logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಕರ್ನಾಟಕ ಕರಾವಳಿ, ರಾಜಧಾನಿ ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿಂದು ಭಾರಿ ಮಳೆಯ ಮುನ್ಸೂಚನೆ

Karnataka Weather: ಕರ್ನಾಟಕ ಕರಾವಳಿ, ರಾಜಧಾನಿ ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿಂದು ಭಾರಿ ಮಳೆಯ ಮುನ್ಸೂಚನೆ

Raghavendra M Y HT Kannada

Jul 11, 2023 10:01 AM IST

google News

ಕರ್ನಾಟಕ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿಇಂದು ಕೂಡ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

  • ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಕೂಡ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕೆಲವೆಡೆ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನವೇ ಮಳೆ ಆರಂಭವಾಗುವ ಸಾಧ್ಯತೆ ಇದೆ.

ಕರ್ನಾಟಕ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿಇಂದು ಕೂಡ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಕರ್ನಾಟಕ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿಇಂದು ಕೂಡ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಬೆಂಗಳೂರು: ಕರ್ನಾಟಕದ ಕರಾವಳಿಯ (Coastal Karnataka) ಎಲ್ಲಾ ಜಿಲ್ಲೆಗಳಲ್ಲಿ ಕೆಳೆದೊಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು (Heavy Rain), ಇಂದು (ಜುಲೈ 11, ಮಂಗಳವಾರ) ಕೂಡ ವರುಣ ಆರ್ಭಟಿಸಲಿದ್ದಾನೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇತ್ತ ರಾಜ್ಯ ರಾಜಧಾನಿ ಬೆಂಗಳೂರು (Bengaluru Rain) ಸೇರಿದಂತೆ ದಕ್ಷಿಣ ಒಳನಾಡಿನಲ್ಲೂ ಇವತ್ತು ಭಾರಿ ಮಳೆಯಾಗಲಿದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲೂ ಇವತ್ತು ಮಳೆ ಬೀಳುವ ಮುನ್ಸೂಚನೆ ಇದೆ.

ಬಹುತೇಕ ಕಡೆಗಳಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಉತ್ತರ ಒಳನಾಡಿನ ಕೆಲವೊಂದು ಪ್ರದೇಶಗಳಲ್ಲಿ ಸಾಧಾರಣ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ.

ಕರ್ನಾಟಕ ಕರಾವಳಿಯಲ್ಲಿ ನಾಳೆೆಯೂ ಭಾರಿ ಮಳೆಯ ಮುನ್ಸೂಚನೆ

ನಾಳೆ (ಜುಲೈ 12, ಬುಧವಾರ) ಕರಾವಳಿಯ ಬಹುತೇಕ ಕೆಡಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಆದರೆ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ ಬೀಳುವ ನಿರೀಕ್ಷೆ ಇದೆ.

ರಾಜ್ಯದ ಒಂದೆರೆಡು ಕಡೆಗಳಲ್ಲಿ ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ. ವಿಶೇಷವಾಗಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ವಾತಾವರಣ ಇದ್ದು, ಕೆಲವು ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಇಲ್ಲವೇ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಬಹಳಷ್ಟಿದೆ. ಗರಿಷ್ಠ ಉಷ್ಣಾಂಶ 28, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತವೆ.

ಸದ್ಯ ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿರುವುದರಿಂದ ಉತ್ತರ ಒಳನಾಡು ಹೊರತುಪಡಿಸಿ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುತ್ತಿರವುದರಿಂದ ಉಷ್ಣಾಂಶದಲ್ಲಿ ಬದಲಾವಣೆಯಾಗಿದ್ದು, ಬಿಸಿ ಕಡಿಮೆಯಾಗಿದೆ. ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ನಿನ್ನೆಯಿಂದ ಇಡೀ ದಿನ ಜಿಟಿ ಜಿಟಿ ಮಳೆಯಾಗುತ್ತಿರುವುದರಿಂದ ಚಳಿಯ ವಾತಾವರಣವಿದೆ.

ಜುಲೈ 10ರ ಬೆಳಗ್ಗೆ 8.30ಕ್ಕೆ ದಾಖಲಾಗಿರುವ ಮಾಹಿತಿ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯಲ್ಲಿ ಗರಿಷ್ಠ ಮಳೆಯಾಗಿದೆ. ಇಲ್ಲಿನ ಕ್ಯಾಸಲ್ ರಾಕ್‌ನಲ್ಲಿ 5 ಸೆಂಟಿ ಮೀಟರ್ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೊಲ್ಲೂರು, ಕಾರ್ಕಳ, ಕೋಟ ಹಾಗೂ ಸಿದ್ದಾಪುರ, ಉತ್ತರ ಕನ್ನಡದ ಕುಮಟಾ, ಕಾರವಾರ, ಶಿರಾಲಿ, ಗೇರುಕೊಪ್ಪ, ದಕ್ಷಿಣ ಕನ್ನಡದ ಧರ್ಮಸ್ಥಳ, ಸುಬ್ರಹ್ಮಣ್ಯ ಹಾಗೂ ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ತಲಾ 3 ಸೆಂಟಿ ಮೀಟರ್ ಮಳೆಯಾಗಿದೆ.

ಬೆಂಗಳೂರು ಇಡೀ ನಗರದಲ್ಲಿ ನಿನ್ನೆ (ಜುಲೈ 10, ಸೋಮವಾರ) ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ನಂತರ ಕೆಲವೊಂದು ಕಡೆ ಗುಡುಗು ಸಹಿತ ಭಾರಿ ಮಳೆಯಾಗಿದ್ದು,ಕೆಲವಡೆ ಜಿಟಿ ಜಿಟಿ ಮಳೆಯಾಗಿದೆ.

ಹೆಬ್ಬಾಳ, ಆರ್‌ಟಿ ನಗರ, ಮುನಿರೆಡ್ಡಿ ಪಾಳ್ಯ, ಸುಲ್ತಾನ್ ಪಾಳ್ಯ, ವಸಂತ ನಗರ, ಸಿಬಿಐ ರೋಡ್, ನಾಗವಾರ, ವಸಂತನಗರ, ಶಿವಾಜಿನಗರ, ವಿಧಾನಸೌಧ, ಕೆಆರ್ ಮಾರ್ಟೆಕ್, ಎಂಜಿ ರೋಡ್ ಸೇರಿದಂತೆ ಹಲವು ಮಳೆಯಾಗಿದ್ದು, ಇಂದು ಬೆಳಗ್ಗೆಯಿಂದಲೇ ಮೋಡ ಕವಿತ ವಾತಾವರಣ ಇದೆ.

ಮತ್ತೊಂದೆಡೆ ಉತ್ತರ ಭಾರತದಲ್ಲಿ ವರುಣ ಅಬ್ಬರಿಸುತ್ತಿದ್ದು, ಹೆಚ್ಚಿನ ನಷ್ಟ ಉಂಟಾಗಿದೆ. ಹಿಮಾಚಲ ಪ್ರದೇಶದಲ್ಲಿ ರಕ್ಕಸ ಮಳೆಗೆ ಜನ ಹೈರಾಣವಾಗಿದ್ದಾರೆ. ಉತ್ತರ ಭಾರತದಲ್ಲಿ ಮಳೆಯಿಂದಾಗಿ ಈವರೆಗೆ 37 ಮಂದಿ ಮೃತಪಟ್ಟಿದ್ದಾರೆ. ಜಮ್ಮು-ಕಾಶ್ಮೀರ, ಪಂಜಾಬ್ ಹಾಗೂ ರಾಷ್ಟ್ರ ರಾಜಧಾನಿ ದೆಹಯಲ್ಲಿ ಇಂದು ಕೂಡ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಪ್ರದೇಶಗಳಲ್ಲಿ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಗಳನ್ನು ಮುಂದುವರೆಸಿವೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ