logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather Today: ರಾಜ್ಯದ ಹಲವೆಡೆ ಮಳೆಯ ಸಿಂಚನ, ಇನ್ನು ಕೆಲವೆಡೆ ಏರಲಿದೆ ತಾಪಮಾನ; ಹೇಗಿದೆ ಇಂದಿನ ಹವಾಮಾನ ಸ್ಥಿತಿಗತಿ?

Karnataka Weather Today: ರಾಜ್ಯದ ಹಲವೆಡೆ ಮಳೆಯ ಸಿಂಚನ, ಇನ್ನು ಕೆಲವೆಡೆ ಏರಲಿದೆ ತಾಪಮಾನ; ಹೇಗಿದೆ ಇಂದಿನ ಹವಾಮಾನ ಸ್ಥಿತಿಗತಿ?

Apr 10, 2024 06:23 AM IST

google News

Karnataka Weather Today: ರಾಜ್ಯದ ಹಲವೆಡೆ ಮಳೆಯ ಸಿಂಚನ, ಇನ್ನು ಕೆಲವೆಡೆ ಏರಲಿದೆ ತಾಪಮಾನ; ಹೇಗಿದೆ ಇಂದಿನ ಹವಾಮಾನ ಸ್ಥಿತಿಗತಿ?

    • ಮುಂದಿನ 24 ಗಂಟೆ ಹಾಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಬಿಸಿಗಾಳಿಯ ಬಿರುಸು ಹೆಚ್ಚಿರಲಿದೆ. ಮಂಗಳವಾರ ಕಲಬುರಗಿಯಲ್ಲಿ ಅತಿ ಗರಿಷ್ಠ ಉಷ್ಣಾಂಶ 41.8 ದಾಖಲಾಗಿದೆ. 
Karnataka Weather Today: ರಾಜ್ಯದ ಹಲವೆಡೆ ಮಳೆಯ ಸಿಂಚನ, ಇನ್ನು ಕೆಲವೆಡೆ ಏರಲಿದೆ ತಾಪಮಾನ; ಹೇಗಿದೆ ಇಂದಿನ ಹವಾಮಾನ ಸ್ಥಿತಿಗತಿ?
Karnataka Weather Today: ರಾಜ್ಯದ ಹಲವೆಡೆ ಮಳೆಯ ಸಿಂಚನ, ಇನ್ನು ಕೆಲವೆಡೆ ಏರಲಿದೆ ತಾಪಮಾನ; ಹೇಗಿದೆ ಇಂದಿನ ಹವಾಮಾನ ಸ್ಥಿತಿಗತಿ?

Karnataka Weather Today: ಬೇಸಿಗೆಯ ಬಿಸಿಲು ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚೇ ಇದೆ. ಈ ಬಿಸಿಲ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಈ ಸಲದ ಮಳೆಗಾಲವೂ ಅಷ್ಟೇ ಜೋರಾಗಿರಲಿದೆ ಎಂಬ ಮಾತಗಳೂ ಹೇಳಿ ಬರುತ್ತಿವೆ. ಈ ಬಿರು ಬೇಸಿಗೆಯಲ್ಲಿಯೇ ರಾಜ್ಯದ ಕೆಲವೆಡೆ ಈಗಾಗಲೇ ಮಳೆಯಾಗುತ್ತಿದೆ. ಬಿಸಿಲಿಗೆ ಬೆಂದ ನನತೆಗೆ ತಂಪೆರೆಯುತ್ತಿದೆ. ಇನ್ನೊಂದೆಡೆ ಕುಡಿವ ನೀರಿವ ಅಭಾವವೂ ತಲೆದೂರಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಈ ಸ್ಥಿತಿ ಕೊಂಚ ಅಧಿಕ. ಹಾಗಾದರೆ, ರಾಜ್ಯದಲ್ಲಿ ಇಂದಿನ (ಏ.10) ಹವಾಮಾನದ ಸ್ಥಿತಿಗತಿ ಹೇಗಿದೆ. ಇಲ್ಲಿ ನೋಡೋಣ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮುಂದುವರೆದ ಒಣಹವೆ

ಮಂಗಳವಾರ, ರಾಜ್ಯದಲ್ಲಿ ಎಂದಿನಂತೆ ಒಣಹವೆ ಮಾತ್ರವಲ್ಲದೆ ಬಿಸಿಗಾಳಿಯ ಪ್ರಮಾಣ ಹೆಚ್ಚಾಗಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಇದ್ದರೂ, ಮಳೆ ದಾಖಲಾಗಿಲ್ಲ. ಉಷ್ಣಾಂಶದ ವಿಚಾರದಲ್ಲಿ ರಾಜ್ಯದ ಒಂದಷ್ಟು ಕಡೆಗಳಲ್ಲಿ ಗಮನಾರ್ಹವಾಗಿ ಇಳಿಕೆ ಕಂಡರೆ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಮನಾರ್ಹವಾಗಿ ಇಳಿಕೆ ಕಂಡಿದೆ. ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಬದಲಾವಣೆ ಕಂಡುಬಂದಿಲ್ಲ. ಒಳನಾಡಿನ ಒಂದೆರಡು ಕಡೆಗಳಲ್ಲಿ ಗಮನಾರ್ಹವಾಗಿ ಏರಿಕೆ ಕಂಡಿದೆ. ಅದೇ ರೀತಿ ರಾಜ್ಯದಲ್ಲಿ ಅತಿ ಗರಿಷ್ಠ ಉಷ್ಣಾಂಶ ಕಲಬುರಗಿಯಲ್ಲಿ ದಾಖಲಾಗಿದೆ. ಅಲ್ಲಿ 41.8 ಉಷ್ಣಾಂಶ ದಾಖಲಾಗಿದೆ.

ರಾಜ್ಯದಲ್ಲಿ ಮಳೆಯ ಮುನ್ಸೂಚನೆ

ಮುಂದಿನ 24 ಗಂಟೆ ಹಾಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಇಂದು (ಏ. 10) ಚಿಕ್ಕಮಗಳೂರು ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸೂಚನೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನುಳಿದಂತೆ, ಬೀದರ್, ಕಲಬುರ್ಗಿ, ವಿಜಯಪುರ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಟ್ಟಾರೆಯಾಗಿ ಮುಂದಿನ ನಾಲ್ಕು ದಿನಗಳು ರಾಜ್ಯದ ಬಹುತೇಕ ಜಿಲ್ಲೆಯಗಳಲ್ಲಿ ವರುಣನ ಸಿಂಚನವಾಗುವ ಸಾಧ್ಯತೆ ಹೆಚ್ಚಿದೆ.

ಉಷ್ಣಾಂಶ ಹೇಗಿದೆ?

ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಉಷ್ಣಾಂಶದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ. ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಗಮನಾರ್ಹವಾಗಿ ಏರಿಕೆ ಕಂಡುಬಂದಿದೆ. ಬಾಗಲಕೋಟೆ, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಉಷ್ಣದ  ಅಲೆಗಳು ಮೇಲೂಗೈ ಸಾಧಿಸಲಿವೆ. ಈ ಭಾಗಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆಯೂ ಇಲ್ಲ. ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಮತ್ತು ಕೋಲಾರ ಜಿಲ್ಲೆಗಳಲ್ಲಿಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿ ಮುಂದುವರಿಯಲಿದೆ.

ಗರಿಷ್ಠ ತಾಪಮಾನವೂ ಮುಂದಿನ ಎರಡು ದಿನಗಳಲ್ಲಿ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ 2-4 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನ ಹವಾಮಾನ

ಬೆಂಗಳೂರು ನಗರದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 37 ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆಗಳಿವೆ. ಅದೇ ರೀತಿ ಮುಂದಿನ 48 ಗಂಟೆಗಳ ಹವಾಮಾನವನ್ನು ನೋಡುವುದಾದರೆ, ಎಂದಿನಂತೆ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 36 ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲಿ ಮಳೆಯಾಗುವ ಮುನ್ಸೂಚನೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ