ಕರ್ನಾಟಕ ಹವಾಮಾನ: ಕಡಿಮೆಯಾಯ್ತು ಮಳೆಯ ಪ್ರಮಾಣ, ಹೆಚ್ಚಾಯ್ತು ಚಳಿ; ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು
Dec 15, 2024 07:23 AM IST
15 ಡಿಸೆಂಬರ್ 2024 ಕರ್ನಾಟಕ ಹವಾಮಾನ
Karnataka Weather: ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿದೆ. ಚಳಿ ಶನಿವಾರಕ್ಕಿಂತ ಹೆಚ್ಚಾಗಿದೆ. ಡಿಸೆಂಬರ್ 17 ರಿಂದ ಮತ್ತೆ ರಾಜ್ಯದ ಕೆಲವೆಡೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 14.0 ಡಿ.ಸೆ. ನಷ್ಟು ದಾಖಲಾಗಿದೆ.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರತ ಕುಸಿತದ ಪರಿಣಾಮ ಕಳೆದ 4-5 ದಿನಗಳಿಂದ ರಾಜ್ಯಾದ್ಯಂತ ಮಳೆಯಾಗಿದೆ. ಶನಿವಾರ ಮಳೆಯ ಪ್ರಮಾಣ ಕಡಿಮೆಯಾಗಿದೆ. ಡಿಸೆಂಬರ್ 17 ರಿಂದ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶನಿವಾರ ಮತ್ತೆ ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 14.0 ಡಿ.ಸೆ. ನಷ್ಟು ದಾಖಲಾಗಿದೆ. ಇಂದು ಭಾನುವಾರ ಬೆಳಗ್ಗೆ 6 ಗಂಟೆ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉಷ್ಣಾಂಶ 18 ಡಿ.ಸೆ ದಾಖಲಾಗಿದೆ. ಡಿಸೆಂಬರ್ 15, ಭಾನುವಾರ ರಾಜ್ಯದಲ್ಲಿ ವಾತಾವರಣ ಹೇಗಿರಲಿದೆ? ಮುಂದಿನ 24 ಗಂಟೆಗಳಲ್ಲಿ ಹವಾಮಾನ ಹೇಗಿರಲಿದೆ ನೋಡೋಣ.
ಎಲ್ಲೆಲ್ಲಿ ಮಳೆಯಾಗಿದೆ?
ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮಾನ್ಸೂನ್ ಸಾಮಾನ್ಯವಾಗಿದ್ದು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಶನಿವಾರ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ 2 ಸೆಮೀನಷ್ಟು ಮಳೆ ಆಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಕನಿಷ್ಠ ಉಷ್ಣಾಂಶ 14.0 ವಿಜಯಪುರದಲ್ಲಿ ದಾಖಲಾಗಿದೆ. ಇಂದು ರಾಜ್ಯಾದ್ಯಂತ ಎಂದಿನಂತೆ ಬೆಳಗಿನ ಜಾವ ದಟ್ಟ ಮಂಜು ಆವರಿಸಿದ್ದು ಚಳಿ ಇರಲಿದೆ. ಡಿಸೆಂಬರ್ 17 ರಂದು ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, ಮೈಸೂರು, ಮಂಡ್ಯ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಬೆಂಗಳೂರು, ಅವಳಿ ನಗರ, ಮೈಸೂರು ನಗರಗಳ ವಾತಾವರಣ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ಆಕಾಶ ಇರಲಿದ್ದು ಕೆಲವೆಡೆ ಬೆಳಗಿನ ಜಾವ ಮಂಜು ಆವರಿಸಲಿದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಕ್ರಮವಾಗಿ 24 ಡಿ.ಸೆ ಹಾಗೂ 16 ಡಿ.ಸೆ ಆಗಿರಬಹುದು. ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡದಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಕ್ರಮವಾಗಿ 28 ಡಿ.ಸೆ ಹಾಗೂ ಕನಿಷ್ಠ 15 ಡಿ.ಸೆ, ಸಾಂಸ್ಕತಿಕ ನಗರಿ ಮೈಸೂರಿನಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಕ್ರಮವಾಗಿ 27 ಡಿ.ಸೆ ಹಾಗೂ ಕನಿಷ್ಠ 16 ಡಿ.ಸೆ ಇರಲಿದೆ.
ರಾಜ್ಯದ ಇತರ ನಗರಗಳ ಇಂದಿನ ಗರಿಷ್ಠ, ಕನಿಷ್ಠ ತಾಪಮಾನ
ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಕನಿಷ್ಠ 22 ಡಿಗ್ರಿ ಸೆಲ್ಸಿಯಸ್. ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನ 27, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್. ಬೆಳಗಾವಿಯಲ್ಲಿ ಗರಿಷ್ಠ ತಾಪಮಾನ 27 ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಮಂಡ್ಯದಲ್ಲಿ ಗರಿಷ್ಠ ತಾಪಮಾನ 27, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್, ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27, ಕನಿಷ್ಠ 14 ಡಿಗ್ರಿ ಸೆಲ್ಸಿಯಸ್, ರಾಮನಗರದಲ್ಲಿ ಗರಿಷ್ಠ ತಾಪಮಾನ 27, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ಹಾಸನದಲ್ಲಿ ಗರಿಷ್ಠ ತಾಪಮಾನ 25, ಕನಿಷ್ಠ 14 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರದಲ್ಲಿ ಗರಿಷ್ಠ ತಾಪಮಾನ 28, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್, ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 24, ಕನಿಷ್ಠ 14 ಡಿಗ್ರಿ ಸೆಲ್ಸಿಯಸ್, ಕೋಲಾರದಲ್ಲಿ ಗರಿಷ್ಠ ತಾಪಮಾನ 24, ಕನಿಷ್ಠ 14 ಡಿಗ್ರಿ ಸೆಲ್ಸಿಯಸ್, ತುಮಕೂರಿನಲ್ಲಿ ಗರಿಷ್ಠ ತಾಪಮಾನ 25, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್, ಉಡುಪಿಯಲ್ಲಿ ಗರಿಷ್ಠ ತಾಪಮಾನ 31, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರಿನಲ್ಲಿ ಗರಿಷ್ಠ ತಾಪಮಾನ 24, ಕನಿಷ್ಠ 13 ಡಿಗ್ರಿ ಸೆಲ್ಸಿಯಸ್, ದಾವಣಗೆರೆಯಲ್ಲಿ ಗರಿಷ್ಠ ತಾಪಮಾನ 28, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಚಿತ್ರದುರ್ಗದಲ್ಲಿ ಗರಿಷ್ಠ ತಾಪಮಾನ 26, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ಹಾವೇರಿಯಲ್ಲಿ ಗರಿಷ್ಠ ತಾಪಮಾನ 28, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ 28, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ಗದಗದಲ್ಲಿ ಗರಿಷ್ಠ ತಾಪಮಾನ 27, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ ಗರಿಷ್ಠ ತಾಪಮಾನ 28 ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ ಗರಿಷ್ಠ ತಾಪಮಾನ 29, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 29, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್, ವಿಜಯಪುರದಲ್ಲಿ ಗರಿಷ್ಠ ತಾಪಮಾನ 29, ಕನಿಷ್ಠ 14 ಡಿಗ್ರಿ ಸೆಲ್ಸಿಯಸ್, ಬೀದರ್‌ನಲ್ಲಿ ಗರಿಷ್ಠ ತಾಪಮಾನ 27, ಕನಿಷ್ಠ 12 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 29, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ಹಾಗೂ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 28, ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ಇರಲಿದೆ.