ರೂಮ್‌ನ ಉಸ್ತುವಾರಿ ಪೊಲೀಸ್ ಅಧಿಕಾರಿಗಳು ಸಿಸಿಟಿವಿ ಕ್ಯಾಮೆರಾಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ ಮತ್ತು ಇಬ್ಬರು ಸಶಸ್ತ್ರ ಹೆಡ್ ಕಾನ್‌ಸ್ಟೆಬಲ್‌ಗಳು ಸ್ಟ್ರಾಂಗ್ ರೂಮ್‌ಗೆ ಪ್ರವೇಶಿಸಿ ಒಎಂಆರ್ ಶೀಟ್ ಅನ್ನು ತಿದ್ದಿದ್ದಾರೆ. ಪೊಲೀಸ್ ಅಧಿಕಾರಿಗಳು ಅಕ್ರಮವಾಗಿ ಆಯ್ಕೆ ಮಾಡಲು ಅನುಕೂಲವಾಗುವಂತೆ ಅಭ್ಯರ್ಥಿಗಳಿಂದ ಹಣ ಸಂಗ್ರಹಿಸಿದ್ದಾರೆ. ," ಎಂದು ಸಂಸ್ಥೆ ಹೇಳಿದೆ.

545 ಹುದ್ದೆಗಳನ್ನು ಭರ್ತಿ ಮಾಡಲು 2021 ರ ಅಕ್ಟೋಬರ್‌ನಲ್ಲಿ ಪೊಲೀಸ್ ಸಬ್-ಇನ್‌ಸ್ಪೆಕ್ಟರ್ ನೇಮಕಾತಿ ಅಭಿಯಾನವನ್ನು ಪ್ರಾರಂಭಿಸಲಾಯಿತು ಮತ್ತು 54,041 ಜನರು ಪರೀಕ್ಷೆಯನ್ನು ಬರೆದಿದ್ದರು.

    ಹಂಚಿಕೊಳ್ಳಲು ಲೇಖನಗಳು