logo
ಕನ್ನಡ ಸುದ್ದಿ  /  ಕರ್ನಾಟಕ  /  Rain Alert: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ; ಚಳಿಯ ಜೊತೆಗೆ ವರುಣನೂ ಕಾಟ!

Rain Alert: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ; ಚಳಿಯ ಜೊತೆಗೆ ವರುಣನೂ ಕಾಟ!

Prasanna Kumar P N HT Kannada

Nov 14, 2024 09:15 AM IST

google News

ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ; ಚಳಿಯ ಜೊತೆಗೆ ವರುಣನೂ ಕಾಟ

    • Karnataka Rains Today: ಕರ್ನಾಟಕದ ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಇಂದು (ನವೆಂಬರ್ 14) ಗುಡುಗು ಸಹಿತ ಮಳೆಯಾಗಲಿದೆ. ಅಲ್ಲದೆ, ಮುಂದಿನ 2 ದಿನಗಳ ಕಾಲ ಇದೇ ಮಳೆ ಮುಂದುವರೆಯಲಿದೆ.
ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ; ಚಳಿಯ ಜೊತೆಗೆ ವರುಣನೂ ಕಾಟ
ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ; ಚಳಿಯ ಜೊತೆಗೆ ವರುಣನೂ ಕಾಟ (PTI)

ಬೆಂಗಳೂರು: ಕರ್ನಾಟಕದಲ್ಲಿ ಚಳಿಯ ಜೊತೆಗೆ ಮಳೆಯೂ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದ್ದು, ಪ್ರಮುಖ ಜಿಲ್ಲೆಗಳಲ್ಲಿ ವರುಣ ಆರ್ಭಟಿಸಿದ್ದಾನೆ. ಇಂದು ಕೂಡ (ನವೆಂಬರ್‌ 14) ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಎರಡು ದಿನಗಳಲ್ಲೂ ಮಳೆಯಾಗಲಿದೆ ಎಂದು ವರದಿಯಾಗಿದೆ.

ಕರಾವಳಿ ಬಹುತೇಕ ಸ್ಥಳಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಧಾರವಾಡ, ಗದಗ, ಕೊಪ್ಪಳ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಿದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ. 48 ಗಂಟೆಗಳ ಕಾಲ ಇದೇ ವಾತಾವರಣ ಇರಲಿದೆ.

ರಾಜ್ಯದಲ್ಲಿ ಅತಿ ಹೆಚ್ಚು/ಕಡಿಮೆ ಉಷ್ಣಾಂಶ

ರಾಜ್ಯದಲ್ಲಿ ಅತಿ ಹೆಚ್ಚಿನ ಗರಿಷ್ಠ ಉಷ್ಣಾಂಶ 35.6 ಡಿಗ್ರಿ ಸೆಲ್ಸಿಯಸ್ ಕಾರವಾರದಲ್ಲಿ ದಾಖಲಾಗಿದೆ.

ರಾಜ್ಯದಲ್ಲಿ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕಡಿಮೆ ಉಷ್ಣಾಂಶ 17.6 ಡಿಗ್ರಿ ಸೆಲ್ಸಿಯಸ್ ವಿಜಯಪುರದಲ್ಲಿ ದಾಖಲಾಗಿದೆ.

ರಾಜ್ಯದಲ್ಲಿ ಗರಿಷ್ಠ ಮಳೆ (ನವೆಂಬರ್ 13)

ಚಾಮರಾಜನಗರದ ಎಂಎಂ ಹಿಲ್ಸ್​​​ನಲ್ಲಿ 3 ಮಿಲಿ ಮೀಟರ್

ಚಾಮರಾಜನಗರದಲ್ಲಿ 1 ಸೆಂಮೀ ಮಳೆಯಾಗಿದೆ.

ನವೆಂಬರ್ 15 ರಂದು ಎಲ್ಲೆಲ್ಲಿ ಮಳೆಯಾಗಲಿದೆ?

ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಹಾಸನ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಸಾಧಾರಣ ಅಥವಾ ಲಘು ಮಳೆಯಾಗುವ ನಿರೀಕ್ಷೆ ಇದೆ.

ನವೆಂಬರ್ 16 ರಂದು ಎಲ್ಲೆಲ್ಲೆ ಮಳೆಯಾಗಲಿದೆ?

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಕೊಡಗು ಸೇರಿದಂತೆ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ನವೆಂಬರ್ 17 ರಂದು ಎಲ್ಲೆಲ್ಲೆ ಮಳೆಯಾಗಲಿದೆ?

ಉಡುಪಿ, ದಕ್ಷಿಣ ಕನ್ನಡದ ಕೆಲವು ಸ್ಥಳಗಳು, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನವೆಂಬರ್ 18 ರಂದು ಎಲ್ಲೆಲ್ಲೆ ಮಳೆಯಾಗಲಿದೆ?

ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ