logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಕರ್ನಾಟಕ ಕರಾವಳಿಯಲ್ಲಿ ಮುಂದಿನ 5 ದಿನ ಭಾರಿ ಮಳೆಯ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Karnataka Weather: ಕರ್ನಾಟಕ ಕರಾವಳಿಯಲ್ಲಿ ಮುಂದಿನ 5 ದಿನ ಭಾರಿ ಮಳೆಯ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Raghavendra M Y HT Kannada

Jul 10, 2023 09:56 AM IST

google News

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮುಂದಿನ 5 ದಿನಗಳ ವರೆಗೆ ಭಾರಿ ಮಳೆಯ ಮುನ್ಸೂಚನೆ ಇದೆ.

  • ಮುಂದಿನ 5 ದಿನ ಕರ್ನಾಟಕ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮುಂದಿನ 5 ದಿನಗಳ ವರೆಗೆ ಭಾರಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮುಂದಿನ 5 ದಿನಗಳ ವರೆಗೆ ಭಾರಿ ಮಳೆಯ ಮುನ್ಸೂಚನೆ ಇದೆ.

ಬೆಂಗಳೂರು: ಕರ್ನಾಟಕ ಕರಾವಳಿಯಲ್ಲಿ (Coastal Karnataka) ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು (Heavy Rain), ಭಾರಿ ಅವಾಂತರಗಳೇ ಸೃಷ್ಟಿಯಾಗಿವೆ. ಇದರ ನಡುವೆಯೇ ಮುಂದಿನ 5 ದಿನಗಳ ಕಾಲ ಕರಾವಳಿಯ ಕೆಲವು ಪ್ರತ್ಯೇಕ ಪ್ರದೇಶಗಳಲ್ಲಿ ವರುಣ ಆರ್ಭಟಿಸಲಿದ್ದಾನೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ಮುನ್ಸೂಚನೆ ನೀಡಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ವಿಶೇಷವಾಗಿ ದಕ್ಷಿಣ ಕನ್ನಡ (Dakshin Kannada), ಉಡುಪಿ (Udupi) ಹಾಗೂ ಉತ್ತರ ಕನ್ನಡ (Uttara Kannada) ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಈ ಜಿಲ್ಲೆಗಳ ಜನರು ಮುಂದಿನ ಐದು ದಿನ ಅಂದರೆ ಜುಲೈ 10 ರಿಂದ 15ರವರೆಗೆ ಎಚ್ಚರಿಕೆಯಿಂದ ಇರಬೇಕಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿ ಆಗಿರುವ ವರದಿಯಾಗಿದ್ದು, ಕಳೆದ ನಾಲ್ಕು ದಿನಗಳಿಂದ ಐದು ಮಂದಿ ಮೃತಪಟ್ಟಿದ್ದಾರೆ. 310ಕ್ಕೂ ಅಧಿಕ ವಿದ್ಯುತ್ ಕಂಬಗಳಿಗಳಿಗೆ ಹಾನಿಯಾಗಿದೆ. ಕೆಲವೊಂದು ಕಡೆ ಮರಗಳು ಧರೆಗುರುಳಿವೆ, ಬೆಳೆಹಾನಿಯೂ ಆಗಿದ್ದು, ಈವರೆಗೆ ಸುಮಾರು 3 ಕೋಟಿ ರೂಪಾಯಿ ಅಧಿಕ ಮೌಲ್ಯದ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಉಡುಪಿ, ದಕ್ಷಿಣ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಿಂದ ಮನೆಗಳಿಗೆ ಹಾನಿಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಂಜಾರು, ಬೈಂದೂರಿನ ಕಂಬದಕೋಣೆ, ಯಳಜಿತ್, ಪಡುವರಿ, ಕಾಪುವಿನ ತೆಂಕ, ಎಲ್ಲೂರು, ನಡ್ಸಾಲು, ಕುಂದಾಪುರದ ಹೊಸಾಡು, ಕೊಡ್ತಿಡಿ, ಉಡುಪಿಯ ಅಲೆವೂರಿನಲ್ಲಿ ಕೆಲವು ಮನೆಗಳಿಗೆ ಹಾನಿಯಾಗಿರುವ ವರದಿಯಾಗಿದೆ.

ಜುಲೈ 16ರ ಬಳಿಕ ದಕ್ಷಿಣ ಒಳನಾಡಿನಲ್ಲೂ ಭಾರಿ ಮಳೆಯ ಮುನ್ಸೂಚನೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರು, ಅದರ ಸಮುತ್ತಮುತ್ತಲಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ತುಮಕೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲೂ ಸಾಧಾರಣ ಮಳೆಯ ಸಂಭವ ಇದೆ.

ಜುಲೈ 9ರ (ಭಾನುವಾರ) ಬೆಳಗ್ಗೆ 8.30ಕ್ಕೆ ದಾಖಲಾಗಿರುವ ಮಾಹಿತಿಯ ಪ್ರಕಾರ ಇಡೀ ಕರ್ನಾಟಕದಲ್ಲೇ ಗರಿಷ್ಠ ಮಳೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ಆಗಿದೆ. ಇಲ್ಲಿ 15 ಸೆಂಟಿ ಮೀಟರ್ ಮಳೆಯಾಗಿದೆ. ಆ ನಂತರ ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ 12 ಸೆಂಟಿ ಮೀಟರ್, ಕದ್ರಾದಲ್ಲಿ 10, ಸುಳ್ಯ, 8, ಕ್ಯಾಸಲ್ ರಾಕ್, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಮಣಿ, ಪಣಂಬೂರಿನಲ್ಲಿ ತಲಾ 7 ಸೆಂಟಿ ಮೀಟರ್ ಮಳೆಯಾಗಿದೆ.

ಕೋಟ, ಹೊನ್ನಾವರ, ಗೇರುಸೊಪ್ಪ, ಪುತ್ತೂರು, ಭಾಗಮಂಡಲ ತಲಾ 6, ಉಪ್ಪಿನಂಗಡಿ, ಬೆಳ್ತಂಗಡಿ, ಮಂಗಳೂರು, ಕಾರ್ಕಳ, ಕುಂದಾಪುರ, ಅಂಕೋಲಾ, ಶಿರಾಲಿ ತಲಾ 5, ಸುಬ್ರಹ್ಮಣ್ಯ, ಕಾರವಾರ, ಯಲ್ಲಾಪುರ, ಗೋಕರ್ಣ, ಕುಮಟಾ, ಜಗಲಬೆಟ್, ಉಡುಪಿ, ಸಿದ್ದಾಪುರ, ಲೋಂಡಾ, ಶೃಂಗೇರಿ, ಸೋಮವಾರ ಪೇಟೆಯಲ್ಲಿ ತಲಾ 4 ಸೆಂಟಿ ಮೀಟರ್ ಮಳೆಯಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ