logo
ಕನ್ನಡ ಸುದ್ದಿ  /  ಕರ್ನಾಟಕ  /  ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮದಿಂದ ವಿವಿಧ ಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನ, ಸಲ್ಲಿಕೆ ಕೊನೆ ಯಾವಾಗ

ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮದಿಂದ ವಿವಿಧ ಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನ, ಸಲ್ಲಿಕೆ ಕೊನೆ ಯಾವಾಗ

Umesha Bhatta P H HT Kannada

Aug 13, 2024 02:30 PM IST

google News

ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮದಿಂದ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

    • ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮವು ಸಮುದಾಯದವರಿಂದ ಈ ಆರ್ಥಿಕ ಸಾಲಿಗೆ ನಾನಾ ಸೌಲಭ್ಯಗಳನ್ನು ಒದಗಿಸಲಿದೆ. 
ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮದಿಂದ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮದಿಂದ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು: ವೀರಶೈವ ಲಿಂಗಾಯತ ಸಮಾಜ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ(ಪ್ರವರ್ಗ-3ಬಿ) ಅಭಿವೃದ್ಧಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಶೈಕ್ಷಣಿಕ ಸಾಲ ಯೋಜನೆಗಳು, ಜೀವಜಲ ಯೋಜನೆ, ಕಾಯಕಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕ್‍ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಬಯಸುವವರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸರ್ಂಖ್ಯೆಯನ್ನು ಸೀಡ್ ಮಾಡಿರಬೇಕು.

ನಿಗಮವು ಅನುಷ್ಠಾನಗೊಳಿಸುವ ಯೋಜನೆಗಳಲ್ಲಿ ಸರ್ಕಾರದ ವಿವೇಚನಾಕೋಟಾ ಮತ್ತು ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರೂ ಸಹ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಅರ್ಹ ಫಲಾಪೇಕ್ಷಿಗಳು ಗ್ರಾಮಒನ್/ ಬೆಂಗಳೂರುಒನ್/ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬೇಕಿದೆ.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

2023-24 ನೇ ಸಾಲಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಆದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ. ಹೊಸಬರು ಆಗಷ್ಟ್‌ ಅಂತ್ಯದೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಮಾಹಿತಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ನಿಯಮಿತ

5ನೇ ಮಹಡಿ, ವಿಶ್ವೇಶ್ವರಯ್ಯ ಚಿಕ್ಕಗೋಪುರ, ಡಾ. ಬಿ. ಆರ್. ಆಂಬೇಡ್ಕರ್ ವೀಧಿ, ಬೆಂಗಳೂರು- 560001

ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080 22865522/ 9900012351 ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಗಳನ್ನು ದೂರವಾಣಿ ಸಂಖ್ಯೆ: 08272-221656 ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ