logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಬೆಂಗಳೂರು, ಮೈಸೂರು, ಕೊಡಗು ಸಹಿತ ಹಲವೆಡೆ ಒಂದು ವಾರ ಭಾರೀ ಮಳೆ, ಆರೆಂಜ್‌ ಅಲರ್ಟ್‌

Karnataka Rains: ಬೆಂಗಳೂರು, ಮೈಸೂರು, ಕೊಡಗು ಸಹಿತ ಹಲವೆಡೆ ಒಂದು ವಾರ ಭಾರೀ ಮಳೆ, ಆರೆಂಜ್‌ ಅಲರ್ಟ್‌

Umesha Bhatta P H HT Kannada

May 17, 2024 12:20 AM IST

google News

ತುಮಕೂರು ಭಾಗದಲ್ಲಿ ಗುರುವಾರವೂ ಉತ್ತಮ ಮಳೆಯಾಗಿದೆ.

  • Weather Updates ಕರ್ನಾಟಕದ ನಾನಾ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರವೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ತುಮಕೂರು ಭಾಗದಲ್ಲಿ ಗುರುವಾರವೂ ಉತ್ತಮ ಮಳೆಯಾಗಿದೆ.
ತುಮಕೂರು ಭಾಗದಲ್ಲಿ ಗುರುವಾರವೂ ಉತ್ತಮ ಮಳೆಯಾಗಿದೆ.

ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಒಂದು ವಾರ ಕಾಲ ಉತ್ತಮ ಮಳೆಯಾಗಲಿದೆ. ಮೇ 18ರಿಂದ 20 ರವರೆಗೆ ಕೆಲವು ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆಯಿಂದ ಆರೆಂಜ್‌ ಅಲರ್ಟ್‌ ಅನ್ನು ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ( IMD) ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುಂದಿನ ಒಂದು ವಾರದ ಮಳೆ, ಹವಾಮಾನ ಮುನ್ಸೂಚನೆಯ ವರದಿಯನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ, ಬೆಂಗಳೂರು, ಮೈಸೂರು, ಕೊಡಗು ಸಹಿತ ಹಲವಾರು ಭಾಗಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ಗುರುವಾರ ಕೂಡ ಕೊಡಗು, ಚಿಕ್ಕಮಗಳೂರು, ಹಾಸನ, ಬೆಳಗಾವಿ ಸಹಿತ ಹಲವಾರು ಭಾಗಗಳಲ್ಲಿ ಮಳೆಯಾಗಿದೆ. ಸಂಜೆಯೂ ಕೆಲವು ಭಾಗದಲ್ಲಿ ಎಡಬಿಡದೇ ಮಳೆಯಾಗುತ್ತಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪೂರ್ವ ಮುಂಗಾರು ಕರ್ನಾಟಕದ ಹಲವು ಭಾಗಗಳಲ್ಲಿ ಚುರುಕಾಗಿದ್ದು. ಬಹುತೇಕ ಉತ್ತರ, ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು, ಹಳೆ ಮೈಸೂರು ಹಾಗೂ ಬೆಂಗಳೂರು ಭಾಗದಲ್ಲಿ ಉಷ್ಣಾಂಶವನ್ನು ತಗ್ಗಿಸಿದೆ.

ಯಾವ ಜಿಲ್ಲೆಯಲ್ಲಿ ಮಳೆ ಹೇಗಿರಲಿದೆ

ಮೇ 17ರ ಶುಕ್ರವಾರದಂದು ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಹಾಸನ, ಮಂಡ್ಯ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆ ಸುರಿಯಲಿದೆ. ಗುಡುಗು ಸಹಿತ ಮಳೆಯೂ ಇರಲಿದೆ. ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.

ಮೇ 18ರ ಶನಿವಾರದಂದು ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ. ಗುಡುಗು, ಸಿಡಿಲು ಕೂಡ ಇರಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರೀ ಮಳೆ ಗುಡುಗು ಸಹಿತ ಸುರಿಯಲಿದೆ. ಬಳ್ಳಾರಿ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳ ಕೆಲವು ಕಡೆ ಬಿರುಗಾಳಿ ಸಹಿತ ಸಾಧಾರಣ ಮಳೆ ಇರಲಿದೆ. ಗುಡುಗು, ಸಿಡಿಲು ಕೂಡ ಆಗಬಹುದು. ಬಾಗಲಕೋಟೆ, ಬೆಳಗಾವಿ. ಬೀದರ್‌, ಧಾರವಾಡ, ಗದಗ, ಹಾವೇರಿ. ಕಲಬುರಗಿ, ಕೊಪ್ಪಳ. ರಾಯಚೂರು, ವಿಜಯಪುರ , ಯಾದಗಿರಿ ಜಿಲ್ಲೆಯ ಕೆಲವು ಭಾಗಳಲ್ಲಿ ಬಿರುಗಾಳಿ ಸಹಿತ ಹಗುರ ಮಳೆಯಾಗಬಹುದು.

ಮೇ 19ರ ಭಾನುವಾರದಂದು ಕೊಡಗು, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಭಾಗಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆ ಗುಡುಗು, ಸಿಡಿಲು ಹಾಗೂ ಮಿಂಚಿನ ಸಹಿತ ಆಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರೀ ಮಳೆ ಗುಡುಗು ಸಹಿತ ಸುರಿಯಲಿದೆ. ಹಾಸನ, ಮಂಡ್ಯ. ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಮಗಳೂರು. ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿಯೊಂಇಗೆ ಭಾರೀ ಗುಡುಗು ಸಹಿತ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರೀ ಮಳೆ ಗುಡುಗು ಸಹಿತವಾಗಿಯೇ ಆಗಬಹುದು. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಕೆಲವೆಡೆ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗಬಹುದು. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಸ್ಥಳಗಳಲ್ಲಿ ಗುಡುಗು ಸಹಿತ ಬಿರುಗಾಳೊಂದಿಗೆ ಹಗುರ ಮಳೆಯಾಗಬಹುದು.

ಮೇ 20ರ ಸೋಮವಾರದಂದು ಕೊಡಗು, ಹಾಸನ, ಚಿಕ್ಕಮಗಳೂರು. ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,. ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಕಡೆ ಅತಿ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ಮೈಸೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆ, ಗುಡುಗು ಸಹಿತ ಇರಲಿದೆ. ಬಾಗಲಕೋಟೆ, ಬೀದರ್‌, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆ ಆಗಬಹುದು.

ಮೇ 21ರ ಮಂಗಳವಾರದಂದು ದಕ್ಷಿಣ ಕನ್ನಡ,ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉಡುಪಿ, ಮೈಸೂರು, ಮಂಡ್ಯ, ಚಾಮರಾಜನರ, ರಾಮನಗರ, ಬಳ್ಳಾರಿ, ತುಮಕೂರು, ಶಿವಮೊಗ್ಗ ಜಿಲ್ಲೆಯ ಕೆಲವು ಕಡೆ ಗುಡುಗು ಮಿಶ್ರಿತ ಮಳೆಯಾಗುವ ನಿರೀಕ್ಷೆಯಿದೆ. ಉತ್ತರಕನ್ನಡ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಹಾವೇರಿ, ಗದಗ, ಕೊಪ್ಪಳ. ರಾಯಚೂರು, ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ.

ಮೇ 22 ಹಾಗೂ 23ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲದೆ. ಉತ್ತರ ಒಳನಾಡನಲ್ಲೂ ಹಗುರ ಮಳೆ ಗುಡುಗು ಸಹಿತವಾಗಿ ಆಗಬಹುದು ಎಂದು ಹವಾಮಾನ ಇಲಾಖೆಯು ತಿಳಿಸಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ