logo
ಕನ್ನಡ ಸುದ್ದಿ  /  Karnataka  /  Karnataka Rains Cm Siddaramiah Suggests Officials To Prepare For Monsson Rains Karnataka Weather News In Kannada Rst

Karnataka Rains: ಶೀಘ್ರದಲ್ಲೇ ಆರಂಭವಾಗಲಿದೆ ಮುಂಗಾರು ಮಳೆ; ಮುಂಜಾಗ್ರತೆ ವಹಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

HT Kannada Desk HT Kannada

May 23, 2023 04:51 PM IST

ಸಿಎಂ ಸಿದ್ದರಾಮಯ್ಯ ಸಂವಾದ

    • CM Siddaramiah: ಮುಂಗಾರು ಮಳೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ಹೊರಡಿಸಿದ್ದಾರೆ. ಅಲ್ಲದೆ ಬೆಳೆ ರಕ್ಷಣೆಯ ಕುರಿತು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಹೀಗಿವೆ ನೋಡಿ ಸಿದ್ದರಾಮಯ್ಯ ಹೊರಡಿಸಿದ ಸಲಹೆ, ಸೂಚನೆಗಳು. 
ಸಿಎಂ ಸಿದ್ದರಾಮಯ್ಯ ಸಂವಾದ
ಸಿಎಂ ಸಿದ್ದರಾಮಯ್ಯ ಸಂವಾದ

ಬೆಂಗಳೂರು: ʼಮುಂಗಾರು ಶುರುವಾಗ್ತಿದೆ. ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ. ನಾವು ಕೇವಲ ಸೂಚನೆ ಕೊಡುವುದಿಲ್ಲ. ಎಚ್ಚರಿಕೆ ನೀಡುತ್ತಿದ್ದೇನೆ, ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ, ಕಠಿಣ ಕ್ರಮಕ್ಕೆ ಸಿದ್ಧರಾಗಿʼ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬಸವಳಿದ ಬಿಎಂಟಿಸಿ: ಬೆಂಗಳೂರು ನಾಗರಿಕರಿಗೆ ಬಿಎಂಟಿಸಿ ಬಸ್‌ಗಿಂತಲೂ ಮೆಟ್ರೋ ಇಷ್ಟ; ಖಾಸಗಿ ವಾಹನಗಳ ಸಂಖ್ಯಾಸ್ಫೋಟ, ಸಾರಿಗೆ ಬಸ್‌ಗಳಿಗೆ ಸಂಕಷ್ಟ

Vijayapura News: ವಿಜಯಪುರ ಜಿಲ್ಲೆಯ ಲಚ್ಯಾಣ ಜಾತ್ರೆಯ ರಥದಡಿ ಸಿಲುಕಿ ಇಬ್ಬರು ಭಕ್ತರ ಸಾವು

Bangalore News: ಬೆಂಗಳೂರಲ್ಲಿ ಅನಧಿಕೃತ ಬಡಾವಣೆಗಳ ಅಬ್ಬರ, ನಿವೇಶನ ಖರೀದಿಸುವಾಗ ಇರಲಿ ಎಚ್ಚರ

Arecanut News: ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘಕ್ಕೆ ಯುವ ಮುಖ, ಹೊಸ ಅಧ್ಯಕ್ಷರ ಯೋಜನೆಗಳು ಏನೇನು?

ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ವಿಡಿಯೊ ಸಂವಾದ ನಡೆಸಿದ ಸಿದ್ಧರಾಮಯ್ಯ ಕೆಲವು ಸಲಹೆ, ಸೂಚನೆಗಳನ್ನು ಹಂಚಿಕೊಂಡಿದ್ದರು. ಅಲ್ಲದೆ ಮುಂಗಾರು ಮಳೆಗೆ ಸಂಬಂಧಿಸಿದ ಮುಂಜಾಗ್ರತಾ ಕ್ರಮಗಳ ಕುರಿತು ಎಚ್ಚರಿಕೆ ನೀಡಿದ್ದಾರೆ.

ಹೀಗಿದೆ ಮುಖ್ಯಮಂತ್ರಿಗಳ ಸೂಚನೆಗಳು

1. ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಆರಂಭವಾಗಿದ್ದು, ಬಿತ್ತನೆ ಕೆಲಸಗಳು ನಡೆಯುತ್ತಿವೆ. ಜೂನ್‌ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್‌ ತಿಂಗಳಿನಲ್ಲಿಯೇ ಪ್ರಿ-ಮಾನ್ಸೂನ್‌ ಮಳೆ ಪ್ರಾರಂಭವಾಗಿದೆ. ಭಾರಿ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡು, ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.

2. ನಿಮ್ಮ ಬಳಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ, ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು.

3. ಮಳೆ ಬಂದು ಮರಗಳು ಬಿದ್ದು ಹೋದರೆ, ಕೂಡಲೇ ತೆರವುಗೊಳಿಸಬೇಕು. ವಿದ್ಯುಚ್ಚಕ್ತಿ ಕಂಬಗಳು ಬಿದ್ದು ಹೋದರೆ, ಟ್ರಾನ್‌ಫಾರ್ಮರ್‌ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ.

4. ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್‌ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ.

5. ಯಾವುದೇ ಕಾರಣಕ್ಕೆ ಕರ್ತವ್ಯ ಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೆ ಲೋಪ ಆಗಬಾರದು.

6. ಲೋಪ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನ ಸರ್ಕಾರದಿಂದ ಬದಲಾವಣೆ ಬಯಸಿದ್ದಾರೆ. ಸರ್ಕಾರಕ್ಕೆ ಹೊಸ ಇಮೇಜ್‌ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬಂದಿದೆ ಎಂಬ ಸಂದೇಶ ಹೋಗಬೇಕು.

7. ಜಿಲ್ಲಾಧಿಕಾರಿಗಳು, ಸಿಇಓಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಿ. ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು.

8. ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ- ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು.

ಈ ರೀತಿ ಸಿಎಂ ಸಿದ್ಧರಾಮಯ್ಯ ಎಂಟು ಮುಂಗಾರು ಮಳೆಗೆ ಸಂಬಂಧಿಸಿ ಎಂಟು ಮನ್ಸೂಚನೆಗಳನ್ನು ನೀಡಿದ್ದಾರೆ. ಅಲ್ಲದೆ ಕರ್ತವ್ಯ ಲೋಪ ಎಸಗುವ ಅಧಿಕಾರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು