logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಕರಾವಳಿ, ಉತ್ತರ ಒಳನಾಡಿನಲ್ಲಿ ಹೆಚ್ಚುತ್ತಿರುವ ಉಷ್ಣಾಂಶ; ಬೆಂಗಳೂರಿನ ಚಿಕ್ಕನಹಳ್ಳಿ ಕೂಲ್ ಕೂಲ್

Karnataka Weather: ಕರಾವಳಿ, ಉತ್ತರ ಒಳನಾಡಿನಲ್ಲಿ ಹೆಚ್ಚುತ್ತಿರುವ ಉಷ್ಣಾಂಶ; ಬೆಂಗಳೂರಿನ ಚಿಕ್ಕನಹಳ್ಳಿ ಕೂಲ್ ಕೂಲ್

Raghavendra M Y HT Kannada

Feb 12, 2024 07:26 AM IST

google News

ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿಯ ಕೆಲವು ಭಾಗಗಳಲ್ಲಿ ಬಿಸಿ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನಲ್ಲಿಲ ಸಾಮಾನ್ಯ ಪರಿಸ್ಥಿತಿ ಇದೆ.

    • Karnataka Weather: ರಾಜ್ಯದ ಉತ್ತರ ಒಳನಾಡು ಮತ್ತು ಕರಾವಳಿಯ ಕೆಲ ಪ್ರದೇಶಗಳಲ್ಲಿ ಬಿಸಿ ಹೆಚ್ಚಾಗುತ್ತಿದೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರು ಸಮೀಪದ ಚಿಕ್ಕನಹಳ್ಳಿ ತುಂಬಾ ಕೂಲ್ ಆಗಿದೆ.
ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿಯ ಕೆಲವು ಭಾಗಗಳಲ್ಲಿ ಬಿಸಿ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನಲ್ಲಿಲ ಸಾಮಾನ್ಯ ಪರಿಸ್ಥಿತಿ ಇದೆ.
ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿಯ ಕೆಲವು ಭಾಗಗಳಲ್ಲಿ ಬಿಸಿ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನಲ್ಲಿಲ ಸಾಮಾನ್ಯ ಪರಿಸ್ಥಿತಿ ಇದೆ.

ಬೆಂಗಳೂರು: ರಾಜ್ಯದಲ್ಲಿ (Karnataka Weather Today) ದಿನದಿಂದ ದಿನಕ್ಕೆ ಬಿಸಿಯ ವಾತಾವರಣ ಹೆಚ್ಚಾಗುತ್ತಲೇ ಇದೆ. ಇಂದು (ಫೆಬ್ರವರಿ 12, ಸೋಮವಾರ) ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ 3 ರಿಂದ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಬಿಸಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಲ್ಲಾ ಕಡೆ ಒಣಹವೆ ಮುಂದುವರಿದಿದೆ. ಭಾರಿ ಮಳೆ, ಗುಡುಗು ಮಿಂಚು ಯಾವುದೂ ಇಲ್ಲದಿರುವ ಕಾರಣ ಮೀನುಗಾರರಿಗೆ ಮುನ್ನಚ್ಚರಿಕೆ ಇರುವುದಿಲ್ಲ. ಎಂದಿನಂತೆ ಮೀನುಗಾರಿಕೆ ನಡೆಸಬಹುದು. ಮುಂದಿನ ಎರಡ್ಮೂರು ದಿನಗಳ ಕಾಲ ಇದೇ ವಾತಾರಣ ಇರಲಿದೆ.

ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಉಷ್ಣಾಂಶ ಹೆಚ್ಚಳವಾಗಿದೆ. ಅಂದರೆ 3.1 ಡಿಗ್ರಿ ಸೆಲ್ಸಿಯಸ್ ನಿಂದ 5 ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಳವಾಗಿದೆ. ಕರಾವಳಿಯ ಹಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಕೆಲವು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಳ ಕಂಡಿದೆ. 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಡಿಮೆ ಉಷ್ಣಾಂಶ ಚಿಕ್ಕನಹಳ್ಳಿಯಲ್ಲಿ 13.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಬೇಸಿಗೆ ಆರಂಭವಾಗುವ ಮಾರ್ಚ್ ತಿಂಗಳಿಗೂ ಮುನ್ನ ಫೆಬ್ರವರಿ ತಿಂಗಳ ಆರಂಭದಲ್ಲೇ ತಾಪಮಾನ ಏರಿಕೆಯಾಗಿದೆ. ಇಡೀ ರಾಜ್ಯದಲ್ಲೇ ಉಷ್ಣಾಂಶ ಹೆಚ್ಚಳವಾಗುತ್ತಿದ್ದು, ಜನತೆ ಸೆಖೆಯೊಂದಿಗೆ ಹೆಣಗುತ್ತಿದ್ದಾರೆ. ಈಗಾಲೇ ಹೀಗಾದರೆ ಮಾರ್ಚ್, ಏಪ್ರಿಲ್ ತಿಂಗಳಲ್ಲಿ ತಾಪಮಾನ ಹೇಗಿರಬಹುದು ಎಂದು ಊಹಿಸಿಕೊಂಡರೆ ಭಯವಾಗುತ್ತದೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

ಗಗನದ ಅಂಚಿನಲ್ಲಿ ಕೋಲ್ಮಿಂಚು ಮೂಡಿದಂತೆ ಈ ವರ್ಷ ಮಳೆಗಾಲ ಮಾರ್ಚ್ ತಿಂಗಳಲ್ಲೇ ಆರಂಭವಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಯಿಂದ ಕಂಗೆಟ್ಟಿರುವ ಜನರಿಗೆ ಇದು ಕೊಂಚ ನೆಮ್ಮದಿಯ ಸುದ್ದಿಯಾಗಿದೆ. ಹವಾಮಾನ ಸಂಸ್ಥೆಗಳೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಗಾಲ ಆರಂಭವಾಗುವ ನಿರೀಕ್ಷೆಯಿದೆ ಎಂದು ಹೇಳುತ್ತಿವೆ.

ಫೆಬ್ರವರಿ 12ರ ಸೋಮವಾರ ಬೆಂಗಳೂರು ಹವಾಮಾನ

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮುಂಜು ಮುಸುಕಿದ ವಾತಾವರಣವಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ. ಎರಡ್ಮೂರು ದಿನಗಳ ಕಾಲ ಇದೇ ವಾತಾವರ ಇರಲಿದೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಕರ್ನಾಟಕದ ಕರಾವಳಿ ಪ್ರದೇಶಗಳಾಗಿವೆ. ಈ ಭಾಗವನ್ನು ಕೆನರಾ ಅಂತಲೂ ಕರೆಯಲಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿಗೆ ಬರುತ್ತವೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಇನ್ನೂ ಉತ್ತರ ಒಳನಾಡಿನ ವ್ಯಾಪ್ತಿಗೆ ಬರುತ್ತವೆ. (This copy first appeared in Hindustan Times Kannada website. To read more like this please logon to kannada.hindustantime.com).

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ