logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗುಮಿಂಚು ಸಹಿತ ಮಳೆ, ರಾಜ್ಯದ ವಿವಿಧ ಜಿಲ್ಲೆಗಳ ಹವಾಮಾನ ವರದಿ

Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗುಮಿಂಚು ಸಹಿತ ಮಳೆ, ರಾಜ್ಯದ ವಿವಿಧ ಜಿಲ್ಲೆಗಳ ಹವಾಮಾನ ವರದಿ

Praveen Chandra B HT Kannada

Apr 25, 2023 06:08 AM IST

Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗುಮಿಂಚು ಸಹಿತ ಮಳೆ, ರಾಜ್ಯದ ವಿವಿಧ ಜಿಲ್ಲೆಗಳ ಹವಾಮಾನ ವರದಿ

    • ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಪ್ರಖರ ಬಿಸಿಲಿನ ನಡುವೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ಕಾದ ಭೂಮಿಗೆ ತಂಪೆರೆಯುತ್ತಿದೆ. ಕರ್ನಾಟಕ ಹವಾಮಾನ ಇಲಾಖೆ (Met Centre Bengaluru - IMD) ಮುಂದಿನ 48 ಗಂಟೆಗಳ ಹವಾಮಾನ ಮುನ್ಸೂಚನೆ (Karnataka Weather Forecast) ಪ್ರಕಟಿಸಿದೆ.
Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗುಮಿಂಚು ಸಹಿತ ಮಳೆ, ರಾಜ್ಯದ ವಿವಿಧ ಜಿಲ್ಲೆಗಳ ಹವಾಮಾನ ವರದಿ
Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗುಮಿಂಚು ಸಹಿತ ಮಳೆ, ರಾಜ್ಯದ ವಿವಿಧ ಜಿಲ್ಲೆಗಳ ಹವಾಮಾನ ವರದಿ (Yogendra Kumar)

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಪ್ರಖರ ಬಿಸಿಲಿನ ನಡುವೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ಕಾದ ಭೂಮಿಗೆ ತಂಪೆರೆಯುತ್ತಿದೆ. ಕರ್ನಾಟಕ ಹವಾಮಾನ ಇಲಾಖೆ (Met Centre Bengaluru - IMD) ಮುಂದಿನ 48 ಗಂಟೆಗಳ ಹವಾಮಾನ ಮುನ್ಸೂಚನೆ (Karnataka Weather Forecast) ಪ್ರಕಟಿಸಿದ್ದು, ವಿಶೇಷವಾಗಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಹಗುರ/ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಏಪ್ರಿಲ್‌ 29ರವರೆಗೆ ಅಲ್ಲಲ್ಲಿ ಅನಿರೀಕ್ಷಿತ ಮಳೆಯಾಗುವ ಎಚ್ಚರಿಕೆಯನ್ನೂ ನೀಡಿದೆ. ಇದೇ ರೀತಿ ಕೆಲವು ಕಡೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

Belagavi News: ಚಾಲುಕ್ಯ ರೈಲಿನಲ್ಲಿ ಟಿಕೆಟ್‌ ತಪಾಸಣೆ ವೇಳೆ ಇರಿದ ಪ್ರಯಾಣಿಕ. ಸಿಬ್ಬಂದಿ ಸಾವು, ಆರೋಪಿ ಪರಾರಿ

Bangalore Crime: ಗೃಹ ಸಚಿವರ ಆಪ್ತ ಎಂದು ಹೇಳಿಕೊಂಡು ಬೆಂಗಳೂರಿನಲ್ಲಿ ಮಹಿಳೆಯೊಬ್ಬರಿಗೆ 1 ಕೋಟಿ ರೂ. ವಂಚಿಸಿದ್ದ ಯುವಕ ಬಂಧನ

Hassan Scandal: ರೇವಣ್ಣಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಒಂದು ದಿನಕ್ಕೆ ಮಾತ್ರ ಜಾಮೀನು, ಇಂದು ವಿಚಾರಣೆ

Forest Tales: ಮಳೆಗಾಲ ಬಂತು ಒಂದಾದರೂ ಸಸಿ ನೆಡೋಣ, ಬಿಸಿಲು ಬರದ ಬವಣೆಗೆ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸೋಣ ಬನ್ನಿ

ಹವಾಮಾನ ಇಲಾಖೆಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಿರುವ ಮುನ್ಸೂಚನೆಯಲ್ಲಿ ಇಂದು ದಕ್ಷಿಣ ಒಳನಾಡು ಮಾತ್ರವಲ್ಲದೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. .

ಕರಾವಳಿ ಹವಾಮಾನ ಮುನ್ಸೂಚನೆ

ನಿನ್ನೆಯಂತೆ ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಒಣ ಹವೆ ಮುಂದುವರೆಯಲಿದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ವಾಡಿಕೆಗಿಂತ 2ರಿಂದ 3 ಡಿಗ್ರಿ ಹೆಚ್ಚಿರಲಿದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಏಪ್ರಿಲ್‌ 28 ಮತ್ತು 29ರಂದು ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.

ಉತ್ತರ ಒಳನಾಡು ಹವಾಮಾನ ವರದಿ

ಬಾಗಲಕೋಟೆ , ಬೀದರ್‌ ಮತ್ತು ಬೆಳಗಾವಿಯಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿಯಲ್ಲಿ ಒಣಹವೆ ಇರಲಿದೆ. ಕಲಬುರಗಿ, ಕೊಪ್ಪಳ, ರಾಯಚೂರಿನಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆಯಾಗಲಿದೆ. ವಿಜಯಪುರದಲ್ಲಿ ಒಣ ಹವೆ ಮತ್ತು ಯಾದಗಿರಿಯಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆಯಾಗಲಿದೆ. ಉತ್ತರ ಒಳನಾಡಿನ ಅಲ್ಲಲ್ಲಿ ಏಪ್ರಿಲ್‌ 29ರವರೆಗೆ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು ವರದಿ

ಬಳ್ಳಾರಿಯಲ್ಲಿ ಒಣಹವೆ ಇರಲಿದ್ದು, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರಗಳಲ್ಲಿ ಗುಡುಗು ಮಿಂಚು ಸಹಿತ ಹಗುರ/ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಹಗುರ ಸಾಧಾರಣ ಮಳೆಯಾಗಲಿದೆ. ವಿಜಯನಗರಗಳಲ್ಲಿ ಒಣಹವೆ ಮುಂದುವರೆಯಲಿದೆ. ಏಪ್ರಿಲ್‌ 29ರವರೆಗೆ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಉಷ್ಣಾಂಶವು 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.

ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆಯಲಿದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾನುವಾರ ಮತ್ತು ಸೋಮವಾರ ರಾಜ್ಯದ ವಿವಿಧೆಡೆ ಮಳೆಯಾಗಿದೆ. ಇಂದು ಮತ್ತು ನಾಳೆಯೂ ಅನಿರೀಕ್ಷಿತ ಮಳೆಯಾಗುವ ಸಾಧ್ಯತೆಯಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ