logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಭಾರೀ ಮಳೆ ಕಾರಣಕ್ಕೆ ಕೊಡಗು, ದಕ್ಷಿಣ ಕನ್ನಡ, ಉತ್ತರಕನ್ನಡದಲ್ಲಿ ಶಾಲೆ, ಕಾಲೇಜುಗಳಿಗೆ ಸೋಮವಾರ ರಜೆ

Karnataka Rains: ಭಾರೀ ಮಳೆ ಕಾರಣಕ್ಕೆ ಕೊಡಗು, ದಕ್ಷಿಣ ಕನ್ನಡ, ಉತ್ತರಕನ್ನಡದಲ್ಲಿ ಶಾಲೆ, ಕಾಲೇಜುಗಳಿಗೆ ಸೋಮವಾರ ರಜೆ

Umesha Bhatta P H HT Kannada

Jul 15, 2024 08:57 AM IST

google News

ಕೊಡಗಿನಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ,

    • Kodagu Dakshin Kannada Rains  ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಕಾರಣಕ್ಕೆ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.
    • ವರದಿ: ಹರೀಶ ಮಾಂಬಾಡಿ, ಮಂಗಳೂರು
ಕೊಡಗಿನಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ,
ಕೊಡಗಿನಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ,

ಮಂಗಳೂರು: ಕರಾವಳಿ ಹಾಗೂ ಕೊಡಗು ಭಾಗದಲ್ಲಿ ಸೋಮವಾರ ಭಾರೀ ಮಳೆ ಮುನ್ಸೂಚನೆ ಇರುವುದರಿಂದ ಎರಡೂ ಜಿಲ್ಲೆಗಳಲ್ಲಿ ಸೋಮವಾರ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿಯಿಂದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಇರಲಿದೆ. ಈ ಕುರಿತು ಜಿಲ್ಲೆಯ ಮಳೆಯ ಸ್ಥಿತಿಗತಿ ಮಾಹಿತಿ ಪಡೆದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಲಿನ್‌ ಹಾಗೂ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ರಜೆ ಆದೇಶ ಹೊರಡಿಸಿದ್ದಾರೆ. ಸೋಮವಾರದ ಪರಿಸ್ಥಿತಿ ನೋಡಿಕೊಂಡು ಮಂಗಳವಾರದ ರಜೆ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ ಮಳೆ

ವ್ಯಾಪಕವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 15ರಂದು ರಜೆಯನ್ನು ಘೋಷಿಸಲಾಗಿದೆ.

ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ಹೊರಡಿಸಿದ್ದಾರೆ. ಪದವಿಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂಥ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿ ಕುರಿತು ಗಮನಹರಿಸಬೇಕು ಎಂದು ಅವರು ಸೂಚನೆಯಲ್ಲಿ ತಿಳಿಸಿದ್ದಾರೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವ ಕಾರಣ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ ಸೂಚನೆ ಪಾಲಿಸಬೇಕು ಎಂದು ಸೂಚಿಸಿದ್ದಾರೆ.

ಕೊಡಗಿನಲ್ಲೂ ಮಳೆ

ಕೊಡಗು ಭಾಗದ ಹಲವು ಕಡೆಗಳಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಮಡಿಕೇರಿ ನಗರದಲ್ಲೂ ಬೀಸಿದ ಗಾಳಿಗೆ ಮರಗಳೂ ಧರಾಶಾಹಿಯಾಗಿವೆ. ಭಾರೀ ಮಳೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಿವೆ. ವಿದ್ಯುತ್‌ ಸಂಪರ್ಕವೂ ಕಡಿತವಾಗಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ಕಂಪೆನಿ ಅಧಿಕಾರಿಗಳು ಹರಸಾಹಸ ಪಡುವಂತಾಗಿದೆ. ಇದರೊಟ್ಟಿಗೆ ಭಾಗಮಂಡಲ ಹಾಗೂ ತಲಕಾವೇರಿ ನಡುವೆಯೂ ಭಾರೀ ಮಳೆಗೆ ಮರಗಳು ಉರುಳಿ ಬಿದ್ದಿರುವುದು ಕಂಡು ಬಂದಿದೆ.

ಮಳೆಯ ಕಾರಣದಿಂದಾಗಿ ಕೊಡಗಿನಲ್ಲಿ ಸೋಮವಾರದ ಮಟ್ಟಿಗೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉತ್ತರ ಕನ್ನಡದಲ್ಲೂ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿರುವುದರಿಂದ ಮುಂಡಗೋಡ ಹಾಗೂ ಹಳಿಯಾಳ ತಾಲ್ಲೂಕು ಹೊರತುಪಡಿಸಿ ಜಿಲ್ಲೆಯ ಕಾರವಾರ, ಅಂಕೋಲಾ, ಶಿರಸಿ, ಯಲ್ಲಾಪುರ, ಸಿದ್ದಾಪುರ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ ತಾಲ್ಲೂಕುಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಗಂಗೂಬಾಯಿ ರಮೇಶ ಮಾನಕರ ಆದೇಶ ಹೊರಡಿಸಿದ್ದಾರೆ. ಪರಿಸ್ಥಿತಿ ಗಂಭೀರ ಇರುವ ಕಡೆಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.

ವರದಿ: ಹರೀಶ ಮಾಂಬಾಡಿ, ಮಂಗಳೂರು

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ