logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಕರ್ನಾಟಕದಲ್ಲಿ ಇಂದು ವಿವಿಧೆಡೆ ಸಾಧಾರಣ ಮಳೆ; 9 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

Karnataka Weather: ಕರ್ನಾಟಕದಲ್ಲಿ ಇಂದು ವಿವಿಧೆಡೆ ಸಾಧಾರಣ ಮಳೆ; 9 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

Umesh Kumar S HT Kannada

Jan 03, 2024 07:28 AM IST

google News

ಕರ್ನಾಟಕದ ಹವಾಮಾನ ಇಂದು (ಜ.3) (ಸಾಂಕೇತಿಕ ಚಿತ್ರ)

  • ಚಾಮರಾಜನಗರ ಮತ್ತು ಕೊಡಗು ಸೇರಿ 7 ಜಿಲ್ಲೆಗಳಲ್ಲಿ ವಿವಿಧೆಡೆ ಮಂಗಳವಾರ ಸಾಧಾರಣ ಮಳೆಯಾಗಿದೆ. ಕರ್ನಾಟಕದ ಬಹುಪಾಲು ಜಿಲ್ಲೆಗಳಲ್ಲಿ ಚಳಿ ಇದ್ದು, ಹಗಲಲ್ಲಿ ಒಣಹವೆ ಮುಂದುವರಿದಿದೆ. ಆದಾಗ್ಯೂ, 2024ರ ಮೂರನೇ ದಿನವಾದ ಇಂದು (ಜ.3) ಸಾಧಾರಣ ಮಳೆ ಇನ್ನೆಷ್ಟು ಜಿಲ್ಲೆಗಳಿಗೆ ವಿಸ್ತರಿಸಲಿದೆ? ಹವಾಮಾನ ಇಲಾಖೆ ವರದಿಯ ವಿವರ ಹೀಗಿದೆ.

ಕರ್ನಾಟಕದ ಹವಾಮಾನ ಇಂದು (ಜ.3) (ಸಾಂಕೇತಿಕ ಚಿತ್ರ)
ಕರ್ನಾಟಕದ ಹವಾಮಾನ ಇಂದು (ಜ.3) (ಸಾಂಕೇತಿಕ ಚಿತ್ರ)

ಕರ್ನಾಟಕದಲ್ಲಿ ಹೊಸ ವರ್ಷದ ಆರಂಭದಲ್ಲೇ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದ್ದು, ಕಳೆದ ಮೂರು ದಿನಗಳಲ್ಲೂ ಮುಂದುವರಿದಿದೆ. ಮಂಗಳವಾರ 7 ಜಿಲ್ಲೆಗಳಲ್ಲಿ ವಿವಿಧೆಡೆ ಸಾಧಾರಣ ಮಳೆಬಿದ್ದಿತ್ತು. ಬುಧವಾರವಾದ ಇಂದು (ಜ.3) ಸಾಧಾರಣ ಮಳೆ ಇನ್ನೂ ಹೆಚ್ಚುವರಿ ಎರಡು ಜಿಲ್ಲೆಗಳಿಗೆ ವಿಸ್ತರಿಸಲ್ಪಡಲಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಚಳಿಗಾಲವಾದ ಕಾರಣ, ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಹಗಲು ಹೊತ್ತಿನಲ್ಲಿ ಒಣಹವೆ ಖಾತರಿ. ಬಹುತೇಕ ಜಿಲ್ಲೆಗಳಲ್ಲಿ ರಾತ್ರಿ ಹೆಚ್ಚು ಚಳಿ ಇದ್ದರೆ ಉಳಿದೆಡೆ ಸಾಮಾನ್ಯ ಚಳಿ ಇರಲಿದೆ.. ಕೆಲವು ಜಿಲ್ಲೆಗಳಲ್ಲಿ ನಸುಕಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇಂದು (ಜ.3) ಬೆಳಗ್ಗೆ 8.30ರಿಂದ ಜನವರಿ 3ರ ಬೆಳಗ್ಗೆ 8.30ರ ತನಕದ ಅವಧಿಒಯಲ್ಲಿ ಕೆಲವು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಒಣಹವೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ಜನವರಿ 1ರಂದು ಮಧ್ಯಾಹ್ನ ಪ್ರಕಟಿಸಿರುವ ವರದಿ ವಿವರ ನೀಡಿದೆ.

ಕರಾವಳಿ ಕರ್ನಾಟಕದ ಭಾಗದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಆದಾಗ್ಯೂ, ಹವಾಮಾನಕ್ಕೆ ಸಂಬಂಧಿಸಿದ ಯಾವುದೇ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿಲ್ಲ.

ಉತ್ತರ ಒಳನಾಡಿನ ಜಿಲ್ಲೆಗಳ ಪೈಕಿ , ಹಾವೇರಿ, ಕಲಬುರಗಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಬಹುದು. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗಳಲ್ಲಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳ ಪೈಕಿ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ವರದಿ ತಿಳಿಸಿದೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ