logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಕರ್ನಾಟಕದ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆ, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹವಾಮಾನ ವರದಿ

Karnataka Rains: ಕರ್ನಾಟಕದ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆ, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹವಾಮಾನ ವರದಿ

Praveen Chandra B HT Kannada

Apr 21, 2023 06:09 AM IST

Karnataka Rains: ಕರ್ನಾಟಕದ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆ, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹವಾಮಾನ ವರದಿ

    • ಕರ್ನಾಟಕ ಹವಾಮಾನ ಇಲಾಖೆ (Met Centre Bengaluru - IMD) ಮುಂದಿನ 48 ಗಂಟೆಗಳ ಹವಾಮಾನ ಮುನ್ಸೂಚನೆ (Karnataka Weather Forecast) ನೀಡಿದ್ದು, ಬೆಂಗಳೂರು (Bengaluru Rains) ಮಂಗಳೂರು ಸೇರಿದಂತೆ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ/ಹಗುರ ಮಳೆಯಾಗುವ ಮುನ್ಸೂಚನೆ ನೀಡಿದೆ.
Karnataka Rains: ಕರ್ನಾಟಕದ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆ, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹವಾಮಾನ ವರದಿ
Karnataka Rains: ಕರ್ನಾಟಕದ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆ, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹವಾಮಾನ ವರದಿ (Vipin Kumar/ HT)

ಬೆಂಗಳೂರು: ಕರ್ನಾಟಕ ಹವಾಮಾನ ಇಲಾಖೆ (Met Centre Bengaluru - IMD) ಮುಂದಿನ 48 ಗಂಟೆಗಳ ಹವಾಮಾನ ಮುನ್ಸೂಚನೆ (Karnataka Weather Forecast) ನೀಡಿದ್ದು, ಬೆಂಗಳೂರು (Bengaluru Rains) ಮಂಗಳೂರು ಸೇರಿದಂತೆ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ/ಹಗುರ ಮಳೆಯಾಗುವ ಮುನ್ಸೂಚನೆ ನೀಡಿದೆ. ಇಂದು ಶುಕ್ರವಾರ ರಾಜ್ಯದ ಕೆಲವು ಕಡೆಗಳಲ್ಲಿ ಒಣಹವೆ, ಪ್ರಖರ ಬಿಸಿಲು (severe heat wave) ಮುಂದುವರೆಯಲಿದೆ. ಗುರುವಾರ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕೆಲವು ಕಡೆ ಚುನಾವಣಾ ಸಮಾವೇಶಗಳಲ್ಲಿ ಅನಿರೀಕ್ಷಿತ ಮಳೆಯು ಬಿಸಿಲಲ್ಲಿ ಬೆಂದ ಕಾರ್ಯಕರ್ತರನ್ನು ತಂಪಾಗಿಸಿದೆ. ಬೆಳಗಾವಿಯಲ್ಲಿ (Belagavi Rain) ಗಾಳಿಸಹಿತ ಮತ್ತು ಗದಗದಲ್ಲಿ ಗುಡುಗುಸಹಿತ (Gadag Rain) ಮಳೆಯಾಗಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

ದೊಡ್ಡಬಳ್ಳಾಪುರ: ಹೇಮಂತಗೌಡ ಹತ್ಯೆ ಪ್ರಕರಣದ 2ನೇ ಆರೋಪಿ ಬಂಧನ, ಪೊಲೀಸರ ಮೇಲೆ ಹಲ್ಲೆಗೆತ್ನಿಸಿದ್ದ ಕಾರಣ ಕಾಲಿಗೆ ಗುಂಡೇಟು

ಮಂಗಳೂರು ವಿಮಾನ ನಿಲ್ಧಾಣಕ್ಕೆ ಬಂದು ಗೊಂದಲಕ್ಕೆ ಒಳಗಾದ ಮಹಿಳೆ, ನೆರವಾದ ಭದ್ರತಾ ಸಿಬ್ಬಂದಿ, ನಾಪತ್ತೆ ಪ್ರಕರಣ ಸುಖಾಂತ್ಯ

ದಕ್ಷಿಣ ಕನ್ನಡದ ಮಂಗಳೂರು, ಪುತ್ತೂರಲ್ಲಿ ಹಲಸು, ಮಾವು ಸೇರಿ ವಿವಿಧ ಹಣ್ಣುಗಳ ಮೇಳ, ದಿನಾಂಕ ಮತ್ತು ಇತರೆ ವಿವರ

ಬೆಂಗಳೂರು: ಕೊನೆಗೂ ತೆರಿಗೆ ಕಟ್ಟಲು ಒಪ್ಪಿಕೊಂಡ ಮಂತ್ರಿ ಮಾಲ್; ಬೀಗ ತೆಗೆಯುವಂತೆ ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ

ಹವಾಮಾನ ಇಲಾಖೆಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಿರುವ ಮುನ್ಸೂಚನೆಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಒಣಹವೆ ಮತ್ತು ಹಗುರ ಮಳೆ ಇರಲಿದೆ ಎಂದು ಹೇಳಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಹವಾಮಾನ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಹಗರು ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕನ್ನಡದಲ್ಲಿ ಒಣ ಹವೆ ಮುಂದುವರೆಯಲಿದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ವಾಡಿಕೆಗಿಂತ 2ರಿಂದ 3 ಡಿಗ್ರಿ ಹೆಚ್ಚಿರಲಿದೆ.

ಉತ್ತರ ಒಳನಾಡು ಹವಾಮಾನ ವರದಿ

ಬಾಗಲಕೋಟೆಯಲ್ಲಿ ಒಣ ಹವೆ ಇರಲಿದ್ದು, ಬೆಳಗಾವಿ, ಬೀದರ್‌ನಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿಯಲ್ಲಿ ಒಣಹವೆ ಇರಲಿದೆ. ಕಲಬುರಗಿ, ರಾಯಚೂರು, ಯಾದಗಿರಿಗಳಲ್ಲಿ ಹಗುರ ಮಳೆ, ವಿಜಯಪುರ,ಕೊಪ್ಪಳ ಮತ್ತು ಹಾವೇರಿಯಲ್ಲಿ ಒಣಹವೆಯ ಮುನ್ಸೂಚನೆಯನ್ನು ನೀಡಲಾಗಿದೆ. ಉತ್ತರ ಒಳನಾಡಿನ ಅಲ್ಲಲ್ಲಿ ಏಪ್ರಿಲ್‌ 24ರವರೆಗೆ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಉಷ್ಣಾಂಶವು 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು ವರದಿ

ಬಳ್ಳಾರಿಯಲ್ಲಿ ಒಣಹವೆ ಇರಲಿದ್ದು, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರಗಳಲ್ಲಿ ಉಗುಡುಗು ಮಿಂಚು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಬಳ್ಳಾಪುರದಲ್ಲಿ ಒಣ ಹವೆ ಇರಲಿದೆ. ಚಿಕ್ಕಮಗಳೂರಿನಲ್ಲಿ ಹಗುರ/ ಸಾಧಾರಣ ಮಳೆಯ ಜತೆಗೆ ಗುಡುಗು ಮಿಂಚಿನ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಚಿತ್ರದುರ್ಗ, ದಾವಣಗೆರೆ, ಹಾಸನದಲ್ಲಿ ಒಣಹವೆ ಇರಲಿದೆ. ಕೊಡಗಿನಲ್ಲಿ ಗುಡುಗು ಮಿಂಚು ಸಹಿತ ಹಗುರ/ ಸಾಧಾರಣ ಮಳೆಯಾಗಲಿದೆ. ಕೋಲಾರ, ಮಂಡ್ಯ, ಮೈಸೂರಿನಲ್ಲಿಯೂ ಗುಡುಗು ಮಿಂಚು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಗಳಲ್ಲಿ ಒಣಹವೆ ಮುಂದುವರೆಯಲಿದೆ. ಏಪ್ರಿಲ್‌ 24ರವರೆಗೆ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಉಷ್ಣಾಂಶವು 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.

ಗುರುವಾರ ಗದಗ‌ ಜಿಲ್ಲೆಯ ಹಲವಡೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಶಿರಹಟ್ಟಿ ಪಟ್ಟಣದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಮಳೆಯಾಗಿದೆ. ಬೆಳಗಾವಿ ಜಿಲ್ಲೆಗೂ ವರುಣ ಆಗಮಿಸಿದ್ದು, ಮಳೆಯ ಸಿಂಚನವಾಗಿದೆ. ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದ ಸುತ್ತಮುತ್ತ ಗಾಳಿ ಸಹಿತ ಮಳೆಯಾಗಿದೆ. ಹಾಸನದಲ್ಲೂ ನಿನ್ನೆ ಮಳೆಯಾಗಿದೆ. ಜೆಡಿಎಸ್‌ ರೋಡ್‌ ಶೋದಲ್ಲಿ ಕಾರ್ಯಕರ್ತರು ಮತ್ತು ರಾಜಕೀಯ ಮುಖಂಡರು ಮಳೆಗೆ ಒದ್ದೆಯಾಗಿದ್ದಾರೆ. ರಾಜ್ಯದ ವಿವಿಧೆಡೆ ಏಪ್ರಿಲ್‌ 24ರವರೆಗೆ ಮಳೆಯ ಸಿಂಚನ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರೈತರು ಆಕಾಶ ನೋಡುವಂತಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ