logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rain: ಇಂದಿನಿಂದ ತೀವ್ರವಾಗಲಿದೆ ಮೋಚಾ ಚಂಡಮಾರುತ ಸ್ವರೂಪ; ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆ ಸಾಧ್ಯತೆ

Karnataka Rain: ಇಂದಿನಿಂದ ತೀವ್ರವಾಗಲಿದೆ ಮೋಚಾ ಚಂಡಮಾರುತ ಸ್ವರೂಪ; ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆ ಸಾಧ್ಯತೆ

Reshma HT Kannada

May 14, 2023 07:19 AM IST

ಕರ್ನಾಟಕದಲ್ಲಿ ಮಳೆ (ಸಾಂದರ್ಭಿಕ ಚಿತ್ರ)

    • Weather Update: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾದ ಮೋಚಾ ಚಂಡಮಾರುತವು ಇಂದು ತೀವ್ರ ಸ್ವರೂಪ ಪಡೆಯಲಿದ್ದು, ಇದರಿಂದ ದೇಶದ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆ ಹಾಗೂ ಬಿರುಗಾಳಿಯ ಮುನ್ಸೂಚನೆ ನೀಡಲಾಗಿದೆ. ಚಂಡಮಾರುತ ಪ್ರಭಾವದಿಂದ ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕಲವೆಡೆ ವರುಣಾರ್ಭಟ ಇರಲಿದೆ. 
ಕರ್ನಾಟಕದಲ್ಲಿ ಮಳೆ (ಸಾಂದರ್ಭಿಕ ಚಿತ್ರ)
ಕರ್ನಾಟಕದಲ್ಲಿ ಮಳೆ (ಸಾಂದರ್ಭಿಕ ಚಿತ್ರ)

ಬೆಂಗಳೂರು: ಬಂಗಾಳಕೊಲ್ಲಿ ಸಮುದ್ರ ತೀರದಲ್ಲಿ ಸೃಷ್ಟಿಯಾಗಿದ್ದ ಮೋಚಾ ಚಂಡಮಾರುತವು ಇಲ್ಲಿಯವರೆಗೆ ಶಾಂತವಾಗಿದ್ದು, ಇಂದಿನಿಂದ ತೀವ್ರ ಸ್ವರೂಪ ಪಡೆಯಲಿದೆ ಎನ್ನಲಾಗುತ್ತಿದೆ. ಚಂಡಮಾರುತ ಪರಿಣಾಮ ಎದುರಿಸಲು ಪಶ್ಚಿಮಬಂಗಾಳ, ಮ್ಯಾನ್ಮಾರ್‌ ಹಾಗೂ ಬಾಂಗ್ಲಾದೇಶಗಳು ಸಿದ್ಧತೆ ಮಾಡಿಕೊಂಡಿವೆ. ಮೋಚಾ ಚಂಡಮಾರುತ ಪರಿಣಾಮದಿಂದ ಈಶಾನ್ಯ ರಾಜ್ಯಗಳಲ್ಲಿ ಹೆಚ್ಚು ಮಳೆಯಾಗಲಿದೆ. ಆದರೆ ಕೇರಳ, ಕರ್ನಾಟಕದ ಕರಾವಳಿ ಭಾಗದಲ್ಲೂ ಇದರ ಪರಿಣಾಮ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

ಕರ್ನಾಟಕದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ; 14 ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ಅಭ್ಯರ್ಥಿಗಳ ಅಂತಿಮ ಕಸರತ್ತು

HD Revanna: ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಬಂಧನ; ಮಾಜಿ ಪ್ರಧಾನಿ ದೇವೇಗೌಡರ ಪುತ್ರನ ವಿರುದ್ಧ ಅಪಹರಣ ಕೇಸ್, ತಿಳಿಯಬೇಕಾದ 10 ಅಂಶಗಳಿವು

ಮಂಗಳೂರಿನಲ್ಲಿ ಶಾಖಾಘಾತ; ಚಲಿಸುತ್ತಿದ್ದ ಬಸ್ ಗಾಜು ಒಡೆದು ಮೂವರಿಗೆ ಗಾಯ; ಕರಾವಳಿಯಲ್ಲಿ ದಿಢೀರ್ ಹೃದಯಾಘಾತದಿಂದ 6 ಮಂದಿ ಸಾವು

HD Revanna: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಎಸ್‌ಐಟಿಯಿಂದ ಜೆಡಿಎಸ್ ಶಾಸಕ ರೇವಣ್ಣ ಬಂಧನ; ಮುಂದೇನಾಗುತ್ತೆ

ಇಂದು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆ ಸುರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ಕರ್ನಾಟಕ ಹವಾಮಾನ ಇಲಾಖೆ (Met Centre Bengaluru - IMD) ಮುಂದಿನ 48 ಗಂಟೆಗಳ ಹವಾಮಾನ ಮುನ್ಸೂಚನೆ (Karnataka Weather Forecast) ಪ್ರಕಟಿಸಿದ್ದು, ವಿವಿಧ ಜಿಲ್ಲೆಗಳ ಹವಾಮಾನ ವರದಿ ಹೀಗಿದೆ.

ಹವಾಮಾನ ಇಲಾಖೆಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಿರುವ ಮುನ್ಸೂಚನೆಯಲ್ಲಿ ಇಂದು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಿಂಚಿ ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆ ಗುಡುಗು ಮಿಂಚು ಕಾಣಿಸಲಿದೆ.

ಕರಾವಳಿ ಹವಾಮಾನ ಮುನ್ಸೂಚನೆ

ಕಳೆದ ವಾರಗಳಿಂದ ಕರಾವಳಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಇಂದೂ ಮಳೆ ಸುರಿಯಲಿದೆ. ಮೋಚಾ ಚಂಡಮಾರುತವು ಕರಾವಳಿ ಜಿಲ್ಲೆಗಳ ಮೇಲೆ ಪರಿಣಾಮ ಬೀರಲಿದ್ದು, ಗುಡುಗು ಮಿಂಚು ಕೂಡ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಮಿಂಚಿನಿಂದ ಸಹಿತ ಮಳೆ ಬೀಳುವ ಮುನ್ಸೂಚನೆ ಇದೆ.

ಉತ್ತರ ಒಳನಾಡು ಹವಾಮಾನ ವರದಿ

ಇಂದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದ್ದು, ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ, ಯಾದಗಿರಿಯಲ್ಲಿ ಒಣಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು ವರದಿ

ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ, ಮಂಡ್ಯ, ಮೈಸೂರು ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ವಿಜಯನಗರದಲ್ಲಿ ಒಣಹವೆ ಮುಂದುವರಿಯಲಿದೆ.

ಚಂಡಮಾರುತ ಪರಿಣಾಮ ಇಂದು ರಾಜ್ಯದ ಜಿಲ್ಲೆಗಳ ಮೇಲೆ ಅಷ್ಟೊಂದು ಇರದಿದ್ದರೂ, ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಇಂದು ಬಿರುಗಾಳಿ ಪ್ರಮಾಣ ಹೆಚ್ಚಿರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಹಂಚಿಕೊಳ್ಳಲು ಲೇಖನಗಳು