ಕರ್ನಾಟಕದಲ್ಲಿ ಹೆಚ್ಚಾಯ್ತು ಚಳಿ, ಕಾರವಾರದಲ್ಲಿ ಗರಿಷ್ಠ, ಬೀದರ್‌ನಲ್ಲಿ ಕನಿಷ್ಠ ಉಷ್ಣಾಂಶ ದಾಖಲು; ಡಿ. 1 ರಿಂದ ಮತ್ತೆ ಮಳೆ ಸಾಧ್ಯತೆ
Nov 27, 2024 07:21 AM IST
27 ನವೆಂಬರ್ 2024 ರ ಕರ್ನಾಟಕ ಹವಾಮಾನ
Karnataka Weather: ಕಳೆದ 2 ದಿನಗಳಿಗಿಂತ ರಾಜ್ಯಾದ್ಯಂತ ಚಳಿ ಇನ್ನಷ್ಟು ಹೆಚ್ಚಾಗಿದೆ. ಮಂಗಳವಾರ ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ (36.4 ಡಿ.ಸೆ) ಹಾಗೂ ಬೀದರ್‌ನಲ್ಲಿ ಕನಿಷ್ಠ ಉಷ್ಣಾಂಶ (12.2) ದಾಖಲಾಗಿದೆ. ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು: ರಾಜ್ಯಾದ್ಯಂತ ಉಷ್ಣಾಂಶ ಕಡಿಮೆಯಾಗಿದ್ದು ಚಳಿ ಶುರುವಾಗಿದೆ. ಬಹುತೇಕ ಕಡೆ ಮುಂಜಾನೆ ಮಂಜು ಆವರಿಸುತ್ತಿದೆ. ಇಂದು ಬೆಳಗ್ಗೆ 06:24ಕ್ಕೆ ಸೂರ್ಯೋದಯವಾಗಿದ್ದು 05:50ಕ್ಕೆ ಸೂರ್ಯಾಸ್ತವಾಗಲಿದೆ. ನವೆಂಬರ್ 26, ಮಂಗಳವಾರ ಈಶಾನ್ಯ ಮುಂಗಾರು ದುರ್ಬಲವಾಗಿದ್ದು ಪ್ರಮುಖ ಮಳೆಯ ಪ್ರಮಾಣ ವರದಿಯಾಗಿಲ್ಲ. ಮಂಗಳವಾರ ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ ಹಾಗೂ ಬೀದರ್‌ನಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ವಾತಾವರಣ ಹೇಗಿತ್ತು? ಇಂದು , ಮುಂದಿನ 24 ಗಂಟೆಗಳಲ್ಲಿ ಹವಾಮಾನ ಹೇಗಿರಲಿದೆ ನೋಡೋಣ.
ಡಿಸೆಂಬರ್ 1 ರಿಂದ ಕೆಲವು ಜಿಲ್ಲೆಗಳಲ್ಲಿ ಮತ್ತೆ ಮಳೆ
ಮಂಗಳವಾರ ರಾಜ್ಯದಲ್ಲಿ ಒಣಹವೆ ಇದ್ದು ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ವಿಜಯಪುರ ಜಿಲ್ಲೆಗಳಲ್ಲೂ ಸಾಮಾನ್ಯಕ್ಕಿಂತ ಕಡಿಮೆ ಚಳಿ ದಾಖಲಾಗಿದೆ. ಮಂಗಳವಾರ ಬೆಂಗಳೂರಿನ ಕೆಲವೆಡೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಗಂಟೆಗೆ 5 ಮಿ.ಮೀನಷ್ಟು ಮಳೆ ಪ್ರಮಾಣ ದಾಖಲಾಗಿದೆ. ಬೆಂಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ರಾಮನಗರ, ತುಮಕೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 1 ರಿಂದ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಮೀನುಗಾರರಿಗೆ ಯಾವುದೇ ಮುನ್ನೆಚರಿಕೆ ನೀಡಿಲ್ಲ.
ಬೆಂಗಳೂರು, ಅವಳಿ ನಗರ, ಮೈಸೂರು ನಗರಗಳ ವಾತಾವರಣ
ಬೆಂಗಳೂರಿನಲ್ಲಿ ಬೆಳಗ್ಗೆ 6 ಗಂಟೆಗೆ 18.8 ಡಿಗ್ರಿ ಸೆಲ್ಸಿಯಸ್ ತಾಪಮಾನ, ಶೇಕಡಾ 90 ರಷ್ಟು ತೇವಾಂಶ ದಾಖಲಾಗಿತ್ತು. ಇಂದು ಹಾಗೂ ಮುಂದಿನ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು ಕೆಲವು ಪ್ರದೇಶಗಳಲ್ಲಿ ಮಂಜು ಕವಿಯುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಅವಳಿ ನಗರಗಳಾದ ಹುಬ್ಬಳ್ಳಿ , ಧಾರವಾಡದಲ್ಲಿ ಮಂಗಳವಾರ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ಇದ್ದು ಕೆಲವೆಡೆ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇತ್ತು. ಇಂದು ಕೂಡಾ ಇದೇ ವಾತಾವರಣ ಮುಂದುವರೆಯಲಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗರಿಷ್ಠ ತಾಪಮಾನ 28.0 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 18.5 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.
ರಾಜ್ಯದ ಇತರ ನಗರಗಳ ಇಂದಿನ ಗರಿಷ್ಠ, ಕನಿಷ್ಠ ತಾಪಮಾನ
ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 24, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 31, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್. ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನ 29, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್. ಬೆಳಗಾವಿಯಲ್ಲಿ ಗರಿಷ್ಠ ತಾಪಮಾನ 28, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಮೈಸೂರಿನಲ್ಲಿ ಗರಿಷ್ಠ ತಾಪಮಾನ 26, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ಮಂಡ್ಯದಲ್ಲಿ ಗರಿಷ್ಠ ತಾಪಮಾನ 27, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27, ಕನಿಷ್ಠ 14 ಡಿಗ್ರಿ ಸೆಲ್ಸಿಯಸ್, ಹಾಸನದಲ್ಲಿ ಗರಿಷ್ಠ ತಾಪಮಾನ 24, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರದಲ್ಲಿ ಗರಿಷ್ಠ ತಾಪಮಾನ 26, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 24, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್, ಕೋಲಾರದಲ್ಲಿ ಗರಿಷ್ಠ ತಾಪಮಾನ 24, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್, ತುಮಕೂರಿನಲ್ಲಿ ಗರಿಷ್ಠ ತಾಪಮಾನ 25, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್, ಉಡುಪಿಯಲ್ಲಿ ಗರಿಷ್ಠ ತಾಪಮಾನ 32, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರಿನಲ್ಲಿ ಗರಿಷ್ಠ ತಾಪಮಾನ 24, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ದಾವಣಗೆರೆಯಲ್ಲಿ ಗರಿಷ್ಠ ತಾಪಮಾನ 30, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಹುಬ್ಬಳ್ಳಿಯಲ್ಲಿ ಗರಿಷ್ಠ ತಾಪಮಾನ 24, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ಚಿತ್ರದುರ್ಗದಲ್ಲಿ ಗರಿಷ್ಠ ತಾಪಮಾನ 24, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ಹಾವೇರಿಯಲ್ಲಿ ಗರಿಷ್ಠ ತಾಪಮಾನ 24, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ 24, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ಗದಗದಲ್ಲಿ ಗರಿಷ್ಠ ತಾಪಮಾನ 24, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ ಗರಿಷ್ಠ ತಾಪಮಾನ 28, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ ಗರಿಷ್ಠ ತಾಪಮಾನ 30, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್, ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 30, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್, ವಿಜಯಪುರದಲ್ಲಿ ಗರಿಷ್ಠ ತಾಪಮಾನ 29, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ಬೀದರ್‌ನಲ್ಲಿ ಗರಿಷ್ಠ ತಾಪಮಾನ 28, ಕನಿಷ್ಠ 14 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 29, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ಹಾಗೂ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 30, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.