logo
ಕನ್ನಡ ಸುದ್ದಿ  /  ಕರ್ನಾಟಕ  /  Shiradi Ghat: ಶಿರಾಡಿ ಘಾಟ್ ನ ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರಕ್ಕೆ ಅಡಚಣೆ, ಮಾಣಿಯಲ್ಲೇ ತಿರುವಿಗೆ ಸೂಚನೆ

Shiradi Ghat: ಶಿರಾಡಿ ಘಾಟ್ ನ ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರಕ್ಕೆ ಅಡಚಣೆ, ಮಾಣಿಯಲ್ಲೇ ತಿರುವಿಗೆ ಸೂಚನೆ

Umesha Bhatta P H HT Kannada

Jul 18, 2024 04:47 PM IST

google News

ಬೆಂಗಳೂರು ಮಂಗಳೂರು ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಭೂ ಕುಸಿತ ಕಂಡು ಬಂದಿದೆ.

    • Dakshin Kannada News ಭಾರೀ ಮಳೆ ಪರಿಣಾಮದಿಂದಾಗಿ ಬೆಂಗಳೂರು ಮಂಗಳೂರು ಹೆದ್ದಾರಿಯ( Bangalore Mangalore Highway) ಶಿರಾಡಿ ಘಾಟ್‌ನಲ್ಲಿ ಭೂಕುಸಿತ  ಉಂಟಾಗಿ ಸಂಚಾರ ವ್ಯತ್ಯಯವಾಗಿದೆ.
    • ವರದಿ: ಹರೀಶ ಮಾಂಬಾಡಿ, ಮಂಗಳೂರು
ಬೆಂಗಳೂರು ಮಂಗಳೂರು ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಭೂ ಕುಸಿತ ಕಂಡು ಬಂದಿದೆ.
ಬೆಂಗಳೂರು ಮಂಗಳೂರು ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಭೂ ಕುಸಿತ ಕಂಡು ಬಂದಿದೆ.

ಮಂಗಳೂರು: ಮಂಗಳೂರು ಬೆಂಗಳೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಘನ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿದೆ. ಗುರುವಾರ ನಸುಕಿನ ಜಾವ ನಡೆದ ಘಟನೆಯೊಂದರಲ್ಲಿ ಭೂಕುಸಿತದಿಂದ ಮಾರುತಿ ಓಮಿನಿ ಕಾರು ಜಖಂಗೊಂಡಿದ್ದು, ಅದೃಷ್ಟವಶಾತ್‌ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಬರುವ ಸಂದರ್ಭ ದೊಡ್ಡತಪ್ಪಲು ಸಮೀಪ ಭೂ ಕುಸಿತ ಉಂಟಾಗಿತ್ತು. ಈ ಸಂದರ್ಭ ಮಣ್ಣು ಕಾರಿನ ಮೇಲೆ ಬಿದ್ದಿದ್ದು ಕಾರು ಮಣ್ಣಿನ ರಾಶಿಯಲ್ಲಿ ಸಿಲುಕಿ ಸಂಪೂರ್ಣವಾಗಿ ಕುಸಿದಿದೆ.

ಈ ಸಂದರ್ಭ ಹೆದ್ದಾರಿ ಕಾಮಗಾರಿ ಗುತ್ತಿಗೆದಾರ ಕಂಪನಿಯ ಬಿಹಾರ ಮೂಲದ ಕಾರ್ಮಿಕಕರು ಅಖಿಲೇಶ್, ಶರತ್ ಅವರನ್ನು ವಾಹನದಿಂದ ಹೊರಗೆ ಕರೆತಂದು ಅವರ ಪ್ರಾಣ ಉಳಿಸಿದ್ದಾರೆ. ಅಖಿಲೇಶ್ ಅವರು ಸಕಲೇಶಪುರ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಶರತ್ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭಾರೀ ಮಳೆ ಕಾರಣದಿಂದ ಶಿರಾಡಿ ಘಾಟಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ಕೆಲವರಿಗೆ ಗಾಯವೂ ಆಗಿದ್ದು ಈ ಭಾಗದಲ್ಲಿ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಅಲ್ಲಲ್ಲ ಕಾಮಗಾರಿಯೂ ನಡೆಯುತ್ತಿರುವುದರಿಂದ ಅಡಚಣೆಯೂ ಆಗುತ್ತಿದೆ ಎನ್ನುವುದು ಅಧಿಕಾರಿಗಳ ವಿವರಣೆ.

ಎಲ್ಲೆಡೆ ಟ್ರಾಫಿಕ್ ಜಾಮ್

ಭೂ ಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ 5-5 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು, ಹೆದ್ದಾರಿ ಕಾಮಗಾರಿಯವರು ಮಣ್ಣು ತೆರವುಗೊಳಿಸು ಕಾರ್ಯದಲ್ಲಿ ನಿರತರಾದರು. ಆದರೆ ಮಣ್ಣಿನ ಕುಸಿತ ನಡೆಯುತ್ತಲೇ ಇದೆ. ಸದ್ಯದ ಮಟ್ಟಿಗೆ ಏಕಮುಖ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಕೆ

ಶಿರಾಡಿ ಘಾಟ್ ನಲ್ಲಿ ಗುಡ್ಡೆ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನ ಸವಾರತು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದಾರೆ. ಪೊಲೀಸರು ಆ ದಾರಿಯಾಗಿ‌ ಬರುವ ವಾಹನ ಸವಾರರಿಗೆ ಮಾಹಿತಿ ನೀಡಿ ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸುತ್ತಿದ್ದಾರೆ. ಈ ಹಿನ್ನೆಲೆ ಸಕಲೇಶಪುರ ತೆರಳಿ ಹಾಸನ ಮೂಲಕ ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಸಕಲೇಶಪುರದ ಪರಿಸರದ ಹಲವೆಡೆ ಭೂಕುಸಿತ

ಭಾರಿ ಮಳೆಗೆ ಕೊಲ್ಲಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಭೂಕುಸಿತ ಉಂಟಾಗಿತ್ತು. ಇಲ್ಲಿ ಕಾಂಕ್ರೀಟ್ ಕ್ರಾಶ್ ಬ್ಯಾರಿಯರ್ ಕುಸಿದಿದ್ದು, ಸುಮಾರು 25 ಅಡಿಗೂ ಹೆಚ್ಚು ಭಾಗದಲ್ಲಿ ಮಣ್ಣಿನಿಂದ ನಿರ್ಮಿಸಿರುವ ರಸ್ತೆಗೆ ಸೂಕ್ತ ತಡೆಗೋಡೆ ಇಲ್ಲದ ಕಾರಣ ಕೊಚ್ಚಿಹೋಗುತ್ತಿದೆ ಎನ್ನಲಾಗಿದೆ.

ದೋಣಿಗಲ್ ಬಳಿ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಚತುಷ್ಪಥಕ್ಕೆ ನಿರ್ಮಾಣ ಮಾಡಿರುವ ತಡೆಗೋಡೆ ಕೆಸಗಾನಹಳ್ಳಿ ಬಳಿ ಕುಸಿದಿದೆ.

(ವರದಿ: ಹರೀಶ ಮಾಂಬಾಡಿ, ಮಂಗಳೂರು)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ