logo
ಕನ್ನಡ ಸುದ್ದಿ  /  Karnataka  /  Karnataka Water Resources Irrigation Department Will Recruit 400 Posts: Govind Karjol

Irrigation department Jobs: ನೀರಾವರಿ ಇಲಾಖೆಯಲ್ಲಿ 400 ಅಸಿಸ್ಟೆಂಟ್‌ ಮತ್ತು ಜೂ. ಎಂಜಿನಿಯರ್‌ಗಳ ನೇಮಕಕ್ಕೆ ಅನುಮತಿ

HT Kannada Desk HT Kannada

Feb 03, 2023 08:34 PM IST

ನೀರಾವರಿ ಇಲಾಖೆಯಲ್ಲಿ 400 ಅಸಿಸ್ಟೆಂಟ್‌ ಮತ್ತು ಜೂ. ಎಂಜಿನಿಯರ್‌ಗಳ ನೇಮಕಕ್ಕೆ ಅನುಮತಿ

    • ನೀರಾವರಿ ಇಲಾಖೆಯಲ್ಲಿ 400 ಜನರ ನೇಮಕಕ್ಕೆ ಅನುಮತಿ ನೀಡಿದ್ದು, 100 ಜನ ಅಸಿಸ್ಟೆಂಟ್ ಇಂಜಿನಿಯರ್, 300 ಜನ ಜ್ಯೂನಿಯರ್ ಇಂಜಿನಿಯರ್ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ನೀರಾವರಿ ಇಲಾಖೆಯಲ್ಲಿ 400 ಅಸಿಸ್ಟೆಂಟ್‌ ಮತ್ತು ಜೂ. ಎಂಜಿನಿಯರ್‌ಗಳ ನೇಮಕಕ್ಕೆ ಅನುಮತಿ
ನೀರಾವರಿ ಇಲಾಖೆಯಲ್ಲಿ 400 ಅಸಿಸ್ಟೆಂಟ್‌ ಮತ್ತು ಜೂ. ಎಂಜಿನಿಯರ್‌ಗಳ ನೇಮಕಕ್ಕೆ ಅನುಮತಿ

ಬೆಂಗಳೂರು: ಕರ್ನಾಟಕದ ಜಲ ಸಂಪನ್ಮೂಲ ಇಲಾಖೆಯಡಿ ಬರುವ ನೀರಾವರಿ ಇಲಾಖೆಯಲ್ಲಿ ಎಂಜಿನಿಯರ್‌ಗಳಾಗು ಬಯಸುವವರಿಗೆ ಸಿಹಿ ಸುದ್ದಿ. "ನೀರಾವರಿ ಇಲಾಖೆಯಲ್ಲಿ 400 ಜನರ ನೇಮಕಕ್ಕೆ ಅನುಮತಿ ನೀಡಿದ್ದು, 100 ಜನ ಅಸಿಸ್ಟೆಂಟ್ ಇಂಜಿನಿಯರ್, 300 ಜನ ಜ್ಯೂನಿಯರ್ ಇಂಜಿನಿಯರ್ ನೇಮಕ ಮಾಡಿಕೊಳ್ಳಲಾಗುವುದು" ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Uttara Kannada News: ಪ್ರವಾಸೋದ್ಯಮಕ್ಕೆ ರಣ ಬಿಸಿಲಿನ ಹೊಡೆತ; ಉತ್ತರ ಕನ್ನಡ ಬೀಚ್‌ಗಳಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖ

ಬೆಂಗಳೂರು ನೀರಿನ ಸಮಸ್ಯೆಗೆ ಝೆರೋದಾ ಸಂಸ್ಥಾಪಕ ನಿತಿನ್ ಕಾಮತ್ ಸಲಹೆ ಎಫೆಕ್ಟ್; ಒಂದೇ ದಿನ ಬಂತು 300 ಫೋನ್ ಕಾಲ್ಸ್

ಬಿಸಿಗೆ ತತ್ತರಿಸಿದ ಬೆಂಗಳೂರು ಜನರಿಗೆ ಸಿಹಿ ಸುದ್ದಿ; ಮೇ ತಿಂಗಳಲ್ಲಿ ನಗರಕ್ಕೆ ಮಳೆ ಬರುವ ಸಾಧ್ಯತೆ ಎಂದ ಹವಾಮಾನ ಇಲಾಖೆ

Bangalore Temperature: ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ತಾಪಮಾನ; ಬೆಂಗಳೂರಿನಲ್ಲಿ ಹಳೆಯ ದಾಖಲೆಗಳನ್ನು ಮುರಿದ ಉಷ್ಣಾಂಶ

ಆದರೆ, ಇದು ಗುತ್ತಿಗೆ ಆಧರಿತ ನೇಮಕಾತಿಯಾಗಿದ್ದು, ಕಾಯಂ ನೇಮಕಾತಿಯಾಗಿರುವುದಿಲ್ಲ.

"ನೀರಾವರಿ ಇಲಾಖೆಯಲ್ಲಿ ಅನೇಕ ವರ್ಷದಿಂದ ಅಸಿಸ್ಟೆಂಟ್ ಇಂಜಿನಿಯರ್, ಜ್ಯೂನಿಯರ್ ಇಂಜಿನಿಯರ್ ನೇಮಕ ಆಗಿಲ್ಲ. ಸಾವಿರ ಜನರ ಹುದ್ದೆ ನೇಮಕ ಆಗಬೇಕಿದೆ. ಇದರಿಂದ ಕಾಮಗಾರಿ ವಿಳಂಬ ಆಗುತ್ತಿದೆ. ಮುಖ್ಯಮಂತ್ರಿ ಹಾಗೂ ಹಣಕಾಸು ಇಲಾಖೆ ಜೊತೆ ಮಾತನಾಡಿದ್ದೇನೆ. 400 ಜನರ ನೇಮಕಕ್ಕೆ ಅನುಮತಿ ನೀಡಿದ್ದಾರೆ. 300 ಜನ ಅಸಿಸ್ಟೆಂಟ್ ಇಂಜಿನಿಯರ್, ನೂರು ಜನ ಜ್ಯೂನಿಯರ್ ಇಂಜಿನಿಯರ್ ನೇಮಕ ಮಾಡಿಕೊಳ್ಳಲಾಗುವುದು" ಎಂದು ಅವರು ಇಂದು ಮಾಹಿತಿ ನೀಡಿದ್ದಾರೆ.

ಹಣಕಾಸು ಇಲಾಖೆ ಒಪ್ಪಿಗೆ ಪಡೆದು ಅಧಿಸೂಚನೆ ಮಾಡಿಕೊಳ್ಳಬೇಕು. ಸ್ಪಷ್ಟವಾಗಿ ಅಭ್ಯರ್ಥಿಗಳಿಗೆ ಹೇಳಬೇಕು ಇದು ಕಾಂಟ್ರಾಕ್ಟ್ ನೇಮಕ ಅಂತ. ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ನೇಮಕ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಇನ್ನೂ ಮಹದಾಯಿ ನೀರಿನ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಪಾಲಿನ ನೀರನ್ನ ಪಡೆದೇ ಪಡೆಯುತ್ತೇವೆ ಎಂದ ಗೋವಿಂದ ಕಾರಜೋಳ ಅವರು ಹೇಳಿದರು.

ಎಲ್‌ಐಸಿಯಲ್ಲಿ ಭರ್ಜರಿ ಉದ್ಯೋಗ ನೇಮಕ

ಭಾರತೀಯ ಜೀವ ವಿಮಾ ನಿಗಮ - ಎಲ್‌ಐಸಿಯಲ್ಲಿ ಅಪ್ರೆಂಟಿಸ್‌ ಡೆವಲಪ್‌ಮೆಂಟ್‌ ಆಫೀಸರ್‌ಗಳ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಶುರುವಾಗಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿರುವ ಎಲ್‌ಐಸಿ, ಇಂದಿನಿಂದ ಅರ್ಜಿ ಸ್ವೀಕಾರ ಶುರುಮಾಡಿದೆ. ಒಟ್ಟು 9394 ಹುದ್ದೆಗಳ ಭರ್ತಿಗೆ ಎಲ್‌ಐಸಿ ಈ ನೇಮಕ ಅಭಿಯಾನ ಕೈಗೊಂಡಿದೆ. ಹೆಚ್ಚಿನ ಮಾಹಿತಿ ಮತ್ತುಅರ್ಜಿ ಸಲ್ಲಿಕೆಗೆ ಎಲ್‌ಐಸಿಯ ಅಧಿಕೃತ ವೆಬ್‌ಸೈಟ್‌ licindia.in ಗಮನಿಸಬಹುದು. ಈ ಕುರಿತು ವಿವರವಾದ ಸುದ್ದಿ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಗೆ ಅಧಿಸೂಚನೆ ಪ್ರಕಟ

ಕೇಂದ್ರ ಲೋಕಸೇವಾ ಆಯೋಗ (Union Public Service Commission) ಯುಪಿಎಸ್ ಸಿ ಪ್ರತಿ ಜನವರಿಯಲ್ಲಿ ಅಥವಾ ಫೆಬ್ರವರಿಯಲ್ಲಿ ಐಎಎಸ್, ಐಪಿಎಸ್, ಐಎಫ್ಎಸ್ ಸೇರಿದಂತೆ ಇತರೆ ಉನ್ನತ ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಈ ಬಾರಿ ಒಟ್ಟು 1,105 ಹುದ್ದೆಗಳನ್ನು ಭರ್ತಿ ಮಾಡಲು 2023ರ ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಯ (UPSC Civil Services Exam 2023) ಅಧಿಸೂಚನೆಯನ್ನು ಬಿಡುಗಡೆಯಾಗಿದೆ. UPSC ನಾಗರಿಕ ಸೇವೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 21. ಈ ನೋಂದಣಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ. ಇದರ ವಿವರ ಇಲ್ಲಿದೆ.

    ಹಂಚಿಕೊಳ್ಳಲು ಲೇಖನಗಳು