logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಕರ್ನಾಟಕಕ್ಕೆ ಸೈಕ್ಲೋನ್ ಭೀತಿ ಇಲ್ಲ; ನಾಳೆ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ

Karnataka Weather: ಕರ್ನಾಟಕಕ್ಕೆ ಸೈಕ್ಲೋನ್ ಭೀತಿ ಇಲ್ಲ; ನಾಳೆ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ

Raghavendra M Y HT Kannada

Dec 07, 2023 08:22 AM IST

google News

ಕರ್ನಾಟಕದ ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

  • Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹಮಾವಾನ ಕೇಂದ್ರ ಮಾಹಿತಿ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಮಿಚಾಂಗ್ ಚಂಡಮಾರುತದ ಪರಿಣಾಮವಾಗಿ ನೆರೆಯ ರಾಜ್ಯ ತಮಿಳುನಾಡಿನ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಅದರಲ್ಲೂ ಸಮುದ್ರ ತೀರದಲ್ಲೇ ಇರುವ ರಾಜಧಾನಿ ಚೆನ್ನೈನಲ್ಲಿ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡು ಪ್ರವಾಹ ಪರಿಸ್ಥಿತಿ ಉಂಟಾಗಿತ್ತು.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಿಚಾಂಗ್ ಸೈಕ್ಲೋನ್‌ನಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಕೆಲವು ಪ್ರದೇಶಗಳಲ್ಲಿ ಕಳೆದು ಮೂರ್ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣದಿಂದ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯೂ ಆಗಿತ್ತು. ಇವತ್ತಿನ (ಡಿಸೆಂಬರ್ 7, ಗುರುವಾರ) ಹವಾಮಾನ ವರದಿಯ ಪ್ರಕಾರ ಕರ್ನಾಟಕಕ್ಕೆ (Karnataka Weather) ಯಾವುದೇ ರೀತಿಯ ಚಂಡಮಾರುತದ ಭೀತಿ ಇಲ್ಲ. ಪರಿಣಾಮ ಮಳೆಯಾಗುವ ಮುನ್ಸೂಚನೆಯೂ ಇಲ್ಲ. ಆದರೆ ನಾಳೆ (ಡಿಸೆಂಬರ್ 8, ಶುಕ್ರವಾರ) ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.

ಡಿಸೆಂಬರ್ 6ರ ಬುಧವಾರ ಬೆಳಗ್ಗೆ 8.30ರ ವರೆಗೆ ದಾಖಲಾಗಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಆದರೆ ಕರಾವಳಿ ಭಾಗವದಲ್ಲಿ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಸಾಮಾನ್ಯಕ್ಕಿಂತ ಗಮನಾರ್ಹವಾದ ಉಷ್ಣಾಂಶ ಹೆಚ್ಚಳವಾಗಿದೆ. 5.1 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಹೆಚ್ಚಳವಾಗಿದೆ ಎಂದು ತಿಳಿಸಿದೆ.

ಇಂದು (ಡಿಸೆಂಬರ್ 7, ಗುರುವಾರ) ಮತ್ತು ನಾಳೆ (ಡಿಸೆಂಬರ್ 8, ಶುಕ್ರವಾರ) ಕರ್ನಾಟಕದಲ್ಲಿ ಭಾರಿ ಮಳೆಯಾಗುವ, ಗುಡುಗು, ಮಿಂಚು, ತಾಪಮಾನ ಹಾಗೂ ಮೀನುಗಾರರಿಗೆ ಯಾವುದೇ ರೀತಿಯ ಎಚ್ಚರಿಕೆಗಳು ಇಲ್ಲ. ಆದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡೂ ದಿನ ಮೋಡ ಕವಿತ ವಾತಾವರಣ ಇರಲಿದೆ. ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದ್ದು, ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ.

ಮಂಗಳವಾರ (ಡಿಸೆಂಬರ್ 5) ಆಂಧ್ರಪ್ರದೇಶಕ್ಕೆ ಮಿಚಾಂಗ್ ಸೈಕ್ಲೋನ್ ಅಪ್ಪಳಿಸುವ ಸಾಧ್ಯತೆ ಇತ್ತು. ಬಾಪಟ್ಲಾ ಪ್ರದೇಶದ ಕರಾವಳಿಯ ಭಾಗದಲ್ಲಿ ಸ್ವಲ್ಪ ಮಟ್ಟಿಗೆ ಅಬ್ಬರಿಸಿ ಮುಂದೆ ಸಾಗುತ್ತಿದ್ದಂತೆ ಚಂಡಮಾರುತ ದುರ್ಬಲಗೊಂಡಿದೆ. ತಿರುಪತಿ ಸೇರಿ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿತ್ತು. ನೂರಾರು ಎಕರೆ ಬೆಳೆ ನಾಶವಾಗಿದೆ. ಇದನ್ನು ಹೊರತು ಪಡಿಸಿ ಆಂಧ್ರಕ್ಕೆ ಈ ಸೈಕ್ಲೋನ್ ಅಷ್ಟಾಗಿ ಪರಿಣಾಮ ಬೀರಿಲ್ಲ. ಆದರೆ ತಮಿಳುನಾಡಿಗೆ ಭಾರಿ ಹೊಡೆತೆ ನೀಡಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ