logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಬೆಂಗಳೂರು, ಮಂಗಳೂರು, ಮೈಸೂರು ಸೇರಿ 26 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಮುನ್ಸೂಚನೆ

Karnataka Weather: ಬೆಂಗಳೂರು, ಮಂಗಳೂರು, ಮೈಸೂರು ಸೇರಿ 26 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಮುನ್ಸೂಚನೆ

Umesh Kumar S HT Kannada

Jan 04, 2024 07:39 AM IST

google News

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. (ಸಾಂಕೇತಿಕ ಚಿತ್ರ)

  • ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಚಳಿ ಜತೆಗೆ ಸಾಧಾರಣ ಮಳೆಯೂ ಆಗಲಿದೆ. ಕರಾವಳಿಯ ಮೂರು ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ, ಅದೇ ರೀತಿ ಉತ್ತರ ಒಳನಾಡಿನ 5 ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. (ಸಾಂಕೇತಿಕ ಚಿತ್ರ) (Pixabay)

ಕರ್ನಾಟಕದಲ್ಲಿ ಕೆಲವು ಜಿಲ್ಲೆಗಳಿಗೆ ಸೀಮಿತವಾಗಿದ್ದ ಸಾಧಾರಣ ಮಳೆ ಇಂದು (ಜ.4) ಬಹುಪಾಲು ಜಿಲ್ಲೆಗಳಿಗೆ ವಿಸ್ತರಣೆಯಾಗಿದೆ. ಮಂಗಳವಾರ (ಜ.2) ಕರ್ನಾಟಕದ 7 ಜಿಲ್ಲೆಗಳಲ್ಲಿ ವಿವಿಧೆಡೆ ಸಾಧಾರಣ ಮಳೆಬಿದ್ದಿತ್ತು. ಬುಧವಾರ (ಜ.3) ಕೂಡ ಕರಾವಳಿಯ ಎರಡು ಜಿಲ್ಲೆ ಸೇರಿ 9 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬಿದ್ದಿತ್ತು. ಇಂದು (ಜ.4) ಕರ್ನಾಟಕದ 26 ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನಾ ವರದಿಯಲ್ಲಿ ಹೇಳಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಚಳಿಗಾಲವಾಗಿದ್ದರೂ, ಹಿಂಗಾರು ಮಳೆಯ ನಿರೀಕ್ಷೆಯಲ್ಲಿದ್ದ ಕರ್ನಾಟಕದ ಜನತೆಗೆ ಹೊಸ ಕ್ಯಾಲೆಂಡರ್ ವರ್ಷದ ಮೊದಲ ಮಳೆ ಹಿತ ಅನುಭವ ನೀಡಿದೆ. ಕರ್ನಾಟಕದ ಕರಾವಳಿಯ ಮೂರು ಜಿಲ್ಲೆ ಮತ್ತು ದಕ್ಷಿಣ ಒಳಾನಾಡಿನ ಎಲ್ಲ ಜಿಲ್ಲೆಗಳಲ್ಲಿ ಇಂದು (ಜ.4) ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಹೇಳಿದೆ.

ಇಂದು (ಜ.4) ಬೆಳಗ್ಗೆ 8.30 ರಿಂದ ನಾಳೆ (ಜ.5) ಬೆಳಗ್ಗೆ 8.30ರ ತನಕದ ಹವಾಮಾನ ಮುನ್ಸೂಚನೆ ವರದಿ ಪ್ರಕಾರ, 26 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬಿದ್ದರೆ, ಉಳಿದ 5 ಜಿಲ್ಲೆಗಳಲ್ಲಿ ಚಳಿ ಮತ್ತು ಒಣಹವೆ ಮುಂದುವರಿಯಲಿದೆ. ಬಹುತೇಕ ಜಿಲ್ಲೆಗಳಲ್ಲಿ ನಸುಕಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಹುತೇಕ ಜನವರಿ 1ರಿಂದ ಶುರುವಾಗಿರುವ ಸಾಧಾರಣ ಮಳೆ ಇಂದು ಮತ್ತು ನಾಳೆ (ಜ.6) ವ್ಯಾಪಕವಾಗಿ ಇರಲಿದ್ದು, ಬಳಿಕ ನಿಧಾನವಾಗಿ ಕಡಿಮೆಯಾಗುವ ಲಕ್ಷಣವಿದೆ ಎಂದು ಹವಾಮಾನ ಇಲಾಖೆ ಜನವರಿ 1ರಂದು ಮಧ್ಯಾಹ್ನ ಪ್ರಕಟಿಸಿರುವ ವರದಿ ವಿವರ ನೀಡಿದೆ.

ಕರಾವಳಿ ಕರ್ನಾಟಕದ ಭಾಗದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಆದಾಗ್ಯೂ, ಹವಾಮಾನಕ್ಕೆ ಸಂಬಂಧಿಸಿದ ಯಾವುದೇ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿಲ್ಲ.

ಉತ್ತರ ಒಳನಾಡಿನ ಜಿಲ್ಲೆಗಳ ಪೈಕಿ, ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿಗಳಲ್ಲಿ ಒಣಹವೆ ಮುಂದುವರಿಯಲಿದೆ. ಚಳಿಯೂ ಇರಲಿದೆ. ಉಳಿದಂತೆ ಇಂದು ಮತ್ತು ನಾಳೆ (ಜ.5) ಹಾವೇರಿ, ಕಲಬುರಗಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯನ್ನು ನಿರೀಕ್ಷಿಸಬಹುದು ಎಂದು ವರದಿ ಹೇಳಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳ ಪೈಕಿ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ,ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರಗಳಲ್ಲಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ವರದಿ ತಿಳಿಸಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ